Author: kannadanewsnow09

ಮಂಡ್ಯ : ಆರೋಪಿಯೊಬ್ಬನಿಂದ 5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಹೆಡ್ ಕಾನ್ಸ್ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಗುರುವಾರ ಮಳವಳ್ಳಿ ಪಟ್ಟಣದಲ್ಲಿ ಜರುಗಿದೆ. ಮಳವಳ್ಳಿ ಗ್ರಾಮಾಂತರ ಪೋಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿಯಾಗಿದ್ದಾರೆ. ಮಳವಳ್ಳಿ ತಾಲೂಕಿನ ಅಂಚೆದೊಡ್ಡಿ ಗ್ರಾಮದ ನವೀನ್ ಎಂಬುವರು ಇತ್ತಿಚೆಗೆ ನಡೆದಿದ್ದ ಗಲಾಟೆಯೊಂದರಲ್ಲಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ನವೀನ್ ಹೊರ ಬಂದಿದ್ದರು. ಇವರ ಮೇಲೆ ಪೋಲೀಸ್ ಅಧಿಕಾರಿಗಳು ನವೀನ್ ಮೇಲೆ ರೌಡಿ ಶೀಟರ್ ತೆರೆಯಬೇಕೆಂದು ನಿರ್ಧರಿಸಲಾಗಿತ್ತು. ಹೀಗಾಗಿ ನಿನ್ನ ವಿರುದ್ದ ರೌಡಿ ಶೀಟರ್ ಅನ್ನು ತೆರೆಯಬಾರದು ಎಂದರೆ 5 ಸಾವಿರ ಲಂಚ ನೀಡಬೇಕೆಂದು ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ ನವೀನ್ ಬಳಿ ಬೇಡಿಕೆ ಇಟ್ಟಿದ್ದರು. ಈ ವಿಚಾರವಾಗಿ ಮಂಡ್ಯ ಲೋಕಾಯುಕ್ತಕ್ಕೆ ನವೀನ್ ದೂರು ಸಲ್ಲಿಸಿದ್ದರು. ಗುರುವಾರ ಲೋಕಾಯುಕ್ತ ಅಧಿಕಾರಿಗಳ ಮಾರ್ಗದರ್ಶನ ದಂತೆ ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಆರೋಪಿ ನವೀನ್ ಅವರಿಂದ ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ 5 ಸಾವಿರ ಲಂಚ…

