Author: kannadanewsnow09

ಹಾವೇರಿ: ರಾಜ್ಯ ಕಾಂಗ್ರೆಸ್ ನಲ್ಲಿನ ಅಧಿಕಾರ ಹಂಚಿಕೆಯ ಆಂತರಿಕ ಗೊಂದಲದಿಂದ ರಾಜ್ಯದ ಆಡಳಿತ ಕುಂಠಿತ ವಾಗಿದ್ದು ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟತೆ ಇಲ್ಲದಿರುವುದರಿಂದ ರಾಜ್ಯದ ಜನರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನದಿಂದ ಅಧಿಕಾರ ಹಸ್ತಾಂತರ, ಹಂಚಿಕೆ ಮೊದಲನೇ ದಿನದಿಂದ ಇದೆ. ಯಾವ ಹೈಕಮಾಂಡ್ ಹೇಳಿದರು ಅಷ್ಟೇ, ‌ಲೋ‌ ಕಮಾಂಡ್ ಹೇಳಿದರು ಅಷ್ಟೇ. ಯಾವುದು ಕೂಡಾ ನಿಂತಿಲ್ಲ. ಸಿ.ಎಂ ಕಡೆಯವರು ಅವರೇ 5 ವರ್ಷ ಮುಂದುವರೆಯುತ್ತಾರೆ ಅಂತಾರೆ. ಡಿ.ಕೆ ಶಿವಕುಮಾರ್ ಕಡೆಯವರು ಡಿ.ಕೆ. ಶಿವಕುಮಾರ್ ಸಿ.ಎಂ ಆಗುತ್ತಾರೆ ಅಂತಾರೆ. ನನಗೆ ಅನಿಸುತ್ತದೆ ಹೈಕಮಾಂಡ್ ಇದರಲ್ಲಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಆಗುತ್ತಿಲ್ಲ‌‌. ಅಲ್ಲಿಯೂ ಎರಡು ಗುಂಪು ಆಗಿವೆ. ಹೀಗಾಗಿ ಹೈಕಮಾಂಡ್ ಪುಲ್ ಸ್ಟಾಪ್ ಇಡಲು ಆಗುತ್ತಿಲ್ಲ. ಒಂದು ಗುಂಪು ಸಿಎಂಗೆ ಸಪೋರ್ಟ್ ಮಾಡುತ್ತದೆ. ಇನ್ನೊಂದು ಗುಂಪು ಡಿಕೆ ಶಿವಕುಮಾರ್…

Read More

ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಹೊಸ ಆಡಳಿತ ಮಂಡಳಿಯನ್ನು ನೇಮಕ ಮಾಡುವಂತೆ ಕೋರ್ಟ್ ಸೂಚಿಸಿತ್ತು. ಆದರೇ ಕೋರ್ಟ್ ಆದೇಶವನ್ನು ಪಾಲಿಸದ ಕಾರಣಕ್ಕೆ ಇದೀಗ ಹಾಲಿ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಆಡಳಿತ ಮಂಡಳಿಯ ಎಲ್ಲರಿಗೂ ಕಾನೂನು ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ. ದಿನಾಂಕ 11-07-2025ರಂದೇ ಕೋರ್ಟ್ ಮಹತ್ವದ ಆದೇಶ ಸಾಗರದ ಮಾರಿಕಾಂಬ ದೇವಸ್ಥಾನಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಾತಿ ಸೇರಿದಂತೆ ವಿವಿಧ ವಿಷಯಗಳನ್ನು ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಮಂಜುನಾಥ ನಾಯಕ್ ಅವರು 11-07-2025ರಂದು ತೀರ್ಪು ಪ್ರಕಟಿಸಿದ್ದರು. ಶಿವಮೊಗ್ಗ ಜಿಲ್ಲಾ ಪ್ರದಾನ ಮತ್ತು ಸತ್ರ ನ್ಯಾಯಾಲಯ ನೀಡಿದ್ದಂತ ತೀರ್ಪಿನಲ್ಲಿ ಈ ತೀರ್ಪು ಪ್ರಕಟಗೊಂಡ ದಿನಾಂಕದಿಂದ 3 ತಿಂಗಳ ಒಳಗಾಗಿ ಹೊಸ ಆಡಳಿತ ಸಮಿತಿಯನ್ನು ರಚಿಸಿ, ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಬೇಕು ಎಂದಿತ್ತು. ಕೋರ್ಟ್ ಆದೇಶದ ನಂತ್ರ ಮಾರಿಕಾಂಬ ದೇವಸ್ಥಾನದ ಹಾಲಿ ಸಮಿತಿಯವರು ಸುದ್ದಿಗೋಷ್ಠಿ…

