Author: kannadanewsnow09

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64ನೇ ಸಭೆಯು ಒಟ್ಟು ₹9,823.31 ಕೋಟಿ ಬಂಡವಾಳ ಹೂಡಿಕೆಯ ಒಂಬತ್ತು ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಿದೆ. ಇದರಿಂದ 5,605 ಉದ್ಯೋಗಗಳು ಸೃಷ್ಟಿಯಾಗಲಿವೆ. ಸೋಮವಾರ ಕೃಷ್ಣಾ ದಲ್ಲಿ ನಡೆದ ಸಭೆಯಲ್ಲಿ ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಚೆಲುವರಾಯಸ್ವಾಮಿ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ ಮುಂತಾದವರು ಭಾಗವಹಿಸಿದ್ದರು. ಅನುಮೋದನೆ ಪಡೆದವುಗಳಲ್ಲಿ ಡಿ.ಎನ್.ಸೊಲ್ಯೂಷನ್ಸ್ ನ ₹998 ಕೋಟಿ (ಐಟಿಐಆರ್ , ದೇವನಹಳ್ಳಿ), ಸೈಲೆಕ್ಟ್ರಿಕ್ ಸೆಮಿಕಂಡಕ್ಟರ್ಸ್ ಮ್ಯಾನುಫ್ಯಾಕ್ಚರಿಂಗ್ ನ ₹3,425. 60 ಕೋಟಿ (ಕೋಚನಹಳ್ಳಿ ಕೈಗಾರಿಕಾ ಪ್ರದೇಶ, ಮೈಸೂರು) ಮತ್ತು ಸನ್ಸೆರಾ ಇಂಜಿನಿಯರಿಂಗ್ ಸಂಸ್ಥೆಯ ₹2150 ಕೋಟಿ (ಹಾರೋಹಳ್ಳಿ)…

Read More

ಮಂಡ್ಯ: ಜಿಲ್ಲೆಯಲ್ಲಿ ಮನಕಲಕುವ ಘಟನೆ ಎನ್ನುವಂತೆ ಮಗ ಸಾವನ್ನಪ್ಪಿರುವಂತ ಸುದ್ದಿಯನ್ನು ಕೇಳಿದಂತ ತಾಯಿ ಕೂಡ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಂಡ್ಯದ ಮೆಟ್ಕಲ್ ಗ್ರಾಮದ ಕೃಷ್ಣಮೂರ್ತಿ(20) ಎಂಬಾತ ಅಪಘಾತದಲ್ಲಿ ಸಾವನ್ನಪ್ಪಿದ್ದನು. ಈ ವಿಷಯ ತಿಳಿದಂತ ಆತನ ತಾಯಿ ಮಹದೇವಮ್ಮ ಕುಸಿದು ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಡಿ.21ರಂದು ಈ ಘಟನೆ ನಡೆದಿದೆ. ಎರಡು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದಂತ ಕೃಷ್ಣಮೂರ್ತಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದನು. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದನು. ಈ ವಿಷಯನ್ನು ಗ್ರಾಮಸ್ಥರು ಆತನ ತಾಯಿ ಮಹದೇವಮ್ಮಗೆ ತಿಳಿಸಿದ್ದರು. ಈ ವಿಷಯ ತಿಳಿದು ಆಘಾತಗೊಂಡ ಅವರು ಸಾವನ್ನಪ್ಪಿದ್ದಾರೆ. https://kannadanewsnow.com/kannada/e-khata-to-be-disposed-of-in-bbmp-limits-in-a-time-bound-manner-tushar-giri-nath-khadak/ https://kannadanewsnow.com/kannada/breaking-kalburgi-tragedy-woman-seriously-injured-after-coming-in-contact-with-electric-wire-while-boarding-bus/

