Author: kannadanewsnow09

ಶಿವಮೊಗ್ಗ: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (Karnataka Union of Working Journalists-KUWJ)” ದ 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ಘೋಷಣೆ ಆಗಿದೆ. ಶನಿವಾರದಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಚುನಾವಣೆ ಕುರಿತು ಮಾಹಿತಿ ನೀಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯಚುನಾವಣಾಧಿಕಾರಿ ಎನ್ .ರವಿಕುಮಾರ್ ಟೆಲೆಕ್ಸ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದ್ದು, ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದೇ ವೇಳಾಪಟ್ಟಿ ಹಾಗೂ ಮತದಾರರ ಕರಡು ಪ್ರತಿಯನ್ನು ಪ್ರಕಟಿಸಲಾಗುವುದು. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ.…

Read More

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಮಂಡ್ಯ : ಶರಣರ ಸಂಘಟನಾ ವೇದಿಕೆ ( ಮದ್ದೂರು ಘಟಕ ) ಹಾಗೂ ಉದ್ಯೋಗ ವಿನಿಮಯ ಕಛೇರಿ ಮಂಡ್ಯ ಅವರ ಸಹಯೋಗದೊಂದಿಗೆ ಅ.13 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶರಣರ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಂ.ಗಂಗಾಧರ್ ಹೇಳಿದರು‌. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಳೆಯ ಸೋಮವಾರದಂದು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮದ್ದೂರು ಕ್ಷೇತ್ರದ ಶಾಸಕರಾದ ಕೆ.ಎಂ.ಉದಯ್ ಅವರು ಉದ್ಘಾಟಿಸಲಿದ್ದಾರೆ ಎಂದರು. ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ, ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಟರಾಜ್, ರೈತ ಮುಖಂಡ ಅಣ್ಣೂರು ಮಹೇಂದ್ರ, ನೈದಿಲೆ ಚಂದ್ರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಪರೀಕ್ಷೆಗಳಉ ಮತ್ತು ಮೌಲ್ಯ ಮಾಪನಕ್ಕೆ ಸಂಬಂಧಿಸಿದಂತೆ ನಿಯೋಜಿತ ಸಿಬ್ಬಂದಿಗಳಿಗೆ ಅನ್ಯಕಾರ್ಯ ನಿಮಿತ್ತ ರಜೆ(OOD)ಯನ್ನು ಮಂಜೂರು ಮಾಡುವ ಬಗ್ಗೆ ಮಹತ್ವದ ಆದೇಶವನ್ನು ಸರ್ಕಾರ ಮಾಡಿದೆ. ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಗೌಪ್ಯಕಾರ್ಯಗಳಿಗೆ ನಿಯೋಜಿತರಾಗಿರುವ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯ ಉನ್ನತ ಶಿಕ್ಷಣ ಸಂಸ್ಥೆಗಳ ವಿಷಯ ತಜ್ಞರುಗಳಿಗೆ ನೀಡಲಾಗುವ ಅನ್ಯ ಕಾರ್ಯ ನಿಮಿತ್ತ (ಓಓಡಿ) ಸೌಲಭ್ಯವನ್ನು ಉಲ್ಲೇಖ(1) ರಲ್ಲಿ ನೀಡಲಾಗಿರುವ ಮಾರ್ಗಸೂಚಿಗಳನ್ವಯ ಪುತಿ ಕೇವಲ ನಾಲ್ಕು ದಿನಗಳಿಗೆ ಸೆಮಿಸ್ಟರ್‌ಗೆ ಸೀಮಿತಗೊಳಿಸಲಾಗುತ್ತಿರುವುದನ್ನು ಪರಿಷ್ಕರಿಸುವಂತೆ ಉಲ್ಲೇಖ(2) ರಲ್ಲಿ ಕೋರಲಾಗಿರುತ್ತದೆ ಎಂದಿದ್ದಾರೆ. ಅದರಂತೆ ಪರಿಶೀಲಿಸಲಾಗಿ, ಉಲ್ಲೇಖ(1)ರ ಸುತ್ತೋಲೆಯಲ್ಲಿ ಪ್ರತಿ ಸೆಮಿಸೈರ್‌ಗೆ ನಾಲ್ಕು ದಿನಗಳಿಗೆ ಮಾತ್ರ ಅನ್ಯ ಕಾರ್ಯ ನಿಮಿತ್ತ ಸೌಲಭ್ಯವನ್ನು ಸೀಮಿತಗೊಳಿಸಿ ನೀಡಲಾಗಿರುವ ನಿರ್ದೇಶನವು, ಶೈಕ್ಷಣಿಕ ಸಭೆ-ಸಮಾರಂಭ, ಶೈಕ್ಷಣಿಕ ವಿಚಾರ ಸಂಕಿರಣ-ಸಮ್ಮೇಳನ, ಕಾರ್ಯಾಗಾರಗಳು ಇತ್ಯಾದಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಿಬ್ಬಂದಿಗಳಿಗೆ ಮಾತ್ರ ಅನ್ವಯವಾಗುತ್ತಿದ್ದು, ಕರ್ನಾಟಕ…

