Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಎಲೆಕ್ಟ್ರಿಕ್ ಬಸ್ ಹಂಚಿಕೆಯ ಸಂಬಂಧ ಕರ್ನಾಟಕ, ತೆಲಂಗಾಣ, ಗುಜರಾತ್ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಸಭೆ ನಡೆಸಿದರು. ಎಲೆಕ್ಟ್ರಿಕ್ ಬಸ್ ಗಳ ಬಳಕೆ ಹಾಗೂ ಅವುಗಳ ನಿರ್ವಹಣೆಗೆ ಅಗತ್ಯವಾದ ಪೂರಕ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು; ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ ಎಂದು ಪ್ರತಿಪಾದಿಸಿದರು. ಬಸ್ ಹಂಚಿಕೆಯಲ್ಲಿ ಬೇಡಿಕೆ, ಜನಸಂಖ್ಯೆ ಹಾಗೂ ಹಳೆಯ ಬಸ್ ಗಳ ವಿಲೇವಾರಿ…
ಬೆಂಗಳೂರು: ಸಹ ಕಲಾವಿದೆಯೊಬ್ಬರು ಕಿರುತೆರೆ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು ಕಿರುತೆರೆ ನಟ ಮಡೆನೂರು ಮನುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಿರುತೆರೆ ಕಲಾವಿದ ಮಡೆನೂರು ಮನು ವಿರುದ್ಧ ಪೊಲೀಸರಿಗೆ ಸಹ ಕಲಾವಿದೆ ಅತ್ಯಾಚಾರ ಆರೋಪ ಮಾಡಿ ದೂರು ನೀಡಿದ್ದರು. ಈ ದೂರಿನಲ್ಲಿ ಮಡೆನೂರು ಮನು ಎರಡು ಬಾರಿ ಅಬಾಷನ್ ಮಾಡಿಸಿದ್ದಾಗಿ ಉಲ್ಲೇಖಿಸಿದ್ದರು. ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ದೂರು ಆಧರಿಸಿ ಕಿರುತೆರೆ ಕಲಾವಿದ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪದಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಮಡೆನೂರು ಮನು ವೀಡಿಯೋ ಬಿಡುಗಡೆ ಮಾಡಿದ್ದು, ನಾನು ಅವಳನ್ನು ಜೀವನ ಪೂರ್ತಿ ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಾನು ಅವಳಿಗೆ ಯಾವತ್ತೂ ಮೋಸ ಮಾಡಲ್ಲ ಎಂಬುದಾಗಿ ಹೇಳಿದ್ದಾರೆ.
ಬೆಂಗಳೂರು: ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು ಜೂ.9 ರಿಂದ 20 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ.28 ಕೊನೆಯ ದಿನವಾಗಿದೆ. ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ಅವಕಾಶ ಕಲ್ಪಿಸಿತ್ತು. ಅದರಿಂದ ರಾಜ್ಯದಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈಗ 3 ನೇ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಫಲಿತಾಂಶ ಪೂರ್ಣಗಳ್ಳದ ಎಲ್ಲಾ ವಿದ್ಯಾರ್ಥಿಗಳು ನೊಂದಾಯಿಸಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿಯನ್ನು ನೀಡಲಾಗಿದೆ. ಹಾಗೂ ನೊಂದಾಯಿಸಿಕೊಂಡ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಂತೆ ಕ್ರಮಕೈಗೊಳ್ಳಲು ಹಾಗೂ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನಾ ತರಗತಿಯನ್ನು ನಡೆಸುವಂತೆ ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಪುನರಾವರ್ತಿತ/ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ರಂತೆ ಪರೀಕ್ಷೆ-3ರಲ್ಲೂ ಪರೀಕ್ಷಾ ಶುಲ್ಕ ಪಾವತಿಗೆ ವಿನಾಯಿತಿ ನೀಡಲಾಗಿದೆ. 