Author: kannadanewsnow09

ಬೆಂಗಳೂರು: ರಾಜ್ಯಾಧ್ಯಂತ ಡೆಂಗ್ಯೂ ಜ್ವರ ಆರ್ಭಟಿಸಿದೆ. ಈ ಆರ್ಭಟಕ್ಕೆ ಬ್ರೇಕ್ ಹಾಕೋ ನಿಟ್ಟಿನಲ್ಲಿ ನಾಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ ಪಡಿಸಲಾಗಿದೆ. ಈ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಸಮನ್ವಯ ಸಭೆ ನಡೆಸಲಾಗಿತ್ತು. ಈ ಬೆನ್ನಲ್ಲೇ ನಾಳೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಲಿದ್ದಾರೆ. ದಿನಾಂಕ 04-07-2024ರಂದು ವಿಧಾನಸೌಧದ ಕೊಠಡಿ ಸಂಖ್ಯೆ 122ರಲ್ಲಿ ಮಧ್ಯಾಹ್ನ 3.30ಕ್ಕೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರು ಕೂಡ ಭಾಗಿಯಾಗಲಿದ್ದಾರೆ. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/18-dengue-cases-26-chikungunya-confirmed-in-bengaluru-today/

Read More

ಬೆಂಗಳೂರು: ನಗರದಲ್ಲಿ ಡೆಂಗ್ಯೂ ಜೊತೆ ಜೊತೆಗೆ ಚಿಕನ್ ಗುನ್ಯಾ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದ್ದಾವೆ. ಇಂದು ಆರೋಗ್ಯ ಇಲಾಖೆ ನಡೆಸಿದಂತ ಪರೀಕ್ಷೆಯಲ್ಲಿ 18 ಜನರಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ 26 ಮಂದಿಗೆ ಚಿಕನ್ ಗುನ್ಯಾ ತಗುಲಿರುವುದು ವರದಿಯಿಂದ ತಿಳಿದು ಬಂದಿದೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬೆಂಗಳೂರಲ್ಲಿ ಇಂದು 26 ಜನರಿಗೆ ಚಿಕನ್ ಗುನ್ಯಾ ಪತ್ತೆಯಾಗಿದೆ. ಈ ಮೂಲಕ ಬೆಂಗಳೂರಲ್ಲಿ ಚಿಕನ್ ಗುನ್ಯಾಕ್ಕೆ ಒಳಗಾದವರ ಸಂಖ್ಯೆ 176ಕ್ಕೆ ಏರಿಕೆಯಾಗಿದೆ ಅಂತ ತಿಳಿಸಿದೆ. ಇನ್ನೂ ಇಂದು ಬೆಂಗಳೂರಲ್ಲಿ 300 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಲ್ಲಿ 18 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ 31 ಮಂದಿಗೆ ಡೆಂಗ್ಯೂ ಅಟ್ಯಾಕ್ ಆಗಿರೋದು ಪರೀಕ್ಷೆಯ ವರದಿಯಿಂದ ಧೃಢಪಟ್ಟಿದೆ. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/champai-soren-resigns-as-jharkhand-cm-stage-set-for-hemant-raaj-again/

Read More

ತಾರಕ ಮಂತ್ರವೆಂದರೆ ಕಷ್ಟಗಳನ್ನು ಪರಿಹರಿಸುವ ಮಂತ್ರ,…’ ತಾರಕ ‘ ಪದದ ಅರ್ಥ ಪರಿಹರಿಸುವವನು, ಎಲ್ಲ ಜೀವಿಗಳಿಗೆ ಭವ ಅಂದರೆ ಸಂಸಾರ ಸಾಗರದ ಎಲ್ಲ ಕಷ್ಟ, ತಾಪತ್ರಯಗಳನ್ನು ದಾಟಲು ಸಹಾಯ ಮಾಡುವವನು. ತಾರಕ ಮಂತ್ರವು ಜನನ ಮತ್ತು ಮರಣದ ಚಕ್ರ ಗಳನ್ನು ದಾಟಲು ನಮಗೆ ಸಹಾಯ ಮಾಡುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಒಂದು ಸಲ…

