Author: kannadanewsnow09

ಚಿತ್ರದುರ್ಗ: ದಾವಣಗೆರೆ ವಿವಿಯ ಅಂತರ ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ದಾವಣಗೆರೆಯ ಹೊನ್ನೂರು ಗೊಲ್ಲರಹಟ್ಟಿಯ ಡಿ.ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಳೆದ ಅಕ್ಟೋಬರ್.9, 10ರಂದು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ 2025-26ನೇ ಸಾಲಿನ ದಾವಣಗೆರೆ ವಿಶ್ವ ವಿದ್ಯಾಲಯದ ಅಂತರ ಕಾಲೇಜು ಭಾರ ಎತ್ತುವ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ದಾವಣಗೆರೆಯ ಹೊನ್ನೂರು ಗೊಲ್ಲರಹಟ್ಟಿಯಲ್ಲಿರುವಂತ ಡಿ.ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ಸ್ಪರ್ಧೆಯಲ್ಲಿ ಈ ಕೆಳಕಂಡಂತೆ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ. ಪವನ್ ಎಚ್-  Power Lifting 66 kg ವಿಭಾಗದಲ್ಲಿ ಒಟ್ಟು 410 kg ಎತ್ತುವ ಮೂಲಕ ಪ್ರಥಮ ಸ್ಥಾನ, Weight Lifting 65 kg ವಿಭಾಗದಲ್ಲಿ ಒಟ್ಟು 180 kg ಎತ್ತುವ ಮೂಲಕ ಪ್ರಥಮ ಸ್ಥಾನ ನವೀನ್ ಎಸ್ -Weight Lifting 71 kg ವಿಭಾಗದಲ್ಲಿ ಒಟ್ಟು 215 kg ಎತ್ತುವ ಮೂಲಕ ಪ್ರಥಮ ಸ್ಥಾನ ವಿಷ್ಣು ಎಮ್ -…

Read More

ಮಂಡ್ಯ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಒಂದು ವಾರದಲ್ಲಿ ಆರಂಭಿಸಿ ತ್ವರಿತವಾಗಿ ಪೂರ್ಣಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಶಾಸಕ ಕೆ.ಎಂ.ಉದಯ್ ಸೂಚಿಸಿದ್ದಾರೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಿಂದ ಮದ್ದೂರು ನಗರದ ಪ್ರವಾಸಿ ಮಂದಿರದವರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ತಹಸೀಲ್ದಾರ್‌, ಭೂಸ್ವಾಧೀನ ಅಧಿಕಾರಿಗಳು, ಎಂಜಿನಿಯರ್‌, ಗುತ್ತಿಗೆದಾರರು ಸೇರಿದಂತೆ ಕಾಮಗಾರಿಗೆ ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳ ಜತೆಗೂಡಿ ಶಾಸಕ ಉದಯ್ ಅಪೂರ್ಣ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಉದಯ್, ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಉದ್ಘಾಟನೆಯಾಗಿ ಮೂರು ವರ್ಷಗಳಾಗುತ್ತಿದೆ. ಆದರೆ, ಅಪೂರ್ಣಗೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿರ್ಲಕ್ಷ್ಯತನ ತೋರುತ್ತಿದ್ದಾರೆ. ಈಗಾಗಲೇ ಕಾಮಗಾರಿ ಸಂಬಂಧ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಯೋಜನಾ ಪ್ರಾಧಿಕಾರದ ಅಧಿಕಾರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸ್ಥಳ ಪರಿಶೀಲನೆ ನಡೆಸಿದ್ದು, ಇನ್ನೊಂದು…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಚಟುವಟಿಕೆಯನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬರೆದ ಪತ್ರದ ವಿಚಾರ ಬಹು ಚರ್ಚೆಯಾಗುತ್ತಿದೆ. ಇದೇ ವಿಚಾರವಾಗಿ ಆರ್ ಎಸ್ ಎಸ್ ಚಟುವಟಿಕೆಯನ್ನು ಏಕೆ ನಿರ್ಬಂಧಿಸಬೇಕು ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಬಿಚ್ಚಿಟ್ಟಿದ್ದಾರೆ. ಅವರ ಪತ್ರಿಕಾ ಹೇಳಿಕೆ ಮುಂದಿದೆ ಓದಿ. ಕರ್ನಾಟಕ ರಾಜ್ಯದಲ್ಲಿ ಸನ್ಮಾನ್ಯ ಪ್ರಿಯಾಂಕ ಖರ್ಗೆ ರವರು ಮಾನ್ಯ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಮೇಲೆ ಚರ್ಚೆಯಾಗುತ್ತಿದೆ ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದು ಕರ್ನಾಟಕದಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಕಾರಣಕ್ಕಾಗಿ ಸಂಘ ಪರಿವಾರದ ಮೇಲೆ ನಿಷೇಧವನ್ನು ಹೇರಲು ಮನವಿ ಮಾಡಿರುತ್ತಾರೆ. ಸದರಿ ಪತ್ರದ ಮೇಲೆ ಕ್ರಮ ಕೈಗೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿರುತ್ತಾರೆ. ಪ್ರಿಯಾಂಕ ಖರ್ಗೆ ರವರು ಸಾಂವಿಧಾನಿಕ ಅವಕಾಶದಲ್ಲಿ ಮತ್ತು ಕಾನೂನಾತ್ಮಕವಾಗಿ ಯಾರು ದೇಶ ವಿರೋಧಿ…

