Author: kannadanewsnow09

ಬೆಂಗಳೂರು: ಬೆಸ್ಕಾಂ ( BESCOM ) ವ್ಯಾಪ್ತಿಯಲ್ಲಿನ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ದಿನಾಂಕ 08.07.2024 (ಸೋಮವಾರ) ಒಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಗಡವು ನೀಡಿರುತ್ತದೆ. ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ ಸಿ, ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸುವ ಸಂಬಂಧ ಬೆಸ್ಕಾಂ 2023ರ ಆಗಸ್ಟ್‌ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು, ಅನಧಿಕೃತ ಡಾಟ ಕೇಬಲ್‌, ಓಎಫ್‌ಸಿ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸಲು ಒಂದು ವಾರಗಳ ಗಡುವು ವಿಧಿಸಿತ್ತು. ಬೆಸ್ಕಾಂನ ವಿಶೇಷ ಕಾರ್ಯಾಚರಣೆ ಹೊರತಾಗಿಯೂ ಅನಧಿಕೃತ ಕೇಬಲ್‌ ಗಳನ್ನು ವಿದ್ಯುತ್‌ ಕಂಬಗಳ ಮೇಲೆ ಡಿಶ್‌ ಕೇಬಲ್‌ ಹಾಗೂ ಡಾಟ ಕೇಬಲ್‌ ಗಳನ್ನು ಅಳವಡಿಸಲಾಗುತ್ತಿದೆ. ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ ನೆಟ್‌ ಡಾಟ ಕೇಬಲ್‌ ಹಾಗೂ ಡಿಶ್‌…

