Author: kannadanewsnow09

ಬೆಂಗಳೂರು: “ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು. ‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ಭಾನುವಾರ ಮುಂಜಾನೆ ಹೆಜ್ಜೆ ಹಾಕಿದ ಡಿಸಿಎಂ ಅವರು ಜನರ ಅಹವಾಲುಗಳನ್ನು ಆಲಿಸಿದರು. ಪಾಲಿಕೆ ಆಯುಕ್ತರು ಹಾಗೂ ಜೆ.ಪಿ‌.ಪಾರ್ಕ್ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳಿಂದ ಉದ್ಯಾನದಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಟಾಯ್ ಟ್ರೈನ್, ಮಕ್ಕಳ ಆಟಿಕೆಗಳು ಸೇರಿದಂತೆ ಮೂಲಸೌಕರ್ಯಗಳ ಕೊರತೆ ಏಕೆ ಉಂಟಾಗಿದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. ಪ್ರತಿದಿನವೂ ಎಲ್ಲಾ ಶೌಚಾಲಯಗಳಿಗೂ ಬೀಗ ಹಾಕಲಾಗಿರುತ್ತದೆ ಎನ್ನುವ ದೂರಿಗೆ, “ಇನ್ನೆರಡು ದಿನದಲ್ಲಿ ಈ ಸಮಸ್ಯೆ ಬಗೆಹರಿಯಲೇ ಬೇಕು” ಎಂದು ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರಿಗೆ ಸೂಚನೆ ನೀಡಿದರು. ಜಿಮ್ ಪರಿಕರಗಳು ಹಾಳಾಗಿರುವುದನ್ನು ನೋಡಿದ…

Read More

ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ ಖರ್ಗೆಯವರು ಆರೆಸ್ಸೆಸ್ ಚಟುವಟಿಕೆ ನಿಷೇಧದ ಕುರಿತು ಇಷ್ಟೊಂದು ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರೆ, ಇದು ಅವರ ಮೂರ್ಖತನದ ಪ್ರದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ ಚಟುವಟಿಕೆ ನಿಷೇಧಕ್ಕೆ ಸಂಬಂಧಿಸಿದ ಪ್ರಿಯಾಂಕ್ ಖರ್ಗೆಯವರ ಪತ್ರದ ಕುರಿತ ಪ್ರಶ್ನೆಗೆ ಉತ್ತರಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆ, ಕಾರ್ಯ ಚಟುವಟಿಕೆ ಕುರಿತು ಮಾಹಿತಿ ಕೊರತೆ ಇರುವವರು ಕೇವಲ ತಮ್ಮ ಪ್ರಚಾರಕ್ಕಾಗಿ ಚಟದಿಂದ ಮಾತನಾಡುವವರು ಇಂಥ ಹೇಳಿಕೆ ಕೊಡಲು ಸಾಧ್ಯ ಎಂದು ನುಡಿದರು. ಹಿಂದೆ ಎರಡು ಮೂರು ಬಾರಿ ಇದೇರೀತಿ ಆರೆಸ್ಸೆಸ್ ಅನ್ನು ಕಾಂಗ್ರೆಸ್ ಪಕ್ಷ ನಿಷೇಧಿಸಿತ್ತು. ಅದೇ ಕಾಂಗ್ರೆಸ್ ಪಕ್ಷವು ನಿಷೇಧವನ್ನು ಹಿಂದಕ್ಕೆ ಪಡೆದ ಉದಾಹರಣೆ ದೇಶದ ಮುಂದೆ ಇದೆ ಎಂದು ವಿವರಿಸಿದರು. ಮತ್ತೊಮ್ಮೆ ಆರೆಸ್ಸೆಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ತಿಳಿಸಿದರು. ಭಾರತ-…

