Author: kannadanewsnow09

ಉತ್ತರ ಪ್ರದೇಶ: ಇಲ್ಲಿನ ಹತ್ರಾಸ್ ನಲ್ಲಿ ಸತ್ಸಂಗ ಕಾರ್ಯಕ್ರಮದ ವೇಳೆ ಉಂಟಾದಂತ ಕಾಲ್ತುಳಿದಲ್ಲಿ 121 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ನನ್ನು ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 121 ಜನರ ಸಾವಿಗೆ ಕಾರಣವಾದ ‘ಸತ್ಸಂಗ’ (ಧಾರ್ಮಿಕ ಪ್ರಾರ್ಥನಾ ಸಭೆ) ಯ ಮುಖ್ಯ ಸಂಘಟಕ ಮಧುಕರ್. ಸ್ವಯಂ ಘೋಷಿತ ದೇವಮಾನವ ಸೂರಜ್ಪಾಲ್ ಸಿಂಗ್ ಅಲಿಯಾಸ್ ‘ಭೋಲೆ ಬಾಬಾ’ ಹತ್ರಾಸ್ ಘಟನೆಯ ಬಗ್ಗೆ ಮೌನ ಮುರಿದಿದ್ದಾರೆ ಮತ್ತು ಗೊಂದಲವನ್ನು ಸೃಷ್ಟಿಸಿದವರನ್ನು ಬಿಡುವುದಿಲ್ಲ ಎಂದು ಸರ್ಕಾರದ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದರು. ಗುರುವಾರ, ಹತ್ರಾಸ್ ಪೊಲೀಸರು ಸತ್ಸಂಗ ಸಂಘಟನಾ ಸಮಿತಿಯ ಸದಸ್ಯರಾಗಿದ್ದ ಆರು ಸ್ವಯಂಸೇವಕರನ್ನು ಬಂಧಿಸಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಂಧನಗಳನ್ನು ನಿರೀಕ್ಷಿಸಲಾಗಿದೆ. ಪರಿಶೀಲನೆಯಲ್ಲಿರುವ ಹೆಚ್ಚುವರಿ ಶಂಕಿತರನ್ನು ಪ್ರಶ್ನಿಸಲಾಗುತ್ತಿದೆ ಮತ್ತು ಮುಖ್ಯ ಆರೋಪಿ ದೇವಪ್ರಕಾಶ್ ಮಧುಕರ್ ಗಾಗಿ ಶೋಧ ನಡೆಯುತ್ತಿದೆ ಎಂದು ಎಡಿಜಿ ಉಲ್ಲೇಖಿಸಿದ್ದಾರೆ. ಆಗ್ರಾ ವಲಯದ ಎಡಿಜಿ ಸಲ್ಲಿಸಿದ ಆರಂಭಿಕ ಎಸ್ಐಟಿ ವರದಿಯ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಗೋಬಿ ಮಂಚೂರಿಗೆ ಬಳಿಸುವಂತ ಬಣ್ಣ, ಆ ಬಳಿಕ ಕಬಾಬ್ ಗೆ ಬಳಸುವಂತ ಕೃತಕ ಬಣ್ಣವನ್ನು ನಿಷೇಧ ಮಾಡಲಾಗಿತ್ತು. ಈಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನಲೆಯಲ್ಲಿ, ಟೀ ಪುಡಿಯನ್ನೇ ಬ್ಯಾನ್ ಮಾಡಲಿದೆ ಅಂತ ತಿಳಿದು ಬಂದಿದೆ. ಹೌದು ಟೀ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವುದು ಪ್ರಾಯೋಗಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಶೀಘ್ರವೇ ಟೀ ಪುಡಿ ಬ್ಯಾನ್‌ಗೆ ನಿರ್ಧರಿಸಿದೆ. ಈಗಾಗಲೇ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಟೀ ಪುಡಿಯನ್ನು ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಸಾಧ್ಯತೆ ಇದೆ. ಆ ಬಗ್ಗೆ ಕೆಲವೇ ದಿನಗಳವರೆಗೆ ಕಾದು ನೋಡಬೇಕಿದೆ. https://kannadanewsnow.com/kannada/assam-flood-situation-worsens-24-50-lakh-people-affected-in-30-districts/ https://kannadanewsnow.com/kannada/state-govt-appoints-district-in-charge-secretaries-heres-the-list/