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೊಂದಾಯಿಸಿಕೊಂಡು ಹಾಜರಾತಿ ಕೊರತೆಯಿಂದ ಪರೀಕ್ಷೆಯಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ 2025ರ ದ್ವಿತೀಯ ಪಿಯುಸಿ ಪರೀಕ್ಷೆ-3 ರಲ್ಲಿ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿ ಪರೀಕ್ಷೆ…
ಬೆಂಗಳೂರು: ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ ಯೋಜನೆಯ ಪ್ರಸ್ತಾವನೆಯನ್ನು ಮುಂಬರುವ ಸಚಿವ ಸಂಪುಟ ಸಭೆಗೆ ಮಂಡಿಸಲು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. 2023-24ರ ಬಜೆಟ್ ನಲ್ಲಿ ಘೋಷಿಸಿದ್ದ ಚಿಕ್ಕಮಗಳೂರು ಮತ್ತು ಕೊಡಗು ಏರ್-ಸ್ಟ್ರಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಅವರು ಮತ್ತು ಇಂಧನ ಸಚಿವರೂ ಆದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್ ಅವರ ಜತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ವಿಧಾನಸೌಧದಲ್ಲಿ ಸಭೆ ನಡೆಸಿ, ಸೂಕ್ತ ಆದೇಶ ನೀಡಿದರು. ಚಿಕ್ಕಮಗಳೂರು ಏರ್-ಸ್ಟ್ರಿಪ್ ಯೋಜನೆಗೆ ಅಲ್ಲಿನ ಜಿಲ್ಲಾಡಳಿತವು ಚಿಕ್ಕಮಗಳೂರು-ಹಿರೇಮಗಳೂರು ನಡುವೆ ಈಗಾಗಲೇ 137 ಎಕರೆ ಜಮೀನು ನೀಡಿದೆ. ಈ ಪೈಕಿ 120 ಎಕರೆ ಸರಕಾರಿ ಜಮೀನೇ ಆಗಿದೆ. ಉಳಿದ 17.1 ಎಕರೆ ಮಾತ್ರ ಖಾಸಗಿಯಾಗಿದ್ದು,…
ಗುರುಗಳನ್ನು ನೋಡುವುದು ಬಹಳ ಪ್ರಯೋಜನ ಎಂದು ಅವರು ಹೇಳುತ್ತಾರೆ. ಆ ಗುರು ಭಗವಾನ್ ಒಂದು ನಿಮಿಷ ನಮ್ಮನ್ನು ನೋಡಿದರೆ ಸಾಕು. ನಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ನಮ್ಮ ಜೀವನದಲ್ಲಿ ಸಂತೋಷ ಹುಟ್ಟುತ್ತದೆ. ಕಾರಣವೇನೆಂದರೆ, ನಮ್ಮ ಜೀವನದ ಎಲ್ಲಾ ಸಂತೋಷಗಳಿಗೆ ಕಾರಣರಾದವರು ಈ ಗುರುಗಳು. ಹಣದ ಹೊರತಾಗಿ, ನಮ್ಮ ಗೃಹಸ್ಥ ಜೀವನವು ಸಮೃದ್ಧವಾಗಲು, ಕುಟುಂಬದಲ್ಲಿ ಸಂತೋಷವು ಉಂಟಾಗಲು, ಶುಭ ಕಾರ್ಯಗಳಿಗೆ ಇರುವ ಅಡೆತಡೆಗಳು ನಿವಾರಣೆಯಾಗಲು, ಮಕ್ಕಳು ತಮ್ಮ ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡಲು ಮತ್ತು ಮನೆಯಲ್ಲಿ ಚಿನ್ನ ಸಂಗ್ರಹವಾಗಲು ನಮಗೆ ಗುರುವಿನ ಆಶೀರ್ವಾದ ಬೇಕು. ಈ ಗುರು ಭಗವಾನರ ಅನುಗ್ರಹ ನಮಗೆ ಸಿಗಬೇಕಾದರೆ ಏನು