Read More

ಬೆಂಗಳೂರು: ನಗರದಲ್ಲಿ ಡೆಂಗ್ಯೂ ಆರ್ಭಟಿಸಿದೆ. ಇಂದು ಆರೋಗ್ಯ ಇಲಾಖೆ ನಡೆಸಿದಂತ ಪರೀಕ್ಷೆಯಲ್ಲಿ ಬರೋಬ್ಬರಿ 31 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬೆಂಗಳೂರಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು ಆರೋಗ್ಯ ಇಲಾಖೆಯಿಂದ 300 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 18 ಜನರಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯ ವರದಿಯಿಂದ ತಿಳಿದು ಬಂದಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಬರೋಬ್ಬರಿ 31 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಹೀಗಾಗಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 1,564ಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/champai-soren-resigns-as-jharkhand-cm-stage-set-for-hemant-raaj-again/

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ ಅಂತ ಬಿಬಿಎಂಪಿ ಸ್ಪಷ್ಟ ಪಡಿಸಿದೆ. ಈ ಮೂಲಕ ಬೆಂಗಳೂರು ಜನತೆಗೆ ಬಿಗ್ ರಿಲೀಫ್ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಸ್ಪಷ್ಟೀಕರಿಸಿದೆ. ಮುಂದುವರೆದು, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಚಾರವಾಗಿ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಈ ರೀತಿಯ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ನಾಗರೀಕರಲ್ಲಿ ಮನವಿ ಮಾಡಿರುತ್ತಾರೆ. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/job-news-call-for-direct-interview-for-various-medical-posts-on-contract-basis/ https://kannadanewsnow.com/kannada/champai-soren-resigns-as-jharkhand-cm-stage-set-for-hemant-raaj-again/

Read More

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್‍ಯುಹೆಚ್‍ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿ, ನೇರ ಸಂದರ್ಶನ ನಡೆಸಲಾಗುವುದು. ಖಾಲಿ ಇರುವ ಹುದ್ದೆಗಳ ವಿವರ: ಇಎನ್‍ಟಿ ಸರ್ಜನ್ -01, ಅರವಳಿಕೆ ತಜ್ಞರು -02, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು-01, ವೈದ್ಯರು-24, ನೇತ್ರ ಸಹಾಯಕರು-02, ಆಡಿಯೋಮೆಟ್ರಿಕ್ ಅಸಿಸ್ಟೆಂಟ್-01, ಶ್ರವಣದೋಷವುಳ್ಳ ಮಕ್ಕಳ ಬೋಧಕರು-01, ತಾಲೂಕು ಆಶಾ ಮೇಲ್ವಿಚಾರಕರು-01, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು (ಕಿ.ಮ.ಆ.ಸ) ಎನ್‍ಹೆಚ್‍ಎಂ-02 ಮತ್ತು ಎನ್‍ಯುಹೆಚ್‍ಎಂ- 01, ಶುಶ್ರೂಷಕಿಯರು (ಶುಶ್ರೂಷಣಾಧಿಕಾರಿಗಳು ಮಹಿಳೆಯರು)-24, ಕಿರಿಯ ಪುರಷ ಆರೋಗ್ಯ ಸಹಾಯಕರು (ಆರೋಗ್ಯ ನಿರೀಕ್ಷಣಾಧಿಕಾರಿಗಳು)-01, ಡಿಇಐಸಿ ಮ್ಯಾನೇಜರ್ -01 ಹುದ್ದೆಗಳು. ತಜ್ಞವೈದ್ಯರು ಮತ್ತು ವೈದ್ಯರು ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿರಬೇಕು ಹಾಗೂ ದೈಹಿಕ ಪ್ರಮಾಣ ಪತ್ರ ನೀಡುವುದು. ಕೆಎಂಸಿಯ…