Read More

ಬೆಂಗಳೂರು: ರಾಜ್ಯದಲ್ಲಿ ಮುಂಬರುವಂತ ನಾಲ್ಕು ಉಪ ಚುನಾವಣೆಗಳಿಗೆ ಕರ್ನಾಟಕ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ನಾಲ್ಕು ಒಂದು ಸ್ಥಳೀಯ ಸಂಸ್ಥೆ ಹಾಗೂ ಮೂರು ವಿಧಾನಸಭಾ ಉಪ ಚುನಾವಣೆಗಳಿಗೆ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ, ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಲಾಗಿದೆ ಅಂತ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಗೆ ಉಸ್ತುವಾರಿಗಳನ್ನಾಗಿ ಸಂಸದ ಬಸವರಾಜ ಬೊಮ್ಮಾಯಿ, ಕೋಟಾ ಶ್ರೀನಿವಾಸ ಪೂಜಾರಿ, ಕ್ಯಾ.ಬ್ರಿಜೇಶ್ ಚೌಟ ಹಾಗೂ ಪ್ರೀತಂ ಗೌಡ ನೇಮಕ ಮಾಡಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಪಿ.ರಾಜೀವ್ ನೇಮಿಸಿದ್ರೇ, ಸಂಡೂರು ಕ್ಷೇತ್ರಕ್ಕೆ ಸಂಸದ ಗೋವಿಂದ ಕಾರಜೋಳ, ವಿ.ಸುನೀಲ್ ಕುಮಾರ್, ಎನ್ ರವಿಕುಮಾರ್, ಕೆಎಸ್ ನವೀನ್ ನೇಮಿಸಲಾಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿಎನ್ ಅಶ್ವತ್ಥನಾರಾಯಣ,…

Read More

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯ ಪಿಯುಬಿ ಕಟ್ಟಡದದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಯು ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಿ, ಬಿಗ್ ಶಾಕ್ ಅನ್ನು ಬಿಬಿಎಂಪಿ ನೀಡಿದೆ. ನಗರದ ಎಂ.ಜಿ.ರಸ್ತೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್(ಪಿ.ಯು.ಬಿ) ಕಟ್ಟಡದ ನೆಲ ಅಂತಸ್ತಿನಲ್ಲಿರುವ ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಹಾಗೂ ಅಂಚೆ ಕಛೇರಿ ಇಲಾಖೆಗಳು ಬಾಕಿ ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಲಾಗಿದೆ. ಪಿ.ಯು.ಬಿ ಕಟ್ಟಡದ ನೆಲ ಅಂತಸ್ತಿನಲ್ಲಿರುವ ಮಳಿಗೆ ಸಂಖ್ಯೆ: 14/15 ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಮತ್ತು ಮಳಿಗೆ ಸಂಖ್ಯೆ: 17, ಅಂಚೆ ಕಛೇರಿ ಇಲಾಖೆಗಳಿವೆ. ಬ್ಯಾಂಕ್ ಆಫ್ ಬರೋಡಾ (ವಿಜಯಾ ಬ್ಯಾಂಕ್) ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್)ರವರು 2011 ರಿಂದ ಹಳೆಯ ಬಾಡಿಗೆಯನ್ನು ಪಾವತಿಸುತ್ತಿದ್ದು, ಪರಿಷ್ಕೃತ ಬಾಡಿಗೆಯನ್ನು ಪಾವತಿಸುತ್ತಿರುವುದಿಲ್ಲ. ಅಲ್ಲದೆ ಡಿಸೆಂಬರ್ 2022 ರಿಂದ ಯಾವುದೇ ಬಾಡಿಗೆಯನ್ನು ಪಾವತಿಸದೇ ಇದ್ದ ಕಾರಣ ಹಲವಾರು ಬಾರಿ ನೋಟೀಸ್ ಜಾರಿ ಮಾಡಿದ್ದರೂ ಕೂಡ ಬಾಡಿಗೆಯನ್ನು ಪಾವತಿಸಿರುವುದಿಲ್ಲ. ಬ್ಯಾಂಕ್ ಆಫ್ ಬರೋಡಾ…