Read More

ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ನಡೆದು ಹೋಗಿದೆ. ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿರುವಂತ ಬೆಳ್ಳಂದೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಡಿ ಎನ್ ಆರ್ ಅರಿಸ್ಟಾ ಎನ್ನುವಂತ ಕಟ್ಟಡವೊಂದನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಕಟ್ಟಡದ 13ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಂತ ಪಶ್ಚಿಮ ಬಂಗಾಳ ಮೂಲದ ಅಮೀರ್ ಹುಸೇನ್ (33) ಹಾಗೂ ಮುಮ್ತಾಜ್ ಆಲಿ ಮೊಲ್ಲ(28) ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸಾವನ್ನಪ್ಪಿದಂತ ಇಬ್ಬರು ಕಾರ್ಮಿಕರು ಇಂಪ್ರಿಯಲ್ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಟ್ಟಡದ ಕನ್ಟ್ರಕ್ಷನ್ ಕಾರ್ಯದಲ್ಲಿ ತೊಡಗಿದ್ದರು. ಈ ಸಂಬಂಧ ಈ ಕಂಪನಿಯ ಅಧಿಕಾರಿಗಳು, ಸೈಟ್ ಇಂಜಿನಿಯರ್ ವಿರುದ್ಧ ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/in-the-state-nhm-employees-of-the-health-department-have-not-received-their-salaries-for-2-months/ https://kannadanewsnow.com/kannada/daughter-runs-away-with-her-lover-father-puts-up-a-tribute-banner-and-arranges-a-feast-for-the-entire-village/

Read More

ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ನೌಕರರಾಗಿ ಸಾವಿರಾರು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಕಾರ್ಯನಿರ್ವಹಿಸುತ್ತಿರುವಂತ NHM ಸಿಬ್ಬಂದಿಗಳಿಗೆ ಎರಡು ತಿಂಗಳು ಕಳೆದರು ವೇತನ ಪಾವತಿಯಾಗಿಲ್ಲ. ಹೀಗಾಗಿ ವೇತನವಿಲ್ಲದೇ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಸಂಕಷ್ಟ ಎದುರಿಸುವಂತೆ ಆಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ NHM ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾದಂತ ಶ್ರೀಕಾಂತ ಸ್ವಾಮಿ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳಿಗೆ ಆಗಸ್ಟ್ ತಿಂಗಳಿಂದ ಈ ವರೆಗೂ ವೇತನವೇ ಆಗಿಲ್ಲ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಜುಲೈ ತಿಂಗಳಿಂದ ವೇತನ ಆಗದೇ ಸಿಬ್ಬಂದಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಈ ಬಾರಿ ಸರ್ಕಾರವು ಎನ್ ಹೆಚ್ ಎಂ ನೌಕರರಿಗೆ ವೇತನ ಪಾವತಿಸದ ಕಾರಣ, ದೀಪಾವಳಿ ಹಬ್ಬವನ್ನು ಕತ್ತಲ ಬದುಕಿನಲ್ಲಿ ಆಚರಿಸುವಂತೆ ಆಗಿದೆ. ರಾಜ್ಯ ಸರ್ಕಾರವು ಕೂಡಲೇ ಇತ್ತ ಗಮನ ಹರಿಸಬೇಕು. ದೀಪಾವಳಿ…

