Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನೂತನ ಖಾತೆ ಹಂಚಿಕೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸ್ಫೋಟಗೊಂಡಿರುವ ಅಸಮಾಧಾನ ಮತ್ತು ರಾಜೀನಾಮೆ ಗದ್ದಲದ ಕುರಿತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸರ್ಕಾರದ ಪರಿಸ್ಥಿತಿಯನ್ನು ಅತ್ಯಂತ ಕಟುವಾದ ಶಬ್ದಗಳಲ್ಲಿ ವ್ಯಂಗ್ಯವಾಡಿದ್ದಾರೆ. ಕೆಟ್ಟು ನಿಂತ ಬಸ್‌ಗೆ ಹೊಸ ಚಾಲಕ ಬಂದಂತಾಗಿದೆ! ಮುಖ್ಯಮಂತ್ರಿ ಬದಲಾವಣೆ ಹಾಗೂ ಖಾತೆ ಹಂಚಿಕೆಯ ಗೊಂದಲಗಳ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, “ರಾಜ್ಯದಲ್ಲಿ ಸದ್ಯದ ಪರಿಸ್ಥಿತಿ ಹೇಗಿದೆಯೆಂದರೆ, ಕೆಟ್ಟು ನಿಂತಿರುವ ಬಸ್‌ಗೆ ಹೊಸ ಚಾಲಕನನ್ನು ನೇಮಕ ಮಾಡಿದಂತಾಗಿದೆ. ಹೊಸ ಚಾಲಕ ಬಂದ ತಕ್ಷಣವೇ ಕೆಟ್ಟಿರುವ ಬಸ್ ತಾನಾಗಿಯೇ ಸರಿಯಾಗಲು ಸಾಧ್ಯವಿಲ್ಲ” ಎಂದು ಮಾರ್ಮಿಕವಾಗಿ ಹೇಳಿದರು. ಸರ್ಕಾರದ ಅಸ್ಥಿರತೆಯನ್ನು ಗೃಹಪ್ರವೇಶಕ್ಕೆ ಹೋಲಿಸಿದ ಅವರು, “ಹೊಸ ಇಲಾಖೆಗಳು, ಖಾತೆಗಳ ಹಂಚಿಕೆಯಾಗಿ ಗೃಹಪ್ರವೇಶ ಮಾಡಿದ ಎರಡನೇ ದಿನಕ್ಕೇ ಚಾವಣಿ ಕುಸಿದು ಬಿದ್ದಿದೆ. ಇನ್ನು ಈ ಮನೆಯಲ್ಲಿ ಜನ ಸಾಮಾನ್ಯರು ವಾಸ ಮಾಡಲು ಸಾಧ್ಯವೋ ಇಲ್ಲವೋ…

Read More

ನವದೆಹಲಿ: ವೈವಾಹಿಕ ಜೀವನದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಪತ್ನಿಯೊಂದಿಗೆ ಪತಿ ಕೆಲವು ದಿನಗಳ ಕಾಲ ಮಾತನಾಡದಿದ್ದ ತಕ್ಷಣವೇ ಅದನ್ನು ಕ್ರೌರ್ಯ ಎಂದು ಪರಿಗಣಿಸಿ, ಪತಿಯನ್ನು ಅಪರಾಧಿ ಎಂದು ನಿರ್ಣಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 498A ಅಡಿಯಲ್ಲಿ ಪತ್ನಿಗೆ ಕ್ರೌರ್ಯ ಎಸಗಿದ ಆರೋಪದ ಮೇಲೆ ಮೂರು ವರ್ಷಗಳ ಜೈಲು ಶಿಕ್ಷೆಗೆ ಒಳಗಾಗಿದ್ದ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ. ನ್ಯಾಯಮೂರ್ತಿಗಳಾದ ಜೆ. ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರಿದ್ದ ಪೀಠವು ಈ ಆದೇಶವನ್ನು ಹೊರಡಿಸಿದೆ. ಈ ಹಿಂದೆ ವಿಚಾರಣಾ ನ್ಯಾಯಾಲಯ ಮತ್ತು ಮದ್ರಾಸ್ ಹೈಕೋರ್ಟ್ ನೀಡಿದ್ದ ಶಿಕ್ಷೆಯ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಪ್ರಕರಣದ ಹಿನ್ನೆಲೆ ಪ್ರಾಸಿಕ್ಯೂಷನ್ ಪ್ರಕಾರ, ಮೃತ ಮಹಿಳೆಯು ತನ್ನ ಪೋಷಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ವಿವಾಹದ ಸಮಯದಲ್ಲಿ ಆಕೆಯ ಪೋಷಕರು 3 ಲಕ್ಷ ರೂಪಾಯಿ ನಗದು, 20 ಸವರನ್ ಚಿನ್ನದ ಆಭರಣಗಳು…