Read More

ಬೆಂಗಳೂರು: ವರ್ಗಾವಣೆಗೆ ಪ್ರಭಾವ ಬೀರುವವರ ವಿರುದ್ಧ, ಹಣ ಕೊಟ್ಟು ಟ್ರಾನ್ಸ್ ಫರ್ ಗೆ ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ. ನಿಮಗೆ ಸಮಸ್ಯೆಗಳಿದ್ದರೆ ಗೃಹ ಸಚಿವರಿಗೆ, ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿ ಸರಿಪಡಿಸಿಕೊಳ್ಳಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾನೂನು ಮೀರಿ ಕೆಲಸ ಮಾಡಿ ಎಂದು ಸರ್ಕಾರ ಯಾವತ್ತೂ ಬಯಸಲ್ಲ. ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸರ್ಕಾರ ಸಹಿಸಲ್ಲ ಎಂಬುದಾಗಿ ಗರಂ ಆಗೇ ನುಡಿದರು. ಜನರ ನಡುವೆ ಪೊಲೀಸರು, ಅಧಿಕಾರಿಗಳು ಸಮವಸ್ತ್ರದಲ್ಲಿ ಹೆಚ್ಚೆಚ್ಚು ಕಾಣಿಸಬೇಕು. ಇದು ಜನ ಸಾಮಾನ್ಯರಿಗೆ ಧೈರ್ಯ ತಂದುಕೊಡುತ್ತದೆ. ಪೊಲೀಸರು ಹೆಚ್ಚೆಚ್ಚು ಜನಸಂಪರ್ಕ ಸಭೆಗಳನ್ನು ಹೆಚ್ಚೆಚ್ಚು ಪರಿಣಾಮಕಾರಿಯಾಗಿ ನಡೆಸಬೇಕು. DG-IGP ಯಿಂದ SP ಗಳವರೆಗೂ ಪ್ರತಿಯೊಬ್ಬರೂ ಠಾಣೆಗಳಿಗೆ ಭೇಟಿ ನೀಡಿ ಸರಿಯಾದ ಕ್ರಮದಲ್ಲಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮತ್ತೊಮ್ಮೆ ಒತ್ತಿ ಹೇಳಿ ಸಿಎಂ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಶಾಕ್ ನೀಡಿ ಹತ್ಯೆ ಮಾಡಿದ್ದನ್ನು ಬಂಧಿತ ಆರೋಪಿಗಳು ಒಪ್ಪಿಕೊಂಡಿದ್ದರು. ಇಂತಹ ಶಾಕ್ ಡಿವೈಸ್ ತರೋದಕ್ಕೆ ಹಣ ನೀಡಿದ್ದೇ ಎ1 ಆರೋಪಿ ಪವಿತ್ರಾ ಗೌಡ ಅವರ ಬ್ಯುಸಿನೆಸ್ ಪಾರ್ಟನ್ ಸಮತಾ ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪವಿತ್ರಾ ಗೌಡ ಅವರ ಬ್ಯುಸಿನೆಸ್ ಪಾಟ್ನರ್ ಆಗಿರುವಂತ ಸಮತಾಗೆ ಎಸ್ಐಟಿ ಅಧಿಕಾರಿಗಳು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಇದಕ್ಕೂ ಮುನ್ನವೇ ರೇಣುಕಾಸ್ವಾಮಿ ಕೊಲೆ ನಡೆದ ನಂತ್ರ, ಪವಿತ್ರಾ ಗೌಡ ಹಾಗೂ ಸಮತಾ ಹಲವು ಭಾರಿ ದೂರವಾಣಿ ಸಂಭಾಷಣೆ ನಡೆಸಿರೋ ದಾಖಲೆಯೂ ಎಸ್ಐಟಿ ಪೊಲೀಸರು ಹೆಕ್ಕಿ ತೆಗೆದಿದ್ದಾರೆ. ಇದಷ್ಟೇ ಅಲ್ಲದೇ ಸಮತಾ ಅವರು ಆರೋಪಿ ಧನರಾಜ್ ಗೆ ಶಾಕ್ ಡಿವೈಸ್ ತರೋದಕ್ಕೆ 3 ಸಾವಿರ ಹಣ ನೀಡಿರುವ ಮಾಹಿತಿಯೂ ದೊರೆತಿದೆ. ಈ ಹಿನ್ನಲೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅವರ ಬ್ಯುಸಿನೆಸ್ ಪಾರ್ಟನ್ ಆಗಿರೋ ಸಮತಾ ಅವರನ್ನು ಎಸ್ಐಟಿ ಬಂಧಿಸೋ ಸಾಧ್ಯತೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೋಮುಗಲಭೆ, ಕ್ರೈಂ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ಅದರ ಭಾಗವಾಗಿ ಇಂದು ಸಿಎಂ ಸಿದ್ಧರಾಮಯ್ಯ ಅವರು ತಂತ್ರಾಂಶ, ಕೈಪಿಡಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ತಪ್ಪುಗಳನ್ನು ಸರಿಮಾಡಿಕೊಂಡು ಗುಣಾತ್ಮಕ ಪೊಲೀಸ್ ವ್ಯವಸ್ಥೆ ಗಟ್ಟಿಗೊಳಿಸುವ ಮೂಲಕ ದೇಶದಲ್ಲಿ ಕರ್ನಾಟಕ‌ ಪೊಲೀಸ್ ಗೆ ಇರುವ ಉನ್ನತ ಹೆಸರನ್ನು ಉಳಿಸಿ-ಬೆಳೆಸಬೇಕು ಎಂದರು. ಸಮಾಜದಲ್ಲಿ ಎಲ್ಲರೂ ನಿಶ್ಚಿಂತೆಯಿಂದ, ಭಯ ಮುಕ್ತವಾಗಿ ವಾಸಿಸುವ ವಾತಾವರಣ ಇರಬೇಕು. ಮಹಾತ್ಮಗಾಂಧಿ ಅವರ ಮಾತು ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸೂಚನೆಯನ್ನು ಸಿಎಂ ಸಿದ್ಧರಾಮಯ್ಯ ನೀಡಿದರು. ಕಾನೂನು ಸುವ್ಯವಸ್ಥೆ ಸುರಕ್ಷಿತವಾಗಿದ್ದರೆ ಅಭಿವೃದ್ಧಿ, ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಸಾಧ್ಯ. ಇವೆಲ್ಲದರಿಂದ ತಲಾ ಆದಾಯ, ಜಿಡಿಪಿ ಬೆಳವಣಿಗೆ ಆಗುತ್ತದೆ. ನಮ್ಮ ಸಮಾಜ ಜಾತಿ ವ್ಯವಸ್ಥೆಯಿಂದಾಗಿ ಅಸಮಾನತೆಯಿಂದ ಕೂಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ನಿಮ್ಮ ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿದರೆ ನಿಮ್ಮ ಕೆಳಗಿನ‌ಅಧಿಕಾರಿಗಳು‌ ಇನ್ನಷ್ಡು…