Read More

ಶಿವಮೊಗ್ಗ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿ.ಎಸ್ಸಿ, ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಬಿಎಸ್ಸಿ ಅರಣ್ಯ ಶಾಸ್ತ್ರ ವ್ಯಾಸಂಗ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಆನಂದಪುರ ಬಳಿಯ ಕೆಳದಿ ಶಿವಪ್ಪ ನಾಯಕ ತೋಟಗಾರಿಕೆ ಮತ್ತು ವಿಜ್ಞಾನಗಳ ವಿವಿಯ ವಿದ್ಯಾರ್ಥಿಗಳು ಅರಣ್ಯ ಇಲಾಖೆಯಲ್ಲಿರುವ ಎಲ್ಲಾ ಹುದ್ದೆಗಳಿಗೂ ಅರಣ್ಯ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟವಧಿ ಮುಸ್ಕರವನ್ನು ನಡೆಸಿದರು. ಈ ವೇಳೆ ವಿದ್ಯಾರ್ಥಿಗಳು ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘ ಸಲ್ಲಿಸುವ ಮನವಿ ಏನೆಂದರೆ, ವೃತ್ತಿಪರ (ಅರಣ್ಯಶಾಸ್ತ್ರ) ಪದವೀಧರರ ಸಾಮರ್ಥ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು 2003 ರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇಕಡ 50 ರಷ್ಟು ಮೀಸಲಾತಿಯನ್ನು ಒದಗಿಸಿದ ನಂತರ 2012 ರಲ್ಲಿ ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇ.75ರಷ್ಟು ಹೆಚ್ಚಿಸಲಾಯಿತು (ಸಂಖ್ಯೆ : FEE366:FNG2010 ಬೆಂಗಳೂರು,…

Read More

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ. ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ. ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿದ್ದಾರೆ. https://twitter.com/DKShivakumar/status/1976896359929422214 https://kannadanewsnow.com/kannada/five-accused-arrested-within-24-hours-of-kidnapping-young-woman-who-refused-marriage-in-bengaluru/ https://kannadanewsnow.com/kannada/daughter-runs-away-with-her-lover-father-puts-up-a-tribute-banner-and-arranges-a-feast-for-the-entire-village/

Read More

ಬೆಂಗಳೂರು : ಮದುವೆಗೆ ನಿರಾಕರಿಸಿದ ಯುವತಿಯನ್ನು ಅಪಹರಿಸಿದ್ದ ಐವರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಸುಬ್ರಮಣ್ಯಪುರ ಠಾಣೆ ಪೋಲೀಸರು ಐವರು ಆರೋಪಗಳನ್ನು ಅರೆಸ್ಟ್ ಮಾಡಿದ್ದಾರೆ. ರಂಗನಾಥ, ರಾಜೇಶ್, ಚಂದನ್,ಶ್ರೇಯಸ್ ಹಾಗೂ ಮಂಜುನಾಥ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದ್ದು, ಮಾರಕಾಸ್ತ್ರ ಸಮೇತ ಆಟೋ ಬೈಕ್ ನಲ್ಲಿ ಬಂದು ಯುವತಿಯನ್ನು ಅಪಹರಿಸಿದ್ದಾರೆ. ಯುವತಿ ಅಪಹರಿಸಿದ್ಧ ಹನ್ನೆರಡು ಗಂಟೆಯೊಳಗೆ ಪೊಲೀಸರು ಆರೋಪಿಗಳ ಹೇಡೆಮುರಿ ಕಟ್ಟಿದ್ದಾರೆ. ಯುವತಿಯನ್ನು ರಕ್ಷಿಸಿ, ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಚಿಕ್ಕಲ್ಲಸಂದ್ರದಲ್ಲಿ ವಾಸವಿದ್ದ ಯುವತಿಯನ್ನು ಈ ಒಂದು ಗ್ಯಾಂಗ್ ಕಿಡ್ಯಾಪ್ ಮಾಡಿತ್ತು. ಬುಧವಾರ ಮನೆಯ ಬಳಿಗೆ ಯುವತಿಯನ್ನು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಆಗಿದ್ದ ಯುವತಿಗೆ ಆರೋಪಿ ರಂಗನಾಥ್ ಪರಿಚಯವಿದ್ದ ಎನ್ನಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿ ಆರೋಪಿ ರಂಗನಾಥ್ ಕೆಲಸ ಮಾಡುತ್ತಿದ್ದ. ಕೊಲೆ ಪ್ರಕರಣ ಒಂದರಲ್ಲಿ ಜೈಲಿಗೆ ಸಹ ಹೋಗಿ ಬಂದಿದ್ದ. ಜೈಲಿನಿಂದ ಬಂದ ನಂತರ ಮದುವೆಯಾಗುವಂತೆ ಯುವತಿಗೆ ಒತ್ತಡ ಹೇರಿದ್ದಾನೆ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದಾನೆ. ಮದುವೆ ಮಾಡಿಕೊಡಲು ಯುವತಿ…