Read More

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆಯು ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರಗಳು ಹೀಗಿವೆ: 1. ರೈಲು ಸಂಖ್ಯೆ 07353/07354 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್): ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 17, 2025 ರಂದು 16:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಕ್ಟೋಬರ್ 18, 2025 ರಂದು 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ರೈಲು ಸಂಖ್ಯೆ 07354 ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 18, 2025 ರಂದು 14:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಅದೇ…

Read More

ಚಿಕ್ಕಮಗಳೂರು : ತಾಲ್ಲೂಕು, ಬಿಂಡಿಗಾ  ದೇವೀರಮ್ಮ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವವು ಅಕ್ಟೋಬರ್.19ರಿಂದ 23 ರವರೆಗೆ ನಡೆಯಲಿದೆ. ಈ ದೇವಿರಮ್ಮ ಜಾತ್ರಾ ಮಹೋತ್ಸವ್ಕೆ ಆಗಮಿಸುವಂತ ಭಕ್ತಾಧಿಗಳಿಗೆ ಜಿಲ್ಲಾಡಳಿತ ಕೆಲವು ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಈ ಕುರಿತಂತೆ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮಳೆ ಬರುವ ಕುರಿತು ಮುನ್ಸೂಚನೆ ನೀಡಿದ್ದು,  ದೇವಿರಮ್ಮ ದರ್ಶನಕ್ಕೆ ದಿನಾಂಕ: ಬೆಟ್ಟ ಏರುವವರು 15 ವರ್ಷ ಮೇಲ್ಪಟಿರ ಬೇಕು ಮತ್ತು 60 ವರ್ಷದೊಳಗಿರಬೇಕು ಎಂದಿದೆ. ತರೀಕೆರೆಯಿಂದ ವಾಹನಗಳಲ್ಲಿ ಆಗಮಿಸುವ ಭಕ್ತರು/ ಸ್ಥಳೀಯರು ಮಾತ್ರ ಲಿಂಗದಹಳ್ಳಿ ಮಾರ್ಗವಾಗಿ ಬಿಂಡಿಗಾ ಗ್ರಾಮಕ್ಕೆ ಬರುವುದು . ತರೀಕೆರೆಯಿಂದ ಅನ್ಯಕಾರ್ಯ ನಿಮಿತ್ತ ಚಿಕ್ಕಮಗಳೂರಿಗೆ ಬರುವ ಇತರೆ ಎಲ್ಲಾ ವಾಹನಗಳು ಅ:19 ಬೆಳಿಗ್ಗೆ 6 ಇಂದ ಅ.20 ಮಧ್ಯಾಹ್ನ 2 ಗಂಟೆಯವರೆಗೆ ಕಡ್ಡಾಯವಾಗಿ ಕಡೂರು ಮಾರ್ಗವಾಗಿ ಬರುವುದು ಎಂದು ಹೇಳಿದೆ. ತರೀಕೆರೆ-ಲಿಂಗದಳ್ಳಿ-ಸಂತವೇರಿ ಮಾರ್ಗವಾಗಿ ಬರುವವರು ತಮ್ಮ ವಾಹನಗಳನ್ನು ಕುಮಾರ ಗಿರಿಯಲ್ಲಿ ಪಾರ್ಕಿಂಗ್ ಮಾಡುವುದು. ಚಿಕ್ಕಮಗಳೂರು-ಕೈಮರ ಮಾರ್ಗವಾಗಿ  ಬರುವ ಸಾರ್ವಜನಿಕರು ಕಡ್ಡಾಯವಾಗಿ ಮಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆ…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಸಹಾಯಕ ಚುನಾವಣಾಧಿಕಾರಿಯಾಗಿ ಕೆ.