Read More

ನವದೆಹಲಿ : ಕೆಎಸ್‌ಆರ್‌ಟಿಸಿಯ ಮೈಸೂರು ನಗರ ಸಾರಿಗೆಯಲ್ಲಿ ಧ್ವನಿ ಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಎಂಬ ದೇಶದ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿರುವ ಉಪಕ್ರಮವು “ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ‌2025 ಅನ್ನು ಪಡೆದುಕೊಂಡಿದೆ. ಈ ಪ್ರಶಸ್ತಿಯನ್ನು ಪ್ರಶಾಂತ್ ಕುಮಾರ್ ಮಿತ್ತಲ್ , ಡೆಪ್ಯುಟಿ ಡೈರೆಕ್ಟರ್ ಜನರಲ್ , NIC National Informatics Center, ಮತ್ತು ಸೈಮು ಜಿಂದಾಲ್ , ಸಂಸ್ಥಾಪಕತು, ಸ್ವಯಂ ಸಂಸ್ಥೆ ಅವರು ಶರಣ್ ಬಸವರಾಜ ಕೆ.ಎಂ., ವಿಭಾಗಿಯ ನಿಯಂತ್ರಣಧಿಕಾರಿ, ಮಂಡ್ಯ ವಿಭಾಗ ಹಾಗೂ ಸುಧಾರಾಣಿ ಆರ್., ಉಪ ಮುಖ್ಯ ಗಣಕ ವ್ಯವಸ್ಥಾಪಕರು, ಕೆಎಸ್‌ಆರ್‌ಟಿಸಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸ್ವಯಂ ಸಂಸ್ಥೆಯು ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಅಂತರರಹಿತ ವಿನ್ಯಾಸ ಮತ್ತು ಒಳಗೊಳ್ಳುವಿಕೆಯ ಕ್ಷೇತ್ರದಲ್ಲಿ ಮಾದರಿಗಳನ್ನು ನಿರ್ಮಿಸಿರುವ ಸಂಸ್ಥೆಗಳನ್ನು ಗೌರವಿಸುವ ಉದ್ದೇಶ ಹೊಂದಿದೆ. 2025ನೇ ಆವೃತ್ತಿ ಸ್ವಯಂ ಸಂಸ್ಥೆಯ 25ನೇ ವಾರ್ಷಿಕೋತ್ಸವವಾಗಿದ್ದು, ಜಾಗತಿಕ ಮಟ್ಟದಲ್ಲಿ ಕ್ಷೇತ್ರದಲ್ಲಿ 25 ವರ್ಷಗಳ ಸೇವೆಯನ್ನು ಆಚರಿಸುತ್ತಿದೆ. ಧ್ವನಿ ಸ್ಪಂದನ – ಆನ್‌ಬೋರ್ಡ್…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಅಬ್ಬಿನಹೊಳೆ ಠಾಣೆ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ, 9 ಲಕ್ಷದ 92 ಸಾವಿರ ಬೆಲೆಬಾಳುವ ಕುರಿಗಳನ್ನು ಕಳ್ಳತನ ಮಾಡಿದ್ದ  ಕಳ್ಳನನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ; 01-11-2025 ರಂದು ಸಂಜೆ 06-30 ಗಂಟೆಯಿಂದ  ರಾತ್ರಿ 09-00 ಗಂಟೆಯ ವೇಳೆಯಲ್ಲಿ ಸಕ್ಕರ ಗ್ರಾಮದ ಬಳಿ ಇರುವ ಗುಂಡಪ್ಪ ತಂದೆ  ಈರಪ್ಪ ಅವರ ಜಮೀನಿನಲ್ಲಿದ್ದ ಕುರಿ ರೊಪ್ಪದಿಂದ ಸುಮಾರು 120 ಕುರಿಗಳು ಕಳ್ಳತನವಾಗಿರುವುದಾಗಿ, ಪಿರ್ಯಾದಿ ಸಕ್ಕರ ಗ್ರಾಮದ  ಭೂತಣ್ಣ  ಅವರು ನೀಡಿದ್ದ ದೂರಿನ ಮೆರೆಗೆ ಅಬ್ಬಿನಹೊಳೆ ಪೊಲೀಸ್ ಠಾಣಾ ಮೊ.ನಂ.192/2025 ಕಲಂ 303[2] BNS-2023  ರೀತ್ಯಾ ಪ್ರಕರಣ  ದಾಖಲಿಸಲಾಗಿತ್ತು ಎಂದಿದೆ. ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶಿವಕುಮಾರ, ಹಿರಿಯೂರು ಪೊಲೀಸ್ ಉಪಾಧೀಕ್ಷಕರಾದ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಐಮಂಗಲ ವೃತ್ತ ನಿರೀಕ್ಷಕರಾದ ಗುಡ್ಡಪ್ಪ ಎನ್ ಹಾಗೂ ಅಬ್ಬಿನಹೊಳೆ ಪೊಲೀಸ್ ಠಾಣೆಯ…

Read More

ಬೆಂಗಳೂರು: ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರ, ಕೆಲವು ಸಚಿವರು, ಮುಖ್ಯಮಂತ್ರಿಗಳು ಈ ಕಬ್ಬು ಬೆಲೆ ನಿಗದಿ ಬಗ್ಗೆ ಹೇಳಿಕೆ ಕೊಡುತ್ತಿದ್ದಾರೆ. ಕಬ್ಬು ವರ್ಷದ ಪ್ರಾರಂಭಕ್ಕೆ ಮೊದಲು ಕೇಂದ್ರವು ಎಫ್‍ಆರ್‍ಪಿ ನಿಗದಿ ಮಾಡುತ್ತದೆ. ಈಗ ನಾವು 350 ರೂ. ಎಫ್‍ಆರ್‍ಪಿ ನಿಗದಿ ಮಾಡಿದ್ದೇವೆ ಎಂದು ವಿವರಿಸಿದರು. ಇದರ ಜೊತೆಗೆ ಎಥೆನಾಲ್ ಖರೀದಿ ಶುರು ಮಾಡಿದ ಬಳಿಕ ಮೊದಲು 3-4 ವರ್ಷ ಹಣ ಪಾವತಿ ಬಾಕಿ ಇರುತ್ತಿತ್ತು. ಈಗ ಕಳೆದ ಸಕ್ಕರೆ ವರ್ಷದ್ದು, 97.2 ಶೇಕಡಾ ಪಾವತಿ ಆಗಿದೆ. ರಾಜ್ಯ ಸರಕಾರವು ಕಾರ್ಖಾನೆಗಳ ಮಾಲೀಕರು, ರೈತರ ಜೊತೆ ಮಾತುಕತೆ ಮಾಡಿ ಸೂಕ್ತ ಸಂಧಾನ ಮಾಡಬೇಕು. ಸುಮ್ಮಸುಮ್ಮನೇ ಹೇಳಿಕೆ ಕೊಟ್ಟು ಪರಿಸ್ಥಿತಿಯನ್ನು ಕೆಡಿಸುವ ಕೆಲಸ ಮಾಡಬಾರದು ಎಂದು ಸಲಹೆ ನೀಡಿದರು.…

