Author: kannadanewsnow09

ಬೆಂಗಳೂರು: ಒಬ್ಬನೇ ವ್ಯಕ್ತಿಯಿಂದ ಬರೋಬ್ಬರಿ 476 ಮಾಹಿತಿ ಹಕ್ಕು ಅರ್ಜಿಗಳನ್ನು ಹಾಕಿದ್ದರು. ಹೀಗಾಗಿ ಮಾಹಿತಿ ಹಕ್ಕು ಆಯೋಗವು ಮತ್ತೆ ಅರ್ಜಿ ಸಲ್ಲಿಸದಂತೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧವನ್ನು ತೆರವಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ಟ್ ನಿರ್ಬಂಧಕ್ಕೆ ತಡೆ ನೀಡಲು ನಕಾರ ವ್ಯಕ್ತಪಡಿಸಿದೆ. ಕೆ.ದೇವಪ್ರಸಾದ್ ಎಂಬುವರು ಹೈಕೋರ್ಟ್ ಗೆ ಮಾಹಿತಿ ಹಕ್ಕು ಆಯೋಗದಿಂದ ಅರ್ಜಿ ಸಲ್ಲಿಸಲು ನಿರ್ಬಂಧ ವಿಧಿಸಿದೆ. 476 ಆರ್ ಟಿ ಐ ಅರ್ಜಿ ಸಲ್ಲಿಸಿದ್ದ ಕಾರಣಕ್ಕೆ ಮತ್ತೆ ಅರ್ಜಿ ಸಲ್ಲಿಸದಂತೆ ನಿರ್ಬಂಧ ವಿಧಿಸಲಾಗಿದೆ. ಮಾಹಿತಿ ಹಕ್ಕು ಆಯೋಗದ ಈ ನಿರ್ಬಂಧಕ್ಕೆ ತಡೆ ನೀಡುವಂತೆ ಹೈಕೋರ್ಟ್ ತಡೆ ನೀಡುವಂತೆ ಕೋರಿದ್ದರು. ಒಬ್ಬನೇ ವ್ಯಕ್ತಿಯಿಂದ ಆರ್ ಟಿ ಐ ಅಡಿಯಲ್ಲಿ 476 ಅರ್ಜಿ ಸಲ್ಲಿಸಿದ್ದರ ಬಗ್ಗೆ ಹೈಕೋರ್ಟ್ ಅಚ್ಚರಿಯನ್ನು ವ್ಯಕ್ತಪಡಿಸಿತು. ಅಲ್ಲದೇ ಆರ್ ಟಿ ಐ ಅರ್ಜಿ ಸಲ್ಲಿಸದಂತೆ ನಿರ್ಬಂಧಿಸಿದ್ದ ಮಾಹಿತಿ ಹಕ್ಕು ಆಯೋಗದ  ಆದೇಶಕ್ಕೆ ತಡೆ ನೀಡಲು ನಕಾರ ವ್ಯಕ್ತಪಡಿಸಿತು. ಅಂದಹಾಗೇ ಕೆ.ದೇವಪ್ರಸಾದ್ ಆರ್ ಟಿ…

