Author: kannadanewsnow09

ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ನೌಕರರಾಗಿ ಸಾವಿರಾರು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಕಾರ್ಯನಿರ್ವಹಿಸುತ್ತಿರುವಂತ NHM ಸಿಬ್ಬಂದಿಗಳಿಗೆ ಎರಡು ತಿಂಗಳು ಕಳೆದರು ವೇತನ ಪಾವತಿಯಾಗಿಲ್ಲ. ಹೀಗಾಗಿ ವೇತನವಿಲ್ಲದೇ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಸಂಕಷ್ಟ ಎದುರಿಸುವಂತೆ ಆಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ NHM ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾದಂತ ಶ್ರೀಕಾಂತ ಸ್ವಾಮಿ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳಿಗೆ ಆಗಸ್ಟ್ ತಿಂಗಳಿಂದ ಈ ವರೆಗೂ ವೇತನವೇ ಆಗಿಲ್ಲ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಜುಲೈ ತಿಂಗಳಿಂದ ವೇತನ ಆಗದೇ ಸಿಬ್ಬಂದಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಈ ಬಾರಿ ಸರ್ಕಾರವು ಎನ್ ಹೆಚ್ ಎಂ ನೌಕರರಿಗೆ ವೇತನ ಪಾವತಿಸದ ಕಾರಣ, ದೀಪಾವಳಿ ಹಬ್ಬವನ್ನು ಕತ್ತಲ ಬದುಕಿನಲ್ಲಿ ಆಚರಿಸುವಂತೆ ಆಗಿದೆ. ರಾಜ್ಯ ಸರ್ಕಾರವು ಕೂಡಲೇ ಇತ್ತ ಗಮನ ಹರಿಸಬೇಕು. ದೀಪಾವಳಿ…

Read More

ಶಿವಮೊಗ್ಗ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿ.ಎಸ್ಸಿ, ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಬಿಎಸ್ಸಿ ಅರಣ್ಯ ಶಾಸ್ತ್ರ ವ್ಯಾಸಂಗ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಆನಂದಪುರ ಬಳಿಯ ಕೆಳದಿ ಶಿವಪ್ಪ ನಾಯಕ ತೋಟಗಾರಿಕೆ ಮತ್ತು ವಿಜ್ಞಾನಗಳ ವಿವಿಯ ವಿದ್ಯಾರ್ಥಿಗಳು ಅರಣ್ಯ ಇಲಾಖೆಯಲ್ಲಿರುವ ಎಲ್ಲಾ ಹುದ್ದೆಗಳಿಗೂ ಅರಣ್ಯ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟವಧಿ ಮುಸ್ಕರವನ್ನು ನಡೆಸಿದರು. ಈ ವೇಳೆ ವಿದ್ಯಾರ್ಥಿಗಳು ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘ ಸಲ್ಲಿಸುವ ಮನವಿ ಏನೆಂದರೆ, ವೃತ್ತಿಪರ (ಅರಣ್ಯಶಾಸ್ತ್ರ) ಪದವೀಧರರ ಸಾಮರ್ಥ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು 2003 ರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇಕಡ 50 ರಷ್ಟು ಮೀಸಲಾತಿಯನ್ನು ಒದಗಿಸಿದ ನಂತರ 2012 ರಲ್ಲಿ ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇ.75ರಷ್ಟು ಹೆಚ್ಚಿಸಲಾಯಿತು (ಸಂಖ್ಯೆ : FEE366:FNG2010 ಬೆಂಗಳೂರು,…

Read More

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ. ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ. ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿದ್ದಾರೆ. https://twitter.com/DKShivakumar/status/1976896359929422214 https://kannadanewsnow.com/kannada/five-accused-arrested-within-24-hours-of-kidnapping-young-woman-who-refused-marriage-in-bengaluru/ https://kannadanewsnow.com/kannada/daughter-runs-away-with-her-lover-father-puts-up-a-tribute-banner-and-arranges-a-feast-for-the-entire-village/

