Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ ಸುವರ್ಣ ವಿಧಾನಸೌಧ: 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ದಿ.3.5.2025 ರಿಂದ ದಿನಾಂಕ: 9.5.2025 ರವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪ್ರಸ್ತುತ ಮುಖ್ಯ ಪರೀಕ್ಷೆಯ ಪರೀಕ್ಷೋತ್ತರ ಕಾರ್ಯಗಳ ಪ್ರಕ್ರಿಯೆಯು ಪ್ರಗತಿಯಲ್ಲಿದೆ 20 ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಮಂತ್ರಿಗಳ ಪರವಾಗಿ ಸಣ್ಣ ನಿರಾವರಿ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ನಿರಾಣಿ ಹನುಮಂತ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆದು ಪಾಸಾದ ಪರೀಕ್ಷೆಯ ಅಭ್ಯರ್ಥಿಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997 ಹಾಗೂ ತಿದ್ದುಪಡಿ ನಿಯಮಗಳನ್ವಯ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ಬೆಳಗಾವಿ ಸುವರ್ಣಸೌಧ : ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ…
ಬೆಳಗಾವಿ ಸುವರ್ಣ ವಿಧಾನಸೌಧ : ಬರುವ ಶೈಕ್ಷಣಿಕ ವರ್ಷದೊಳಗೆ 11ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅವರು ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿ ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಕುರಿತು ಮಾಹಿತಿಯನ್ನು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 178935 ಹುದ್ದೆಗಳು ಮಂಜೂರಾಗಿದ್ದು ಈ ಪೈಕಿ 133345 ಹುದ್ದೆಗಳು ಭರ್ತಿಯಾಗಿದ್ದು, 45590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಅವರು ವಿವರಿಸಿದರು. ರಾಜ್ಯದಲ್ಲಿ 5024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32010 ಹುದ್ದೆಗಳು…
ಬೆಳಗಾವಿ ಸುವರ್ಣವಿಧಾನಸೌಧ : ರಾಜ್ಯದಲ್ಲಿ ಕಳೆದ 2.5 ವರ್ಷದಲ್ಲಿ ಪೊಲೀಸರು 61299 ಸ್ವಯಂ ಪ್ರೇರಿತ ದೂರುಗಳನ್ನು ದಾಖಲು ಮಾಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ದಾಖಲು ಮಾಡಿರುವ ಸ್ವಯಂ ಪ್ರೇರಿತ ದೂರುಗಳಲ್ಲಿ 57646 ದೂರುಗಳಿಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಯಾವುದೇ ದೂರಗಳನ್ನು ಹಿಂಪಡೆದಿಲ್ಲ ಎಂದು ತಿಳಿಸಿದರು. ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸುವಾಗ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಂದರ್ಭ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯನ್ನುಂಟು ಮಾಡಿದ ಸಂದರ್ಭ, ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದಲ್ಲಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲಿ, ವಾರಸುದಾರರು ಯಾರೂ ಇಲ್ಲದೇ ಇರುವ ಪ್ರಕರಣಗಳಲ್ಲಿ, ದ್ವೇಷಭಾಷಣ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವ ಸಂದರ್ಭಗಳಲ್ಲಿ, ಕೆಲವು ಪ್ರಕರಣಗಳಲ್ಲಿ ಸಾರ್ವಜನಿಕರು ದೂರು ನೀಡಲು ಬಾರದೇ ಇದ್ದ ಸಂದರ್ಭಗಳಲ್ಲಿ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು ಎಂದರು. ಸಾರ್ವಜನಿಕರ ಪ್ರಾಣ ಮತ್ತು ಮಾನ ಕಾಪಾಡುವ ಸಂದರ್ಭಗಳಲ್ಲಿ…
ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರ್ಕಾರಕ್ಕೆ 24,287.83 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಲಿಖಿತ ಉತ್ತರ ನೀಡಿದ್ದು, ರಾಜ್ಯದ ಅಬಕಾರಿ ವಹಿವಾಟಿನ ಕಂಪು ಮತ್ತು ಪರವಾನಗಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಾಯದ ಹರಿವು: ಕಳೆದ ವರ್ಷಕ್ಕೆ ಹೋಲಿಸಿದರೆ ಸಾಧನೆ 2024-25ನೇ ಸಾಲಿನಲ್ಲಿ ಒಟ್ಟು ಅಬಕಾರಿ ಆದಾಯ 34,636.11 ಕೋಟಿ ರೂ. ಆಗಿತ್ತು (ಇದರಲ್ಲಿ 28,852.53 ಕೋಟಿ ರೂ. ಮೌಲ್ಯದ ಹಾಟ್ ಡ್ರಿಂಕ್ಸ್ ಮತ್ತು ಬಿಯರ್‌ನಿಂದ 5,783.58 ಕೋಟಿ ರೂ. ಆದಾಯ ಬಂದಿತ್ತು). ಪ್ರಸಕ್ತ ಸಾಲಿನ ನವೆಂಬರ್ 2025ರ ಅಂತ್ಯಕ್ಕೆ ಹಾಟ್ ಡ್ರಿಂಕ್ಸ್’ನಿಂದ 20,614.08 ಕೋಟಿ ರೂ. ಹಾಗೂ ಬಿಯರ್ ಮಾರಾಟದಿಂದ 3,673.75 ಕೋಟಿ ರೂ. ಸಂಗ್ರಹವಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ. ಪರವಾನಗಿಗಳ ವಿವರ: ಸಿಎಲ್-2 ಮತ್ತು ಸಿಎಲ್-9…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿರುವುದಾಗಿ ತಿಳಿದು ಬಂದಿದೆ. ಅದನ್ನು ಪತ್ತೆ ಹಚ್ಚಿ ಓಡಿಸೋ ಕಾರ್ಯಾಚರಣೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಉಳವಿ ಹೋಬಳಿ ವ್ಯಾಪ್ತಿಗೆ ಜೋಡಿ ಕಾಡಾನೆಗಳು ಆಗಮಿಸಿ ರೈತರ ಬೆಳೆ ನಾಶ ಪಡಿಸಿದ್ದವು. ಅವುಗಳನ್ನು ದೂಗೂರಿನಿಂದ ಕಾನಹಳ್ಳಿ, ಕಣ್ಣೂರು ಮಾರ್ಗವಾಗಿ ಚಿಕ್ಕಲವತ್ತಿ ಕಡೆಗೆ ಓಡಿಸಲಾಗಿದೆ. ಮುಂದೆ ಅಂಬಲಗೋಡು ಡ್ಯಾಂ ಕಡೆಗೂ ಓಡಿಸೋ ಕಾರ್ಯಾಚರಣೆ ಮುಂದುವರೆದಿದೆ. ಮತ್ತೊಂದೆಡೆ ಸಾಗರ ತಾಲ್ಲೂಕಿನ ತ್ಯಾಗರ್ತಿ ಕಾಡಿನಲ್ಲಿ ಒಂಟಿ ಸಲಗವೊಂದು ಬಂದಿರುವುದಾಗಿ ಅರಣ್ಯ ಇಲಾಖೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಜೋಡಿ ಆನೆಗಳು ಇತ್ತಿಂದ ಅತ್ತ ತೆರಳಿದರೇ, ಅತ್ತಿಂದಲೇ ಇತ್ತ ಒಂಟಿ ಸಲಗ ಆಗಮಿಸಿರೋದಾಗಿ ಹೇಳಲಾಗುತ್ತಿದೆ. ಅಂದಹಾಗೆ ಕರ್ಜಿಕೊಪ್ಪದಲ್ಲಿ ಹುಚ್ಚಪ್ಪ ಎಂಬುವರ ಗದ್ದೆಯಲ್ಲಿ ಒಂಟಿ ಸಲಗ ಹಾದು ಹೋಗಿರುವಂತ ಹೆಜ್ಜೆ ಗುರುತು ಪತ್ತೆಯಾಗಿವೆ. ಅಲ್ಲಿಂದ ಕಣ್ಣೂರು, ತ್ಯಾಗರ್ತಿ ಪ್ರದೇಶಗಳಲ್ಲಿ ಒಂಟಿ ಸಲಗ ಅಲೆದಾಡುತ್ತಿರೋದಾಗಿ ಹೇಳಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆಯೂ ಅರಣ್ಯ ಇಲಾಖೆಯಿಂದ ಮನವಿ ಮಾಡಲಾಗಿದೆ.…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಅಕ್ರಮವಾಗಿ ಮರ ಕಡಿತಲೆ ಮಾಡಿದರೂ, ನಾಮಕಾವಸ್ಥೆಗೆ ಪರಿಶೀಲನೆ ಮಾಡಿ, ಪ್ರಕರಣ ಮುಚ್ಚಿ ಹಾಕಿರುವಂತ ಆರೋಪವು ಕ್ಯಾದಗಿಯ RFO ಹಾಗೂ ವಾಚರ್ ಉದಯ ನಾಯ್ಕ್ ವಿರುದ್ಧ ಕೇಳಿ ಬಂದಿದೆ. ಮೂಗರ್ಜಿಯನ್ನು ಗಂಭೀರವಾಗಿ ಪರಿಗಣಿಸದಂತ ಅರಣ್ಯ ಇಲಾಖೆಯು, ವಾಚರ್, ಮರ ಕಡಿತಲೆ ಮಾಡಿದವರಿಗೆ ಬೆಂಬಲವಾಗಿ ನಿಂತಿರುವುದಾಗಿ ಹೇಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲ್ಲೂಕಿನ ಕ್ಯಾದಗಿ ವಲಯ ಅರಣ್ಯಾಧಿಕಾರಿಗಳ ಸಮೀಪದ ಗ್ರಾಮವಾಗಿರುವಂತ ಹೊನ್ನೆಬಿಡಾರದಲ್ಲಿ ಬೃಹತ್ ಗಾತ್ರದ ಮರಗಳನ್ನು ಕಟ್ಟಿಂಗ್ ಮಿಷಿನ್ ಬಳಸಿ ಬಾಬು ನಾಯ್ಕ್ ಎಂಬುವರು ಕಡಿತಲೆ ಮಾಡಿದಂತ ಆರೋಪ ಕೇಳಿ ಬಂದಿದೆ. ಖುದ್ದು ಮರ ಕಡಿತಲೆ ಮಾಡೋದಕ್ಕೆ ಆ ಭಾಗದ ವಾಚರ್ ಉದಯ ನಾಯ್ಕ್ ಎಂಬಾತ ಸಾಥ್ ನೀಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ RFOಗೆ ಸಾರ್ವಜನಿಕರೊಬ್ಬರು ಮೂಗರ್ಜಿ ಬರೆದಿದ್ದಾರೆ. ಅದನ್ನು ಗೌಪ್ಯವಾಗಿಟ್ಟು ಸ್ಥಳಕ್ಕೆ ತೆರಳಿ ಲಕ್ಷಾಂತರ ಬೆಲೆ ಬಾಳುವಂತ ಕಡಿತಲೆ ಮಾಡಿದಂತ ಮರಗಳನ್ನು ವಶಕ್ಕೆ ಪಡೆಯೋದು ಬಿಟ್ಟು, ವಾಚರ್ ಉದಯ ನಾಯ್ಕ್ ಗೆ ದೂರು ಅರ್ಜಿಯ ವಿಷಯವನ್ನೇ ತಿಳಿಸಿದ್ದಾರೆ.…
ಬೆಳಗಾವಿ ಸುವರ್ಣ ವಿಧಾನಸೌಧ : ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು. ರಾಜ್ಯದ ಎಲ್ಲ ರೈತರ ತಾಕುಗಳ ಬೆಳೆ ಮಾಹಿತಿ ದಾಖಲಿಸುವ ಸಲುವಾಗಿ ಆದ್ಯತೆ ಮೇರೆಗೆ ಪ್ರಥಮವಾಗಿ ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಸಕಾಲದಲ್ಲಿ ರೈತರು ಬೆಳೆ ಸಮೀಕ್ಷೆ ಮಾಡದೇ ಇದ್ದಲ್ಲಿ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಖಾಸಗಿ ನಿವಾಸಿಗಳ ಬದಲಿಗೆ ಸಂಘ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಅವಕಾಶ…
