Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ಆಯೇಷಾ ಖಾನಂ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಅಲ್ಲದೇ ಸದಸ್ಯರು ಪತ್ರಕರ್ತರನ್ನು ನೇಮಿಸಲಾಗಿದೆ. ಇಂದು ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಬೈಲಾದ ಕಂಡಿಕೆ 5(1) ಮತ್ತು 5(5)ರಲ್ಲಿ ಪುದತ್ತವಾಗಿರುವ ಅಧಿಕಾರದನ್ವಯ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಅಂದಹಾಗೇ ಅಧ್ಯಕ್ಷರನ್ನಾಗಿ ಆಯೇಷಾ ಖಾನಂ ಅವರನ್ನು ನೇಮಕ ಮಾಡಿದ್ರೇ, ಸದಸ್ಯರನ್ನಾಗಿ ಎಂ.ಎನ್ ಅಹೋಬಳಪತಿ, ಕೆ.ವೆಂಕಟೇಶ್ ಹಾಗೂ ಕೆ ನಿಂಗಜ್ಜ ಅವರನ್ನು ನೇಮಕ ಮಾಡಲಾಗಿದೆ. https://kannadanewsnow.com/kannada/special-buses-arranged-by-ksrtc-to-visit-chamundi-hill-in-mysuru-on-ashada-friday/ https://kannadanewsnow.com/kannada/good-news-for-job-seekers-notification-for-recruitment-of-2000-linemen-to-be-issued-in-15-days/

Read More

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇದರ ಜೊತೆ ಜೊತೆಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಷಾಢ ಶುಕ್ರವಾರದಂದು ದರ್ಶನಕ್ಕೆ ತೆರಳೋರಿಗೆ ವಿಶೇಷ ಕೆ ಎಸ್ ಆರ್ ಟಿಸಿ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಕೆ ಎಸ್ ಆರ್ ಟಿಸಿಯಿಂದ ಮಾಹಿತಿ ಹಂಚಿಕೊಂಡಿದ್ದು, ಮೈಸೂರು ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ಹಲವಾರು ಅನುಕೂಲಗಳನ್ನು ಕಲ್ಪಿಸಲಾಗಿದ್ದು, ಈ ಬಾರಿಯೂ ಪಾಸ್‌ ವ್ಯವಸ್ಥೆ ಇರುವುದಿಲ್ಲ. ದರ್ಶನಕ್ಕೆ ವಿಶೇಷ ಟಿಕೆಟ್‌ ವ್ಯವಸ್ಥೆ ಇದೆ ಅಂತ ತಿಳಿಸಿದೆ. ಆಷಾಢ ಶುಕ್ರವಾರಗಳಾದ ಜುಲೈ 12,19,26, ಆಗಸ್ಟ್‌ 26 ಮತ್ತು ಚಾಮುಂಡೇಶ್ವರಿ ವರ್ಧಂತಿ ದಿನವಾದ 27 ರಂದು ದೇವಾಲಯದ ವತಿಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಬೆಟ್ಟಕ್ಕೆ ಪ್ರಯಾಣಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಅಂತ ಮಾಹಿತಿ ನೀಡಿದೆ. https://kannadanewsnow.com/kannada/ksrp-inspector-caught-by-lokayukta-while-accepting-rs-18000-bribe/ https://kannadanewsnow.com/kannada/hubballi-neha-murder-case-love-jihad-was-not-the-reason-for-murder-says-chargesheet/