Read More

ಬೆಂಗಳೂರು: ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 5 ವರ್ಷಗಳ ಅವಧಿಯಲ್ಲಿ ರೂ.518.27 ಕೋಟಿ ರೂ.ಗಳ ಒಟ್ಟಾರೆ ಆಯವ್ಯಯದಲ್ಲಿ ಕರ್ನಾಟಕ ನವೋದ್ಯಮ ನೀತಿ, 2025-2030ಕ್ಕೆ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಮತ್ತು ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಏಳು ಅಗತ್ಯ ಅಂಶಗಳ ಮೂಲಕ ಕರ್ನಾಟಕದ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿರುವ ಸಚಿವರು ಹಣಕಾಸು ಮತ್ತು ಅನುದಾನಗಳು, ಇನ್ಕ್ಯುಬೇಷನ್ ಮತ್ತು ಮೂಲಸೌಕರ್ಯ ಬೆಂಬಲ, ಮಾರ್ಗದರ್ಶನ ಮತ್ತು ಕೌಶಲ್ಯ ಅಭಿವೃದ್ಧಿ, ಮಾರುಕಟ್ಟೆ ಪ್ರವೇಶ ಮತ್ತು ವಿಸ್ತರಣೆ, ಅಂತರರಾಷ್ಟ್ರೀಯ ಸಹಯೋಗ ಮತ್ತು ಪ್ರವೇಶ, ಸೇರ್ಪಡೆ ಮತ್ತು ಸುಸ್ಥಿರತೆ ಮತ್ತು ನಿಯಂತ್ರಕ ಸೌಲಭ್ಯಗಳನ್ನು ವಿಸ್ತರಿಸುವ ಮೂಲಕ ನವೋದ್ಯಮಗಳನ್ನು ಬಲಪಡಿಸಲು ಉದ್ದೇಶಿತ ಕರ್ನಾಟಕ ನವೋದ್ಯಮ ನೀತಿ ಪೂರಕವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ. ನವೋದ್ಯಮಗಳ ವಿಕಾಸದ ಅಗತ್ಯಗಳಿಗೆ ಅನುಗುಣವಾಗಿ ಕರ್ನಾಟಕ ನವೋದ್ಯಮ ನೀತಿಯು ನವೋದ್ಯಮ ವಿವಿಧ ಹಂತಗಳೊಂದಿಗೆ ಸಮನ್ವಯದೊಂದಿಗೆ ತನ್ನ ಕಾರ್ಯಕ್ರಮಗಳನ್ನು…

Read More

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಇಡೀ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅಧ್ಯಕ್ಷರು ಮತ್ತು ಸದಸ್ಯರಿಗಾಗಿ ಗುರುವಾರ ಹಮ್ಮಿಕೊಂಡಿದ್ದ ವಿಡಿಯೋ ಕಾನ್ಫರೆನ್ಸ್ ಮೂಲಕದ ಯೂಟ್ಯೂಬ್ ಲೈವ್ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು. ಈ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಸಚಿವ ಶ್ರೀ ಮಧು ಬಂಗಾರಪ್ಪ ಅವರು SDMC ಸದಸ್ಯರನ್ನು ಶಾಲಾ ವ್ಯವಸ್ಥೆಯ ಸಕ್ರಿಯ ಪಾಲುದಾರರೆಂದು ಬಣ್ಣಿಸಿದರು ಮತ್ತು ಸರ್ಕಾರಿ ಶಾಲೆಗಳ ಸುಧಾರಣೆಗಾಗಿ ಸರ್ಕಾರ ಕೈಗೊಂಡಿರುವ ಪ್ರಮುಖ ಯೋಜನೆಗಳನ್ನು ಹಂಚಿಕೊಂಡರು. ಕಲ್ಯಾಣ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಿಗೆ ಸುಮಾರು 12,392 ಶಿಕ್ಷಕರನ್ನು ನೇಮಕಾತಿ ಮಾಡಲಾಗಿದೆ. ಇದಲ್ಲದೆ, ಈ ಹಿಂದೆ 10-15 ಸಾವಿರ ಅತಿಥಿ ಶಿಕ್ಷಕರನ್ನು ಮಾತ್ರ ನೇಮಕ ಮಾಡಲಾಗುತ್ತಿತ್ತು, ಆದರೆ ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲೇ 51,000 ಅತಿಥಿ ಶಿಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದರು ಮುಂದಿನ…