Read More

ಬೆಂಗಳೂರು: ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಎಂದಿಗೂ ನಿಲ್ಲೋದಿಲ್ಲ ಎಂಬುದಾಗಿ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ. ಈ ಕುರಿತಂತೆ ಬಿಗ್ ಬಾಸ್ ವೇದಿಕೆಯಲ್ಲೇ ಮಾತನಾಡಿರುವಂತ ಅವರು, ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಯಾವತ್ತಿಗೂ ನಿಲ್ಲೋದಿಲ್ಲ. ನಿಮ್ಮ ಪ್ರೀತಿ, ಸಹಕಾರ ಇರೋವರೆಗೂ ನಿಲ್ಲೋದಿಲ್ಲ. ಬಿಗ್ ಬಾಸ್ ರಿಯಾಲಿಟಿ ಶೋ ಮುಂದುವರೆಸೋದಕ್ಕೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದ್ದಾರೆ. ಅಂದಹಾಗೇ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ರಾಮನಗರದ ಬಿಡದಿ ಬಳಿಯಲ್ಲಿರುವಂತ ಜಾಲಿವುಡ್ ಸ್ಟುಡಿಯೋಗೆ ಕಂದಾಯ ಇಲಾಖೆಯಿಂದ ಬೀಗ ಜಡಿಯಲಾಗಿತ್ತು. ಆ ಬಳಿಕ ಡಿಸಿ 10 ದಿನಗಳಲ್ಲಿ ಉಲ್ಲಂಘಿಸಿರುವಂತ ನಿಯಮಗಳನ್ನು ಸರಿ ಪಡಿಸೋದಕ್ಕೆ ಅವಕಾಶ ನೀಡಲಾಗಿತ್ತು. ಹೀಗಾಗಿ ಬಿಗ್ ಬಾಸ್ ಕಾರ್ಯಕ್ರಮದ ಶೂಟಿಂಗ್ ಮತ್ತೆ ಜಾಲಿವುಡ್ ಸ್ಟುಡಿಯೋದಲ್ಲಿ ಆರಂಭಗೊಂಡಿತ್ತು. https://kannadanewsnow.com/kannada/in-mysore-mp-yaduveer-wadiyar-inaugurated-the-state-level-club-baseball-championship/ https://kannadanewsnow.com/kannada/daughter-runs-away-with-her-lover-father-puts-up-a-tribute-banner-and-arranges-a-feast-for-the-entire-village/