Read More

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಮಾಡಿದ ಅಪಮಾನವು ಮುನಿರತ್ನ ಅವರಿಗೆ ಮಾಡಿದ ಅಪಮಾನವಲ್ಲ; ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ಬರುವಂಥ ದಿನದಲ್ಲಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಕರಿಟೋಪಿಯ ಬೆಲೆ ಏನೆಂದು ತೋರಿಸುತ್ತೇವೆ. ಒಬ್ಬ ಉಪ ಮುಖ್ಯಮಂತ್ರಿ, ಜವಾಬ್ದಾರಿಯುತ ಸಚಿವರಾಗಿ ಸಾರ್ವಜನಿಕ ಸ್ಥಳದಲ್ಲಿ ಹಾಗೂ ಒಬ್ಬ ಜನಪ್ರತಿನಿಧಿ ಬಗ್ಗೆ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಸೌಜನ್ಯವೂ ಡಿ.ಕೆ.ಶಿವಕುಮಾರ್ ಅವರಿಗೆ ಇಲ್ಲ ಎಂದು ಆಕ್ಷೇಪಿಸಿದರು. ಅಧಿಕಾರ ಎಂಬುದು ಶಾಶ್ವತ ಅಲ್ಲ; ಡಿ.ಕೆ.ಶಿವಕುಮಾರ್ ಅವರ ಮಾತಿನ ನಡವಳಿಕೆ, ಮಾತಿನ ಧಾಟಿ, ಒಬ್ಬ ಚುನಾಯಿತ ಪ್ರತಿನಿಧಿಗೆ ಮಾಡಿದ ಅಪಮಾನದ ವಿರುದ್ಧ ಸಾರ್ವಜನಿಕರು ಮಾತನಾಡುತ್ತಿದ್ದಾರೆ ಎಂದು ನುಡಿದರು. ಈಚೆಗೆ ಮೈಸೂರಿನಲ್ಲಿ ಮುಖ್ಯಮಂತ್ರಿಗಳ ಶಕ್ತಿ ಪ್ರದರ್ಶನ ಏರ್ಪಡಿಸಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಹೇಳದೇ ಕೇಳದೇ ಸಿಡಿದು, ದೆಹಲಿಗೆ ದೌಡಾಯಿಸಿದ್ದನ್ನು ತಾವೇ…

Read More

ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಮನೆಯೊಂದರ ಮೇಲೆ ಕ್ರೇನ್ ಟವರ್ ಬಿದ್ದು ಓರ್ವನಿಗೆ ಗಂಭೀರ ಗಾಯವಾಗಿದ್ದರೇ, ಐವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಕೆ ಆರ್ ಪುರಂನಲ್ಲಿ ಕ್ರೇನ್ ಟವರ್ ದಿಧೀರ್ ಕುಸಿದು ಬಿದ್ದು, ಘೋರ ದುರಂತವೊಂದು ಸಂಭವಿಸಿದೆ. ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದಂತ ಆರು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಕ್ರೇನ್ ರಿಪೇರಿ ಮಾಡಲು ಬಳಸುವ ಲ್ಯಾಡರ್ ಗಳು ಕುಸಿದು ಈ ದುರಂತ ಸಂಭವಿಸಿದೆ. ಇಂದು ಮಧ್ಯಾಹ್ನ ಕೆ ಆರ್ ಪುರಂನ ಮೇಡಹಳ್ಳಿ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದೆ. ಬಾಡಿಗೆ ಮನೆಯಲ್ಲಿ ನೆಲೆಸಿದ್ದಂತ ಐವರಿಗೆ ಗಾಯವಾಗಿದೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. https://kannadanewsnow.com/kannada/income-poured-into-hassanamba-temple-in-2-days-crores-of-revenue-collected/ https://kannadanewsnow.com/kannada/cabinet-post-fixed-for-sagar-constituency-mla-gopalakrishna-belur/