Read More

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗ ಮತ್ತು ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ ಹಾಗೂ ಜಿಲ್ಲೆಯ ಸರ್ಕಾರೇತರ ಸಂಘ ಸಂಸ್ಥೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಹೆಚ್.ಐ.ವಿ ನಿಯಂತ್ರಣಕ್ಕಾಗಿ ತೀವ್ರಗೊಳಿಸಿದ ಪ್ರಚಾರಾಂದೋಲನದ ಅಂಗವಾಗಿ ದಿನಾಂಕ 14-10-25 ಎಂದು ಏರ್ಪಡಿಸಲಾಗಿದ್ದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಡಿಹೆಚ್‌ಓ ಡಾ. ನಟರಾಜ್ ಕೆ ಎಸ್ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, 2030 ಕ್ಕೆ ಹೆಚ್.ಐ.ವಿ ಮುಕ್ತ ಭಾರತವನ್ನು ನಿರ್ಮಿಸಲು ಕಾರ್ಯ ಚಟುವಟಕೆಗಳನ್ನು ಕೈಗೊಳ್ಳಲಾಗುತ್ತಿದೆ. ಹೊಸದಾಗಿ ಹೆಚ್‌ಐವಿ ಸೋಂಕಿಗೆ ತುತ್ತಾಗುವುದನ್ನು ಸೊನ್ನೆಗೆ ತರುವುದು, ಹೆಚ್.ಐ.ವಿ ಯಿಂದ ಆಗುವ ಮರಣಗಳನ್ನು ಸೊನ್ನೆಗೆ ತರುವುದು ಹಾಗೂ ಹೆಚ್.ಐ.ವಿ ಯಿಂದಾಗುವ ತಾರತಮ್ಯ, ಕಳಂಕವನ್ನು ಸೊನ್ನೆಗೆ ತರುವ ನಿಟ್ಟಿನಲ್ಲಿ 95-95-95 ರ ಗುರಿಯನ್ನು ಹೊಂದಿದ್ದು ಪ್ರತಿಯೊಬ್ಬರು ತಮ್ಮ ಹೆಚ್. ಐ. ವಿ ಸ್ಥಿತಿಯನ್ನು ತಿಳಿದಿರಬೇಕು ಹಾಗೂ…

Read More

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಅವರು ಇಂದು ಮೈಸೂರು ಏರ್ ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ತಮಿಳುನಾಡಿನಲ್ಲಿ ಆರ್.ಎಸ್.ಎಸ್. ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ. ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ ಅವರು ಪ್ರಿಯಾಂಕ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದರು. ಬೆದರಿಕೆಗೆ ಹೆದರುವುದಿಲ್ಲ ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ ಅವರು…

Read More

ಕೊಚ್ಚಿ: ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಬುಧವಾರ ಬೆಳಿಗ್ಗೆ ಕೇರಳದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು ಮತ್ತು ಕೇರಳದ ಕೂತಟ್ಟುಕುಲಂನಲ್ಲಿರುವ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ ಮೂಲಗಳ ಪ್ರಕಾರ, ಬುಧವಾರ ಬೆಳಗಿನ ನಡಿಗೆಯ ಸಮಯದಲ್ಲಿ ಒಡಿಂಗಾ ಕುಸಿದು ಬಿದ್ದರು. “ಅವರು ಬೆಳಗಿನ ನಡಿಗೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ದೇವ ಮಾತಾ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಬೆಳಿಗ್ಗೆ 9:52 ಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು” ಎಂದು ಅವರು ಚಿಕಿತ್ಸೆ ಪಡೆಯುತ್ತಿದ್ದ ಶ್ರೀಧರೀಯಂ ಆಯುರ್ವೇದ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಮಗಳು, ಸಹೋದರಿ ಮತ್ತು ವೈಯಕ್ತಿಕ ವೈದ್ಯರೊಂದಿಗೆ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಸುಮಾರು ಒಂದು ವಾರದ ಹಿಂದೆ ಆಸ್ಪತ್ರೆಗೆ ಆಗಮಿಸಿದ್ದರು. “ಅವರು ಬಹು ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ನಂತರ ಅವರು ಚಿಕಿತ್ಸೆ ಪಡೆಯಲು ಇಲ್ಲಿಗೆ ಬಂದರು. ಮೃತದೇಹವನ್ನು ದೇವ ಮಾತಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ನಾವು ವಿದೇಶಾಂಗ ಸಚಿವಾಲಯ ಮತ್ತು ಕೀನ್ಯಾ…

