Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ವಿದ್ಯಾರ್ಥಿಗಳಿಗೆ ಪರೀಕ್ಷ-2ಗೆ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಬಿಎಂಟಿಸಿಯ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ -02 ಬೇರೆ ಬೇರೆ ಶಾಲಾ/ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ವಿದ್ಯಾರ್ಥಿಗಳಿಗೆ ದಿನಾಂಕ 26.05.2025 ರಿಂದ 02.06.2025 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ…
ನವದೆಹಲಿ: ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯ ಅನುಷ್ಠಾನವನ್ನು ಪರಿಶೀಲನೆ ಹಾಗೂ ಅದನ್ನು ಮತ್ತಷ್ಟು ವೇಗವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತರ ಸಚಿವಾಲಯ ಸಮನ್ವಯ ಸಭೆಯನ್ನು ನಡೆಸಿದರು. ನವದೆಹಲಿಯ ತಮ್ಮ ಸಚಿವಾಲಯದಲ್ಲಿ ಸಚಿವರು ಕರೆದಿದ್ದ ಈ ಸಭೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಭೂಸಾರಿಗೆ ವಲಯದಲ್ಲಿ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಇ-ಡ್ರೈವ್ ಅನುಷ್ಠಾನಕ್ಕೆ ಬಂದಿದ್ದು, ಇದನ್ನು ರಾಷ್ಟ್ರೀಯ ಮಹತ್ವದ ಯೋಜನೆ ಎಂದು ಪರಿಗಣಿಸಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಕಟಿಬದ್ಧವಾಗಿ ಕೆಲಸ ಮಾಡಬೇಕು ಎಂದು ಸಚಿವರು ಒತ್ತಿ ಹೇಳಿದರು. ಪ್ರಧಾನಿಗಳ ದೂರದೃಷ್ಟಿಯಂತೆ ಈ ಯೋಜನೆಯು ಮಾಲಿನ್ಯ ಮುಕ್ತ ಸಾರಿಗೆ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಸಾಂಪ್ರದಾಯಿಕ ಇಂಧನಗಳ ಮೇಲಿನ ಭಾರತದ…
ನವದೆಹಲಿ: ಭಾರತ-ಪಾಕಿಸ್ತಾನ ಸಂಘರ್ಷದ ಸಂದರ್ಭದಲ್ಲಿ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ, ನವೆಂಬರ್ 2023 ರಿಂದ ಮಾರ್ಚ್ 2025 ರವರೆಗೆ ಪಾಕಿಸ್ತಾನಿ ಪ್ರಜೆ ಮತ್ತು ಹೈಕಮಿಷನ್ ಅಧಿಕಾರಿ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಅವರೊಂದಿಗೆ ಸಂಪರ್ಕದಲ್ಲಿದ್ದಾಗ ವಿಚಾರಣೆಯ ಸಮಯದಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಹಿಸಾರ್ ಪೊಲೀಸ್ ವಕ್ತಾರರು ಮಂಗಳವಾರ ತಿಳಿಸಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಡ್ಯಾನಿಶ್ ಮಲ್ಹೋತ್ರಾ ಅವರನ್ನು ಗುಪ್ತಚರ ಆಸ್ತಿಯಾಗಿ ಅಭಿವೃದ್ಧಿಪಡಿಸಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ನಂಬಿದ್ದಾರೆ. ಈ ಅವಧಿಯಲ್ಲಿ ಡ್ಯಾನಿಶ್ ಜೊತೆ ನೇರ ಸಂವಹನ ನಡೆಸಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಹಿಸಾರ್ ಪೊಲೀಸ್ ವಕ್ತಾರ ವಿಕಾಸ್ ಕುಮಾರ್ ಹೇಳಿದ್ದಾರೆ. ಅವರು ಹಲವಾರು ಇತರ ಯೂಟ್ಯೂಬ್ ಪ್ರಭಾವಿಗಳೊಂದಿಗೆ ಸಂಪರ್ಕದಲ್ಲಿದ್ದರು. ಅವರ ಮೂರು ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್ ಜೊತೆಗೆ ಹರಿಯಾಣ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ (HSGMC) ಐಟಿ ಉಸ್ತುವಾರಿ ಹರ್ಕಿರತ್ ಸಿಂಗ್ ಅವರಿಗೆ ಸೇರಿದ ಎರಡು ಫೋನ್‌ಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ…