Read More

ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ವತಿಯಿಂದ ಪ್ರತಿ ವರ್ಷ ವಿವಿಧ ಕ್ಷೇತ್ರದ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿ. ಶಿವಲಿಂಗೇಗೌಡರು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೊಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ತಿಳಿಸಿದ್ದಾರೆ. ಜಿ. ಶಿವಲಿಂಗೇಗೌಡರಿಗೆ ವ್ಯವಸಾಯದಲ್ಲಿನ ಅಪಾರ ಅನುಭವ ಹಾಗೂ ಅರವತ್ತು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಕಷ್ಟ ನಷ್ಟದ ನಡುವೆ ಉಪ ಕಸುಬುಗಳನ್ನು ಮಾಡಿಕೊಂಡು ಪ್ರಗತಿಪರ ರೈತರಾಗಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಬಿ.ಜಿ ಜಗದೀಶ್ ತಿಳಿಸಿದ್ದಾರೆ. ಇದೇ ಜುಲೈ 13 ರಂದು ಬೀದರ್ ನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಕೆ.ಜಿ. ರಾವ್ ತಿಳಿಸಿದ್ದಾರೆ. https://kannadanewsnow.com/kannada/ksrp-inspector-caught-by-lokayukta-while-accepting-rs-18000-bribe/ https://kannadanewsnow.com/kannada/hubballi-neha-murder-case-love-jihad-was-not-the-reason-for-murder-says-chargesheet/ https://kannadanewsnow.com/kannada/good-news-for-job-seekers-notification-for-recruitment-of-2000-linemen-to-be-issued-in-15-days/

Read More

ಮಂಗಳೂರು: ಕರ್ತವ್ಯದ ಸ್ಥಳ ನಿಯೋಜಿಸಲು ಸಿಬ್ಬಂದಿಯೊಬ್ಬರಿಂದ 18,000 ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಕೆ ಎಸ್ ಆರ್ ಪಿ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರಿನ ಅಸೈಗೋಳಿಯಲ್ಲಿನ ಕೆ ಎಸ್ ಆರ್ ಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಂತ ನೌಕರರೊಬ್ಬರಿಂದ ಕರ್ತವ್ಯದ ಸ್ಥಳ ನಿಯೋಜಿಸಲು ಇನ್ಸ್ ಪೆಕ್ಟರ್ ಮೊಹಮ್ಮದ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಸಿಬ್ಬಂದಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಲಂಚದ ಹಣವಾಗಿ 18,000 ನೀಡುವಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಕೆ ಎಸ್ ಆರ್ ಪಿ ಇನ್ಸ್ ಪೆಕ್ಟರ್ ಮೊಹಮ್ಮದ್ ರೆಡ್ ಹ್ಯಾಂಡ್ ಆಗೇ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ನಟರಾಜ್, ಡಿವೈಎಸ್ಪಿ ಚಲುವರಾಜ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಇನ್ಸ್ ಪೆಕ್ಟರ್ ಮೊಹಮ್ಮದ್ ವಶಕ್ಕೆ ಪಡೆದಿರುವಂತ ಲೋಕಾಯುಕ್ತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/state-govt-extends-deadline-for-applying-for-transfer-of-government-employees-till-july-15/ https://kannadanewsnow.com/kannada/good-news-for-job-seekers-notification-for-recruitment-of-2000-linemen-to-be-issued-in-15-days/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜುಲೈ.15ರವರೆಗೆ ಅವಧಿ ವಿಸ್ತರಿಸಿ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ. 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ ಎಂದಿದ್ದಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 25.06,2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು, 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ:15.07.2024 ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ. https://kannadanewsnow.com/kannada/good-news-for-job-seekers-notification-for-recruitment-of-2000-linemen-to-be-issued-in-15-days/ https://kannadanewsnow.com/kannada/valmiki-scam-former-minister-b-nagendra-likely-to-be-arrested-any-moment/