Read More

ಮೈಸೂರು: ರಾಜ್ಯದ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯ ಚಟುವಟಿಕೆ ನಿಷೇಧ ಬಹುತೇಕ ಖಚಿತವಾಗಿದೆ. ಈ ಸುಳಿವನ್ನು ಸ್ವತಹ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದುಷ್ಟ ಶಕ್ತಿಗಳು ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಆ ಬೆದರಿಕೆಗೆ ಪ್ರಿಯಾಂಕ್ ಖರ್ಗೆ ಜಗ್ಗಲ್ಲ, ನಾವು ಸಹ ಜಗ್ಗಲ್ಲ. ಪ್ರಿಯಾಂಕ್ ಖರ್ಗೆ ಬರೆದಿರುವಂತ ಪತ್ರದಲ್ಲಿ ತಪ್ಪೇನಿದೆ ಹೇಳಿ ಎಂದು ಪ್ರಶ್ನಿಸಿದರು. ತಮಿಳುನಾಡಿನಲ್ಲಿ ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸಲಾಗಿದೆ. ತಮಿಳುನಾಡಿದಂತೆ ಕರ್ನಾಟಕದಲ್ಲಿ ಜಾರಿ ಮಾಡಿ ಎಂದು ಹೇಳಿದ್ದಾರೆ. ನಾವು ಪ್ರಿಯಾಂಕ್ ಖರ್ಗೆ ಪತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ತಮಿಳುನಾಡಿನಿಂದ ಆ ಆದೇಶದ ವರದಿಯನ್ನು ತರಿಸಿಕೊಳ್ಳುತ್ತಿದ್ದೇವೆ. ಈ ಬಗ್ಗೆ ಗಮನಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇನೆ. ಸಿಎಸ್ ಪರಿಶೀಲಿಸಿದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂಬುದಾಗಿ ತಿಳಿಸಿದರು. ಬಿಜೆಪಿಯವರು ಯಾವಾಗಲೂ ಧಮ್ ಇದ್ರೆ ಬ್ಯಾನ್ ಮಾಡಿ ಎಂದು ಹೇಳುತ್ತಾರೆ. ಕಳೆದ ಚುನಾವಣೆ ಆ ರೀತಿ ಹೇಳಿದ್ದರು. ನಂತ್ರ ಏನಾಯ್ತು…

Read More

ಶಿವಮೊಗ್ಗ: ಜಿಲ್ಲೆಯಲ್ಲಿನ ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿ ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಬಡ ರೋಗಿಗಳ ಪಾಲಿಗೆ ದೇವರಾಗಿ ವೈದ್ಯರು ಕಾರ್ಯನಿರ್ವಹಿಸಿ, ರೋಗಿಗಳಿಗೆ ಚಿಕಿತ್ಸೆ ನೀಡಬೇಕಿದ್ದಂತ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರವೇ ತುಂಬಿದೆ. ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಆಸ್ಪತ್ರೆಗೆ ಬರುವಂತ ರೋಗಿಗಳಿಗೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ನೀಡದೇ ವೈದ್ಯರು ನಿರ್ಲಕ್ಷ್ಯ ವಹಿಸುವುದು ಸೇರಿದಂತೆ ಬಹುದೊಡ್ಡ ಅವ್ಯವಸ್ಥೆಯೇ ನಡೆಯುತ್ತಿದೆ ಎಂಬುದಾಗಿ ಶಿವಮೊಗ್ಗ ಹಾಗೂ ತಾಲ್ಲೂಕು ಕರವೇ ಘಟಕದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ನಡೆಸಲಾಗುತ್ತಿದೆ. ಇಂದಿನ ಕರವೇ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಸಾಗರದ ಕರವೇ ಟಿ.ಎ ನಾರಾಯಣಗೌಡ ಬಣದ ತಾಲ್ಲೂಕು ಅಧ್ಯಕ್ಷ ಮನೋಜ್ ಕುಗ್ವೆ ಮಾತನಾಡಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳು, ರೋಗಿಗಳ ಸಂಬಂಧಿಕರಿಗೆ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಆಸ್ಪತ್ರೆಗೆ ಬಂದ ರೋಗಿಗಳಿಗೆ ಖಾಯಂ ವೈದ್ಯರ ಬದಲಾಗಿ ಟ್ರೈನಿ ಡಾಕ್ಟರ್ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದ ರೋಗಿಗಳು ಗುಣಮುಖರಾಗೋ ಬದಲಾಗಿ, ಮತ್ತಷ್ಟು…

