Author: kannadanewsnow09

ಬೆಳಗಾವಿ ಸುವರ್ಣಸೌಧ: ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಈ ಇಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಸ್ಪೀಕರ್ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸದನದ ಕಾರ್ಯಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಜೊತೆಗೆ ಉತ್ತಮ ಸಂಸದೀಯ ಪಟುವಾಗಿ ಚರ್ಚೆಯ ಗುಣಮಟ್ಟ ಹೆಚ್ಚಿಸಲು ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. 7ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಪ್ರತಿಪಕ್ಷದ ಉಪನಾಯಕರಾಗಿ, ಕೃಷಿ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳು, ಪಶುಸಂಗೋಪನೆ, ಮುಜರಾಯಿ ಹಾಗೂ ಸಣ್ಣ ನೀರಾವರಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಅವರದ್ದಾಗಿದೆ. ಅಲ್ಲದೆ, ಈ ಮುನ್ನ ಕೂಡ ಅವರು ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿದ್ದರು. ಕೃಷಿ ಹಾಗೂ ನೀರಾವರಿ ಯೋಜನೆಗಳನ್ನು ರೂಪಿಸುವಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾ ಬಂದಿರುವ…

Read More

ಬೆಳಗಾವಿ : ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಅಗತ್ಯ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ಮೂರನೇ ತಿದ್ದುಪಡಿ ವಿಧೇಯಕ-2024 ಮಂಡಿಸಿ ಸದನಕ್ಕೆ ಮಾಹಿತಿ ನೀಡಿದ ಅವರು, “ಕರ್ನಾಟಕ ಭೂ ಕಂದಾಯ ಕಾನೂನು ಕಂದಾಯ ಇಲಾಖೆಯ ಅಡಿಪಾಯ. ಆದರೆ, ಈ ಕಾನೂನಿನಲ್ಲಿ ಕೆಲವು ವ್ಯಾಖ್ಯಾನಗಳು ಕ್ಲಿಷ್ಟಕರವಾಗಿದೆ. ಹೀಗಾಗಿ ಈ ಕಾನೂನುಗಳನ್ನು ಸರಳೀಕರಣಗೊಳಿಸಿ ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಹಾಗೂ ಸಣ್ಣ ಉದ್ದಿಮೆದಾರರಿಗೆ ಸರಳ ಆಡಳಿತ ನೀಡುವ ಸಲುವಾಗಿ ಈ ಕಾನೂನಿಗೆ ಪ್ರಮುಖ ನಾಲ್ಕು ತಿದ್ದುಪಡಿಗಳನ್ನು ತರಲಾಗಿದೆ” ಎಂದು ತಿಳಿಸಿದರು. ತಿದ್ದುಪಡಿ ಬಗ್ಗೆ ವಿಸ್ತೃತ ಮಾಹಿತಿ ನೀಡಿದ ಅವರು, “ಯಾವುದೇ ಜಮೀನು ಖಾಸಗಿ ವ್ಯಕ್ತಿಗೆ ಸೇರಿಲ್ಲದಿದ್ದಲ್ಲಿ ಅದು ಸರ್ಕಾರಕ್ಕೆ ಸೇರಿದೆ ಎಂಬ ಸಾರಾಂಶವನ್ನು ಕರ್ನಾಟಕ ಭೂ ಕಂದಾಯ ಕಾನೂನಿನ ಕಲಂ 67 ಹೇಳುತ್ತದೆ. ಕೆಲವರು ತಮ್ಮ…

Read More

ಬೆಳಗಾವಿ ಸುವರ್ಣಸೌಧ: ಪ್ರತಿ ವರ್ಷ ಎರಡೂವರೆ ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ಹೇಳಿದರು. ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಆಡಿಟೋರಿಯಂನಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 150 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರಾರಂಭಕ್ಕೆ ಸಚಿವರು ಆನ್ಲೈನ್ ಮೂಲಕ ಚಾಲನೆ‌ ನೀಡಿ ಮಾತನಾಡಿದರು. ಪ್ರತಿ ವರ್ಷ ಮೂರು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಸಲ್ಲಿಸುತ್ತಾರೆ. 2.46,000 ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಉಳಿದ‌ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು. ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿಗಳು ರೈತ,‌ ಬಡ ಹಾಗೂ ಕಾರ್ಮಿಕ ಕುಟುಂಬದಿಂದ‌ ಬಂದವರಾಗಿದ್ದು, ಹಾಸ್ಟೆಲ್ ನ ಸೌಲಭ್ಯವನ್ನು ಪಡೆದು ಉನ್ನತ ಹುದ್ದೆಗೇರಬೇಕು. ನಾವು ಓದುವ ಕಾಲಘಟ್ಟದಲ್ಲಿ ನಾಲ್ಕೈದು ಕಿ.ಮೀ ನಡೆದು ಪ್ರೌಢ ಶಾಲೆ ವ್ಯಾಸಂಗ ಮುಗಿಸಿದೆವು. ಆದರೆ ಇಂದು…