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಇ-ಖಾತಾ ಪಡೆಯುವ ಸಲುವಾಗಿ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆಯಿಂದ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಂದ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಸೂಚನೆ ನೀಡಿದರು. ಕಂದಯಾ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ಮಾತನಾಡಿ, ಇ-ಖಾತಾ ನೀಡುವ ವಿಚಾರವಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂತಿಮ ಇ-ಖಾತಾ ಪಡೆಯಲು ಸುಮಾರು 67 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 61 ಸಾವಿರಕ್ಕೂ ಹೆಚ್ಚು ಇ-ಖಾತಾಗಳನ್ನು ವಿತರಿಸಲಾಗಿದೆ. ಪ್ರತಿನಿತ್ಯ ಬರುವ ಅರ್ಜಿಗಳನ್ನು ನಿಗದಿತ ಸಮಯದೊಳಗಾಗಿ ವಿಲೇವಾರಿ ಮಾಡಿ ನಾಗರೀಕರಿಗೆ ಇ-ಖಾತ ಸಿಗುವಂತೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಆಸ್ತಿ ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮವಹಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು…

Read More

ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆಯ ವೀಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌ ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರಿಂದ ಧೈರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು…

Read More

ನವದೆಹಲಿ: ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾ ಪ್ರಯೋಜನಗಳನ್ನು ತಪ್ಪಾಗಿ ಪಡೆದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಮೀಸಲಾತಿ ಪ್ರಯೋಜನಗಳನ್ನು ಪಡೆಯಲು 2022 ರ ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಗೆ ಸಲ್ಲಿಸಿದ ಅರ್ಜಿಯಲ್ಲಿ ಖೇಡ್ಕರ್ ಮಾಹಿತಿಯನ್ನು ತಪ್ಪಾಗಿ ನಿರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. https://kannadanewsnow.com/kannada/legal-battle-against-bjp-mlc-ct-ravi-minister-lakshmi-hebbalkar/ https://kannadanewsnow.com/kannada/breaking-kalburgi-tragedy-woman-seriously-injured-after-coming-in-contact-with-electric-wire-while-boarding-bus/

Read More

ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು. ‌ ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ.‌ ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು. ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವರು ಕಿಡಿ ಕಾರಿದರು. ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ…

Read More

ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ರಾಜ್ಯಸಭೆಯಲ್ಲಿನ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಇವರು ವಿಧಾನಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಇದು ರಾಜ್ಯಸಭೆಯಲ್ಲಿ ಪ್ರಾರಂಭವಾದದ್ದು. ಈ ವಿಷಯ ಆ ಸದನಕ್ಕೆ ಸಂಬಂಧಪಟ್ಟ ವಿಷಯ. ಅಮಿತ್ ಶಾ ಅವರು ವಿಧಾನ ಪರಿಷತ್ ಸದಸ್ಯರಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು. ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆಗೆ ವಿಶೇಷವಾದ ಅವಕಾಶ ಕೊಡುತ್ತೇವೆ ಎಂದು ಡಂಗೂರ ಹೊಡೆದರು. ನಿನ್ನೆಯೂ ಒಬ್ಬ ಹೆಣ್ಣುಮಗಳು ಬಳ್ಳಾರಿಯಲ್ಲಿ ಮಗುವಿಗೆ ಜನ್ಮ ಕೊಡುವಾಗ ತೀರಿಕೊಂಡಿದ್ದಾಳೆ. ಪ್ರತಿನಿತ್ಯ ಈ ಸಾವುಗಳು ಸಂಭವಿಸುತ್ತಿವೆ. ಇದ್ಯಾವುದರ ಬಗ್ಗೆ ರಾಜ್ಯ ಸರಕಾರಕ್ಕೆ ಕಿಂಚಿತ್ತೂ ಚಿಂತೆ ಇಲ್ಲ ಎಂದು ಕೇಂದ್ರ ಸಚಿವರು…