ನವದೆಹಲಿ: ಬುಧವಾರ ಭಾರೀ ಹಣಕಾಸು ಮತ್ತು ಔಷಧ ವಲಯದ ಷೇರುಗಳು ಏರಿಕೆ ಕಂಡ ಹಿನ್ನೆಲೆಯಲ್ಲಿ ಬೆಂಚ್‌ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಏರಿಕೆ ಕಂಡವು, ಸೆನ್ಸೆಕ್ಸ್ ಮತ್ತು ನಿಫ್ಟಿ 0.5% ಏರಿಕೆ ಕಂಡವು. ಎಸ್ & ಪಿ ಬಿಎಸ್‌ಇ ಸೆನ್ಸೆಕ್ಸ್ 410.19 ಪಾಯಿಂಟ್‌ಗಳ ಏರಿಕೆ ಕಂಡು 81,596.63 ಕ್ಕೆ ತಲುಪಿದರೆ, ಎನ್‌ಎಸ್‌ಇ ನಿಫ್ಟಿ 129.55 ಪಾಯಿಂಟ್‌ಗಳನ್ನು ಹೆಚ್ಚಿಸಿ 24,813.45 ಕ್ಕೆ ತಲುಪಿತು. ಜಿಯೋಜಿತ್ ಇನ್ವೆಸ್ಟ್‌ಮೆಂಟ್ಸ್ ಲಿಮಿಟೆಡ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್, ಇಂದು ಮಾರುಕಟ್ಟೆಗಳು ವಿಶಾಲವಾಗಿ ಸಕಾರಾತ್ಮಕ ಸ್ವರವನ್ನು ಪ್ರದರ್ಶಿಸಿವೆ ಎಂದು ಹೇಳಿದರು; ಆದಾಗ್ಯೂ, ಒಟ್ಟಾರೆ ಭಾವನೆಯು ಕಿರಿದಾದ ವ್ಯಾಪ್ತಿಯಲ್ಲಿ ಸೀಮಿತವಾಗಿತ್ತು, ಇದು ಭಾರತ – ಯುಎಸ್ ವ್ಯಾಪಾರ ಮಾತುಕತೆಗಳ ಸುತ್ತ ಹೆಚ್ಚುತ್ತಿರುವ ಅನಿಶ್ಚಿತತೆಯ ನಡುವೆ ಮುಂದಿನ ದಿನಗಳಲ್ಲಿ “ರ್ಯಾಲಿಗಳ ಮೇಲೆ ಮಾರಾಟ” ತಂತ್ರದ ಅಪಾಯವನ್ನು ಸೂಚಿಸುತ್ತದೆ. “ಸುಂಕ ಯುದ್ಧದ ಉತ್ತುಂಗದಲ್ಲಿ ಭಾರತವು ಆರಂಭದಲ್ಲಿ ನಿರೀಕ್ಷಿಸಲಾದ ನಿರೀಕ್ಷಿತ ಪ್ರಯೋಜನಗಳನ್ನು ಪಡೆಯದಿರಬಹುದು ಎಂಬ ಗ್ರಹಿಕೆ ಬೆಳೆಯುತ್ತಿದೆ, ಅದು ನಂತರ ಉಲ್ಬಣಗೊಂಡಿದೆ” ಎಂದು ಅವರು ಹೇಳಿದರು.…
ಬೆಂಗಳೂರು: ಕರ್ನಾಟಕ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಡಾ. ಅಲೋಕ್ ಮೋಹನ್ ಬುಧವಾರ ನಿವೃತ್ತರಾಗಲಿದ್ದಾರೆ. ನಿವೃತ್ತಿಯ ನಂತರ, ಸಿಐಡಿ ಡಿಜಿಪಿ ಎಂ.ಎ. ಸಲೀಮ್ ಅವರು ಉನ್ನತ ಹುದ್ದೆಯನ್ನು ಅಲಂಕರಿಸಲು ಪ್ರಬಲ ಸ್ಪರ್ಧಿಯಾಗಿದ್ದಾರೆ. ಸಲೀಮ್ ನೇಮಕಗೊಂಡರೆ, ಹಲವಾರು ವರ್ಷಗಳಲ್ಲಿ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರಾಗಲಿರುವ ಮೊದಲ ಕನ್ನಡ ಮಾತನಾಡುವ ಐಪಿಎಸ್ ಅಧಿಕಾರಿಯಾಗಲಿದ್ದಾರೆ. ಆದಾಗ್ಯೂ, ಸರ್ಕಾರವು ಸಲೀಮ್ ಅವರನ್ನು ಮತ್ತೊಬ್ಬ ಹಿರಿಯ ಅಧಿಕಾರಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರ ಸೇವೆಯಲ್ಲಿ ಒಂದು ವರ್ಷ ಹಿರಿಯರ ಮೇಲೆ ಒಲವು ತೋರಲಿದೆಯೇ ಎಂಬ ಊಹಾಪೋಹಗಳಿವೆ. ಠಾಕೂರ್ 1992 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದರೆ, ಸಲೀಮ್ 1993 ರ ಬ್ಯಾಚ್‌ಗೆ ಸೇರಿದವರು. ಇದು ಸರ್ಕಾರ ಅಂತಿಮವಾಗಿ ಯಾರನ್ನು ಆಯ್ಕೆ ಮಾಡುತ್ತದೆ ಎಂಬ ಕುತೂಹಲವನ್ನು ಹುಟ್ಟುಹಾಕಿದೆ. ಸರ್ಕಾರ ಠಾಕೂರ್ ಅವರನ್ನು ಬೈಪಾಸ್ ಮಾಡಿ ಸಲೀಮ್ ಅವರನ್ನು ನೇಮಿಸಿದರೆ, ನಿರ್ಧಾರವನ್ನು ಪ್ರಶ್ನಿಸಲು ಠಾಕೂರ್ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಅಥವಾ ನ್ಯಾಯಾಲಯವನ್ನು ಸಂಪರ್ಕಿಸುವ…
