Author: kannadanewsnow09

ಬೆಂಗಳೂರು: ಇಂದು ವಯೋಸಹಜ ಖಾಯಿಲೆಯಿಂದಾಗಿ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತ ತುಳಸಿಗೌಡ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಲಕ್ಷಾಂತರ ಗಿಡಗಳನ್ನು ನೆಟ್ಟು, ನೀರೆರೆದ ಅಂಕೋಲಾ ತಾಲ್ಲೂಕು ಹೊನ್ನಳ್ಳಿಯ ಪರಿಸರಪ್ರೇಮಿ ತುಳಸಿಗೌಡ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಜೀವನ ನಿರ್ವಹಣೆಗಾಗಿ ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ್ದ ತುಳಸಿಗೌಡ ಅವರು ನಿವೃತ್ತಿಯ ನಂತರವೂ ತಮ್ಮ ಪರಿಸರ ಕಾಳಜಿಯಿಂದ ವಿಮುಖರಾಗದೆ ಗಿಡನೆಡುವುದನ್ನು ಮುಂದುವರೆಸಿ, ಪದ್ಮಶ್ರೀಯಂತಹ ಅತ್ಯುನ್ನತ ಗೌರವಕ್ಕೆ ಪಾತ್ರರಾದವರು ಎಂದಿದ್ದಾರೆ. ತುಳಸಿಗೌಡ ಅವರ ಪರಿಸರದ ಬಗೆಗಿನ ಪ್ರೀತಿ – ಕಾಳಜಿಯನ್ನು ಸ್ಮರಿಸುತ್ತ, ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಹೇಳಿದ್ದಾರೆ. https://twitter.com/siddaramaiah/status/1868691723754356837 https://kannadanewsnow.com/kannada/by-vijayendra-condoles-the-death-of-vrikshamata-tulsi-gowda/

Read More

ಬೆಂಗಳೂರು: ಪರಿಸರ ಪ್ರೇಮಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತೆ ತುಳಸಿ ಗೌಡ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ವೃಕ್ಷಮಾತೆ ಎಂದೇ ಹೆಸರಾಗಿದ್ದ ತುಳಸಿ ಗೌಡ ಅವರು ಒಂದು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಬೆಳೆಸಿದವರು. ಅವರ ಪರಿಸರ ಪ್ರೇಮಕ್ಕೆ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ರಾಜ್ಯೋತ್ಸವ ಪ್ರಶಸ್ತಿಯನ್ನೂ ಅವರು ಪಡೆದಿದ್ದರು ಎಂದು ಅವರು ತಿಳಿಸಿದ್ದಾರೆ. ಮೃತ ಹಿರಿಯರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. https://kannadanewsnow.com/kannada/rs-1-lakh-cash-reward-for-farmers-who-complain-of-fraud-govt-responsible-for-crushing-sugarcane-shivanand-patil/ https://kannadanewsnow.com/kannada/alert-beware-of-the-public-if-you-play-this-game-on-your-mobile-you-will-run-out-of-money-in-your-account/

Read More

ಬೆಳಗಾವಿ: ರೈತರು ಯಾವುದೇ ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ದಾಖಲೆಗಳೊಂದಿಗೆ ತೂಕದಲ್ಲಿ ವಂಚನೆಯ ದೂರು ದಾಖಲು ಮಾಡಿದರೆ 24 ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ದೂರು ದಾಖಲು ಮಾಡಲು ಭಯಪಡುವ ಅಗತ್ಯವಿಲ್ಲ. ತೂಕದಲ್ಲಿ ವಂಚನೆ ಮಾಡಿದ ದೂರು ನೀಡಿದರೆ ಕ್ರಿಮಿನಲ್‌ ಕೇಸು ದಾಖಲಿಸುವುದು ಅಷ್ಟೇ ಅಲ್ಲ, ಸರ್ಕಾರ ರೈತರ ಪರವಾಗಿ ನಿಲ್ಲಲಿದೆ. ವಂಚನೆ ದೂರು ದಾಖಲು ಮಾಡುವ ರೈತನಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು ಹಾಗೂ ಅವರ ಕಬ್ಬನ್ನು ನುರಿಸುವ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ ಎಂದು ಹೇಳಿದರು. ತೂಕದಲ್ಲಿ ವಂಚನೆ ತಡೆಗೆ ತೂಕ ಮತ್ತು ಮಾಪನ ಇಲಾಖೆ ಅಧಿಕಾರಿಗಳು ಎಲ್ಲ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಡಿಜಿಟಲ್‌ ತೂಕದ ಯಂತ್ರ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಈ ಕ್ರಮ ಪ್ರಶ್ನಿಸಿ ಕೆಲವು ಕಾರ್ಖಾನೆಗಳು ಕೋರ್ಟಿಗೆ ಹೋಗಿವೆ. ತೂಕದಲ್ಲಿ ವಂಚನೆ ತಡೆ ವಿಚಾರದಲ್ಲಿ ಸರ್ಕಾರದ ನಿರ್ಧಾರ ಅಚಲವಾಗಿದೆ ಎಂದು ಸ್ಪಷ್ಟಪಡಿಸಿದರು. ವಿವಿಧ…