ಆರ್.ದೇವರಾಜು ಅವರು ನೇಮಕಗೊಂಡಿದ್ದಾರೆ. ಕೆಯುಡಬ್ಲ್ಯೂಜೆ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು ನೇಮಕಾತಿ ಆದೇಶ ನೀಡಿದರು. ದೇವರಾಜು ಅವರಿಗೆ ಕೆಯುಡಬ್ಲ್ಯೂಜೆ ಶುಭಾಶಯಗಳನ್ನು ತಿಳಿಸಿದೆ. https://twitter.com/kuwj_r/status/1977753355649692159?s=48&t=K__Bb-oISWk0C8ZNc8qCGw ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ)ಚುನಾವಣೆಗೆ ಅ.13ರಂದು ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್ ) ಅವರು ಅಧಿಸೂಚನೆ ಹೊರಡಿಸಿದರು. ಸಹಾಯಕ ಚುನಾವಣಾಧಿಕಾರಿ ದೇವರಾಜು ಇದ್ದರು. ರಾಜ್ಯ ಮತ್ತು ಜಿಲ್ಲಾ ಸಂಘಗಳಿಗೆ ಏಕಕಾಲಕ್ಕೆ ಆರಂಭಗೊಂಡಿರುವ ಚುನಾವಣಾ ಪ್ರಕ್ರಿಯೆ ನ.9ಕ್ಕೆ ಮುಗಿಯಲಿದೆ. https://kannadanewsnow.com/kannada/dalit-sangharsh-samiti-in-sagar-condemns-shoe-hurled-at-supreme-court-cj-gavai-protests/ https://kannadanewsnow.com/kannada/cooperative-societies-also-come-under-the-ambit-of-anti-corruption-law-karnataka-high-court/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ತಿಂಗಳಲ್ಲಿ ಒಂದು ದಿನ ಸರ್ಕಾರಿ, ಖಾಸಗಿ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಲಾಗಿತ್ತು. ಅದರಂತೆ ಶೀಘ್ರದಲ್ಲೇ ನೀತಿ ರೂಪಿಸಿ, ಆದೇಶ ಹೊರಡಿಸಲಿದೆ. ಈ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದು, ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಜಾರಿ ಮಾಡಲು ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು. ಈ ನೀತಿ ಜಾರಿ ಸಂಬಂಧ ಮಸೂದೆ ಮಂಡಿಸಲಾಗುವುದು ಅಥವಾ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದಿದ್ದಾರೆ. https://twitter.com/KarnatakaVarthe/status/1977719458069188925