Read More

ಬೆಂಗಳೂರು: ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ ಎಂದು ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕೃತಕ ಬುದ್ದಿಮತ್ತೆ ಬಳಸಿ. ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಡ್ರಗ್ಸ್ ಪೂರ್ತಿ ನಿಂತಿಲ್ಲ ಏಕೆ? ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು?/ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರತ್ತೆ. ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಪ್ರಶ್ನಿಸಿದರು. ನಿಮಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ? ಈ ಬಗ್ಗೆ ರೌಡಿಗಳಿಗೆ…

Read More

ಧಾರವಾಡ: ರಾಜ್ಯದಲ್ಲಿ ಶ್ರೀರಾಮಸೇನೆಯಿಂದ ಲವ್ ಜಿಹಾದ್ ತಡೆಗೆ ಅಭಿಯಾನ ಆರಂಭಿಸಲಾಗಿದೆ. ಇದರ ಸಲುವಾಗಿ ಶ್ರೀರಾಮಸೇನೆಯಿಂದ ಸಹಾಯವಾಣಿ ಕೂಡ ಆರಂಭಿಸಲಾಗಿದ್ದು, ಅದಕ್ಕೆ ಹೆಚ್ಚು ಬೆದರಿಕೆ ಕರೆಗಳೇ ಬರುತ್ತಿರೋದಾಗಿ ತಿಳಿದು ಬಂದಿದೆ. ಧಾರವಾಡ ಶ್ರೀರಾಮಸೇನಾ ಕರ್ನಾಟಕ ಕೇಂದ್ರದಿಂದ ಲವ್ ಜಿಹಾದ್ ಗೆ ತಡೆ ನೀಡುವ ಸಲುವಾಗಿ ಸಹಾಯವಾಣಿ ಆರಂಭಿಸಲಾಗಿದೆ. ಲವ್ಜಿಹಾದ್ ಸಂಬಂಧ 9090443444ಗೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದೆ. ಈ ಸಹಾಯವಾಣಿ ಸಂಖ್ಯೆ ಆರಂಭಿಸಿದ ನಂತ್ರ ಮೊದಲ ದಿನವೇ ಅಭೂತಪೂರ್ವ ಸ್ಪಂದನೆ ದೊರೆತಿದೆ. 148 ಕರೆಗಳನ್ನು ಸ್ವೀಕರಿಸಲಾಗಿದೆ. ಅವುಗಳಲ್ಲಿ ತಾಯಂದಿರು 37 ಕರೆಗಳನ್ನು ಮಾಡಿದ್ರೇ, ಪ್ರೋತ್ಸಾಹಕ ಕರೆಯಾಗಿ 42 ಸ್ವೀಕರಿಸಲಾಗಿದೆ. ಇನ್ನೂ ಲವ್ ಜಿಹಾದ್ ಸಂತ್ರಸ್ತರ ಕರೆಗಳು 52 ಬಂದಿದೆ. ಬೆದರಿಕೆ ಕರೆಗಳು 170ಕ್ಕೂ ಹೆಚ್ಚು ಬಂದಿರೋದಾಗಿ ಶ್ರೀರಾಮ ಸೇನೆಯ ಮುಖಂಡ ಗಂಗಾಧರ ಕುಲಕರ್ಣಿ ಮಾಹಿತಿ ನೀಡಿದ್ದಾರೆ. https://kannadanewsnow.com/kannada/from-now-on-it-will-be-mandatory-for-sp-dcp-igs-to-visit-each-police-station-and-conduct-inspections-cm/ https://kannadanewsnow.com/kannada/assam-flood-situation-worsens-24-50-lakh-people-affected-in-30-districts/

Read More

ಆಗಿನ ಕಾಲದಲ್ಲಿ ಮಂತ್ರಗಳನ್ನು ಹೇಳಿದರೆ ಮಳೆಯೇ ಬರುತ್ತಿತ್ತು. ಮಂತ್ರಗಳಿಗೆ ಈ ರೀತಿ ಕೇಳಿದ್ದನ್ನು ಕೊಡುವ ಅಪಾರವಾದ ಶಕ್ತಿ ಇತ್ತು. ಈ ಮಂತ್ರ ಶಕ್ತಿ ಪ್ರಯೋಗದಿಂದ ಮಕ್ಕಳನ್ನು ಪಡೆದವರು, ಸಾಕ್ಷಾತ್ ಭಗವಂತನನ್ನೇ ಧರೆಗಿಳಿಸಿದ ತಪಸ್ವಿಗಳು, ಯುದ್ಧಗಳಲ್ಲಿ ಬಾಣ ಬಿಡುವ ಮುನ್ನ ಮಂತ್ರಗಳನ್ನು ಹೇಳಿ ಶತ್ರುಗಳನ್ನು ಸಂಹರಿಸಿದವರು ಇವರೆಲ್ಲರ ಕಥೆಗಳನ್ನು ಕೇಳಿದ್ದೇವೆ ಪುರಾತನ ಕಾಲದಲ್ಲಿ ಮಾತ್ರವಲ್ಲದೆ ಈಗಲೂ ಕೂಡ ಮಂತ್ರಗಳಿಗೆ ಅಷ್ಟೇ ಶಕ್ತಿ ಇದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ…

Read More

ಮಂಡ್ಯ: ಜಿಲ್ಲೆಯಲ್ಲಿ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸತತ 7 ಗಂಟೆಗಳ ಕಾಲ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಿದರು. ಇಂದಿನ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು ಬರೋಬ್ಬರಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸ್ವೀಕಾರಗೊಂಡಿವೆ. ಇಂದಿನ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ದರ್ಶನದ ಬಳಿಕ ಮಾತನಾಡಿ, ಜನತಾ ದರ್ಶನದಲ್ಲಿ 3 ಸಾವಿರಕ್ಕೂ ಹೆಚ್ಚು ಅರ್ಜಿ ಬಂದಿವೆ. ನಾನೇ ಖುದ್ದು ನಿರಂತರವಾಗಿ 7 ಗಂಟೆಗಳ ಕಾಲ ಜನರ ಆಹ್ವಾಲು ಸ್ವೀಕಾರ ಮಾಡಿದ್ದೇನೆ. ಹೆಚ್ಚಿನ ರೀತಿಯಲ್ಲಿ ಕಂದಾಯ ಇಲಾಖೆ ಸಂಬಂಧಿಸಿದ ಅರ್ಜಿ ಬಂದಿವೆ. ನಿವೇಶನ, ಮನೆ ಇಲ್ಲ ಅಂತ ಅರ್ಜಿ ಬಂದಿದೆ‌. ಹಲವಾರು ಯುವಕರು, ಹೆಣ್ಣು ಮಕ್ಕಳು ಉದ್ಯೋಗಕ್ಕೆ ಮನವಿ ಮಾಡಿದ್ದಾರೆ. ನಿರುದ್ಯೋಗ, ನಿವೇಶನ, ಮನೆಗಳ ಸಮಸ್ಯೆಗಳು ಇವೆ ಎಂದರು. ಆರೋಗ್ಯ ಸಮಸ್ಯೆಯ ವರ್ಗದ ಜನರು ಇದ್ದಾರೆ. ವಿಕಲಚೇತನರ ಅರ್ಜಿಯನ್ನು ಸಹ ಸ್ವೀಕಾರ ಮಾಡಿದ್ದೇನೆ. ರಸ್ತೆ ಅಭಿವೃದ್ಧಿ, ಹೈವೆ ಸಂಬಂಧ ಸಮಸ್ಯೆ ವಿರುದ್ದ ಅರ್ಜಿ ಕೊಟ್ಟಿದ್ದಾರೆ. ಸಮುದಾಯ ಭವನ…