Read More

ಬೆಂಗಳೂರು: ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಕುರಿತ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಅತ್ಯಂತ ಯಶಸ್ವಿಯಾಗಿ ಶನಿವಾರ ನಡೆಸಿತು. ಬೆಂಗಳೂರು, ಧಾರವಾಡ ಮತ್ತು ಕಲ್ಬುರ್ಗಿ ನಗರಗಳ ಒಟ್ಟು 21 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಅರ್ಜಿ ಸಲ್ಲಿಸಿದ್ದ 10,069 ಮಂದಿ ಪೈಕಿ 8,408 (ಶೇ.83.5%) ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮುಖ ಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಯಿತು. ಬ್ಲೂಟೂತ್ ಇತ್ಯಾದಿ ಡಿಜಿಟಲ್ ಸಾಧನಗಳು ಕಾರ್ಯನಿರ್ವಹಿಸದಂತೆ ಪರೀಕ್ಷಾ ಕೇಂದ್ರಗಳ ಸುತ್ತ ಜಾಮರ್ ಅಳವಡಿಸಲಾಗಿತ್ತು. ಇಡೀ ಪ್ರಕ್ರಿಯೆಯನ್ನು ಕೆಇಎ ಕಚೇರಿಯಲ್ಲಿನ ಕಮಾಂಡ್ ಸೆಂಟರ್ ಮೂಲಕ ನಿರ್ವಹಿಸಲಾಯಿತು. ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳ ಮೂಲಕ ಕಟ್ಟುನಿಟ್ಟಿನ ನಿಗಾ ವಹಿಸಿದ್ದನ್ನು ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಂ, ಹೈಕೋರ್ಟ್ ರಿಜಿಸ್ಟ್ರಾರ್ ಚಂದ್ರಕಲಾ ಖುದ್ದು ವೀಕ್ಷಿಸಿದರು ಎಂದು ಅವರು ತಿಳಿಸಿದ್ದಾರೆ. ಇದಲ್ಲದೆ, ಪ್ರತಿ ಪರೀಕ್ಷಾ…