ಮಾಡಬೇಕು? ಈ ಪೋಸ್ಟ್ ನಿಮಗಾಗಿ ಗುರು ಭಗವಾನ್ ಅವರ ಸರಳ ಆಧ್ಯಾತ್ಮಿಕ ಪರಿಹಾರ ಮತ್ತು ಸರಳ ಮಂತ್ರವನ್ನು ಒಳಗೊಂಡಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಯ ವೈದ್ಯರು, ಶುಶ್ರೂಷಕರು 2025ನೇ ಸಾಲಿನಿಂದ ಪಿಜಿ ಡಿಪಿಹೆಚ್ಎಂ ಸ್ನಾತಕೋತ್ತರ ವ್ಯಾಸಂಗ ಮಾಡುವುದಕ್ಕೆ ತಡೆ ನೀಡಿ ಆದೇಶಿಸಿದೆ. ಈ ಮೂಲಕ PGDPHM ವ್ಯಾಸಂಗದ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ವೈದ್ಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆದೇಶ ಹೊರಡಿಸಿದ್ದು, ಆಯುಕ್ತರು, ಆರೋಗ್ಯ, ಮತ್ತು ಕುಟುಂಬ ಕಲ್ಯಾಣ ಸೇವಗಳು ಇವರು 2011-12 ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರವು PHFI (Public Health Foundation Of India) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಅದರನ್ವಯ ಇಲಾಖೆಯ ಎಂ.ಬಿ.ಬಿ.ಎಸ್ ವೈದ್ಯರು, ದಂತ ವೈದ್ಯರು, ಮತ್ತು ಶುಶೂಷಕರುಗಳನ್ನು Post Graduation Diploma in Public Health Management (PGDPHM) ವ್ಯಾಸಂಗಕ್ಕೆ ನಿಯೋಜಿಸಲಾಗುತ್ತಿತ್ತು ಎಂದಿದ್ದಾರೆ. ಸದರಿ ವ್ಯಾಸಂಗವು 2012-13ನೇ ಸಾಲಿನಲ್ಲಿ ಪ್ರಾರಂಭಗೊಂಡಿದ್ದು, 2024ನೇ ಸಾಲಿನವರೆಗೂ, ಒಟ್ಟು 229 ಅಭ್ಯರ್ಥಿಗಳು ಉನ್ನತ ವ್ಯಾಸಂಗವನ್ನು ಪೂರ್ಣಗೊಳಿಸಿರುತ್ತಾರೆ. ಹೀಗೆ ವ್ಯಾಸಂಗವನ್ನು ಪೂರೈಸಿ ಹಿಂದಿರುಗಿದ ವೈದ್ಯರುಗಳಿಗೆ ತಾಲ್ಲೂಕು ವೈದ್ಯಾಧಿಕಾರಿಗಳು, ಜಿಲ್ಲಾ…
ನವದೆಹಲಿ: ಸಾರ್ವಜನಿಕ ಆರೋಗ್ಯಕ್ಕೆ ಒಂದು ಪ್ರಮುಖ ಬದಲಾವಣೆ ತರುವಂತಹದ್ದಾಗಿ ಕಾಣಲಾಗುತ್ತಿರುವ ಈ ಆಸ್ಪತ್ರೆಯಲ್ಲಿ, ಹೈದರಾಬಾದ್ನ ನಿಲೌಫರ್ ಆಸ್ಪತ್ರೆಯು ಸೂಜಿಗಳು, ಬಾಟಲುಗಳು ಅಥವಾ ಪ್ರಯೋಗಾಲಯದ ವಿಳಂಬಗಳಿಲ್ಲದೆ ಒಂದು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ ರಕ್ತ ಪರೀಕ್ಷೆಯನ್ನು ನಡೆಸುವ ಕೃತಕ ಬುದ್ಧಿಮತ್ತೆ ಆಧಾರಿತ ರೋಗನಿರ್ಣಯ ಸಾಧನವನ್ನು ಅಳವಡಿಸಿಕೊಂಡ ಭಾರತದ ಮೊದಲ ಆಸ್ಪತ್ರೆಯಾಗಿದೆ. ಆರೋಗ್ಯ-ತಂತ್ರಜ್ಞಾನದ ಸ್ಟಾರ್ಟ್ಅಪ್ ಕ್ವಿಕ್ ವೈಟಲ್ಸ್ ಅಭಿವೃದ್ಧಿಪಡಿಸಿದ ಅಮೃತ್ ಸ್ವಸ್ಥ್ ಭಾರತ್ ಎಂಬ ಈ ಉಪಕರಣವು ಸುಧಾರಿತ ಫೇಸ್-ಸ್ಕ್ಯಾನಿಂಗ್ ತಂತ್ರಜ್ಞಾನವನ್ನು ಬಳಸಿಕೊಂಡು ಒಂದು ಹನಿ ರಕ್ತದ ಅಗತ್ಯವಿಲ್ಲದೆ 20 ರಿಂದ 60 ಸೆಕೆಂಡುಗಳಲ್ಲಿ ರಕ್ತ ಪರೀಕ್ಷೆಯ ಫಲಿತಾಂಶಗಳನ್ನು ತಲುಪಿಸುವ ಅಪ್ಲಿಕೇಶನ್ ಆಗಿದೆ. ಇದನ್ನು ಇತ್ತೀಚೆಗೆ ಲಕ್ಡಿಕಾಪುಲ್ನಲ್ಲಿರುವ ಆಸ್ಪತ್ರೆಯ ರೆಡ್ ಹಿಲ್ಸ್ ಕ್ಯಾಂಪಸ್ನಲ್ಲಿ ಅನಾವರಣಗೊಳಿಸಲಾಯಿತು. ರೋಗನಿರ್ಣಯದಲ್ಲಿ ಒಂದು ಪ್ರಗತಿ ಸಾಂಪ್ರದಾಯಿಕ ರಕ್ತ ಪರೀಕ್ಷೆಗಳಿಗಿಂತ ಭಿನ್ನವಾಗಿ, ಅಮೃತ್ ಸ್ವಸ್ಥ್ ಭಾರತ್ ಫೋಟೋಪ್ಲೆಥಿಸ್ಮೋಗ್ರಫಿ (PPG) ಅನ್ನು ಬಳಸುತ್ತದೆ. ಇದು ಚರ್ಮದ ಮೂಲಕ ಬೆಳಕಿನ ಹೀರಿಕೊಳ್ಳುವಿಕೆಯಲ್ಲಿನ ಬದಲಾವಣೆಗಳನ್ನು ಪತ್ತೆಹಚ್ಚುವ ತಂತ್ರಜ್ಞಾನವಾಗಿದ್ದು, ಇದು ಪ್ರಮುಖ ಆರೋಗ್ಯ ನಿಯತಾಂಕಗಳನ್ನು ನಿರ್ಣಯಿಸಲು ಸಹಾಯ ಮಾಡುತ್ತದೆ:…
ನವದೆಹಲಿ: ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬಿಕನೇರ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 103 ಅಮೃತ ನಿಲ್ದಾಣಗಳನ್ನು (ವಿಡಿಯೋ ಕಾನ್ಫರೆನ್ಸ್ ಮೂಲಕ) ಉದ್ಘಾಟಿಸಲಿದ್ದಾರೆ. ಕರ್ನಾಟಕದ 5 ರೈಲು ನಿಲ್ದಾಣಗಳು ಅಂದರೆ ಮುನಿರಾಬಾದ್, ಬಾಗಲಕೋಟೆ, ಗದಗ, ಗೋಕಾಕ್ ರಸ್ತೆ, ಧಾರವಾಡ ನಿಲ್ದಾಣಗಳು ಉದ್ಘಾಟನೆಯಾಗಲಿರುವ 103 ಅಮೃತ ರೈಲು ನಿಲ್ದಾಣಗಳಲ್ಲಿ ಸೇರಿವೆ. ದೇಶದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿರುವ ಈ 103 ಅಮೃತ ನಿಲ್ದಾಣಗಳನ್ನು ರೂ.1,100 ಕೋಟಿಗಳಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಅಮೃತ ಭಾರತ ನಿಲ್ದಾಣ ಯೋಜನೆ (ಎ ಬಿ ಎಸ್ ಎಸ್) ಅಡಿಯಲ್ಲಿ ಪ್ರಾದೇಶಿಕ ವಾಸ್ತುಶಿಲ್ಪವನ್ನು ಪ್ರತಿಬಿಂಬಿಸಲು ಮತ್ತು ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸಲು 1,300ಕ್ಕೂ ಹೆಚ್ಚು ನಿಲ್ದಾಣಗಳನ್ನು ಆಧುನಿಕ ಸೌಲಭ್ಯಗಳೊಂದಿಗೆ ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಭಾರತದಾದ್ಯಂತ ಪುನರಾಭಿವೃದ್ಧಿ ಮಾಡಲಾದ ಅಮೃತ ನಿಲ್ದಾಣಗಳು ಆಧುನಿಕ ಮೂಲಸೌಕರ್ಯವನ್ನು ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಯೋಜಿಸುತ್ತವೆ, ದಿವ್ಯಾಂಗ ಸ್ನೇಹಿ ಸೌಲಭ್ಯಗಳು ಸೇರಿದಂತೆ ಪ್ರಯಾಣಿಕ ಕೇಂದ್ರಿತ ಸೌಲಭ್ಯಗಳು ಮತ್ತು ಪ್ರಯಾಣದ ಅನುಭವವನ್ನು ಹೆಚ್ಚಿಸಲು ಸುಸ್ಥಿರ ಅಭ್ಯಾಸಗಳನ್ನು ಒಳಗೊಂಡಿವೆ.…
ಬೆಂಗಳೂರು: ನಗರದಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಡೆಂಗ್ಯೂ ಪ್ರಕರಣಗಳಲ್ಲಿ ಭಾರೀ ಹೆಚ್ಚಳವಾಗಿದೆ. ಆರೋಗ್ಯಯ ಮಾಹಿತಿಯಂತೆ ಶೇ.40 ರಿಂದ 50ರಷ್ಟು ಮಳೆಯ ನಂತ್ರ ಹೆಚ್ಚಳವಾಗಿದೆ. ಹೀಗಾಗಿ ಡೆಂಗ್ಯೂ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು, 700 ಸ್ವಯಂ ಸೇವಕರನ್ನು ನೇಮಿಸಲಾಗಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿಯೇ ಶೇ 40 ರಿಂದ 50 ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ನಾಗರಿಕರು ಕೂಡ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದರು. ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ ಎಂಬ ಘೋಷವಾಕ್ಯದೊಂದಿಗೆ ಡೆಂಗ್ಯೂ ಸೋಲಿಸುವ ಅಭಿಯಾನವನ್ನು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಪ್ರಾರಂಭಿಸಲಾಗಿದ್ದು, ಸಾರ್ವಜನಿಕ ಸ್ಥಳಗಳು, ನೀರು ನಿಲ್ಲುವ ಪ್ರದೇಶಗಳಲ್ಲಿ ಡೆಂಗ್ಯೂ ತರುವ ಸೊಳ್ಳಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮಗಳನ್ನ ತೆಗೆದುಕೊಳ್ಳಲಾಗುತ್ತಿದೆ. ವಿಶೇಷವಾಗಿ ಸಾರ್ವಜನಿಕರು ಸ್ವಯಂ ಸ್ವಚ್ಚತೆಗೆ ಆದ್ಯತೆ ನೀಡಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಾಗ ಮಾತ್ರ ಡೆಂಗ್ಯೂ ನಿಯಂತ್ರಣ ಮಾಡಲು ಸಾಧ್ಯ…
ಶ್ರೀನಗರ: ಇಂಡಿಗೋ ವಿಮಾನವು ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದಂತ ವೇಳೆಯಲ್ಲಿ ಆಕಾಶದಲ್ಲೇ ಆಲಿಕಲ್ಲು ಮಳೆಗೆ ಸಿಲುಕಿದೆ. ಹೀಗಾಗಿ ವಿಮಾನದಲ್ಲಿದ್ದಂತ ಪ್ರಯಾಣಿಕರಿಗೆ ಆಕಾಶದಲ್ಲಿಯೇ ಸಾವನ್ನಪ್ಪಿದ ಅನುಭವ ನೀಡಿದೆ. ಆ ಭಯಾನಕ ವೀಡಿಯೊವೊಂದು ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಆಲಿಕಲ್ಲು ಮಳೆಯಿಂದಾಗಿ ವಿಮಾನಕ್ಕೆ ಹಾನಿಯಾಗಿದೆ. ಗಾಳಿಯಲ್ಲಿ ತೀವ್ರ ಪ್ರಕ್ಷುಬ್ಧತೆ ಉಂಟಾಗಿ ಪ್ರಯಾಣಿಕರು ಭಯಭೀತರಾಗಿ ಕಿರುಚುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. https://twitter.com/_iamsamiullah/status/1925183095520588034 ಕೆಟ್ಟ ಹವಾಮಾನದಿಂದಾಗಿ ವಿಮಾನವು ಮೇಲಕ್ಕೆ ಮತ್ತು ಕೆಳಕ್ಕೆ ಅಲುಗಾಡುತ್ತಿದ್ದಂತೆ ಅವರು ತಮ್ಮ ಜೀವ ಉಳಿಯಲ್ಲಿ ಅಂತ ಪ್ರಾರ್ಥಿಸುವುದನ್ನು ಕಾಣಬಹುದು. ವಿಮಾನದಲ್ಲಿ ಸುಮಾರು 227 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು ಎಂದು ವರದಿಗಳಿವೆ. ಪೈಲಟ್ನ ಧೈರ್ಯ ಮತ್ತು ಮನಸ್ಸಿನ ಉಪಸ್ಥಿತಿಯು ಎಲ್ಲಾ ಪ್ರಯಾಣಿಕರ ಜೀವಗಳನ್ನು ಉಳಿಸಿತು. ವಿಮಾನವು ಆಕಾಶದಲ್ಲಿ ತೀವ್ರ ಆಲಿಕಲ್ಲು ಮಳೆಯನ್ನು ಎದುರಿಸಿದಾಗ ಪೈಲಟ್ ವಿಮಾನದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದರು ಎಂಬ ವರದಿಗಳಿವೆ. https://twitter.com/am_aaqib/status/1925186187032969402 ವಿಮಾನದಲ್ಲಿನ ಭಯಾನಕ ಕ್ಷಣವನ್ನು ಪ್ರಯಾಣಿಕನೊಬ್ಬ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ವೀಡಿಯೊ ವೈರಲ್ ಆಗಿದೆ. ದೆಹಲಿಯಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ 6E2142 ರಲ್ಲಿ ಈ…