Author: kannadanewsnow09

ಯುಕೆ: ಕೈರ್ ಸ್ಟಾರ್ಮರ್ ಅವರನ್ನು ಯುಕೆ ಪ್ರಧಾನಿಯಾಗಿ ಕಿಂಗ್ ಚಾರ್ಲ್ಸ್ ಔಪಚಾರಿಕವಾಗಿ ನೇಮಕ ಮಾಡಿದ್ದಾರೆ. ಈ ಮೂಲಕ ಬ್ರಿಟನ್ ನೂತನ ಪ್ರಧಾನಿಯಾಗಿ ಕೈರ್ ಸ್ಟಾರ್ಮರ್ ನೇಮಕಗೊಂಡಿದ್ದಾರೆ. ರಾಜನು ಇಂದು ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಸಂಸದರನ್ನು ಸಭಿಕರಲ್ಲಿ ಬರಮಾಡಿಕೊಂಡರು ಮತ್ತು ಹೊಸ ಆಡಳಿತವನ್ನು ರಚಿಸುವಂತೆ ವಿನಂತಿಸಿದರು. ಸರ್ ಕೀರ್ ಅವರು ಮಹಾರಾಜರ ಪ್ರಸ್ತಾಪವನ್ನು ಒಪ್ಪಿಕೊಂಡರು ಮತ್ತು ಅವರನ್ನು ಪ್ರಧಾನ ಮಂತ್ರಿ ಮತ್ತು ಖಜಾನೆಯ ಮೊದಲ ಲಾರ್ಡ್ ಆಗಿ ನೇಮಿಸಲಾಯಿತು. https://twitter.com/RoyalFamily/status/1809187240259526724 ಎಡಪಂಥೀಯ ಲೇಬರ್ ಪಕ್ಷದ ವಿರುದ್ಧ ಸೋಲನ್ನು ಒಪ್ಪಿಕೊಂಡಿರುವ ನಿರ್ಗಮಿತ ಪ್ರಧಾನಿ ರಿಷಿ ಸುನಕ್, ಬ್ರಿಟಿಷ್ ಜನರು “ಗಂಭೀರವಾದ ತೀರ್ಪನ್ನು ನೀಡಿದ್ದಾರೆ” ಎಂದು ಶುಕ್ರವಾರ ಹೇಳಿದ್ದಾರೆ. ಕೈರ್ ಸ್ಟಾರ್ಮರ್ ನೇತೃತ್ವದ ಪಕ್ಷವು 14 ವರ್ಷಗಳಲ್ಲಿ ಮೊದಲ ಬಾರಿಗೆ ಕನ್ಸರ್ವೇಟಿವ್ಗಳನ್ನು ಬದಲಿಸುತ್ತಿದೆ. ಮುಂದಿನ ಐದು ವರ್ಷಗಳ ಕಾಲ ಸಂಸತ್ತಿನಲ್ಲಿ ಕುಳಿತುಕೊಳ್ಳುವ 650 ಸಂಸದರನ್ನು ಆಯ್ಕೆ ಮಾಡಲು ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಬ್ರಿಟೀಷರು ಗುರುವಾರ ಮತ ಚಲಾಯಿಸಿದರು. ಹೆಚ್ಚಿನ ಸ್ಥಾನಗಳನ್ನು ಎಣಿಕೆ ಮಾಡಲಾಗಿದ್ದು, ಸ್ಟಾರ್ಮರ್ ನೇತೃತ್ವದ…

Read More

ಮೈಸೂರು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಬಯಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರವಿದೆ. ಸೀಡಿ ಫ್ಯಾಕ್ಟರಿ ಬಂದ್ ಆಯಿತು. ಈಗ ಮುಡಾ ಫ್ಯಾಕ್ಟರಿ ಶುರುವಾಗಿದೆ ಎಂದು ಯಾರ ಹೆಸರನ್ನೂ ಹೇಳದೇ ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು. ಬಿಜೆಪಿ ಸ್ನೇಹಿತರು ಈ ಬಗ್ಗೆ ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೊಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ…

Read More

ಬೆಂಗಳೂರುಛ “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು. ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಉತ್ತರ ನೀಡಿದ ಶಿವಕುಮಾರ್ ಅವರು, “ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದರು. ಸಿಡಿ ಫ್ಯಾಕ್ಟರಿ ನಂತರ ಈಗ ಮೂಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ “ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ” ಎಂದು ತಿರುಗೇಟು ನೀಡಿದರು. ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ…