Read More

ಶಿವಮೊಗ್ಗ: ಜಿಲ್ಲೆಯ ಹೊಸನಗರದ ತಾಲ್ಲೂಕಿನ ನಿಟ್ಟೂರಿನ ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಅವರ ಮೇಲೆ ಬಿಜೆಪಿ ಕಾರ್ಯಕರ್ತ ಮಾರಣಾಂತಿಕ ಹಲ್ಲೆ ಮಾಡಿದ್ದರು. ಇಂತಹ ನಾಗೋಡಿ ವಿಶ್ವನಾಥ್ ಅವರ ಮನೆಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ, ಧೈರ್ಯ ತುಂಬಿದರು. ಇಂದು ನಿಟ್ಟೂರಿಗೆ ಭೇಟಿ ನೀಡಿದ ಮಾಜಿ ಶಿಕ್ಷಣ ಸಚಿವ ಹಾಗೂ ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್, ಇತ್ತೀಚೆಗೆ ರಾಜಕೀಯ ದ್ವೇಷಕ್ಕೆ ಹಲ್ಲೆಗೊಳಗಾದ ನಿಟ್ಟೂರು ಗ್ರಾಮ ಪಂಚಾಯತ್ ಸದಸ್ಯ ನಾಗೋಡಿ ವಿಶ್ವನಾಥ್ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದಂತ ಅವರು, ಬಿಜೆಪಿ ಕಾರ್ಯಕರ್ತನೊಬ್ಬ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯ. ಹಲ್ಲೆ ಮಾಡಿದಂತ ಆರೋಪಿಯನ್ನು ಪೊಲೀಸರು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಅಲ್ಲದೇ  ಸ್ಥಳದಲ್ಲಿದ್ದಂತ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಸೂಚಿಸಿದರು. ಇನ್ನೂ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿದೆ. ಯಾವುದೇ…

Read More

ಕಲಬುರಗಿ: ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಹೊಸ ಘೋಷಣೆಯನ್ನು ಮಾಡಿದೆ. ಕೃಷಿ ಸಾಲದ ಮೇಲಿನ ಮಿತಿಯನ್ನು ಏರಿಕೆ ಮಾಡಲಾಗಿದ್ದು, 2025ರ ಜನವರಿ 1 ರಿಂದ ರೈತರು ಈ ಹೊಸ ಘೋಷಣೆಯ ಸಹಾಯವನ್ನು ಪಡೆಯಬಹುದು. ಆರ್ ಬಿ ಐ ನ ಈ ಘೋಷಣೆಯಿಂದ ದೇಶದ ಸುಮಾರು ಶೇ 86ರಷ್ಟು ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್ ಬಿ ಐ ನ. ಈ ಘೊಷಣೆಗೆ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರ್ ಬಿ ಐ ಗೆ ಅಭಿನಂದನೆ ಸಲ್ಲಿಸಿದರು. ಈ ಕುರಿತು ಪಾತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಆರ್ ಬಿ ಐ ನಹೊಸ ಗವರ್ನರ್ ಆಗಿ ಅಧಿಕಾರವಹಿಸಿಕೊಂಡ ಸಂಜಯ್ ಮಲ್ಲೊತ್ರಾ ಅವರು ಮಾಡಿದ ಮೊದಲ ಘೋಷಣೆ ಇದಾಗಿದೆ. ರೈತರಿಗೆ ಸುಲಭವಾಗಿ ಹೆಚ್ಚು ಮೊತ್ತದ ಕೃಷಿ ಸಾಲ ಲಭ್ಯವಾಗುವಂತೆ ಮಾಡುವ ಮೂಲಕ ಕೃಷಿ ಕ್ಷೇತ್ರದ ಉತ್ತೇಜನಕ್ಕೆ ಒತ್ತು ನೀಡಲಾಗುತ್ತದೆ , ಭಾರತೀಯ ರಿಸರ್ವ್ ಬ್ಯಾಂಕ್ ಅಡವು…