ಬೆಂಗಳೂರು: ನಗರದಲ್ಲಿ ಮಳೆಯ ಅವಾಂತರ ಪರಿಶೀಲನೆಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ಸಿಟಿ ರೌಂಡ್ಸ್ ನಡೆಸುತ್ತಿದ್ದರು. ಇದೀಗ ಮಳೆಯಿಂದಾಗಿ ಬೆಂಗಳೂರು ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿನ ಮಳೆಯ ಅಂವಾತರ ಪರಿಶೀಲನೆ ನಡೆಸಿದರು. ಈ ವೇಳೆ ಸಿಎಂ ಸಿದ್ಧರಾಮಯ್ಯ ಅವರು ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು. ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು. ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು. HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ ಮಾಡಿದರು. ರಾಜಕಾಲುವೆಯ ಹರಿವಿನ ಹಾದಿಯಲ್ಲಿ…
ಬೆಂಗಳೂರು: ಸ್ಥಳೀಯ ಗ್ರಾಹಕರ ಮೇಲೆ ಅನ್ಯಭಾಷಿಕ ಬ್ಯಾಂಕ್ ಸಿಬ್ಬಂದಿಗಳು ಮಾಡುವ ಭಾಷಾ ಪ್ರಹಾರವನ್ನು ತಡೆಯುವಲ್ಲಿ ರಾಷ್ಟ್ರಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕಿದ್ದು, ರಾಜ್ಯದ ಎಲ್ಲ ಸಂಸದರು ಸಂಸತ್ತಿನಲ್ಲಿ ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕೆಂದು ಆಗ್ರಹಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಈ ಕುರಿತಂತೆ ಕರ್ನಾಟಕವನ್ನು ಪ್ರತಿನಿಧಿಸುವ ಎಲ್ಲ ಸಂಸತ್ ಸದಸ್ಯರಿಗೆ ಪತ್ರ ಬರೆಯಲಾಗಿದೆ ಎಂಬ ಮಾಹಿತಿಯನ್ನು ನೀಡಿರುವ ಬಿಳಿಮಲೆ, ಈ ರೀತಿಯ ಘಟನೆಗಳ ಪುನರಾವರ್ತನೆ ಕನ್ನಡಿಗರ ಆತ್ಮಸ್ಥೈರ್ಯವನ್ನು ಕದಡುತ್ತದೆ. ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಸಹ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಸಹಮತದ ನಿಲುವನ್ನು ವ್ಯಕ್ತಪಡಿಸಿದ್ದು, ಕಳೆದ ಡಿಸೆಂಬರ್ ನಲ್ಲಿ ಪ್ರಾಧಿಕಾರದ ನಿಯೋಗವು ತಮ್ಮನ್ನು ಭೇಟಿ ಮಾಡಿ ಕ್ರಮಕ್ಕೆ ಕೋರಿತ್ತು ಎಂಬುದನ್ನು ಸ್ಮರಿಸಿದ್ದಾರೆ. ಯಾವುದೇ ರಾಜ್ಯದ ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯೂ ಸ್ಥಳೀಯ ಭಾಷಾ ಜ್ಞಾನದ ಕುರಿತಂತೆ ಪರೀಕ್ಷೆಯನ್ನು ಎದುರಿಸಿ ಉತ್ತೀರ್ಣರಾಗಬೇಕು, ಸ್ಥಳೀಯ ಭಾಷೆಯ ಮೇಲೆ ಪ್ರಭುತ್ವ ಹೊಂದಿದವರಾಗಬೇಕು ಎಂಬ ಷರತ್ತನ್ನು ನೇಮಕಾತಿ ಸಂದರ್ಭದಲ್ಲಿ ವಿಧಿಸಬೇಕೆಂದು…