Read More

ಬೆಂಗಳೂರು: ರಾಜ್ಯದಲ್ಲಿ ಹೊಸ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಮತ್ತು ರಾಜೀನಾಮೆ ಹೈಡ್ರಾಮಾಗಳು ಮುನ್ನೆಲೆಗೆ ಬಂದಿವೆ. ಹಿರಿಯ ನಾಯಕರ ಅಸಮಾಧಾನ ಸ್ಫೋಟಗೊಂಡಿರುವ ಈ ಕಾವೇರಿದ ರಾಜಕೀಯ ವಾತಾವರಣದ ನಡುವೆ, ಸಚಿವ ಸತೀಶ್ ಜಾರಕಿಹೊಳಿ ಅವರು ಅತ್ಯಂತ ಸಮಚಿತ್ತದ ಹಾಗೂ ವಾಸ್ತವಿಕ ನಿಲುವನ್ನು ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹಿರಿಯ ನಾಯಕರ ಅಸಮಾಧಾನದ ಬೆಂಕಿಯನ್ನು ನಂದಿಸುವ ಸಂಪೂರ್ಣ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಜಾರಕಿಹೊಳಿ ಬಲವಾಗಿ ಪ್ರತಿಪಾದಿಸಿದ್ದಾರೆ. ರಾಮಲಿಂಗಾರೆಡ್ಡಿ ರಾಜೀನಾಮೆ ತಣ್ಣಗಾಗಿಸಲಿದ್ದಾರೆ ಮಾಜಿ ಸಿಎಂ? ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅತ್ಯಂತ ಹಗುರವಾಗಿ ಉತ್ತರಿಸಿದ ಸತೀಶ್ ಜಾರಕಿಹೊಳಿ, “ಅವರು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ. ಆದರೆ ಈ ಇಡೀ ಪರಿಸ್ಥಿತಿಯನ್ನು ಸಮಾಧಾನಪಡಿಸುವ ಹಾಗೂ ಪರ್ಯಾಯ ವ್ಯವಸ್ಥೆ ಮಾಡುವ ಸಂಪೂರ್ಣ ಸಾಮರ್ಥ್ಯ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದೆ. ಮುಂದಿನ ಒಂದು ಅಥವಾ ಎರಡು…

