Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕೆಂದು ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು ನೀರನ್ನು ಕಾಯಿಸಿಕೊಂಡು ಸೇವಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರಲ್ಲದೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಸೂಚಿಸಿದ್ದಾರೆ. ಅತಿಯಾಗಿ ಸುರಿಯುತ್ತಿರುವ ಮಳೆಯಿಂದ ಕುಡಿಯುವ ನೀರು ಸರಬರಾಜಾಗುವ ಕೊಳವೆಗಳಿಗೆ ಕಲುಷಿತ ನೀರು ಸೇರಿಕೊಳ್ಳುವ ಸಾಧ್ಯತೆಗಳಿವೆ, ಇದರಿಂದ ಮನೆಗಳಿಗೆ ಸರಬರಾಜಾಗುವ ನೀರು ಕಲುಷಿತಗೊಳ್ಳುವ ಸಂಭವವಿರುತ್ತದೆ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಮುಂಜಾಗರೂಕತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ, ಆದಾಗ್ಯೂ ಗ್ರಾಮೀಣ ಪ್ರದೇಶಗಳ ಸಾರ್ವಜನಿಕರು ನೀರನ್ನು ಕಾದಾರಿಸಿ ಕುಡಿಯುವುದು ಕ್ಷೇಮ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಡು ಬೇಸಿಗೆಯ ನಂತರ ಒಮ್ಮೆಲೆ ಮಳೆ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹಬ್ಬಬಹುದಾಗಿದೆ, ಈ ಬಗ್ಗೆಯೂ ಗ್ರಾಮೀಣವಾಸಿಗಳು ಜಾಗ್ರತೆಯಿಂದ ಇರಬೇಕು, ಶಾಲೆಗಳು ಪುನರಾರಂಭವಾಗುವ ದಿನಗಳು ಸಮೀಪಿಸಿರುವುದರಿಂದ ಮಕ್ಕಳ…
ಬೆಂಗಳೂರು: ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾನವಾಗಿರುವ ಖ್ಯಾತ ಸಾಹಿತಿ ಮತ್ತು ಪತ್ರಕರ್ತೆ ಬಾನುಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದಿಸಿದೆ. ಸಣ್ಣ ಕಥೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ (ಹೃದಯ ದೀಪ)ಕೃತಿ ಅಂತಿಮ ಸುತ್ತಿಗೆ ಆಯ್ಕೆಯಾದ ಸಂದರ್ಭದಲ್ಲಿಯೇ ಹಾಸನದಲ್ಲಿ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಶುಭ ಕೋರಿದ್ದನ್ನು ನೆನಪಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಲಂಡನ್ ನಲ್ಲಿ ಬುಕರ್ ಪ್ರಶಸ್ತಿ ಘೋಷಣೆ ಮಾಡಿದ ಕ್ಷಣ, ಕನ್ನಡಿಗರ ಪಾಲಿಗೆ ಹೆಮ್ಮೆಯ ಅಮೃತ ಘಳಿಗೆಯಾಗಿದೆ ಎಂದು ಶ್ಲಾಘಿಸಿದ್ದಾರೆ. ಹಾಸನದಿಂದ ಪಿ.ಲಂಕೇಶ್ ಪತ್ರಿಕೆಗೆ ವರದಿಗಾರರಾಗಿದ್ದ ಭಾನುಮುಷ್ತಾಕ್ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದರು. ವಕೀಲರಾಗಿ, ನಗರಸಭೆ ಸದಸ್ಯರಾಗಿ ಹಾಗೂ ಪ್ರಗತಿಪರ ಸಾಹಿತಿಯಾಗಿ ಗುರುತಿಸಿಕೊಂಡವರು. ಅನ್ಯಾಯದ ವಿರುದ್ದ ಧ್ವನಿ ಎತ್ತಿದವರು. ಸಂಘ ಸಂಸ್ಥೆಗಳಲ್ಲಿ ಸಂಘಟಕಿಯಾಗಿಯೂ ಕೆಲಸ ಮಾಡಿದವರು. ಅವರ ಹೃದಯ ದೀಪ ಕೃತಿ ಬುಕರ್ ಪ್ರಶಸ್ತಿಯನ್ನು ಗೆದ್ದಿರುವುದು ಕನ್ನಡಿಗರ ಹೃದಯ ಗೆದ್ದಂತಾಗಿದೆ. ಹೃದಯ…
ಶಿವಮೊಗ್ಗ : ಮಾಜಿ ಸೈನಿಕರಿಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಆಫೀಸ್ ಅಸಿಸ್ಟಂಟ್ (peon) ಹುದ್ದೆಗಳಿಗೆ ಆಸಕ್ತ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಬ್ಯಾಂಕ್ ವೆಬ್ಸೈಟ್ www.bankofbaroda.co.in>Career Page>Current Opportunities>Recruitment of Office Assistant(peon) ರಲ್ಲಿ ಮೇ 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಜಾಹಿರಾತು ಸಂ:BOB/HRM/REC/ADVT/2025/05 ನ್ನು ವೀಕ್ಷಿಸಬಹುದಾಗಿದೆ. https://kannadanewsnow.com/kannada/big-news-big-success-in-bullet-train-project-300-km-viaduct-work-completed-video-shared-by-ashwini-vaishnav-watch-video/ https://kannadanewsnow.com/kannada/breaking-supreme-court-grants-bail-to-trainee-ias-officer-pooja-khedkar-pooja-khedkar/
ಬೆಂಗಳೂರು: ಮೇ.22ರ ನಾಳೆ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಅಮೃತ್ ಭಾರತ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿ ಬಾಗಲಕೋಟೆಯ ಮುನಿರಾಬಾದ್ ಗೋಕಾಕ್, ಗದಗ್, ಧಾರವಾಡ ರೈಲ್ವೆ ನಿಲ್ದಾಣಗಳನ್ನು ಕೂಡ ಅಭಿವೃದ್ಧಿ ಗೊಳಿಸಲಾಗುತ್ತಿದೆ. ಇಂತಹ ಕಾರ್ಯಕ್ರಮದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋವಣ್ಣ ನಾಳೆ ಬಾಗಲಕೋಟೆಯಲ್ಲಿ ಭಾಗಿಯಾಗಲಿದ್ದಾರೆ. ಹೌದು..ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ಸೋಮಣ್ಣ ರವರು ಮೇ.22 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದಾದ್ಯಂತ ಅಮೃತ ಭಾರತ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಹೊಂದಿದ 103 ರೈಲ್ವೆ ನಿಲ್ದಾಣಗಳ ಉದ್ಘಾಟನಾ ಕಾರ್ಯಕ್ರಮವನ್ನು ಏಕಕಾಲಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸುವ ಕಾರ್ಯಕ್ರಮವದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಬಾಗಲಕೋಟೆ ಮುನಿರಾಬಾದ್ ಗೋಕಾಕ್ ಗದಗ್ ಧಾರವಾಡ ರೈಲ್ವೆ ನಿಲ್ದಾಣಗಳು ಸಹ ಇದರಲ್ಲಿ ಸೇರಿವೆ. ಸೋಮಣ್ಣ ರವರು ಬಾಗಲಕೋಟೆ ರೈಲ್ವೆ ನಿಲ್ದಾಣದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸುವರು. ಬಳಿಕ ಮಧ್ಯಾಹ್ನ 2 ಗಂಟೆಗೆ ತೇಜಸ್ ಇಂಟರ್ನ್ಯಾಷನಲ್ ಎಜುಕೇಶನಲ್ ಇನ್ಸ್ಟಿಟ್ಯೂಷನ್ ನಲ್ಲಿ ನೂತನ…
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಅಲ್ಲಲ್ಲಿ ಜಲಾವೃತಗೊಂಡು ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇನ್ನೂ ಐದು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮೇ.23ರಂದು ಬೆಂಗಳೂರಲ್ಲಿ ನಡೆಯಬೇಕಿದ್ದಂತ ಆರ್ ಸಿಬಿ ವರ್ಸಸ್ ಎಸ್ ಆರ್ ಹೆಚ್ ಪಂದ್ಯಾವಳಿಯನ್ನು ಲಖನೌಗೆ ಸ್ಥಳಾಂತರಿಸಲಾಗಿದೆ. ಮೇ.23ರಂದು ಬೆಂಗಳೂರಲ್ಲಿ ಆರ್ ಸಿ ಬಿ ವರ್ಸಸ್ ಎಸ್ ಆರ್ ಹೆಚ್ ತಂಡದ ನಡುವೆ ಪಂದ್ಯಗಳನ್ನು ನಿಗದಿ ಪಡಿಸಲಾಗಿತ್ತು. ಆದರೇ ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ, ಈ ಹಿಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಈ ಹಿನ್ನಲೆಯಲ್ಲಿ ಮೇ.23ರ ಪಂದ್ಯಕ್ಕೂ ಮಳೆಯ ಕಾರಣದಿಂದ ರದ್ದಾಗುವ ನಿರೀಕ್ಷೆಯಲ್ಲಿ ಬೆಂಗಳೂರಿನಿಂದ ಲಖನೌಗೆ ಪಂದ್ಯವನ್ನು ಶಿಫ್ಟ್ ಮಾಡಲಾಗಿದೆ. ಅಂದಹಾಗೇ ಮೇ.23ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದಂತ ಐಪಿಎಲ್ ಪಂದ್ಯಗಳನ್ನು ಲಖನೌಗೆ ಏಕನಾಥ್ ಸ್ಟೇಡಿಯಂನಲ್ಲಿ ನಡೆಸಲು ನಿಗಧಿ ಪಡಿಸಲಾಗಿದೆ.