Read More

ಹಾಸನ : ಕಾಡಾನೆಗಳು ನಾಡಿಗೆ ಬರಲು ಕಾರಣವೇನು ಎಂಬ ಬಗ್ಗೆ ಸಮಗ್ರ್ ಅಧ್ಯಯನ ಮಾಡಿ, ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಯಸಳೂರು ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಡಿ.4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ಮೈಸೂರು ಅಂಬಾರಿ ಹ ಹೊತ್ತಿದ್ದ ಆನೆ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮಾನವ-ವನ್ಯಜೀವಿ ಸಂಘರ್ಷಕ್ಕೆ ಏನು ಕಾರಣ ಎಂಬ ಅಧ್ಯಯನಕ್ಕೆ ಒತ್ತು ನೀಡಲಾಗುವುದು ಎಂದರು. ಆನೆ ಹಾವಳಿ ತಪ್ಪಿಸಲು ಆಗಸ್ಟ್ 12ರಂದು ವಿಶ್ವ ಆನೆಗಳ ದಿನದಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ನಡೆಸಲಾಗುವುದು. ಈ ಸಮ್ಮೇಳನದಲ್ಲಿ ವಿಶ್ವಾದ್ಯಂತದಿಂದ ತಜ್ಞರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಈ ಸಮ್ಮೇಳನದಲ್ಲಿ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಣಕ್ಕೆ ಯಾವ ಯಾವ ದೇಶದಲ್ಲಿ ಯಾವ ರೀತಿಯ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗಿದೆ. ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿ ಕೂಡ ಅಳವಡಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಚಿಂತನ ಮಂಥನ…

Read More

ಬೆಂಗಳೂರು: ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರನ್ನಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಇಂತಹ ಅವರು ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಿಗೆ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಗೌರವಾನ್ವಿತ ಶ್ರೀ ನ್ಯಾಯಾಮೂರ್ತಿ ಬಿ.ವೀರಪ್ಪ ಅವರು ಉಪಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೌರವಾನ್ವಿತ ನ್ಯಾಯಾಮೂರ್ತಿ ಲೋಕಾಯುಕ್ತ ಬಿ ಎಸ್ ಪಾಟೀಲ್, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು. https://kannadanewsnow.com/kannada/good-news-for-ration-card-holders-state-govt-extends-date-for-linking-aadhaar-number-again/ https://kannadanewsnow.com/kannada/assam-flood-situation-worsens-24-50-lakh-people-affected-in-30-districts/

Read More

ಬೆಂಗಳೂರು: ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಆದ್ರೇ ಇನ್ನೂ ಕೆಲವರು ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲ. ಈ ಹಿನ್ನಲೆಯಲ್ಲಿ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವು ಮತ್ತೆ ಡೆಡ್ ಲೈನ್ ವಿಸ್ತರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಸೆಪ್ಟೆಂಬರ್.30, 2024ರವರೆಗೆ ಪಡಿತರ ಚೀಟಿದಾರರು ತಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡೋದಕ್ಕೆ ಗಡುವನ್ನು ವಿಸ್ತರಣೆ ಮಾಡಲಾಗಿದೆ ಎಂಬುದಾಗಿ ಹೇಳಲಾಗುತ್ತಿದೆ. ಅಂದಹಾಗೇ ಜೂನ್.30, 2024ರವರೆಗೆ ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡೋದಕ್ಕೆ ಅವಕಾಶ ನೀಡಲಾಗಿತ್ತು. ಆದ್ರೇ ಅನೇಕ ಪಡಿತರ ಚೀಟಿದಾರರ ಕುಟುಂಬಸ್ಥರು ಆಧಾರ್ ಸಂಖ್ಯೆ ಲಿಂಕ್ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ಈಗ ರಾಜ್ಯ ಸರ್ಕಾರ ಮತ್ತೊಮ್ಮೆ ಸೆಪ್ಟೆಂಬರ್.30ರವರೆಗೆ ದಿನಾಂಕವನ್ನು ವಿಸ್ತರಣೆ ಮಾಡಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/actor-darshan-accused-of-murder-out-of-coastal/ https://kannadanewsnow.com/kannada/state-govt-appoints-district-in-charge-secretaries-heres-the-list/