ಬೆಂಗಳೂರು: ನೆರೆ ಹೊರೆ ರಾಜ್ಯಗಳ ಉತ್ತಮ ಬಾಂಧವ್ಯಕ್ಕೆ ಪಕ್ಷ ರಾಜಕೀಯ ಅಡ್ಡಿ ಬರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದ ಪೂರ್ವದ್ವಾರದಲ್ಲಿಂದು ಆಂಧ್ರಪ್ರದೇಶಕ್ಕೆ 4 ಆನೆಗಳನ್ನು ಹಸ್ತಾಂತರಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ನೆರೆ ರಾಜ್ಯಗಳೊಂದಿಗೆ ಉತ್ತಮ ಬಾಂಧವ್ಯಕ್ಕೆ ಇಂದಿನ ಈ ಆನೆಗಳ ಹಸ್ತಾಂತರ ಸಹಕಾರಿಯಾಗಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆಯಲ್ಲಿಯೂ ಗಣನೀಯ ಸುಧಾರಣೆ ತರಲಾಗಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ಎದುರಿಸಲು ಮರ ಬೆಳೆಸುವುದೊಂದೇ ಪರಿಹಾರ ಎಂಬುದನ್ನು ಮನಗಂಡು ಕಳೆದ 2 ವರ್ಷದಲ್ಲಿ 8.5 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲಾಗಿದೆ. ಇವುಗಳಲ್ಲಿ ಎಷ್ಟು ಬದುಕಿ ಉಳಿದಿವೆ ಎಂಬುದನ್ನು ಆಡಿಟ್ ಮಾಡಿಸಿ ಅರಣ್ಯ ಇಲಾಖೆಯ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ ಎಂದರು. ಅರಣ್ಯ ಒತ್ತುವರಿ ತೆರವಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಪಕ್ಷಿ ಸಂಕುಲದ ಉಳಿವಿಗಾಗಿ ಅವುಗಳ ಸಂತಾನೋತ್ಪತ್ತಿಯ ತಾಣವಾದ ಬೆಂಗಳೂರು…
ಬೆಂಗಳೂರು: ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು. https://kannadanewsnow.com/kannada/transfer-of-krishna-abhimanyu-ranjan-and-dev-elephant-from-karnataka-to-andhra-pradesh/ https://kannadanewsnow.com/kannada/big-news-big-success-in-bullet-train-project-300-km-viaduct-work-completed-video-shared-by-ashwini-vaishnav-watch-video/
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್ ಹಾಗೂ ದೇವ ಎನ್ನುವಂತ ನಾಲ್ಕು ಆನೆಗಳನ್ನು ಹಸ್ತಾಂತರಿಸಿದೆ. ಇಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಆನೆಗಳಿಗೆ ಪೂಜೆ ಸಲ್ಲಿಸಿದರು. ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್ ಮತ್ತು ದೇವ ಎಂಬ ನಾಲ್ಕು ಆನೆಗಳನ್ನು ಇಂದು ವಿಧ್ಯುಕ್ತವಾಗಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಕೆ.ಜೆ. ಜಾರ್ಜ್, ಸುಧಾಕರ್, ಬೈರತಿ ಸುರೇಶ್, ರಹೀಂಖಾನ್, ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು. https://kannadanewsnow.com/kannada/take-precautions-to-ensure-that-drinking-water-does-not-get-contaminated-by-rain-minister-priyank-kharge/ https://kannadanewsnow.com/kannada/big-news-big-success-in-bullet-train-project-300-km-viaduct-work-completed-video-shared-by-ashwini-vaishnav-watch-video/