Read More

ಬಾಗಲಕೋಟೆ : ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ,ಇವರ ನೇತೃತ್ವದಲ್ಲಿ ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ ಆಯೋಜಿಸಲಾಗಿದ್ದ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು. ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಕಂದಾಚಾರ, ಮೌಢ್ಯ ಪಾಲಿಸಿದರೆ ವಿದ್ಯಾವಂತರಾಗಿಯೂ ಪ್ರಯೋಜನವಿಲ್ಲ ಖಾಯಿಲೆ ಬಂದರೆ ಶರೀರಕ್ಕೆ ಯಾರ ರಕ್ತವಾದರೂ ಕೊಡಿ. ಪ್ರಾಣ ಉಳಿದರೆ ಸಾಕು ಎನ್ನುತ್ತೇವೆ. ಇಂಥವರದ್ದೇ ರಕ್ತ…

Read More

ಶಿವಮೊಗ್ಗ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನದಿಸಿದ ನ್ಯಾಯವಾದಿ ರಾಕೇಶ್ ಕಿಶೋರ್ ಅವರನ್ನು ಗಡಿಪಾರು ಅಥವಾ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ಇವರ ಹಿಂದೆ ಯಾರು ಯಾರು ಇದ್ದಾರೆ ಎನ್ನುವುದನ್ನು ತನಿಖೆ ನಡೆಸಿ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯಿಸಿ ಇಂದು ಸಾಗರದಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಆರ್.ಗವಾಯಿ ದಲಿತ ಸಮುದಾಯಕ್ಕೆ ಸೇರಿದ್ದು ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಸಿದ್ದಾಂತದ ಆಧಾರದ ಮೇಲೆ ಅತ್ಯಂತ ಘನತೆಯಿಂದ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಅ.6ರಂದು ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರಣೆ ಸಂದರ್ಭದಲ್ಲಿ 71 ವರ್ಷದ ರಾಕೇಶ್ ಕಿಶೋರ್ ಎಂಬ ವಕೀಲರು ತನ್ನ ಕಾಲಿನ ಶೂ ಅನ್ನು ತೆಗೆದು ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ. ಇದು ಭಾರತದ ನ್ಯಾಯಾಂಗ ವ್ಯವಸ್ಥೆಗೆ ಕರಾಳ ದಿನವಾಗಿದೆ. ಪ್ರಜ್ಞಾವಂತ ನಾಗರೀಕರು ಈ…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಈ ಜಾತಿಗಣತಿಯಲ್ಲಿ ತೊಡಗಿರುವಂತ ಸಮೀಕ್ಷಾದಾರರು, ಮೇಲ್ವಿಚಾರಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಅದೇ ಗೌರವಧನವನ್ನು ನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿ ಪಡಿಸಲಾಗಿದೆ ಎಂದಿದೆ. ರಾಜ್ಯ ಸರ್ಕಾರದಿಂದ ಜಾತಿಗಣತಿಯಲ್ಲಿ ತೊಡಗಿರುವಂತ ಸಮೀಕ್ಷಾದಾರರಿಗೆ ಲಮ್ ಸಂ ರೂ.5,000 ಹಾಗೂ ಪ್ರತಿ ಮನೆ ಸಮೀಕ್ಷೆಗೆ ರೂ.100 ರಂತೆ ಗೌರವಧನವನ್ನು ನಿಗದಿ ಪಡಿಸಲಾಗಿದೆ. ಮೇಲ್ವಿಚಾರಕರಿಗೆ ರೂ.10,000 ಗೌರವಧನ ನಿಗದಿ ಪಡಿಸಲಾಗಿದೆ. ಮೊದಲ ಕಂತಿನಲ್ಲಿ ತಲಾ ರೂ.5,000ದಂತೆ ಸಮೀಕ್ಷಾದಾರರಿಗೆ ಗೌರವಧನ ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಸಮೀಕ್ಷಾದಾರರಿಗೆ ಬಾಕಿ ಮೊತ್ತ ಹಾಗೂ ಮೇಲ್ವಿಚಾರಕರಿಗೆ ನಿಗದಿಪಡಿಸಿದ ಗೌರವಧನವನ್ನು ಬಿಡುಗಡೆ ಮಾಡಬೇಕಾಗಿದ್ದು, ಒಂದು…

Read More