Read More

ಹಾಸನ: ಜಿಲ್ಲೆಯ ಪ್ರಸಿದ್ಧ ಜಾತ್ರೆಗಳಲ್ಲಿ ಹಾಸನಾಂಬೆ ದೇವಿಯ ಜಾತ್ರಾಮಹೋತ್ಸವವು ಒಂದಾಗಿದೆ. ಈ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಶುಕ್ರವಾರದ ಎರಡೇ ದಿನಗಳಲ್ಲಿ ದೇವಾಲಯಕ್ಕೆ ಕೋಟಿ ಕೋಟಿ ಆದಾಯ ಹರಿದು ಬಂದಿದೆ. ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಗುರುವಾರದಿಂದ ಆರಂಭಗೊಂಡಿದೆ. ಶುಕ್ರವಾರಕ್ಕೆ ಎರಡನೇ ದಿನವಾಗಿದ್ದು, ಭಾನುವಾರ ಬೆಳಗ್ಗೆ 8 ಗಂಟೆಯವರೆಗೆ 300 ರೂಪಾಯಿಯ ವಿಶೇಷ ದರ್ಶನದ ಆನ್ ಲೈನ್ ಟಿಕೆಟ್ 4,499 ಸೇಲ್ ಆಗಿದ್ದರೇ, ದೇವಸ್ಥಾನದ ಬಳಿಯಲ್ಲೇ 23,260 ಸೇಲ್ ಆಗಿದೆ. ಒಟ್ಟು 300 ರೂಪಾಯಿಗಳ 27,759 ಟಿಕೆಟ್ ಮಾರಾಟವಾಗಿದೆ. ಇನ್ನೂ 1000 ರೂಪಾಯಿಯ ಟಿಕೆಟ್ ಗಳು ಆನ್ ಲೈನ್ ಮೂಲಕ 3,912 ಮಾರಾಟವಾಗಿದ್ದರೇ, ಭೌತಿಕವಾಗಿ 8,484 ಮಾರಾಟವಾಗಿದ್ದಾವೆ. ಒಟ್ಟು 12,396 ಟಿಕೆಟ್ 1000 ರೂಪಾಯಿಗಳದ್ದು ಮಾರಾಟವಾಗಿದ್ದಾವೆ. ಇದಲ್ಲದೇ ಮಾರಾಟವಾದ ಲಡ್ಡು ಪ್ರಸಾದ 17,337 ಆಗಿದೆ. ಹೀಗಿದೆ ಹಾಸನಾಂಬ, ಸಿದ್ದೇಶ್ವರ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಮಾರಾಟವಾದ ಟಿಕೆಟ್ ಹಾಗೂ…

Read More

ಬೆಂಗಳೂರು: ಕರ್ನಾಟಕದ ಸರ್ಕಾರಿ ಸ್ಥಳದಲ್ಲಿ RSS ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಪರಿಶೀಲಿಸಿರುವಂತ ಅವರು, ಕೂಡಲೇ ಅಗತ್ಯ ಕ್ರಮಮವಹಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಸಂಘಟನೆ ನಿಷೇಧದ ಹೇರಲಿದ್ಯಾ ಎಂಬ ಅನುಮಾನಕ್ಕೆ ಎಡೆಮಾಡಿಕೊಟ್ಟಂತೆ ಆಗಿದೆ. ರಾಜ್ಯದಲ್ಲಿನ ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯಗೆ ಬರೆದಿರುವಂತ ಪತ್ರದಲ್ಲಿ ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡಿರುತ್ತದೆ ಎಂದಿದ್ದಾರೆ.…

Read More

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ಅವರು ಭಾನುವಾರ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ಪ್ರಸ್ತಾವಿತ ಸುರಂಗ ಮಾರ್ಗದ ರ‍್ಯಾಂಪ್ ಜಾಗವನ್ನು ಪರಿಶೀಲಿಸಿದ್ದು, ಈ ಯೋಜನೆಯಿಂದ ಲಾಲ್‌ಬಾಗ್‌ನ ಯಾವುದೇ ಭಾಗದ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುತ್ತಾರೆ. ಪರಿಶೀಲನೆ ವೇಳೆ, ಸೂರ್ಯ ಅವರು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ (GSI) ಗೆ ಈ ಯೋಜನೆಯಿಂದ 300 ದಶಲಕ್ಷ ವರ್ಷಗಳಷ್ಟು ಹಳೆಯದಾದ ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕವಾದ ಲಾಲ್‌ಬಾಗ್ ಬಂಡೆಗಳ ರಚನೆಯ ಮೇಲೆ ಉಂಟಾಗುವ ಭೂವೈಜ್ಞಾನಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ನಿರ್ದೇಶನ ನೀಡಿದರು. ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ರಚಿಸಲಾದ, ಬಿ-ಸ್ಮೈಲ್ (B-SMILE) ಅಧಿಕಾರಿಗಳು, ಪರಿಸರ ಪರಿಣಾಮ ಮೌಲ್ಯಮಾಪನ (EIA) ಕೈಗೊಳ್ಳದ ಕಾರಣ ಮತ್ತು ಸುರಂಗ ರ‍್ಯಾಂಪ್‌ಗಾಗಿ, ಉದ್ಯಾನವನದ ಭಾಗವನ್ನು ಗುರುತಿಸುವ ಮೊದಲು ಸಾರ್ವಜನಿಕರು ಮತ್ತು ಲಾಲ್‌ಬಾಗ್‌ನ ನಿಯಮಿತ ವಾಕಿಂಗ್ ಮಾಡುವವರೊಂದಿಗೆ ಸಮಾಲೋಚನೆ ನಡೆಸದೇ ಇರುವುದರ ಬಗ್ಗೆ ಸಂಸದ ಸೂರ್ಯ ಅವರು ಆಕ್ಷೇಪ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, “ಕರ್ನಾಟಕ ಸರ್ಕಾರವು ಸುರಂಗ ಮಾರ್ಗದ ನಿರ್ಗಮನ…