Read More

ಬೀದರ್ : ಬೀದರ್ ಜಿಲ್ಲೆಯಲ್ಲಿ ಸೆಪ್ಟೆಂಬರ್ ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8500 ರೂ. ಪರಿಹಾರವೂ ಸೇರಿದಂತೆ ಒಟ್ಟಾರೆ 300 ಕೋಟಿ ರೂ. ಬೆಳೆ ಹಾನಿ ಪರಿಹಾರವನ್ನು ಅ.30ರೊಳಗೆ ಪಾವತಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು, ನಾಳೆ ಸಂಜೆಯೊಳಗೆ ಮಳೆ ಹಾನಿ ಪ್ರದೇಶದ ತಹಶೀಲ್ದಾರರು ಪರಿಹಾರದ ಪೋರ್ಟಲ್ ನಲ್ಲಿ ಹಾನಿಯ ಪ್ರಮಾಣವನ್ನು ಕಡ್ಡಾಯವಾಗಿ ದಾಖಲಿಸಿ, ಪರಿಹಾರ ನೀಡಿಕೆಗೆ ತುರ್ತು ಕ್ರಮ ವಹಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್. ನಿಯಮದಂತೆ 170 ಕೋಟಿ ರೂಪಾಯಿ ಪರಿಹಾರವನ್ನು ಈಗಾಗಲೇ ಪಾವತಿಸಲಾಗುತ್ತಿದೆ. ಅಕ್ಟೋಬರ್ 30ರೊಳಗೆ 300 ಕೋಟಿ ರೂ. ಪರಿಹಾರ ಮೊತ್ತ ಪಾವತಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಭೆಯಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಜೀವಹಾನಿ,…

Read More

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ವೈದ್ಯ ಪತ್ನಿಯನ್ನೇ ಇಂಜೆಕ್ಷನ್ ನೀಡಿ ಡಾಕ್ಟರ್ ಪತಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಾಗಿ ನಾಟಕವಾಡಿದ್ದಾರೆ. ಆ ಬಳಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇಂಜೆಕ್ಷನ್ ನೀಡಿ ಹತ್ಯೆಗೈದಿರುವಂತ ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಪತ್ನಿಯನ್ನೇ ಇಂಜೆಕ್ಷನ್ ನೀಡಿ ಕೊಂದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಮೇ.26, 2024ರಂದು ಡಾ.ಮಹೇಂದ್ರ ರೆಡ್ಡಿ ಹಾಗೂ ಡಾ.ಕೃತಿಕಾ ರೆಡ್ಡಿ ವಿವಾಹವಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞೆಯಾಗಿ ಡಾ.ಕೃತಿಕಾರೆಡ್ಡಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಅಜೀರ್ಣ, ಗ್ಯಾಸ್ಟ್ರಿಕ್, ಲೋಶುಗರ್ ನಿಂದ ಬಳಲುತ್ತಿದ್ದರು. ಈ ವಿಷಯ ಮುಚ್ಚಿಟ್ಟಿದ್ದಂತ ಕುಟುಂಬಸ್ಥರು ಆಸ್ಪತ್ರೆಯ ಜನರಲ್ ಸರ್ಜನ್ ಡಾ.ಮಹೇಂದ್ರ ರೆಡ್ಡಿಗೆ ವಿವಾಹ ಮಾಡಿಕೊಟ್ಟಿದ್ದರು. ಮದುವೆಯ ನಂತ್ರ ಪತ್ನಿ ಡಾ.ಕೃತಿಕಾರೆಡ್ಡಿಗೆ ಇರುವಂತ ಅನಾರೋಗ್ಯ ಸಮಸ್ಯೆಯು ಪತಿ ಡಾ.ಮಹೇಂದ್ರರೆಡ್ಡಿಗೆ ಗೊತ್ತಾಗಿತ್ತು. ಇದೇ ಕಾರಣಕ್ಕೆ ಪ್ರತಿದಿನ ವಾಂತಿ, ಇತರೆ ಸಮಸ್ಯೆಯಿಂದ ಬಳಲುತ್ತಿದ್ದಂತ ಪತ್ನಿ ಡಾ.ಕೃತಿಕಾರೆಡ್ಡಿ ಹತ್ಯೆಗೆ ಪ್ಲಾನ್ ಮಾಡಿದ್ದರು. ಹುಷಾರು ತಪ್ಪಿದ್ದ ಕಾರಣ ತವರು ಮನೆಗೆ ತೆರಳಿದ್ದಂತ ಡಾ.ಕೃತಿಕಾರೆಡ್ಡಿಗೆ ಪತಿ ಡಾ.ಮಹೇಂದ್ರರೆಡ್ಡಿ ಔಷದೋಪಚಾರವನ್ನು ಎರಡು…