Read More

ಬೆಂಗಳೂರು: ಕೆ ಎಸ್ ಆರ್ ಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಈಗಾಗಲೇ ಹಲವು ಬಗೆಯ ಬಸ್ಸುಗಳನ್ನು ರೋಡಿಗೆ ಇಳಿಸಲಾಗಿದೆ. ಈಗ ಪ್ರಯಾಣಕರಿಗೆ ಹೈಫೈ ಪ್ರಯಾಣದ ಟಚ್ ನೀಡೋದಕ್ಕೆ ಬಸ್ ಸಿದ್ದವಾಗಿದ್ದಾವೆ. ಆ ಬಸ್ಸುಗಳನ್ನು ಇಂದು ಸಚಿವ ರಾಮಲಿಂಗಾರೆಡ್ಡಿ ವೀಕ್ಷಿಸಿದರು. ಹೌದು.. ಹೊಸ 9600 VOLVO Multiaxle ಸೀಟರ್ ಪ್ರೋಟೋಟೈಪ್ ಬಸ್ಸನ್ನು ಇಂದು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಕೆ ಎಸ್ ಆರ್ ಟಿ ಸಿ ಕೇಂದ್ರ‌ ಕಛೇರಿಯಲ್ಲಿ ಪರಿವೀಕ್ಷಣೆ ನಡೆಸಿದರು. ಈ ಬಸ್ಸಿನ ವಿಶೇಷತೆಗಳು: *ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ ತಣಿಸುವ ಸೌಂದರ್ಯ. *ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. *ನವೀನ ತಂತ್ರಜ್ಙಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್ ನೀಡುತ್ತದೆ. *ಒಟ್ಟಾರೆ ಬಸ್ಸಿನ ಉದ್ದದಲ್ಲಿ 3.5% ಹೆಚ್ಚಳ ಇರುವುದರಿಂದ ಸಲೂನ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ…

Read More

ಚೆನ್ನೈ: ತಮಿಳುನಾಡು ಬಿಎಸ್ಪಿ ಅಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಅವರನ್ನು ಚೆನ್ನೈನ ಸೆಂಬಿಯಂನಲ್ಲಿರುವ ಅವರ ನಿವಾಸದ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚೆನ್ನೈ ಕಾರ್ಪೊರೇಷನ್ನ ಕೌನ್ಸಿಲರ್ ಆಗಿದ್ದ ಅವರ ಮೇಲೆ ಗುಂಪೊಂದು ಕ್ರೂರವಾಗಿ ಹಲ್ಲೆ ನಡೆಸಿತು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಪೋಲೋ ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಪೊಲೀಸರು ಕೊಲೆ ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಅಪರಾಧದಲ್ಲಿ ಭಾಗಿಯಾಗಿರುವ ಶಂಕಿತರಿಗಾಗಿ ಸಕ್ರಿಯವಾಗಿ ಶೋಧ ನಡೆಸುತ್ತಿದ್ದಾರೆ. https://kannadanewsnow.com/kannada/muda-scam-exposed-by-those-who-were-eyeing-cms-chair-hdk/ https://kannadanewsnow.com/kannada/good-news-for-our-metro-passengers-15-trains-to-run-on-this-route-from-tomorrow/

Read More