Read More

ಹಾಸನ: ಶನಿವಾರ ರಾತ್ರಿ 9 ಗಂಟೆಯ ವೇಳೆಗೆ 1.2 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದು, ಜಾತ್ರಾ ಮಹೋತ್ಸವದ ವ್ಯವಸ್ಥೆಗಳು ಯೋಜನೆಯಂತೆ ಸುಗಮವಾಗಿ ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶ್ಲಾಘಿಸಿದ್ದಾರೆ. ₹ 1000 ಟಿಕೆಟ್ ದರ್ಶನವು ದಿನವಿಡೀ 10 ನಿಮಿಷಕ್ಕಿಂತ ಕಡಿಮೆ ಸಮಯದಲ್ಲಿ, ₹ 300 ಟಿಕೆಟ್ ದರ್ಶನವು 10 ರಿಂದ 30 ನಿಮಿಷಗಳಲ್ಲಿ ಪೂರ್ಣಗೊಳ್ಳುತ್ತಿದೆ. ಧರ್ಮ ದರ್ಶನವು 30 ನಿಮಿಷಗಳಿಂದ ಗರಿಷ್ಠ 2 ಗಂಟೆ 30 ನಿಮಿಷಗಳಲ್ಲಿ ಆಗುತ್ತಿದ್ದು, ಎಲ್ಲಾ ವ್ಯವಸ್ಥೆಗಳು ಸುಸೂತ್ರವಾಗಿ ಸಾಗಿವೆ. ಗಣ್ಯರ ದರ್ಶನವೂ ಸಹ ಗೌರವಯುತವಾಗಿ ಸಾಗುತ್ತಿದೆ. ಸಚಿವರು ವೈಯಕ್ತಿಕವಾಗಿ ಪರಿಶೀಲಿಸಿದ್ದು, ಶೌಚಾಲಯಗಳು ಅತ್ಯಂತ ಸ್ವಚ್ಛವಾಗಿದ್ದು, ಕಸವನ್ನು ನಿರಂತರವಾಗಿ ತೆಗೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ. ಶನಿವಾರ ರಾತ್ರಿ ಧರ್ಮ ದರ್ಶನದ ಸಾಲು ಭರ್ತಿಯಾಗಿದ್ದು, ಮಧ್ಯರಾತ್ರಿ 12 ಗಂಟೆಗೆ ಗರಿಷ್ಠ ಜನಸಂದಣಿ ನಿರೀಕ್ಷಿಸಲಾಗಿದೆ. ದರ್ಶನವು ರಾತ್ರಿ 2 ಗಂಟೆಗೆ ನಿಂತು, ಬೆಳಿಗ್ಗೆ 5 ಗಂಟೆಗೆ ಪುನಃ ಆರಂಭವಾಗಲಿದೆ. ಭಾನುವಾರ ಬೆಳಿಗ್ಗೆ ಹೆಚ್ಚು ಜನಸಂದಣಿ…

Read More

ಚಿತ್ರದುರ್ಗ: ಜಿಲ್ಲೆ ಹಿರಿಯೂರು ನಗರದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹೊರವಲಯದ ಚಳ್ಳಕೆರೆ ರಸ್ತೆಯ ಚಿನ್ನಯ್ಯನಹಟ್ಟಿ ಗೇಟ್ ಬಳಿ ಎರಡು ಬೈಕ್ ಗಳು ಮುಖಾಮುಖಿಯಾಗಿ ಓರ್ವ ಯುವಕ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭರತ್ (20) ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಗೊಂಡಿರುವವರನ್ನು ಎಂಡಿ ಕೋಟೆ ಗ್ರಾಮದ ರಾಜಪ್ಪ, ಇಂದಿರಮ್ಮ ಎಂದು ಗುರುತಿಸಲಾಗಿದೆ. ಈ ಬಗ್ಗೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/farmers-should-adopt-hybrid-farming-methods-in-agriculture-dr-chandrashekhar-head-of-global-green-growth-institute/ https://kannadanewsnow.com/kannada/make-bsc-forestry-degree-mandatory-for-acf-rfo-drf-recruitment-students-demand/