Read More

ಬೆಂಗಳೂರು : ಮದುವೆಗೆ ನಿರಾಕರಿಸಿದ ಯುವತಿಯನ್ನು ಅಪಹರಿಸಿದ್ದ ಐವರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಸುಬ್ರಮಣ್ಯಪುರ ಠಾಣೆ ಪೋಲೀಸರು ಐವರು ಆರೋಪಗಳನ್ನು ಅರೆಸ್ಟ್ ಮಾಡಿದ್ದಾರೆ. ರಂಗನಾಥ, ರಾಜೇಶ್, ಚಂದನ್,ಶ್ರೇಯಸ್ ಹಾಗೂ ಮಂಜುನಾಥ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದ್ದು, ಮಾರಕಾಸ್ತ್ರ ಸಮೇತ ಆಟೋ ಬೈಕ್ ನಲ್ಲಿ ಬಂದು ಯುವತಿಯನ್ನು ಅಪಹರಿಸಿದ್ದಾರೆ. ಯುವತಿ ಅಪಹರಿಸಿದ್ಧ ಹನ್ನೆರಡು ಗಂಟೆಯೊಳಗೆ ಪೊಲೀಸರು ಆರೋಪಿಗಳ ಹೇಡೆಮುರಿ ಕಟ್ಟಿದ್ದಾರೆ. ಯುವತಿಯನ್ನು ರಕ್ಷಿಸಿ, ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಚಿಕ್ಕಲ್ಲಸಂದ್ರದಲ್ಲಿ ವಾಸವಿದ್ದ ಯುವತಿಯನ್ನು ಈ ಒಂದು ಗ್ಯಾಂಗ್ ಕಿಡ್ಯಾಪ್ ಮಾಡಿತ್ತು. ಬುಧವಾರ ಮನೆಯ ಬಳಿಗೆ ಯುವತಿಯನ್ನು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಆಗಿದ್ದ ಯುವತಿಗೆ ಆರೋಪಿ ರಂಗನಾಥ್ ಪರಿಚಯವಿದ್ದ ಎನ್ನಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿ ಆರೋಪಿ ರಂಗನಾಥ್ ಕೆಲಸ ಮಾಡುತ್ತಿದ್ದ. ಕೊಲೆ ಪ್ರಕರಣ ಒಂದರಲ್ಲಿ ಜೈಲಿಗೆ ಸಹ ಹೋಗಿ ಬಂದಿದ್ದ. ಜೈಲಿನಿಂದ ಬಂದ ನಂತರ ಮದುವೆಯಾಗುವಂತೆ ಯುವತಿಗೆ ಒತ್ತಡ ಹೇರಿದ್ದಾನೆ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದಾನೆ. ಮದುವೆ ಮಾಡಿಕೊಡಲು ಯುವತಿ…

Read More

ಬೆಂಗಳೂರು: ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಎಂದಿಗೂ ನಿಲ್ಲೋದಿಲ್ಲ ಎಂಬುದಾಗಿ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ. ಈ ಕುರಿತಂತೆ ಬಿಗ್ ಬಾಸ್ ವೇದಿಕೆಯಲ್ಲೇ ಮಾತನಾಡಿರುವಂತ ಅವರು, ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಯಾವತ್ತಿಗೂ ನಿಲ್ಲೋದಿಲ್ಲ. ನಿಮ್ಮ ಪ್ರೀತಿ, ಸಹಕಾರ ಇರೋವರೆಗೂ ನಿಲ್ಲೋದಿಲ್ಲ. ಬಿಗ್ ಬಾಸ್ ರಿಯಾಲಿಟಿ ಶೋ ಮುಂದುವರೆಸೋದಕ್ಕೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದ್ದಾರೆ. ಅಂದಹಾಗೇ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ರಾಮನಗರದ ಬಿಡದಿ ಬಳಿಯಲ್ಲಿರುವಂತ ಜಾಲಿವುಡ್ ಸ್ಟುಡಿಯೋಗೆ ಕಂದಾಯ ಇಲಾಖೆಯಿಂದ ಬೀಗ ಜಡಿಯಲಾಗಿತ್ತು. ಆ ಬಳಿಕ ಡಿಸಿ 10 ದಿನಗಳಲ್ಲಿ ಉಲ್ಲಂಘಿಸಿರುವಂತ ನಿಯಮಗಳನ್ನು ಸರಿ ಪಡಿಸೋದಕ್ಕೆ ಅವಕಾಶ ನೀಡಲಾಗಿತ್ತು. ಹೀಗಾಗಿ ಬಿಗ್ ಬಾಸ್ ಕಾರ್ಯಕ್ರಮದ ಶೂಟಿಂಗ್ ಮತ್ತೆ ಜಾಲಿವುಡ್ ಸ್ಟುಡಿಯೋದಲ್ಲಿ ಆರಂಭಗೊಂಡಿತ್ತು. https://kannadanewsnow.com/kannada/in-mysore-mp-yaduveer-wadiyar-inaugurated-the-state-level-club-baseball-championship/ https://kannadanewsnow.com/kannada/daughter-runs-away-with-her-lover-father-puts-up-a-tribute-banner-and-arranges-a-feast-for-the-entire-village/