Read More

ಮೈಸೂರು: ಶುಕ್ರವಾರದಂದು ಮೈಸೂರಿನ ಮಹಾರಾಜ ಕ್ರಿಕೆಟ್ ಮೈದಾನದಲ್ಲಿ ದಸರಾ ಬೇಸ್‌ಬಾಲ್ ಕಪ್ – 2025 ಅನ್ನು ಬೇಸ್ ಬಾಲ್ ಹಾಡುವ ಮೂಲಕ ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಿದರು.  ಈ ಬಳಿಕ ಮಾತನಾಡಿರುವಂತ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಇದೊಂದು ಮೈಸೂರಿನ ಯುವಕರಿಗೆ ಹೊಸ ಪ್ರೇರಣೆ ನೀಡುವಂತ ಕ್ರೀಡಾ ಉತ್ಸವವಾಗಿದೆ ಎಂಬುದಾಗಿ ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಮೈಸೂರಿನ ದಸರಾ ಹಬ್ಬವು ಸಂಸ್ಕೃತಿ, ಕಲೆ ಮತ್ತು ಕ್ರೀಡೆಯ ಸಮನ್ವಯವಾಗಿದ್ದು, ಈ ಬಾರಿ ಅದರ ಭಾಗವಾಗಿ ಬೇಸ್‌ಬಾಲ್ ಸ್ಪರ್ಧೆ ಆಯೋಜಿಸಲಾಗಿದೆ. ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಬೇಸ್‌ಬಾಲ್ ನಂತಹ ಕ್ರೀಡೆಗಳ ಮೂಲಕ ಯುವಕರಲ್ಲಿ ಕ್ರೀಡಾಸ್ಪೂರ್ತಿ, ಶಿಸ್ತು ಮತ್ತು ಒಗ್ಗಟ್ಟಿನ ಭಾವನೆ ಬೆಳೆಸುವ ಉದ್ದೇಶ ಇದರ ಹಿಂದಿದೆ. ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಪ್ರೇಮಿಗಳು, ವಿದ್ಯಾರ್ಥಿಗಳು ಮತ್ತು ಸ್ಥಳೀಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಮೈದಾನವನ್ನು ಕಳೆಗಟ್ಟಿದರು. ವಿವಿಧ ಜಿಲ್ಲೆಗಳ ತಂಡಗಳು ಭಾಗವಹಿಸಿರುವ ಈ ಸ್ಪರ್ಧೆಯಲ್ಲಿ ಗೆದ್ದ ತಂಡಕ್ಕೆ ಬಹುಮಾನ ವಿತರಣೆ ನಡೆಯಲಿದೆ.…

Read More

ಮಂಗಳೂರು: ಮಂಗಳೂರಲ್ಲಿ ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ನನ್ನು ಉರ್ವಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಲಯಾಳಂ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರೆರಿಸ್ಟ್ ಎಂಬುದಾಗಿ ಬೈದಿದ್ದಕ್ಕೆ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಸೆಪ್ಟೆಂಬರ್ 9ರಂದು ಆಪ್ ಮೂಲಕ ಶಫೀಕ್ ಅಹ್ಮದ್ ಅವರ ಕ್ಯಾಬ್ ಅನ್ನು ನಟ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಬುಕ್ ಮಾಡಿದ್ದರು. ಮುಸ್ಲೀಂ ತೀವ್ರವಾದಿ, ಟೆರರಿಸ್ಟ್ ಎಂದು ಅಪಹಾಸ್ಯ ಮಾಡಿದ್ದರು. ಹಿಂದಿ, ಮಲಯಾಳಂ ಭಾಷೆಯಲ್ಲಿ ಅಪಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಸಂಬಂಧ ಕ್ಯಾಬ್ ಚಾಲಕ ನೀಡಿದ್ದಂತ ದೂರು ಆಧರಿಸಿ ಬಿಎನ್ ಎಸ್ ಕಾಯ್ದೆ. ಕಲಂ 352, 352(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Read More