ಬೆಳಗಾವಿ ಸುವರ್ಣ ವಿಧಾನಸೌಧ : ಮಾನವ-ಆನೆ ಸಂಘರ್ಷವನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಆನೆ ಧಾಮಕ್ಕೆ ಕೇಂದ್ರ ಸರ್ಕಾರ ಇನ್ನೂ ತನ್ನ ಸಮ್ಮತಿ ನೀಡಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗಿಂದು ತಿಳಿಸಿದ್ದಾರೆ. ನಿಯಮ 73ರಡಿಯಲ್ಲಿ ಶಾಸಕ ಎಚ್.ಕೆ. ಸುರೇಶ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆಗಳ ಮೃದು ಧಾಮ ಮಾಡಲು ರಾಷ್ಟ್ರೀಯ ಹುಲಿ ಪ್ರಾಧಿಕಾರದ ಮತ್ತು ಕೇಂದ್ರದ ಅನುಮತಿ ಬೇಕು, ಒಂದೊಮ್ಮೆ ಕೇಂದ್ರ ಅನುಮತಿಸದಿದ್ದರೆ ಪರ್ಯಾಯ ಮಾರ್ಗದ ಚಿಂತನೆಯೂ ಸರ್ಕಾರಕ್ಕಿದೆ ಎಂದರು. ಪ್ರತಿ ವರ್ಷ ರಾಜ್ಯದಲ್ಲಿ 45 ರಿಂದ 50 ಜನರು ಮಾನವ ವನ್ಯಜೀವಿ ಸಂಘರ್ಷದಲ್ಲಿ ಸಾವಿಗೀಡಾಗುತ್ತಿದ್ದಾರೆ ಇದು ನೋವಿನ ಸಂಗತಿ. ಈ ಪೈಕಿ ಆನೆ ದಾಳಿಯಿಂದ ಹೆಚ್ಚಿನ ಸಾವು ಸಂಭವಿಸುತ್ತಿದ್ದು, ಅದಕ್ಕಾಗಿಯೇ ಆನೆ ಧಾಮ ಮಾಡಲು ಸಂಪುಟದ ಅನುಮತಿ ಪಡೆದು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಆನೆ-ಮಾನವ…
ಬೆಂಗಳೂರು: ಬೆಂಗಳೂರು: ದಶಕದಿಂದ ಜಟಿಲ ಸಮಸ್ಯೆಯಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಪಿಡಿಒ ಜೇಷ್ಠತಾ ಪಟ್ಟಿ ಪ್ರಕರಣವು ತಾರ್ಕಿಕವಾಗಿ ನ್ಯಾಯಾಲಯದಲ್ಲಿ ಬಗೆ ಹರಿದು ಸಾವಿರಾರು ಪಿಡಿಒಗಳಿಗೆ ನ್ಯಾಯ ದೊರಕಿದೆ. ಶೀಘ್ರವೇ ಪಿಡಿಒಗಳ ಪದೋನ್ನತಿ ಸರಾಗವಾಗಿ ನಡೆಯಲಿದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದ ಪಿಡಿಒಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರಕಿದೆ. ಇಚ್ಚಾಶಕ್ತಿಯ ಕೊರತೆಯಿಂದಾಗಿ ದಶಕಗಳ ಕಾಲ ಜೇಷ್ಠತಾ ಪಟ್ಟಿಯ ಪ್ರಕರಣವು ಕಗ್ಗಂಟಾಗಿ ನ್ಯಾಯಾಲಯದಲ್ಲಿತ್ತು, ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ಮತ್ತು ವಿಶೇಷ ಆಸಕ್ತಿಯಿಂದಾಗಿ ಈ ಪ್ರಕರಣವನ್ನು ಸಕಾರಾತ್ಮಕವಾಗಿ ಬಗೆಹರಿಸುವಲ್ಲಿ ಯಶಸ್ವಿಯಾಗಿದೆ ಎಂದಿದ್ದಾರೆ. ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡಾಗ ಇಲಾಖೆಯಲ್ಲಿನ ಪಿಡಿಒ ಜೇಷ್ಠತಾ ಪಟ್ಟಿಯ ಪ್ರಕರಣವು ಸವಾಲಿನಂತೆ ಎದುರಿಗಿತ್ತು, ಇದನ್ನು ಬಗೆಹರಿಸಲೇಬೇಕು ಎಂಬ ದೃಷ್ಟಿಯಿಂದ ಸುಮಾರು 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ, ನಿರಂತರವಾಗಿ…