Read More

ಗುಜರಾತ್: 2013 ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಅವರಿಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಗುಜರಾತ್ ಹೈಕೋರ್ಟ್ ಗುರುವಾರ ಆರು ತಿಂಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ರಾಜಸ್ಥಾನ ಹೈಕೋರ್ಟ್ ವೈದ್ಯಕೀಯ ಆಧಾರದ ಮೇಲೆ ಇದೇ ರೀತಿಯ ಪರಿಹಾರವನ್ನು ನೀಡಿದ ಸುಮಾರು ಒಂದು ವಾರದ ನಂತರ, ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆರ್.ಟಿ. ವಾಚಾನಿ ಅವರ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿತು. ರಾಜಸ್ಥಾನ ನ್ಯಾಯಾಲಯವು ಉಲ್ಲೇಖಿಸಿದ ಅದೇ ಆಧಾರದ ಮೇಲೆ 86 ವರ್ಷದ ಅಸಾರಾಂ ಅವರಿಗೆ ಜಾಮೀನು ವಿಸ್ತರಿಸುತ್ತಿರುವುದಾಗಿ ಗುಜರಾತ್ ಹೈಕೋರ್ಟ್ ಹೇಳಿದೆ. ಅವರ ಆರೋಗ್ಯ ಹದಗೆಡುತ್ತಿರುವುದನ್ನು ಉಲ್ಲೇಖಿಸಿ ಅವರ ವಕೀಲರು ಹಿಂದಿನ ಆದೇಶವನ್ನು ಸಲ್ಲಿಸಿದರು ಮತ್ತು ಸಡಿಲಿಕೆ ಕೋರಿದರು. ರಾಜ್ಯ ಸರ್ಕಾರವು ಈ ಅರ್ಜಿಯನ್ನು ವಿರೋಧಿಸಿ, ಅಸಾರಾಂ ಅವರನ್ನು ಬಿಡುಗಡೆ ಮಾಡುವ ಬದಲು ಅಹಮದಾಬಾದ್‌ನ ಸಬರಮತಿ ಕೇಂದ್ರ ಕಾರಾಗೃಹದಲ್ಲಿ ಸಾಕಷ್ಟು ಚಿಕಿತ್ಸೆ ಪಡೆಯಬಹುದು ಎಂದು ವಾದಿಸಿತು. ಕಳೆದ ತಿಂಗಳು, ಅಕ್ಟೋಬರ್ 29…

Read More

ನವದೆಹಲಿ : “ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ನವೆಂಬರ್ ಕ್ರಾಂತಿ ಹಾಗೂ ಈ ತಿಂಗಳು 22 ಹಾಗೂ 26 ರ ದಿನಾಂಕದ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಯಾರೋ ಸುಮ್ಮನೆ ಬರೆದಿದ್ದಾರೆ. ಪಕ್ಷ ನಮಗೆ ಬಿಹಾರ ಚುನಾವಣೆ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ನೀಡಿದ್ದು, ನಾವು ಅದನ್ನು ಮಾಡುತ್ತಿದ್ದೇವೆ. ಇದರ ಹೊರತಾಗಿ ಬೇರೆ ಯಾವುದೇ ಕ್ರಾಂತಿ ಆಗುವುದಿಲ್ಲ” ಎಂದು ತಿಳಿಸಿದರು. ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ನಾನು ಯಾರನ್ನೂ ಭೇಟಿ ಮಾಡುವುದಿಲ್ಲ. ನನ್ನ ಬಳಿ ಯಾರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ. ನನಗೆ ಯಾವುದೇ ನಾಯಕರನ್ನು ಭೇಟಿ…

Read More

ಬೆಂಗಳೂರು: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು. ಈ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. https://twitter.com/KarnatakaVarthe/status/1986379735027593657 ವಿಶ್ವದಲ್ಲೇ ದೊಡ್ಡದಾದ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ. 2000 ಜನ ಫಲಾನುಭವಿಗಳ ಹಣ ಸಂಗ್ರಹಿಸಲಾಗಿದ್ದು, ಇದು ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೆ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು. ಗೃಹಲಕ್ಷ್ಮಿ ಸೊಸೈಟಿ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಲೋನ್ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ…

Read More

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28, 2026ರಿಂದ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಮಾರ್ಚ್.18, 2026ರಿಂದ ಆರಂಭಗೊಳ್ಳಲಿದೆ. ದ್ವಿತೀಯ ಪಿಯು ಪರೀಕ್ಷೆ 2026ರ ಫೆಬ್ರವರಿ 28 ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 18 ರಿಂದ ಆರಂಭವಾಗಲಿದ್ದು, ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್‌ 17ಕ್ಕೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏಪ್ರಿಲ್‌ 2ಕ್ಕೆ ಮುಕ್ತಾಯವಾಗಲಿದೆ. https://twitter.com/KarnatakaVarthe/status/1986384861909950844 https://kannadanewsnow.com/kannada/bihar-assembly-elections-60-25-voting-so-far-highest-in-begusarai-district/ https://kannadanewsnow.com/kannada/transport-minister-ramalinga-reddys-sudden-visit-to-kempegowda-bus-station-in-bengaluru/

Read More