Read More

ಬೆಂಗಳೂರು: ಯಾತ್ರಾರ್ಥಿಗಳು ಮತ್ತು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಮೈಸೂರು ಮತ್ತು ದಾನಾಪುರ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ ಗಳಿಗಾಗಿ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ನಿರ್ಧರಿಸಿದೆ. ರೈಲು ಸಂಖ್ಯೆ 06207 ಮೈಸೂರು-ದಾನಾಪುರ ಎಕ್ಸ್ಪ್ರೆಸ್ ವಿಶೇಷ ರೈಲು 18.01.2025, 15.02.2025 ಮತ್ತು 01.03.2025 (ಶನಿವಾರ) ರಂದು ಸಂಜೆ 4:30 ಕ್ಕೆ ಮೈಸೂರಿನಿಂದ ಹೊರಟು ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ದಾನಾಪುರವನ್ನು ತಲುಪಲಿದೆ. ರೈಲು ಸಂಖ್ಯೆ 06208 ದಾನಾಪುರ-ಮೈಸೂರು ಎಕ್ಸ್ಪ್ರೆಸ್ ವಿಶೇಷ ರೈಲು 22.01.2025, 19.02.2025 ಮತ್ತು 05.03.2025 (ಬುಧವಾರ) ರಂದು ಮುಂಜಾನೆ 1:45 ಕ್ಕೆ ದಾನಾಪುರದಿಂದ ಹೊರಟು ಶುಕ್ರವಾರ ಮಧ್ಯಾಹ್ನ 3:00 ಗಂಟೆಗೆ ಮೈಸೂರು ತಲುಪಲಿದೆ. ಈ ರೈಲುಗಳು ಮಂಡ್ಯ, ಮದ್ದೂರು, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ಹೊಸಪೇಟೆ, ಕೊಪ್ಪಳ, ಗದಗ, ಎಸ್ಎಸ್ಎಸ್ ಹುಬ್ಬಳ್ಳಿ, ಬಾದಾಮಿ, ಬಾಗಲಕೋಟೆ, ವಿಜಯಪುರ, ಸೋಲಾಪುರ, ಕುರ್ದುವಾಡಿ, ದೌಂಡ್, ಅಹ್ಮದ್ನಗರ, ಕೋಪರ್ಗಾಂವ್, ಮನ್ಮಾಡ್,…

Read More

ಬೆಳಗಾವಿ ಸುವರ್ಣಸೌಧ: ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್‌ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಮಸೂದೆ ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೇಯಲ್ಲಿ ಮಸೂದೆ ಅಂಗಿಕಾರವಾದ ನಂತರ ಪ್ರತಿಕ್ರಿಯೆ ನೀಡಿದರು. ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇರುವ ಮೂಲಕ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳಿಗೆ ಬ್ರೇಕ್‌ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ…

Read More

ಬೆಳಗಾವಿ ಸುವರ್ಣಸೌಧ : ಬಡವರನ್ನು ಅತಿ ಹೆಚ್ಚಿನ ಬಡ್ಡಿ ನೀಡುವ ಆಸೆಯೊಡ್ಡಿ, ಠೇವಣಿ ಪಡೆದು, ನಂತರ ವಂಚಿಸುವ ಯತ್ನವನ್ನು ತಡೆಗಟ್ಟುವುದು ಹಾಗೂ ವಂಚಕರನ್ನು ಕಠಿಣವಾಗಿ ಶಿಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ಸೋಮವಾರ 2024 ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಬಡವರು, ಮಧ್ಯವರ್ಗದವರು, ಮತ್ತಿತರರು ಹಣಕಾಸು ವ್ಯವಹಾರಗಳಲ್ಲಿ ಆಸೆಗೆ ಬಲಿಯಾಗಿ ವಂಚನೆಗೆ ಒಳಗಾಗುವುದನ್ನು ತಡೆಗಟ್ಟಲು ಹಾಗೂ ವಂಚಕರನ್ನು ಶಿಕ್ಷಿಸುವ ನಿಟ್ಟಿನಲ್ಲಿ ವಿಧೇಯಕ ತರಲಾಗುತ್ತಿದೆ. ಈ ದಿಸೆಯಲ್ಲಿ ಆಯಾ ವಿಭಾಗದ ಉಪವಿಭಾಗಾಧಿಕಾರಿಗಳು ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು, ಕಾನೂನು ಕ್ರಮ ಕೈಗೊಳ್ಳಲು ಹೆಚ್ಚಿನ ಅಧಿಕಾರ ನೀಡಲಾಗುತ್ತಿದೆ ಎಂದರು. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಾತನಾಡಿ, 2003-04 ರಲ್ಲಿ ವಿನಿವಿಂಕ್ ಶಾಸ್ತಿç ಕೋಟ್ಯಾಂತರ ರೂ. ಗಳ ಠೇವಣಿ…