Read More

ಶಿವಮೊಗ್ಗ: ಜೂನ್ 5 ಬಂತೆಂದರೆ ಸಾಕು, ಪರಿಸರ ದಿನಾಚರಣೆಯ ಹೆಸರಿನಲ್ಲಿ ಗಿಡ ನೆಡುವುದು, ಫೋಟೋ ಕ್ಲಿಕ್ಕಿಸಿಕೊಳ್ಳುವುದು ಮತ್ತು ಭಾಷಣ ಬಿಗಿಯುವುದು ಮಾಮೂಲಿ. ಆದರೆ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಒಂದು ಗ್ರಾಮ ಪಂಚಾಯ್ತಿ ಮಾತ್ರ ಇವೆಲ್ಲದಕ್ಕಿಂತ ಭಿನ್ನವಾಗಿ, ಪರಿಸರ ಕಾಳಜಿಯನ್ನು ಮಕ್ಕಳ ರಕ್ತಗತವಾಗಿಸುವ ನಿಟ್ಟಿನಲ್ಲಿ ವಿನೂತನ ಹಾಗೂ ಮಾದರಿ ಅಭಿಯಾನವೊಂದನ್ನು ನಡೆಸಿ ರಾಜ್ಯದ ಗಮನ ಸೆಳೆದಿದೆ. ಅದುವೇ ಸಾಗರ ತಾಲ್ಲೂಕಿನ ಕಸಬ ಹೋಬಳಿಯ ಮಾಲ್ವೆ ಗ್ರಾಮ ಪಂಚಾಯ್ತಿ. ಇಲ್ಲಿ ಕೇವಲ ಪರಿಸರ ದಿನದಂದು ಗಿಡ ನೆಡುವ ನಾಟಕವಾಡದೆ, ಮಕ್ಕಳ ಕೈಯಿಂದಲೇ ಬೀಜ ಬಿತ್ತಿಸಿ, ಸಸಿಗಳನ್ನು ಹೆಮ್ಮರವಾಗಿ ಬೆಳೆಸುವಂತಹ ಜವಾಬ್ದಾರಿಯುತ ಶಿಕ್ಷಣವನ್ನು ಪ್ರಾಯೋಗಿಕವಾಗಿ ನೀಡಿ, ವಿನೂತನವಾಗಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ‘ನನ್ನ ನೆಲ ನನ್ನ ಸಸಿ’: ಬೇಸಿಗೆ ರಜೆಯ ಸಾರ್ಥಕ ಬಳಕೆ ಈ ಅಭಿಯಾನ ಇಂದು ನಿನ್ನೆ ಶುರುವಾಗಿದ್ದಲ್ಲ. ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಘೋಷಣೆಯಾದ ಬೆನ್ನಲ್ಲೇ ಮಾಲ್ವೆ ಗ್ರಾಮ ಪಂಚಾಯ್ತಿ ಆಡಳಿತಾಧಿಕಾರಿ ಡಾ.ಅವಿನಾಶ್ ಹಾಗೂ ಪಿಡಿಓ ಅಷ್ಪಕ್ ಅಹಮದ್ ಅವರು ತಮ್ಮ ಪಂಚಾಯ್ತಿ…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಫಲಿತಾಂಶವನ್ನು ಶನಿವಾರ (ಜೂನ್ 6ರಂದು) ಪ್ರಕಟಿಸಲಿದೆ. ವೈದ್ಯಕೀಯ ಶಿಕ್ಷಣ ಸಚಿವರೂ ಅದ ಪ್ರಾಧಿಕಾರದ ಸಹ ಅಧ್ಯಕ್ಷ ಡಾ.ಶರಣ ಪ್ರಕಾಶ ಪಾಟೀಲ ಅವರು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಟಿ ನಡೆಸಿ, ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬು ಗೋಯಲ್ ಅವರೂ ಇರುತ್ತಾರೆ. ಸಾರ್ವಜನಿಕರು, ಅಂದು ಮಧ್ಯಾಹ್ನ 2 ಗಂಟೆ ನಂತರ ಈ ಕೆಳಗಿನ ಲಿಂಕ್ ಗಳ ಮೂಲಕ ಫಲಿತಾಂಶ ಪಡೆಯಬಹುದು ಎಂದು ಅವರು ವಿವರಿಸಿದ್ದಾರೆ. ಫಲಿತಾಂಶವನ್ನು ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ… https://keaonline.karnataka.gov.in/ugcet_2026_results/ https://keaonline.karnataka.gov.in/ugcet_2026_result/ https://cetonline.karnataka.gov.in/kea/

Read More

ಬೆಂಗಳೂರು: ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ಧರಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಿರಿಯರಿದ್ದಾರೆ ಮತ್ತು ಸಮರ್ಥರಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ನಡೆಸಲಿದ್ದಾರೆ ಎಂದು ಹೇಳಿದರು. ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯಗಳಿಗೆ ಬೆಲೆ ಇರುತ್ತದೆ. ಪಕ್ಷದ ಹಿರಿಯರು ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು. ಬೆಳಗಾವಿ ರಾಜಕಾರಣ ನಿಮ್ಮ ಸಚಿವ ಸ್ಥಾನಕ್ಕೆ ಅಡ್ಡಿಯಾಗ್ತಿದೆಯಾ ಎಂಬ ಪ್ರಶ್ನೆಗೆ, ಖಂಡಿತವಾಗಿಯೂ ಅಂತಹದ್ದೇನೂ ಇಲ್ಲ. 2023ರಲ್ಲಿಯೇ ಆ ಕುರಿತು ಎಲ್ಲ ತೀರ್ಮಾನ ಆಗಿದೆ. ಎಲ್ಲ ಸಮಾಧಾನದಿಂದ ಮುಂದೆ ಹೋಗ್ತಾ ಇದ್ದೇವೆ. ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು ಇನ್ನೂ ಎರಡು ಸಚಿವ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದ್ದೇವೆ. ಬೆಳಗಾವಿ ಮೂರು…