Read More

ರಾಯಚೂರು : ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವರು, “ಲೈನ್‌ಮೆನಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು,ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ,” ಎಂದರು. “ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದ್ದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್‌ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ಪಾವಗಡ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಹಮ್ಮಿಕೊಂಡಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಈ ಭಾಗದ ಜನರ ಬಹು ದಿನಗಳ ಕನಸು ನನಸಾಗಲಿದೆ. ತುಮಕೂರು ಜಿಲ್ಲೆಯ ಪಾವಗಡ ಹಾಗೂ ಕ್ವಾದಿಗುಂಟೆ ಬಳಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬಹುಗ್ರಾಮ ನೀರು ಸರಬರಾಜು ಯೋಜನೆ ಮೂಲಕ ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಚಿಲಕನಹಟ್ಟಿ ಮತ್ತು 14 ಗ್ರಾಮೀಣ ವಸತಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ 961 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಇದಕ್ಕಾಗಿ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ಅಧಿಸೂಚನೆ ಹೊರ ಬೀಳಲಿದೆ. ಕೃಷಿ ಸಚಿವ ಚಲುವರಾಯಸ್ವಾಮಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೃಷಿ ಇಲಾಖೆಯಲ್ಲಿ ಆಡಳಿತ ಸುಧಾರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದುವರೆದು ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೂ ಕ್ರಮ ವಹಿಸಲಾಗುತ್ತಿದೆ ಎಂದರು. ಮೊದಲ ಹಂತದಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ 961 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಇದಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಕೂಡ ದೊರೆತಿದೆ. ಹೀಗಾಗಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಭರ್ತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಹುದ್ದೆಗಳ ವಿವರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಅಧಿಕಾರಿ 34 ಹುದ್ದೆಗಳು ಸಹಾಯಕ ಕೃಷಿ ಅಧಿಕಾರಿ 223 ಹುದ್ದೆಗಳು ದ್ವಿತೀಯ ದರ್ಜೆ ಸಹಾಯಕರು 17 ಹುದ್ದೆಗಳು ಬೆರಳಚ್ಚುಗಾರರು 17…

Read More

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಅತ್ಯಂತ ಕ್ಷಿಪ್ರವಾಗಿ ಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ವಾರ್ಷಿಕವಾಗಿ 100 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ 4,500-5,000 ಎಕರೆ ಭೂಮಿ ಬೇಕಾಗಲಿದ್ದು, ಹಲವು ಅಂಶಗಳನ್ನು ಪರಿಗಣಿಸಿ ಇದನ್ನು ಉನ್ನತ ಮಟ್ಟದ ಸಮಿತಿಯು ಆಖೈರು ಮಾಡಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಬುಧವಾರ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ದೇಶದ ತಂತ್ರಜ್ಞಾನ ಮತ್ತು ನವೋದ್ಯಮಗಳ ರಾಜಧಾನಿಯೂ ಆಗಿದ್ದು, ಈಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೆಹಲಿ ಮತ್ತು ಮುಂಬೈ ನಂತರ ಅತಿದಟ್ಟಣೆಯಿಂದ ಕೂಡಿರುವ ಮೂರನೇ ಏರ್-ಪೋರ್ಟ್ ಆಗಿದೆ. ಸದ್ಯಕ್ಕೆ ಇಲ್ಲಿ ವರ್ಷಕ್ಕೆ 52 ಮಿಲಿಯನ್ ಪ್ರಯಾಣಿಕರ ಮತ್ತು 0.71 ಮಿಲಿಯನ್ ಟನ್ ಸರಕು ಸಾಗಣೆ ನಿರ್ವಹಣೆ ಆಗುತ್ತಿದೆ. ಇವುಗಳನ್ನು ಕ್ರಮವಾಗಿ 110 ಮಿಲಿಯನ್ ಮತ್ತು 1.10 ಮಿಲಿಯನ್ ಟನ್ ತನಕ ವಿಸ್ತರಿಸಬಹುದಾಗಿದ್ದು, 2035ರ ವೇಳೆಗೆ ಇದು ಗರಿಷ್ಠ…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಕೇಳಿ ಬಂದಿರುವಂತ ಮುಡಾ ಹಗರಣದ ವಿರುದ್ಧ ಕರ್ನಾಟಕ ಬಿಜೆಪಿ ಸಿಡಿದೆದ್ದಿದೆ. ಈ ಸಂಬಂಧ ಜುಲೈ.12ರಂದು ಮೈಸೂರಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸೋದಕ್ಕೆ ನಿರ್ಧರಿಸಿದೆ. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು,ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು. ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇದೇ 12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ; ಈ ಭಾರಿ ಮೊತ್ತದ…

Read More