Read More

ಉತ್ತರ ಕನ್ನಡ: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ(86) ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ಪರಿಸರ ಪ್ರೇಮಿ ತುಳಸಿಗೌಡ ಅವರು ಇನ್ನಿಲ್ಲವಾಗಿದ್ದಾರೆ. ಹಾಲಕ್ಕಿ ಸಮುದಾಯದ ಜಾನಪದ ಕಲಾವಿದೆ, ಪದ್ಮಶ್ರೀ ಸುಕ್ರಿ ಬೊಮ್ಮು ಗೌಡ ಅವರ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ತನ್ನದೇ ವಿಶಿಷ್ಠ ಸಾಧನೆಯ ಮೂಲಕ ಗಮನ ಸೆಳೆದಿದ್ದೇ ತುಳಸಿ ಗೌಡ. ಇವರು ಪರಿಸರ ಪ್ರೇಮಿ. ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡರ ಸಾಧನೆ ಅಪಾರ. ವೃಕ್ಷಮಾತೆ ಎಂದೆನಿಸಿಕೊಂಡಿರುವ ಈಕೆ ಬೆಳೆಸಿದ ಮರಗಳು ಒಂದಲ್ಲಾ, ಎರಡಲ್ಲಾ.. ಲಕ್ಷಗಟ್ಟಲೇ! ಇವರು ಕಟ್ಟಿಗೆ ಸಂಗ್ರಹಿಸಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಮತ್ತಿಘಟ್ಟ ಅರಣ್ಯ ನರ್ಸರಿಯಲ್ಲಿ ಸೇವೆ ಮಾಡಿ ನಿವೃತ್ತರಾದರೂ ಈಗಲೂ ಅಲ್ಲಿಗೆ ಹೋಗಿ ಯುವಕರಿಗೆ ತರಬೇತಿ, ಮಾರ್ಗದರ್ಶನ ನೀಡುತ್ತಿದ್ದರು. ತುಳಸಿ ಕಳೆದ ಆರು ದಶಕಗಳಿಂದ ಈ ಕೆಲಸವನ್ನು ಯಾವುದೇ ಪ್ರತಿಫಲ ನಿರೀಕ್ಷೆ ಇಲ್ಲದೆ ಮಾಡುತ್ತಿದ್ದರು.. ಸ್ಥಳೀಯರು ಹೇಳುವಂತೆ ತುಳಸಿ ಅವರು, ಅರಣ್ಯ ಇಲಾಖೆ ನಡೆಸಿದ ಅರಣ್ಯೀಕರಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅವರ ಸೇವೆಯನ್ನು…

Read More

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿದೆ. ಈ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅನೇಕ ಸರ್ಕಾರಿ ನೌಕರರು ಪಾಲ್ಗೊಳ್ಳಲಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ಓಓಡಿ ( On Official Duty – OOD) ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿಯನ್ನು ಸರ್ಕಾರಿ ನೌಕರರಿಗೆ ಬಿಡುಗಡೆ ಮಾಡಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಮಂಡ್ಯ ಉಪವಿಭಾಗಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು ನೋಂದಣಿ ಸಮಿತಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ:20-12- 2024 ರಿಂದ ದಿನಾಂಕ:22-12-2024 ರಂದು ಜರುಗಲಿದ್ದು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಸರ್ಕಾರಿ ನೌಕರರುಗಳು ಸ್ಥಳದಲ್ಲಿಯೇ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಸ್ಥಳದಲ್ಲಿಯೇ ಸಮ್ಮೇಳನಕ್ಕೆ ಆಗಮಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಸಹಿಯ ಸಹಿತ ಹಾಜರಾತಿಯನ್ನು…