Read More

ಬೆಂಗಳೂರು : ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ 25 ವರ್ಷಗಳ ದೀರ್ಘಾವಧಿಗೆ ಭೂಮೇಲ್ಮೈ ನೀರು ಬಳಸಿ ಗ್ರಾಮೀಣ ಭಾಗಕ್ಕೆ ಪೂರೈಕೆ ಮಾಡುವುದು ಸರ್ಕಾರದ ಸಂಕಲ್ಪವಾಗಿದ್ದು, ಇದರ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಮಹಾತ್ಮಾಗಾಂಧೀ ಅವರು ಭಾರತದ ಆತ್ಮ ಹಳ್ಳಿಗಳಲ್ಲಿದೆ ಎಂದು ಹೇಳಿದ್ದಾರೆ. ಗ್ರಾಮಗಳ ಅಭಿವೃದ್ಧಿಗಾಗಿ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧೀ ಅವರು ಸಾಂವಿಧಾನಿಕ ತಿದ್ದುಪಡಿ ತಂದಿದ್ದರು. ಆ ಮಹತ್ವದ ಚಿಂತನೆಯ ಸಾಕಾರ ತಮ್ಮ ಗುರಿಯಾಗಿದೆ ಎಂದರು. ಗ್ರಾಮೀಣ ಭಾಗದ ಸ್ವಚ್ಛತೆ ಕಾಪಾಡಲು ಮತ್ತು ಹಳ್ಳಿಗಳಲ್ಲಿ ಗುಣಮಟ್ಟದ ಆಸ್ತಿಗಳ ಸೃಜನೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸಲಾಗುವುದು. ನಾಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಚಯಾತ್ಮಕ ಸಭೆ…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ಸಂಸತ್ತಿನ ಮೇಲ್ಮನೆಗೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಶುಕ್ರವಾರ ವಿಧಾನಸೌಧಕ್ಕೆ ಆಗಮಿಸಿದ ಹಿರಿಯ ನಾಯಕರು ಚುನಾವಣಾಧಿಕಾರಿಗಳಿಗೆ ಅಧಿಕೃತವಾಗಿ ದಾಖಲೆಗಳನ್ನು ಹಸ್ತಾಂತರಿಸಿದರು. ವಿಧಾನಸೌಧದಲ್ಲಿ ದಂಡೆತ್ತಿ ಬಂದ ಕಾಂಗ್ರೆಸ್ ನಾಯಕರು ದೇಶದ ಹಾಗೂ ರಾಜ್ಯದ ಪ್ರಮುಖ ರಾಜಕೀಯ ನಾಯಕರ ಉಪಸ್ಥಿತಿಗೆ ಇಂದು ವಿಧಾನಸೌಧ ಸಾಕ್ಷಿಯಾಯಿತು. ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಕೆಯ ಪ್ರಮುಖ ಕ್ಷಣದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಖುದ್ದಾಗಿ ಭಾಗವಹಿಸಿ ಬೆಂಬಲ ಸೂಚಿಸಿದರು. ಅವರೊಂದಿಗೆ ರಾಜ್ಯ ಕಾಂಗ್ರೆಸ್‌ನ ಪ್ರಮುಖ ಶಕ್ತಿಗಳಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೊತೆಯಾಗಿ ನಿಂತು ನಾಯಕರಿಗೆ ಶುಭ ಹಾರೈಸಿದರು. ರಾಷ್ಟ್ರ ರಾಜಕಾರಣದಲ್ಲಿ ಸುದೀರ್ಘ ರಾಜತಾಂತ್ರಿಕ ಅನುಭವ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಮ್ಮೆ ರಾಜ್ಯಸಭೆ ಪ್ರವೇಶಿಸುತ್ತಿರುವುದು ಹಸ್ತ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ. ನಾಮಪತ್ರ…