Read More

ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ಸಾಂಕ್ರಾಮಿಕ ರೋಗವು ಒಡ್ಡಿದ ಸವಾಲುಗಳ ಹೊರತಾಗಿಯೂ, ಭಾರತದಲ್ಲಿ ಬಡತನವು 2011-12 ರಲ್ಲಿ ಶೇಕಡಾ 21.2 ರಿಂದ 2022-24 ರಲ್ಲಿ ಶೇಕಡಾ 8.5 ಕ್ಕೆ ಇಳಿಯುವ ನಿರೀಕ್ಷೆಯಿದೆ ಎಂದು ಆರ್ಥಿಕ ವ್ಯವಹಾರಗಳ ಥಿಂಕ್ ಟ್ಯಾಂಕ್ ಎನ್ಸಿಎಇಆರ್ನ ಸಂಶೋಧನಾ ಪ್ರಬಂಧ ತಿಳಿಸಿದೆ. ಎನ್ಸಿಎಇಆರ್ (ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್) ನ ಸೋನಾಲ್ಡೆ ದೇಸಾಯಿ ಬರೆದ ‘ಬದಲಾಗುತ್ತಿರುವ ಸಮಾಜದಲ್ಲಿ ಸಾಮಾಜಿಕ ಸುರಕ್ಷತಾ ಜಾಲಗಳ ಮರುಚಿಂತನೆ’ ಎಂಬ ಪ್ರಬಂಧವು ಭಾರತ ಮಾನವ ಅಭಿವೃದ್ಧಿ ಸಮೀಕ್ಷೆಯ (ಐಎಚ್ಡಿಎಸ್) ವೇವ್ 3 ಡೇಟಾ ಮತ್ತು ಐಎಚ್ಡಿಎಸ್ನ ಅಲೆ 1 ಮತ್ತು ಅಲೆ 2 ರ ಡೇಟಾವನ್ನು ಬಳಸುತ್ತದೆ. ಐಎಚ್ಡಿಎಸ್ನ ಸಂಶೋಧನೆಗಳ ಪ್ರಕಾರ… 2004-2005 ಮತ್ತು 2011-12ರ ನಡುವೆ ಬಡತನವು ಗಮನಾರ್ಹವಾಗಿ ಕಡಿಮೆಯಾಗಿದೆ (ತಲಾ ಅನುಪಾತ 38.6 ರಿಂದ 21.2 ಕ್ಕೆ) ಮತ್ತು ಸಾಂಕ್ರಾಮಿಕ ರೋಗದ ಸವಾಲುಗಳ ಹೊರತಾಗಿಯೂ 2011-12 ಮತ್ತು 2022-24 ರ ನಡುವೆ…