Read More

ಬೆಳಗಾವಿ ಸುವರ್ಣಸೌಧ : ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸದನದೊಳಗೆ ಸೋಮವಾರ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶ್ರಮಿಸಿದ ಹಾಗೂ ಸಮಾಜ ಸೇವೆಗೈದ ಮಹನೀಯರ ತೈಲವರ್ಣ ಚಿತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಆಧ್ಯಾತ್ಮಿಕ ಚಿಂತಕ ಸ್ವಾಮಿ ವಿವೇಕಾನಂದ ಮತ್ತು ಅಪ್ರತಿಮ ಸ್ವಾತಂತ್ರ‍್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರು ವಿನ್ಯಾಸಗೊಂಡ ಹಾಗೂ ದೇಶದ ಪ್ರಥಮ ರಾಷ್ಟ್ರಪತಿ ಡಾ.ಬಾಬು ರಾಜೇಂದ್ರ ಪ್ರಸಾದ್, ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು, ದೇಶದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮತ್ತು ದೇಶದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ತೈಲ ವರ್ಣಚಿತ್ರಗಳನ್ನು ವಿಧಾನ ಸಭೆಯ ಅಧಿಕಾರಿಗಳ ಗ್ಯಾಲರಿ ಹಾಗೂ ಪರ್ತಕತ್ರ ಗ್ಯಾಲರಿ ಮೇಲ್ಬಾಗ ಅಳವಡಿಸಲಾಗಿದೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಧ್ಯಕ್ಷರು ತಮ್ಮ ವಿವೇಚನೆ ಬಳಿಸಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು, ಸಮಾಜ ಸುಧಾರಣೆ ಕೈಗೊಂಡ ಮಹಿನೀಯರು,…

Read More

ಮಧ್ಯಪ್ರದೇಶ: ಇಲ್ಲಿನ ಇಂದೋರ್ ಅನ್ನು ಭಿಕ್ಷುಕರಿಂದ ಮುಕ್ತಗೊಳಿಸುವ ಪ್ರಯತ್ನದಲ್ಲಿ, ಜಿಲ್ಲಾಡಳಿತವು ಸೋಮವಾರ (ಡಿಸೆಂಬರ್ 16, 2024) ಭಿಕ್ಷೆ ನೀಡುವವರ ವಿರುದ್ಧ 2025 ರ ಜನವರಿ 1 ರಿಂದ ಎಫ್ಐಆರ್ ದಾಖಲಿಸಲು ಪ್ರಾರಂಭಿಸುತ್ತದೆ ಎಂದು ಜಿಲ್ಲಾಡಳಿತ ಸೋಮವಾರ (ಡಿಸೆಂಬರ್ 16, 2024) ತಿಳಿಸಿದೆ. ಇಂದೋರ್ನಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಿ ಆಡಳಿತವು ಈಗಾಗಲೇ ಆದೇಶ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. “ಭಿಕ್ಷಾಟನೆಯ ವಿರುದ್ಧ ನಮ್ಮ ಜಾಗೃತಿ ಅಭಿಯಾನವು ಈ ತಿಂಗಳ ಅಂತ್ಯದವರೆಗೆ (ಡಿಸೆಂಬರ್) ನಗರದಲ್ಲಿ ಮುಂದುವರಿಯುತ್ತದೆ. ಜನವರಿ 1 ರಿಂದ ಯಾವುದೇ ವ್ಯಕ್ತಿಯು ಭಿಕ್ಷೆ ನೀಡುವುದು ಕಂಡುಬಂದರೆ, ಅವನ / ಅವಳ ವಿರುದ್ಧ ಎಫ್ಐಆರ್ ಸಹ ದಾಖಲಿಸಲಾಗುವುದು” ಎಂದು ಅವರು ಹೇಳಿದರು. ಮಧ್ಯಪ್ರದೇಶದ ಇಂದೋರ್ ಅನ್ನು ಭಿಕ್ಷುಕರಿಂದ ಮುಕ್ತಗೊಳಿಸುವ ಪ್ರಯತ್ನದಲ್ಲಿ, ಜಿಲ್ಲಾಡಳಿತವು ಸೋಮವಾರ (ಡಿಸೆಂಬರ್ 16, 2024) ಭಿಕ್ಷೆ ನೀಡುವವರ ವಿರುದ್ಧ 2025 ರ ಜನವರಿ 1 ರಿಂದ ಎಫ್ಐಆರ್ ದಾಖಲಿಸಲು ಪ್ರಾರಂಭಿಸುತ್ತದೆ ಎಂದು ಜಿಲ್ಲಾಡಳಿತ ಸೋಮವಾರ (ಡಿಸೆಂಬರ್ 16, 2024)…

Read More