Read More

ಬೆಂಗಳೂರು: 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಸೋದಕ್ಕೆ ಕೆಪಿಎಸ್ಸಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದಿನಾಂಕ 25-08-2024ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ಲೋಕಸೇಪಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಅಂತ ತಿಳಿಸಿದ್ದಾರೆ. ದಿನಾಂಕ 25-08-2024ರ ಭಾನುವಾರ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಸಲಾಗುತ್ತಿದೆ. ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/minister-laxmi-hebbalkar-gives-good-news-to-anganwadi-workers/ https://kannadanewsnow.com/kannada/chief-minister-siddaramaiah-to-chair-cabinet-meeting-on-july-15/

Read More

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯಸಚಿವ ಸಂಪುಟ ಸಭೆ ನಡೆದಿತ್ತು. ಈ ಬೆನ್ನಲ್ಲೇ ಜುಲೈ.15ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ರಾಜ್ಯ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ ದಿನಾಂಕ 15-07-2024ರ ಸೋಮವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 12ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಅಂತ ತಿಳಿಸಿದ್ದಾರೆ. ಹೀಗಿದೆ ಗುರುವಾರ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯ ಹೈಲೈಟ್ಸ್ 1.ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಸಂಖ್ಯೆ: ಹಿಂವಕ 114 ಬಿಸಿಎ 2022 (ಭಾ-1) ದಿನಾಂಕ: 04.11.2023 ರಲ್ಲಿ ಜಾರಿಗೊಳಿಸಿರುವ 03 ಶಿಫಾರಸ್ಸುಗಳ ಪೈಕಿ “To bring all urban and Local Bodies Election wing under the…

Read More

ಬೆಂಗಳೂರು: ಉಪ ನೋಂದಣಾಧಿಕಾರಿಗಳು ಹಾಗೂ ಹಿರಿಯ ನೋಂದಣಾಧಿಕಾರಿಗಳು ಮತ್ತು ಪ್ರಥಮ ದರ್ಜೆ ಸಹಾಯಕರ ವರ್ಗಾವಣೆಗಳನ್ನು ಕೌನ್ಸೆಲಿಂಗ್ ಮೂಲಕ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕಂದಾಯ ಇಲಾಖೆಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ವರ್ಗಾವಣೆಗಳನ್ನು ಪಾರದರ್ಶಕವಾಗಿ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೊಳಿಸುವ ಬಗ್ಗೆ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಹೀಗಾಗಿ ಕಳೆದ 8 ವರ್ಷಗಳಲ್ಲಿ 5 ವರ್ಷ ಬೆಂಗಳೂರು ಸುತ್ತಮುತ್ತಲಿನ ಕಛೇರಿಗಳಲ್ಲಿ ಸೇವೆ ಸಲ್ಲಿಸಿರುವ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಛೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳ ವರ್ಗಾವಣೆಗಳನ್ನು ಮತ್ತು ಬಿ.ಎಮ್.ಆರ್.ಡಿ.ಎ ವ್ಯಾಪ್ತಿಯ ಹೊರಗೆ 10 ನಗರ ಸಭೆಗಳ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಕಳೆದ 5 ವರ್ಷಗಳಲ್ಲಿ 4 ಅಥವಾ ಹೆಚ್ಚು ವರ್ಷಗಳ ಸೇವೆ ಸಲ್ಲಿಸಿರುವ ಎಲ್ಲಾ ಉಪ ನೋಂದಣಾಧಿಕಾರಿಗಳು, ಹಿರಿಯ…

Read More

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ. ಕುಂಬ್ಳೆ ಶ್ರೀಧರ ರಾವ್ ಪರಿಚಯ 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್‌ರವರು 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಾಗಿದ್ದರು. ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ್ದ ಇವರು ಧರ್ಮಸ್ಥಳ ಮೇಳವೊಂದರಲ್ಲಿಯೇ ನಿರಂತರ 50 ವರ್ಷಗಳ ಸೇವೆ ಮಾಡಿದ್ದಾರೆ. ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿರುವ ಶ್ರೀಧರ ರಾವ್‌ರವರು ಪುರುಷ ವೇಷದಲ್ಲಿಯೂ ಸೈ ಅನ್ನಿಸಿಕೊಂಡಿದ್ದರು. ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅನ್ನು ದೇವಿ, ಈಶ್ವರ, ಸೀತಾ…