Read More

ಮೈಸೂರು: ಶುಕ್ರವಾರದಂದು ಮೈಸೂರಿನ ಮಹಾರಾಜ ಕ್ರಿಕೆಟ್ ಮೈದಾನದಲ್ಲಿ ದಸರಾ ಬೇಸ್‌ಬಾಲ್ ಕಪ್ – 2025 ಅನ್ನು ಬೇಸ್ ಬಾಲ್ ಹಾಡುವ ಮೂಲಕ ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಿದರು.  ಈ ಬಳಿಕ ಮಾತನಾಡಿರುವಂತ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಇದೊಂದು ಮೈಸೂರಿನ ಯುವಕರಿಗೆ ಹೊಸ ಪ್ರೇರಣೆ ನೀಡುವಂತ ಕ್ರೀಡಾ ಉತ್ಸವವಾಗಿದೆ ಎಂಬುದಾಗಿ ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಮೈಸೂರಿನ ದಸರಾ ಹಬ್ಬವು ಸಂಸ್ಕೃತಿ, ಕಲೆ ಮತ್ತು ಕ್ರೀಡೆಯ ಸಮನ್ವಯವಾಗಿದ್ದು, ಈ ಬಾರಿ ಅದರ ಭಾಗವಾಗಿ ಬೇಸ್‌ಬಾಲ್ ಸ್ಪರ್ಧೆ ಆಯೋಜಿಸಲಾಗಿದೆ. ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಬೇಸ್‌ಬಾಲ್ ನಂತಹ ಕ್ರೀಡೆಗಳ ಮೂಲಕ ಯುವಕರಲ್ಲಿ ಕ್ರೀಡಾಸ್ಪೂರ್ತಿ, ಶಿಸ್ತು ಮತ್ತು ಒಗ್ಗಟ್ಟಿನ ಭಾವನೆ ಬೆಳೆಸುವ ಉದ್ದೇಶ ಇದರ ಹಿಂದಿದೆ. ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಪ್ರೇಮಿಗಳು, ವಿದ್ಯಾರ್ಥಿಗಳು ಮತ್ತು ಸ್ಥಳೀಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಮೈದಾನವನ್ನು ಕಳೆಗಟ್ಟಿದರು. ವಿವಿಧ ಜಿಲ್ಲೆಗಳ ತಂಡಗಳು ಭಾಗವಹಿಸಿರುವ ಈ ಸ್ಪರ್ಧೆಯಲ್ಲಿ ಗೆದ್ದ ತಂಡಕ್ಕೆ ಬಹುಮಾನ ವಿತರಣೆ ನಡೆಯಲಿದೆ.…

Read More

ಮಂಗಳೂರು: ಮಂಗಳೂರಲ್ಲಿ ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ನನ್ನು ಉರ್ವಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಲಯಾಳಂ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರೆರಿಸ್ಟ್ ಎಂಬುದಾಗಿ ಬೈದಿದ್ದಕ್ಕೆ ನಟ ಜಯಕೃಷ್ಣನ್ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಸೆಪ್ಟೆಂಬರ್ 9ರಂದು ಆಪ್ ಮೂಲಕ ಶಫೀಕ್ ಅಹ್ಮದ್ ಅವರ ಕ್ಯಾಬ್ ಅನ್ನು ನಟ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಬುಕ್ ಮಾಡಿದ್ದರು. ಮುಸ್ಲೀಂ ತೀವ್ರವಾದಿ, ಟೆರರಿಸ್ಟ್ ಎಂದು ಅಪಹಾಸ್ಯ ಮಾಡಿದ್ದರು. ಹಿಂದಿ, ಮಲಯಾಳಂ ಭಾಷೆಯಲ್ಲಿ ಅಪಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಸಂಬಂಧ ಕ್ಯಾಬ್ ಚಾಲಕ ನೀಡಿದ್ದಂತ ದೂರು ಆಧರಿಸಿ ಬಿಎನ್ ಎಸ್ ಕಾಯ್ದೆ. ಕಲಂ 352, 352(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Read More