Read More

ನವದೆಹಲಿ: ಆರೋಪಗಳ ಗಂಭೀರತೆಯ ಹೊರತಾಗಿಯೂ ಪ್ರತಿಯೊಬ್ಬ ಆರೋಪಿಗೂ ತ್ವರಿತ ವಿಚಾರಣೆ ನಡೆಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಆರೋಪ ಹೊರಿಸಿ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವ್ಯಕ್ತಿಯ ಜಾಮೀನು ಅರ್ಜಿಯನ್ನು ವಿರೋಧಿಸಿದ್ದಕ್ಕಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency – NIA) ಯನ್ನು ತರಾಟೆಗೆ ತೆಗೆದುಕೊಂಡಿದೆ. “ನ್ಯಾಯವನ್ನು ಅಪಹಾಸ್ಯ ಮಾಡಬೇಡಿ… ನೀವು ರಾಜ್ಯ; ನೀವು ಎನ್ಐಎ… ಅವನು (ಆರೋಪಿ) ತಾನು ಮಾಡಿದ ಯಾವುದೇ ಅಪರಾಧವನ್ನು ತ್ವರಿತವಾಗಿ ವಿಚಾರಣೆ ನಡೆಸುವ ಹಕ್ಕನ್ನು ಹೊಂದಿದ್ದಾನೆ. ಅವನು ಗಂಭೀರ ಅಪರಾಧವನ್ನು ಮಾಡಿರಬಹುದು, ಆದರೆ ವಿಚಾರಣೆಯನ್ನು ಪ್ರಾರಂಭಿಸುವ ಬಾಧ್ಯತೆ ನಿಮ್ಮ ಮೇಲಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಇಲ್ಲಿಯವರೆಗೆ, ಆರೋಪವನ್ನು ರೂಪಿಸಲಾಗಿಲ್ಲ” ಎಂದು ನ್ಯಾಯಮೂರ್ತಿ ಜೆ ಬಿ ಪರ್ಡಿವಾಲಾ ಅವರು ಆರೋಪಿ ಜಾವೇದ್ ಗುಲಾಮ್ ನಬಿ ಶೇಖ್ ಅವರಿಗೆ ಜಾಮೀನು ನೀಡುವಾಗ ಹೇಳಿದರು. 80 ಸಾಕ್ಷಿಗಳ ವಿಚಾರಣೆ ನಡೆಸಲು ಕೇಂದ್ರ ಸಂಸ್ಥೆ ಪ್ರಸ್ತಾಪಿಸಿದ್ದನ್ನು ಗಮನಿಸಿದ ನ್ಯಾಯಮೂರ್ತಿ…

Read More

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಬುಧವಾರ ಉನ್ನತ ಹುದ್ದೆಗೆ ರಾಜೀನಾಮೆ ನೀಡಿದ್ದು, ಹೇಮಂತ್ ಸೊರೆನ್ ಮತ್ತೆ ಸಿಎಂ ಆಗಿ ಮರಳಲು ವೇದಿಕೆ ಕಲ್ಪಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿ ಜೈಲು ಪಾಲಾದ ಬಳಿಕ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಅಧಿಕಾರ ಗದ್ದುಗೆಗೆ ಏರಿದರು. ಇದೀಗ ಹೇಮಂತ್ ಸೊರೆನ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ, ಜೈಲಿನಿಂದ ಬಿಡುಗಡೆ ಕೂಡ ಆಗಿದ್ದಾರೆ. ಈ ಬೆನ್ನಲ್ಲೇ ಮತ್ತೆ ಜಾರ್ಖಂಡ್ ಸಿಎಂ ಸ್ಥಾನಕ್ಕೇರುವ ತಯಾರಿ ನಡೆಯುತ್ತಿದೆ. ಹಾಲಿ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಬುಧವಾರದಂದು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಆ ಬಳಿಕ ಮತ್ತೆ ಹೇಮಂತ್ ಸೊರೆನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಸಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/they-have-been-assaulted-sagar-municipal-commissioners-reply-to-masons-attack-on-pourakarmikas/ https://kannadanewsnow.com/kannada/guidelines-for-recruitment-under-article-371j-to-be-issued-soon/

Read More

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ 371 ಜೆ ಸಂಪುಟ ಉಪ ಸಮಿತಿ ಅಧ್ಯಕ್ಷರಾದ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ವಿಕಾಸಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಉದ್ಯೋಗ ನೇಮಕಾತಿಗೆ ಸಂಬಂಧಪಟ್ಟಂತೆ ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟಣೆ ವಿಷಯದಲ್ಲಿ ಪದೇ ಪದೇ ಕೆಲವಾರು ಗೊಂದಲಗಳು ಉದ್ಭವಿಸುತ್ತಿರುವದರಿಂದ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ, ಅಂತಿಮವಾಗಿ ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಮುಂದಿನ ಸಭೆಯಲ್ಲಿ ಚರ್ಚೆ ಮಾಡುವ ಸಂಬಂಧ ಸಲ್ಲಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌…

Read More