Read More

ಬೆಂಗಳೂರು: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಇಡಿ ಬಂಧಿಸಿರುವುದು ಕಾನೂನು ಬಾಹಿರವೆಂದು ಪ್ರಶ್ನಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಆನ್ ಲೈನ್ ಗೇಮಿಂಗ್ ಅಕ್ರಮದ ಕಾರಣದಿಂದ ದಾಳಿ ನಡೆಸಿದ ಬಳಿಕ ಬಂದಿಸಿತ್ತು. ಈ ಇಡಿ ಬಂಧನವನ್ನು ಪ್ರಶ್ನಿಸಿ ಪತ್ನಿ ಆರ್.ಡಿ ಚೈತ್ರಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕೆಸಿ ವೀರೇಂದ್ರ ಪತ್ನಿ ಆರ್ ಡಿ ಚೈತ್ರಾ ಅವರು ಇಡಿ ಬಂಧನ ಕಾನೂನು ಬಾಹಿರವೆಂದು ಘೋಷಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದಂತ ಏಕಸದಸ್ಯ ನ್ಯಾಯಪೀಠವು ವಜಾಗೊಳಿಸಿದೆ. ಈ ಅರ್ಜಿ ವಿಚಾರಣೆ ವೇಳೆ ವೀರೇಂದ್ರ ಪಪ್ಪಿ ಅವರ ಕುರಿತಾಗಿ ಎಫ್ಐಆರ್ ಒಂದು ಜಾಲ್ತಿಯಲ್ಲಿದೆ. ಕೋರ್ಟ್ ಪೊಲೀಸರು ಸಲ್ಲಿಸಿರುವಂತ ಬಿ ರಿಪೋರ್ಟ್ ಇನ್ನೂ ಅಂಗೀಕರಿಸಿಲ್ಲ. ಕೋರ್ಟ್ ಬಿ ರಿಪೋರ್ಟ್ ಅಂಗೀಕರಿಸಿದ ಬಳಿಕ ಪ್ರಕರಣ ರದ್ದು ಕೋರಬಹುದು ಎಂಬುದಾಗಿ ಅಭಿಪ್ರಾಯ ಪಟ್ಟಿದೆ.

Read More

ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ವಾಟರ್ ಟ್ಯಾಂಕರ್ ಹರಿದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಬೆಂಗಳೂರಲ್ಲಿ ಕಟ್ಟಡವೊಂದಕ್ಕೆ ನೀರು ಸರಬರಾಜು ಮಾಡಲು ಬಂದಿದ್ದಾಗ ಬಾಲಕಿಯ ಮೇಲೆ ಟ್ಯಾಂಕರ್ ಹರಿದಿದೆ. ಈ ಪರಿಣಾಮ ವಾಟರ್ ಟ್ಯಾಂಕರ್ ಹರಿದು ಅನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/teacher-who-went-missing-while-going-for-a-survey-in-kolar-found-dead/ https://kannadanewsnow.com/kannada/breaking-from-now-on-scoring-198-marks-in-puc-and-206-marks-in-sslc-will-be-considered-passing-minister-madhu-bangarappa/

Read More