Read More

ನವದೆಹಲಿ: ದೇಶದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ನಿರಾಕರಿಸಿದ ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಪರಿಶೀಲಿಸಲು ಭಾರತದ ಸುಪ್ರೀಂ ಕೋರ್ಟ್ ಸಜ್ಜಾಗಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಪೀಠವು ಜುಲೈ 10 ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ. ಕಳೆದ ವರ್ಷ ನವೆಂಬರ್ನಲ್ಲಿ, ವಿವಾಹ ಸಮಾನತೆಯ ಹಕ್ಕುಗಳನ್ನು ಪ್ರತಿಪಾದಿಸುವ ಅರ್ಜಿದಾರರು ಸಲಿಂಗ ದಂಪತಿಗಳಿಗೆ ಯಾವುದೇ ಕಾನೂನು ಮಾನ್ಯತೆಯನ್ನು ನಿರಾಕರಿಸಿದ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ತೀರ್ಪಿನ ವಿರುದ್ಧ ಸಲ್ಲಿಸಲಾದ ಪರಿಶೀಲನಾ ಅರ್ಜಿಯ ಮುಕ್ತ ನ್ಯಾಯಾಲಯದ ವಿಚಾರಣೆಯನ್ನು ಕೋರಿದ್ದರು. ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ಈ ವಿಷಯವನ್ನು ಎತ್ತಿದರು. ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಬಾರದು ಎಂದು ರೋಹ್ಟಗಿ ಒತ್ತಿ ಹೇಳಿದರು ಮತ್ತು ಮುಕ್ತ ನ್ಯಾಯಾಲಯದ ವಿಚಾರಣೆಗೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್,…

Read More

ಯುಕೆ: ಎಡಪಂಥೀಯ ಲೇಬರ್ ಪಕ್ಷದ ವಿರುದ್ಧ ಸೋಲನ್ನು ಒಪ್ಪಿಕೊಂಡಿರುವ ಪ್ರಧಾನಿ ರಿಷಿ ಸುನಕ್, ಬ್ರಿಟಿಷ್ ಜನರು “ಗಂಭೀರವಾದ ತೀರ್ಪನ್ನು ನೀಡಿದ್ದಾರೆ” ಎಂದು ಶುಕ್ರವಾರ ಹೇಳಿದ್ದಾರೆ. ಅಲ್ಲದೇ ಬ್ರಿಟನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕೈರ್ ಸ್ಟಾರ್ಮರ್ ನೇತೃತ್ವದ ಪಕ್ಷವು ಈಗ 14 ವರ್ಷಗಳಲ್ಲಿ ಮೊದಲ ಬಾರಿಗೆ ಕನ್ಸರ್ವೇಟಿವ್ಗಳನ್ನು ಬದಲಿಸಲು ಸರ್ಕಾರವನ್ನು ರಚಿಸಲಿದೆ. ಮುಂದಿನ ಐದು ವರ್ಷಗಳ ಕಾಲ ಸಂಸತ್ತಿನಲ್ಲಿ ಕುಳಿತುಕೊಳ್ಳುವ 650 ಸಂಸದರನ್ನು ಆಯ್ಕೆ ಮಾಡಲು ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಬ್ರಿಟೀಷರು ಗುರುವಾರ ಮತ ಚಲಾಯಿಸಿದರು. ಹೆಚ್ಚಿನ ಸ್ಥಾನಗಳನ್ನು ಎಣಿಕೆ ಮಾಡಲಾಗಿದ್ದು, ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷವು ಸಂಸತ್ತಿನಲ್ಲಿ ಕನಿಷ್ಠ 400 ಸ್ಥಾನಗಳನ್ನು ಗಳಿಸಿದೆ. ನಿರ್ಗಮಿತ ಯುಕೆ ಪ್ರಧಾನಿ ರಿಷಿ ಸುನಕ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶುಭ ಹಾರೈಸಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ಯುಕೆ ಮತ್ತು ಭಾರತದ ನಡುವಿನ ಸಂಬಂಧಗಳು ಗಾಢವಾಗಿವೆ ಎಂದು ಹೇಳಿದರು. “ಯುಕೆಯ ನಿಮ್ಮ ಪ್ರಶಂಸನೀಯ ನಾಯಕತ್ವಕ್ಕಾಗಿ ಮತ್ತು ನಿಮ್ಮ ಅಧಿಕಾರಾವಧಿಯಲ್ಲಿ ಭಾರತ ಮತ್ತು ಯುಕೆ…

Read More

ಶಿವಮೊಗ್ಗ : ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಆನ್‍ಲೈನ್ https://agnipathvayu.cdac.in ರಲ್ಲಿ ನೊಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293/ 9108235132 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/cm-siddaramaiah-gives-kannada-grammar-lesson-to-students-applause-from-children/ https://kannadanewsnow.com/kannada/beware-of-bangaloreans-from-now-on-if-you-throw-garbage-everywhere-you-will-be-fined-heavily/

Read More