Read More

ಹಾಸನ: ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ‌.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ *lಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ. ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ ಗೊತ್ತಿದೆ. ಸಿಡಿ ಬಿಟ್ರಲ್ಲಾ, ಅದೇ ತಾನೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ? ಅದು ಬಿಟ್ಟು ಹಾಸನ ಜಿಲ್ಲೆಗೆ ಅವರು ಏನು ಕೊಟ್ಟಿದ್ದಾರೆ? ಇವತ್ತು ಹಾಸನ ಜಿಲ್ಲೆ ಅಭಿವೃದ್ಧಿ ಕಂಡಿದ್ದರೆ ದೇವೇಗೌಡರು, ರೇವಣ್ಣ ಹಾಗೂ ನಾನು ಮುಖ್ಯಮಂತ್ರಿ ಇದ್ದಾಗ ಆಗಿದ್ದು. ನಾನು ನನ್ನದೇ ಆದಂತಹ ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಇವರೇನು ಕೊಟ್ಟಿದ್ದಾರೆ, ಹಾಸನದ ಫ್ಲೈ ಓವರ್ ರೆಡಿ ಮಾಡಲು ಆಗಲಿಲ್ಲ ಇವರ ಯೋಗ್ಯತೆಗೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ನಾವೇನಾದರೂ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿ ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದರೆ ತೋರಿಸಬಹುದಿತ್ತು. ಅವರು ಸಾರ್ವಜನಿಕರ ಆಸ್ತಿ, ಸರ್ಕಾರದ…

Read More

ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 12 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕ: 21-12-2024 ರಂದು ಧಾರವಾಡ ಜಿಲ್ಲಾ ವೆಬ್ ಸೈಟ್ http://dharwad.nic.in ನಲ್ಲಿ ಪ್ರಕಟಿಸಲಾಗುವುದು. ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ ದಿನಾಂಕ: 07-01-2025 ರಂದು ಬೆಳಿಗ್ಗೆ 10:30 ಗಂಟೆಗೆ “ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ, ನೂತನ ಸಭಾ ಭವನ” ಇಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾಧಿಕಾರಿಯವರ ಕಛೇರಿಯ ದೂರವಾಣಿ ಸಂಖ್ಯೆ: 0836-2233880, 2233840 ನೇದ್ದಕ್ಕೆ ಕರೆ ಮಾಡಿ ಸಿಬ್ಬಂದಿ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು…

Read More

ಕೋಲಾರ: ಬಿಪಿಎಲ್ ಕಾರ್ಡ್ ದಾರರು ಪಡಿತರ ಪಡೆಯೋದಕ್ಕೆ ಕುಟುಂಬದ ಎಲ್ಲರ ವೇತನ ಪ್ರಮಾಣ ಪತ್ರ ನೀಡುವುದು ಕಡ್ಡಾಯವೆಂದೇ ಹೇಳಲಾಗುತ್ತಿತ್ತು. ಆದರೇ ಎಲ್ಲರ ವೇತನ ಪ್ರಮಾಣಪತ್ರ ಕಡ್ಡಾಯವಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿದಂತ ಅವರು ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಇಲಾಖೆಯಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರಿ ನೌಕರರು ಕಾರ್ಡ್ ಪಡೆದಿದ್ದರೇ ಅಂತವರ ರೇಷನ್ ಕಾರ್ಡ್ ರದ್ದುಗೊಳಿಸಲಾಗುವುದಾಗಿ ತಿಳಿಸಿದರು. ಅಕ್ರಮ ಪಡಿತರ ಚೀಟಿ ಪರಿಶೀಲನೆಯಿಂದಾಗಿ ರೇಷನ್ ವಿತರಣೆ ಸೇರಿದಂತೆ ವಿವಿಧ ಕೆಲಸಗಳಲ್ಲಿ ಸ್ವಲ್ಪ ಏರುಪೇರಾಗಿತ್ತು. ಈಗ ಒಂದು ಹಂತಕ್ಕೆ ಬಂದಿದೆ. ಇನ್ಮುಂದೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬುದಾಗಿ ಹೇಳಿದರು. ಬಿಪಿಎಲ್ ಕಾರ್ಡ್ ಹೊಂದಿರೋರು ಸರ್ಕಾರಿ ನೌಕರರು ಆಗಿರಬಾರದು. ವಾರ್ಷಿಕ ಆದಾಯ ಮಿತಿ 1.20 ಲಕ್ಷ ಮೀರಬಾರದು. ಇಂತವರ ಯಾವುದೇ ರೇಷನ್ ಕಾರ್ಡ್ ರದ್ದುಗೊಳಿಸುವುದಿಲ್ಲ ಎಂಬುದಾಗಿ ತಿಳಿಸಿದರು.

Read More