Read More

ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಹೀಗಾಗಿ ಅವರನ್ನು ಕರಾವಳಿ ಚಿತ್ರದಿಂದ ಕೈಬಿಡಲಾಗಿದೆ ಅನ್ನುವ ವಿಷಯ ಹೊರ ಬಿದ್ದಿದೆ. ನಟ ಪ್ರಜ್ವಲ್ ದೇವರಾಜ್ ನಟನೆಯ ಕರಾವಳಿ ಚಿತ್ರವನ್ನು ಗುರುದತ್ ಗಾಣಿಗ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು ನಟ ದರ್ಶನ್ ಅವರನ್ನು ಒಳಗೊಂಡಿತ್ತು. ಆದ್ರೇ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಚಿತ್ರದಿಂದ ಕೈಬಿಡುವಂತ ನಿರ್ಧಾರವನ್ನು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗುತ್ತಿದೆ. ದರ್ಶನ್ ಕೈ ಬಿಟ್ಟು ಪ್ರಜ್ವಲ್ ದೇವರಾಜ್ ನಟನೆಯಲ್ಲೇ ಕರಾವಳಿ ಚಿತ್ರವನ್ನು ತೆರೆಗೆ ತರೋ ಪ್ಲಾನ್ ಅನ್ನ ಚಿತ್ರತಂದ ಮಾಡುತ್ತಿದೆ ಎನ್ನಲಾಗುತ್ತಿದೆ. ನಟ ಸುದೀಪ್ ಅವರ ಶಿಷ್ಯ ಗುರುದತ್ ಗಾಣಿಗ ಅವರು ಆಗಿದ್ದು, ಅವರಿಗೆ ಸುದೀಪ್ ಸಾತ್ ಕೊಡ್ತಾರಾ ಅಂತ ಕಾದು ನೋಡಬೇಕಿದೆ. ಆದ್ರೇ ನಟ ದರ್ಶನ್ ಮಾತ್ರ ಕರಾವಳಿ ಚಿತ್ರದಿಂದ ಕೈಬಿಡೋ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ ಎಂಬುದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ಖಚಿತ ಮಾಹಿತಿ ಹೊರ ಬೀಳಬೇಕಿದೆ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾನುಗಳ ವಿಚಾರಣೆ, ಅನಿರೀಕ್ಷಿತ ತಪಸಾಣೆ ಕೈಗೊಂಡು ವರದಿಗೆ ಸೂಚಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ಉಲ್ಲೇಖಿತ ಅಧಿಸೂಚನೆ ದಿನಾಂಕ:11.12.2023 ರಲ್ಲಿ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು. ಮುಂದುವರೆದು, ಕೆಲವು ಜಿಲ್ಲೆಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಈ ಅಧಿಸೂಚನೆಯೊಂದಿಗೆ ಲಗತ್ತಿಸಿರುವ ಪಟ್ಟಿಯಲ್ಲಿ ನಮೂದಿಸಿರುವಂತೆ ಮಾರ್ಪಡು ಮಾಡಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ…

Read More

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಜುಲೈ 22 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ. ದಿನಾಂಕವನ್ನು ಪ್ರಕಟಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು, “ಗೌರವಾನ್ವಿತ ರಾಷ್ಟ್ರಪತಿಗಳು, ಭಾರತ ಸರ್ಕಾರದ ಶಿಫಾರಸಿನ ಮೇರೆಗೆ, 2024 ರ ಜುಲೈ 22 ರಿಂದ 2024 ರ ಆಗಸ್ಟ್ 12 ರವರೆಗೆ (ಸಂಸದೀಯ ವ್ಯವಹಾರದ ಅಗತ್ಯಗಳಿಗೆ ಒಳಪಟ್ಟು) 2024 ರ ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಕರೆಯುವ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ. https://twitter.com/ANI/status/1809531693549908119 2024-25ರ ಕೇಂದ್ರ ಬಜೆಟ್ ಅನ್ನು ಜುಲೈ 23, 2024 ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ಅವರು ಹೇಳಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2019-0ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡಿಸಲಾಯಿತು.

Read More