ಶಿವಮೊಗ್ಗ: ರಾಜ್ಯದಲ್ಲಿ ಸಾಲದ ಬಾಧೆಗೆ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾಲದ ಬಾಧೆಗೆ ಮತ್ತೊಬ್ಬ ರೈತ ಬಲಿಯಾದಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಶೆಟ್ಟಿಕೊಪ್ಪ ಗ್ರಾಮದ ರೈತ ಗಾಮಪ್ಪ(60) ಎಂಬುವರೇ ಆತ್ಮಹತ್ಯೆಗೆ ಶರಣಾದಂತ ರೈತನಾಗಿದ್ದಾನೆ. ಸಾಲದ ಬಾಧೆ ತಾಳಲಾರದೇ ಗಾಮಪ್ಪ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆನಂದಪುರದ ಚೆನ್ನಶೆಟ್ಟಿಕೊಪ್ಪದ ಗಾಮಪ್ಪ ಅವರು ತಮ್ಮ ಜಮೀನಿನಲ್ಲಿ ಅಡಿಕೆ, ಶುಂಠಿ, ಭತ್ತ ಹಾಗೂ ಕಬ್ಬು ಬೆಳೆಯನ್ನು ಬಳೆಯುತ್ತಿದ್ದರು. ಈ ವರ್ಷ ಮಳೆ ಹೆಚ್ಚಾಗಿ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿತ್ತು. ಈ ಹಿನ್ನಲೆಯಲ್ಲಿ ಸಾಲ ಮಾಡಿ ಬೆಳೆದಿದ್ದಂತ ಫಸಲು ಕೈಗೆ ಬಾರದೇ ಇದ್ದದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂದಹಾಗೇ ಗಾಮಪ್ಪ ಅವರು ಬೆಳೆಗಾಗಿ 20,000ವನ್ನು ಸೊಸೈಟಿಯಿಂದ ಸಾಲ ಪಡೆದಿದ್ದರೇ, 40,000 ನಗದು ಸಾಲ, 40 ಸಾವಿರ ಬ್ಯಾಂಕಿನಿಂದ ಸಾಲ ಸೇರಿದಂತೆ 3 ಲಕ್ಷಕ್ಕೂ ಹೆಚ್ಚು…

Read More

ಹಾಸನ: ಈ ಬಾರಿ ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲಾಗಿತ್ತು. ವಿಐಪಿಗಳು ಬರುವ ಮೊದಲು ಕೆಲ ಅಧಿಕಾರಿಗಳಿಗೆ ಮುಂಚಿತವಾಗಿಯೇ ತಿಳಿಸಿ, ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು. ಈ ಮಧ್ಯೆ ಜನರಿಗೆ ಹಾಸನಾಂಬ ದರ್ಶನ ಪಡೆಯಲು ತಮ್ಮ ಗುರುತಿನ ಚೀಟಿಯನ್ನೇ ನೀಡಿದಂತ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, “ಜೀರೋ ಟಾಲರೆನ್ಸ್.” ಹಾಸನಾಂಬ ದೇವಾಲಯದ ಆವರಣಕ್ಕೆ ಅನಧಿಕೃತ ಜನರಿಗೆ ಪ್ರವೇಶ ನೀಡಲು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮೊದಲ ದಿನವೇ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇದು ನಮ್ಮ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದಿದ್ದಾರೆ. ಸರ್ಕಾರಿ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧ. ಈ ಇಬ್ಬರು ಅಧಿಕಾರಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ಅನಧಿಕೃತ ಜನರಿಗೆ ನೀಡಿ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಿದ್ದರು. ಇಂತಹ ಕೃತ್ಯಗಳು ಸರ್ಕಾರಿ ನೌಕರರಿಗೆ ತಕ್ಕುದಾದದ್ದಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇದು…

Read More

ಬೆಂಗಳೂರು : “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ” ಎಂದು ತಿಳಿಸಿದರು. “ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ನೀವು ಇದೇ ರೀತಿ ಸುದ್ದಿ…

Read More