Read More

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…

Read More

ಬೆಳಗಾವಿ ಸುವರ್ಣಸೌಧ: ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಪೂರೈಸಿದ್ದ ಪಶ್ಚಿಮ ಬಂಗಾ ಕಂಪನಿಯನ್ನ ಈಗಾಗಲೇ ಬ್ಲಾಕ್ ಲಿಸ್ಟ್ ಗೆ ಸೇರಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುವ ವರೆಗು ಕಂಪನಿ ಐವಿ ದ್ರಾವಣ ಉತ್ಪಾದನೆ ಮಾಡದಂತೆ ಕಂಪನಿಯ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಇಂದು ವಿಧಾನ ಪರಿಷತ್ ನಲ್ಲಿ ಬಾಣಂತಿಯರ ಸಾವುಗಳ ಕುರಿತು ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್, ದೇಶದಲ್ಲಿ ಔಷಧ ನಿಯಂತ್ರಣ ವ್ಯವಸ್ಥೆಯಲ್ಲಿ ಇರುವ ಲೋಪ ದೋಷಗಳು ಈ ರೀತಿಯ ಪ್ರಕರಣಗಳಿಗೆ ಕಾರಣವಾಗಿದೆ ಎಂದರು. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ತಜ್ಞ ವೈದ್ಯರ ತಂಡವನ್ನ ರಚಿಸಿ ಪರಿಶೀಲಿಸಲಾಗಿತ್ತು. ತಜ್ಞರ ತಂಡ ಐವಿ ರಿಂಗರ್ ಲ್ಯಾಕ್ಟೇಟ್ ಬಗ್ಗೆ ಸಂಶಯ ವ್ಯಕ್ತಪಡಿಸಿತು. ವರದಿಯ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಪಶ್ಚಿಮ ಬಂಗಾ ಕಂಪನಿ ಪೂರೈಸಿದ್ದ ಎಲ್ಲ ಬ್ಯಾಚ್ ಗಳ ದ್ರಾವಣವನ್ನ ತಡೆಹಿಡಿದು, ಟೆಸ್ಟಿಂಗ್ ಮಾಡಿಸಲಾಗಿದೆ.…

Read More

ಬೆಳಗಾವಿ ಸುವರ್ಣಸೌಧ: ವಿಶ್ವ ವಿದ್ಯಾಲಯಗಳ ಮೇಲಿನ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವಂತ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯ ಬಳಿಕ ವಿಧಾನ ಪರಿಷತ್ತಿನಲ್ಲಿ ಇಂದು ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕದಂತೆ ವಿವಿಗಳಿಗೆ ಸರ್ಕಾರಿ ಅಧಿಕಾರಿ ಉಸ್ತುವಾರಿ ನೇಮಕಕ್ಕೆ ಅವಕಾಶ ನೀಡಲಾಗಿತ್ತು. ನಿನ್ನೆ ವಿಧಾನಸಭೆಯಲ್ಲಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿತ್ತು. ಇಂದು ಬೆಳಗಾವಿಯ ಚಳಿಗಾಲದ ವಿಧಾನ ಪರಿಷತ್ತಿನಲ್ಲಿ ಸರ್ಕಾರ ಮಂಡಿಸಿತ್ತು. ಇಂತಹ ಚಾಣಕ್ಯ ವಿವಿಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಹೀಗಾಗಿ ಇನ್ಮುಂದೆ ವಿವಿ ಮೇಲಿನ ರಾಜ್ಯಪಾಲರ ಅಧಿಕಾರಕ್ಕೆ ಬ್ರೇಕ್ ಹಾಕಲಾಗಿದೆ. https://kannadanewsnow.com/kannada/union-minister-dharmendra-pradhan-said-that-neet-exam-will-be-conducted-online/ https://kannadanewsnow.com/kannada/good-news-for-self-employed-aspirants-in-the-state-applications-invited-for-loan-facility-under-various-schemes/

Read More

ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ಡಿಸೆಂಬರ್.19ರಿಂದ 22ರವರೆಗೆ ಸೊರಬ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂನ ( MESCOM ) ಸೊರಬಾ ತಾಲ್ಲೂಕು ಎಇಇ ಮಾಹಿತಿ ನೀಡಿದ್ದು, ದಿನಾಂಕ 19-12-2024ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಉಳವಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಾನಹಳ್ಳಿ, ಉಳವಿ, ಹೊಸಬಾಳೆ ಹಾಗೂ ದೂಗೂರು ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂದಿದೆ. ದಿನಾಂಕ 20-12-2024ರಂದು ಮಾವಲಿ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವಂತ ಹರೂರು, ಕೋಲ್ಗುಣಸಿ, ಮನೆಮನೆ, ಗೇರುಕೊಪ್ಪ ಹಾಗೂ ಮಾವಲಿಯಲ್ಲಿ ಪವರ್ ಕಟ್ ಆಗಲಿದೆ. ಅಲ್ಲದೇ ಸಂಡಾ ವಿದ್ಯುತ್ ಕೇಂದ್ರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಕಾರಣ, ಮಳಲಿಕೊಪ್ಪ, ಚಿಟ್ಟೂರು ಗ್ರಾಮ ವ್ಯಾಪ್ತಿಯ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ದಿನಾಂಕ 21-12-2024ರಂದು…

Read More

ಬೆಳಗಾವಿ: ಡಿಸೆಂಬರ್ 17ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್.ಡಿ.ಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರು ಮಂಗಳವಾರ ಇಲ್ಲಿ ಹಸ್ತಾಂತರಿಸಿದರು. ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು. ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು. ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು. ನಂತರ ಮಾತನಾಡಿದ ಮುಖ್ಯಮಂತ್ರಿಯವರು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.…

Read More