Read More

ಶಿವಮೊಗ್ಗ: ಜಾಗತಿಕ ತಾಪಮಾನದ ಏರಿಕೆಯಿಂದ ಮುಕ್ತಿ ಪಡೆಯಲು ಮತ್ತು ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಲು ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಸಾಗರ ನಗರ ಬಿಜೆಪಿ ಮಂಡಲದ ಅಧ್ಯಕ್ಷರಾದಂತ ಗಣೇಶ್ ಪ್ರಸಾದ್ ಕೆ.ಆರ್ ಕರೆ ನೀಡಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಏಕ್ ಪೇಡ್ ಮಾ ಕೆ ನಾಮ್ ಕರೆಗೆ ಓಗೊಟ್ಟು ಸಾಗರದ ವಿನೋಬ ನಗರದಲ್ಲಿರುವಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಗಾಯತ್ರಿ ಮಲ್ಲೇಶ್ ಅವರ ನೇತೃತ್ವದ ತಂಡವು ಸಾಗರ ನಗರದ ವಿವಿಧ ಶಾಲೆ-ಕಾಲೇಜುಗಳಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸುತ್ತಿರುವುದು ಶ್ಲಾಘನೀಯ. ಪ್ರಧಾನಿ ನರೇಂದ್ರ ಮೋದಿ ಅವರು ಇಂತಹ ಸಣ್ಣ ಸಣ್ಣ ವಿಚಾರಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ದೇಶಕ್ಕೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಅದೇ ಹಾದಿಯಲ್ಲಿ ಇಂದು ವಿನೋಬನಗರ ಶಾಲೆಯಲ್ಲಿ ಗಿಡ ನೆಡಲಾಗಿದ್ದು, ನಗರದ ಇತರೆಡೆಗಳಲ್ಲೂ ಈ ಜಾಗೃತಿ…

Read More

ಬೆಂಗಳೂರು : ಕರ್ನಾಟಕದ ನೂತನ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರು ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಹಾಗೂ ಜನಸಾಮಾನ್ಯರಿಗೆ ಉಚಿತ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ತಲುಪಿಸಲು ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ಆರೋಗ್ಯ ಇಲಾಖೆಯು ಅತ್ಯಂತ ದೊಡ್ಡ ಹಾಗೂ ಜವಾಬ್ದಾರಿಯುತ ಖಾತೆಯಾಗಿದೆ. ವೈದ್ಯರ ನೇಮಕಾತಿಯಿಂದ ಹಿಡಿದು, ಆರೋಗ್ಯ ನೀತಿಗಳ ರೂಪಿಸುವಿಕೆ ಮತ್ತು ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ಪರಿಣಾಮಕಾರಿಯಾಗಿ ತಲುಪಿಸುವುದಕ್ಕೆ ನಮ್ಮ ಮೊದಲ ಆದ್ಯತೆ” ಎಂದು ತಿಳಿಸಿದರು. ಇದೇ ವೇಳೆ, ಹಿಂದಿನ ಆರೋಗ್ಯ ಸಚಿವರಾದ ದಿನೇಶ್ ಗುಂಡು ರಾವ್ ಅವರು ಜಾರಿಗೆ ತಂದಿದ್ದ ಉತ್ತಮ ಕೆಲಸ ಹಾಗೂ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು. ಆಯುಷ್ಮಾನ್ ಕರ್ನಾಟಕ: ಹೆಚ್ಚುವರಿ ಶುಲ್ಕ ವಸೂಲಿ ಮಾಡಿದರೆ ಕಠಿಣ ಕ್ರಮ ಇಲಾಖೆಯ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಯುಷ್ಮಾನ್ ಕರ್ನಾಟಕ ಯೋಜನೆಯ ಅನುಷ್ಠಾನದ ಕುರಿತು ವಿಮರ್ಶಾ ಸಭೆ ನಡೆಸಿದ ಸಚಿವರು, ಖಾಸಗಿ ಆಸ್ಪತ್ರೆಗಳ…

Read More