ಸೇಡಂ: ಭಯೋತ್ಪಾದನೆಯ ವಿರುದ್ಧ ಭಾರತದ ದೃಢ ನಿಲುವಿನ ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ಅಭೂತ ಪೂರ್ವ ಸಾಧನೆಗೈದಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿಯಿಂದ ಸೇಡಂ ತಾಲ್ಲೂಕಿನಲ್ಲಿ ಮೇ.24ರಂದು ಬೃಹತ್ ತಿರಂಗ ಯಾತ್ರೆ ಆಯೋಜಿಸಲಾಗಿದೆ. ಈ ಕುರಿತಂತೆ ಸೇಡಂನ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಮಾಹಿತಿ ಹಂಚಿಕೊಂಡಿದ್ದು, ಆಪರೇಷನ್ ಸಿಂಧೂರ್ ಯಶಸ್ವಿಯಾದ ಹಿನ್ನಲೆಯಲ್ಲಿ ನಮ್ಮ ಸೇಡಂ ತಾಲ್ಲೂಕಿನಲ್ಲಿ ಮೇ.24ರಂದು ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿದೆ ಎಂದಿದ್ದಾರೆ. ಮೇ.24ರ ಶನಿವಾರದಂದು ಬೆಳಗ್ಗೆ 9 ಗಂಟೆಗೆ ಸೇಡಂನ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಿಂದ ಬೃಹತ್ ತಿರಂಗ ಯಾತ್ರೆ ಆರಂಭಿಸಲಾಗುತ್ತಿದೆ. ಈ ಯಾತ್ರೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ, ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/big-news-charge-sheet-filed-against-mla-harish-poonja-high-court-granted-permission-to-amend-the-petition/ https://kannadanewsnow.com/kannada/after-calling-virat-kohli-a-joker-rahul-threatened-to-kill-the-doctors/
ಹೊಸಪೇಟೆ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಎಷ್ಟು ಎನ್ನುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಟ್ಟ ಲೆಕ್ಕ ಮುಂದಿದೆ ಓದಿ. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು. https://twitter.com/CMofKarnataka/status/1924827662910161374 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ.…
ಹೊಸಪೇಟೆ: ವಾಸಿಸುವವನೇ ನೆಲದ ಒಡೆಯ ಎಂಬುದು ನಮ್ಮ ಸಂಕಲ್ಪವಾಗಿದೆ. ಇದರಡಿ ನಾವಿಂದು 1,11,111 ಮಂದಿಗೆ ಹಕ್ಕು ಪತ್ರ ವಿತರಣೆ ಮಾಡಿದ್ದೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. https://twitter.com/CMofKarnataka/status/1924831565684867151 ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು. ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ…
ಹೊಸಪೇಟೆ: ನಮ್ಮ ಪಾಲನ್ನು ಕೇಂದ್ರ ಕೊಡದಿದ್ದರೂ ನಾವು ಸಾಧಿಸಿ ತೊರಿಸಿದ್ದೀವಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂಬುದಾಗಿ ಗುಡುಗಿದ್ದಾರೆ. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ತಮ್ಮ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ಹೇಳಿದ್ದಾರೆ. 15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ…
ಉತ್ತರ ಕನ್ನಡ: ನಾಳೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದು, ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ನಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಿರುವುದಾಗಿ ತಿಳಿಸಿದೆ. ಹವಾಮಾನ ಇಲಾಖೆಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಕಾರಣ, ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈ ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/after-calling-virat-kohli-a-joker-rahul-threatened-to-kill-the-doctors/ https://kannadanewsnow.com/kannada/big-news-charge-sheet-filed-against-mla-harish-poonja-high-court-granted-permission-to-amend-the-petition/