Read More

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ…

Read More

ಅಫ್ಘಾನಿಸ್ತಾನದ ಆಡಳಿತಾರೂಢ ತಾಲಿಬಾನ್ ಆಡಳಿತದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಭಾನುವಾರ, ಡುರಾಂಡ್ ಲೈನ್ ಅಥವಾ ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ರಾತ್ರಿಯಿಡೀ ನಡೆದ ಘರ್ಷಣೆಗಳಲ್ಲಿ 58 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ಘೋಷಿಸಿದರು.

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸದ್ದು ಕೇಳಿ ಬರುತ್ತಿದೆ. ಹಾಲಿ ಸಚಿವರಲ್ಲಿ ಕೆಲವರಿಗೆ ಗೇಟ್ ಪಾಸ್ ನೀಡಲು ಸಿಎಂ ಸಿದ್ಧರಾಮಯ್ಯ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಹೊಸಬರಿಗೆ ಅವಕಾಶವನ್ನು ನೀಡೋದಕ್ಕೆ ಲೀಸ್ಟ್ ಸಿದ್ಧವಾಗಿದೆ. ಈ ಪಟ್ಟಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹೆಸರು ಕೂಡ ಇರುವುದಾಗಿ ಹೇಳಲಾಗುತ್ತಿದೆ. ಆ ಮೂಲಕ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಫಿಕ್ಸ್ ಎನ್ನಲಾಗುತ್ತಿದೆ. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಶಾಸಕರಾಗಿ ಪ್ರಸ್ತುತ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಗೋಪಾಲಕೃಷ್ಣ ಬೇಳೂರು ಮಂತ್ರಿಯಾಗುತ್ತಾರೆ ಎನ್ನುವ ವದಂತಿ ದಟ್ಟವಾಗಿ ಹರಡಿದೆ. ಸದಾ ಮಂತ್ರಿಮಂಡಲ ವಿಸ್ತರಣೆಯಾಗಬೇಕು ಎನ್ನುವ ಸಂದರ್ಭದಲ್ಲಿ ಗೋಪಾಲಕೃಷ್ಣ ಬೇಳೂರು ಹೆಸರು ಮುನ್ನೆಲೆಗೆ ಬರುತ್ತದೆ. ಮತ್ತೆ ಹಾಗೆಯೇ ಮಾಯವಾಗಿ ಬಿಡುತ್ತದೆ. ಆದರೇ ಈ ಬಾರಿ ಗೋಪಾಲಕೃಷ್ಣ ಬೇಳೂರು ಮಂತ್ರಿಯಾಗಿಯೇ ತೀರುತ್ತಾರೆ ಎನ್ನುವ ಮಾತ ದಟ್ಟವಾಗಿ ಹರಡಿದೆ. ಎರಡು ಬಾರಿ ಬಿಜೆಪಿಯಿಂದ ಶಾಸಕರಾಗಿದ್ದಂತ ಗೋಪಾಲಕೃಷ್ಣ…

Read More