Read More

ಶಿವಮೊಗ್ಗ: ರೈತರು ಕೃಷಿಯಲ್ಲಿನ ಸವಾಲು ಎದುರಿಸಲು ಬೆಳೆ ವೈವಿಧ್ಯತೆ ಮತ್ತು ಮಿಶ್ರತಳಿ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಗ್ಲೋಬಲ್‌ ಗ್ರೀನ್‌ ಗ್ರೋಥ್‌ ಸಂಸ್ಥೆಯ ಮುಖ್ಯಸ್ಥ ಡಾ.ಚಂದ್ರಶೇಖರ್‌ ಎಂ.ಬೀರದಾರ್‌ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಮಂಚಾಲೆ ಗ್ರಾಮದಲ್ಲಿ ಪ್ರಗತಿಪರ ಕೃಷಿಕ ಪ್ರಕಾಶ್‌ ರಾವ್‌ ಅವರ ಕಾಡುತೋಟದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಶಿರಸಿಯ ಕೆವಿಕೆ, ವಿಶ್ವಂ ಒಆರ್‌.ಜಿ ಫೌಂಡೇಷನ್‌ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ʼಕೃಷಿ-ಖುಷಿʼ ನೈಸರ್ಗಿಕ ಕೃಷಿ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಅನೇಕ ಸವಾಲುಗಳಿದ್ದು ಕಾಡುಪ್ರಾಣಿಗಳ ಉಪಟಳ, ಹವಾಮಾನ ವೈಪರಿತ್ಯ, ಮಾರುಕಟ್ಟೆ ಸಮಸ್ಯೆ, ಬೆಲೆ ಏರಿಳಿತ, ಮುಂತಾದ ಅನೇಕ ತೊಂದರೆಗಳನ್ನು ಎದುರಿಸಲು ನಾವೇ ಪರಿಹಾರ ಕಂಡುಕೊಂಡು ವೈಜ್ನಾನಿಕ ಪದ್ಧತಿಯನ್ನು ಅಳವಡಿಸಿಕೊಂಡು ಮುನ್ನುಗಬೇಕಾಗಿದೆ ಎಂದು ಹೇಳಿದರು. ರಾಸಾಯನಿಕ ಕೃಷಿಯನ್ನು ಬದಿಗಿಟ್ಟು ಸಾವಯವ ಕೃಷಿಯ ಜೊತೆಗೆ ನೈಸರ್ಗಿಕ ಪದ್ಧತಿಗಳನ್ನು ಮತ್ತು ಆಯಾ ಪ್ರದೇಶಕ್ಕೆ ಅನುಗುಣವಾಗಿ ನಮ್ಮ ಪಾರಂಪರಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕಾಗಿದೆ. ನಮ್ಮ ಮೂಲ ಆಹಾರ ಪದ್ಧತಿಗಳನ್ನು ತಿಳಿದುಕೊಂಡು ಅದನ್ನು…

Read More

ಅಮೇರಿಕಾ: ಮಿಸ್ಸಿಸ್ಸಿಪ್ಪಿ ಪ್ರೌಢಶಾಲೆಯಲ್ಲಿ ಫುಟ್ಬಾಲ್ ಪಂದ್ಯದ ನಂತರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ, 12 ಜನರಿಗೆ ಗಾಯಗೊಂಡಿದ್ದಾರೆ. ಮಿಸ್ಸಿಸ್ಸಿಪ್ಪಿಯ ಲೆಲ್ಯಾಂಡ್‌ನಲ್ಲಿ ಶನಿವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಮುಖ್ಯ ಬೀದಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಗಾಯಗೊಂಡವರಲ್ಲಿ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಲೆಲ್ಯಾಂಡ್ ಮೇಯರ್ ಜಾನ್ ಲೀ ಸಿಬಿಎಸ್ ನ್ಯೂಸ್‌ಗೆ ತಿಳಿಸಿದರು. ಲೆಲ್ಯಾಂಡ್ ಪ್ರೌಢಶಾಲೆಯ ಹೋಮ್‌ಕಮಿಂಗ್ ಪಂದ್ಯಕ್ಕಾಗಿ ಜನರು ಪಟ್ಟಣದಲ್ಲಿದ್ದರು.

Read More

ಶಿವಮೊಗ್ಗ : ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನಾದಿ ಕಾಲದಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ನೋಟಿಸ್ ನೀಡುವುದು, ತೊಂದರೆ ಕೊಟ್ಟು ಒಕ್ಕಲೆಬ್ಬಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬಾರದು. ಹಾಗೂ ರೈತರ ಪರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ವಯ ನಡೆದುಕೊಳ್ಳಬೇಕೆಂದು ಸಂಬಂಧಿಸಿದ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಹೊಸದಾಗಿ ಒತ್ತುವರಿಗೆ ಅವಕಾಶ ಮಾಡಬಾರದು. ಹಾಗೂ 27-04-1978 ರ ಪೂರ್ವದ ಅರಣ್ಯ ಒತ್ತುವರಿವನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು ಸರ್ಕಾರದ ವಿವಿಧ ಭೂ ಮಂಜೂರಾತಿ ಕಾಯ್ದೆ…

Read More