Author: kannadanewsnow09

ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿ ಬಾಡಿಗೆ ಕೋಣೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನಂತರ ಅಸ್ವಾಭಾವಿಕ ಸಾವು ಎಂದು ದಾಖಲಾಗಿದ್ದ ಪ್ರಕರಣ ಈಗ ನಾಟಕೀಯ ತಿರುವು ಪಡೆದುಕೊಂಡಿದೆ. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯರು ಅನುಮಾನ ವ್ಯಕ್ತಪಡಿಸಿದ ನಂತರ ಪೊಲೀಸರು ಆಕೆಯ ಪತಿ ಮತ್ತು ಆತನ ಸ್ನೇಹಿತನನ್ನು ಕೊಲೆ ಶಂಕೆಯ ಮೇಲೆ ಬಂಧಿಸಿದ್ದಾರೆ. ಜನವರಿ 10 ರಂದು ಮೃತ ಮಹಿಳೆಯ ಸಹೋದರ ಅರುಣ್ ಕುಮಾರ್ ಸಲ್ಲಿಸಿದ ದೂರಿನ ಪ್ರಕಾರ, ಆಶಾ ಕುಣಿಗಲ್ ತಾಲ್ಲೂಕಿನ ಸಂತೇಮವತೂರು ಗ್ರಾಮದ ವಿರೂಪಾಕ್ಷ ಅವರನ್ನು ಸುಮಾರು ಆರು ವರ್ಷಗಳ ಹಿಂದೆ ವಿವಾಹವಾದರು, ನಂತರ ಇಬ್ಬರೂ ಸಂಬಂಧದಲ್ಲಿದ್ದರು. ದಂಪತಿಗಳು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಮತ್ತು ಕಳೆದ ಒಂದೂವರೆ ವರ್ಷಗಳಿಂದ ರಾಜರಾಜೇಶ್ವರಿನಗರದಲ್ಲಿ ವಾಸಿಸುತ್ತಿದ್ದರು. ವಿರೂಪಾಕ್ಷ ಅವರು ಮದುವೆಯ ಆರಂಭದಿಂದಲೂ ಆಶಾ ಅವರನ್ನು ನೋಡಿಕೊಳ್ಳಲು ವಿಫಲರಾಗಿದ್ದರು, ನಿಯಮಿತವಾಗಿ ಕೆಲಸ ಮಾಡುತ್ತಿರಲಿಲ್ಲ ಮತ್ತು ಅವರ ಆದಾಯದ ಮೇಲೆ ಅವಲಂಬಿತರಾಗಿದ್ದರು ಎಂದು ಅರುಣ್ ಕುಮಾರ್ ಆರೋಪಿಸಿದ್ದಾರೆ. ವಿರೂಪಾಕ್ಷ ಅವರ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ವಿವಾದಗಳಿಂದಾಗಿ ನಂತರ ಮದುವೆ ಹದಗೆಟ್ಟಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.…

Read More

ಬೆಂಗಳೂರು: ಈ ರಾಜ್ಯ ಸರಕಾರವು ಸದನದ ಪಾವಿತ್ರ್ಯತೆಯನ್ನು ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸದನವು ಈ ನಾಡಿನ ಏಳಿಗೆಗೆ, ನಾಡಿನ ಅಭಿವೃದ್ಧಿಗೆ ಸಂಬಂಧಿಸಿ ಚರ್ಚೆ ಆಗಲು ವೇದಿಕೆ ಆಗಬೇಕೇ ವಿನಾ ಇವರ ರಾಜಕೀಯ ದ್ವೇಷಕ್ಕಾಗಿ ರಾಜ್ಯವನ್ನು ಕೇಂದ್ರ ಸರಕಾರದ ವಿರುದ್ಧ ಎತ್ತಿ ಕಟ್ಟುವ ಷಡ್ಯಂತ್ರ-ಕುತಂತ್ರಕ್ಕೆ ಸದನವನ್ನು ಬಳಸುವುದನ್ನು ಬಿಜೆಪಿ ವಿರೋಧಿಸುತ್ತದೆ ಎಂದು ತಿಳಿಸಿದರು. ಗೌರವಾನ್ವಿತ ರಾಜ್ಯಪಾಲರು ಸಂವಿಧಾನಬದ್ಧವಾಗಿ ಇರುವ ಅವರ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದ್ದಾರೆ. ಆದರೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದ ಹೊರಗಡೆಯೂ ನೀವು ಅಪಮಾನ ಮಾಡುತ್ತೀರಿ. ಜಂಟಿ ಸದನವನ್ನುದ್ದೇಶಿಸಿ ಮಾತನಾಡಿ ತೆರಳುವ ಸಂದರ್ಭದಲ್ಲಿ ಅವರಿಗೆ ಸದನದ ಒಳಗಡೆಯೂ ತಡೆ ಒಡ್ಡಲಾಗಿದೆ; ಅವರ ಮೇಲೆ ದಬ್ಬಾಳಿಕೆ ಮಾಡಲಾಗಿದೆ. ಇದು ಶೋಭೆ ತರುವ ವಿಚಾರವಲ್ಲ ಎಂದು ಹೇಳಿದರು. ನಿನ್ನೆ ನಾನು ಮಾನ್ಯ ಕಾನೂನು ಸಚಿವ ಎಚ್.ಕೆ.ಪಾಟೀಲರ ಮಾತುಗಳನ್ನೂ ಗಮನಿಸಿದ್ದೇನೆ.…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಪ್ರಶ್ನಿಸಿದ್ದಂತ ಆದೇಶವನ್ನು ಜನಪ್ರತಿನಿಧಿಗಳ ಕೋರ್ಟ್ ಜನವರಿ.28ಕ್ಕೆ ಮುಂದೂಡಿದೆ. ಇಂದು ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಹಿ ಕೃಷ್ಣ ಅವರು ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯವು ನಡೆಸಿತು. ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶವನ್ನು ಜನವರಿ.28ಕ್ಕೆ ಮುಂದೂಡಿಕೆ ಮಾಡಲಾಗಿದೆ. ಹೀಗಾಗಿ ಮತ್ತೆ ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ವಂಚನೆ ಕೇಸಲ್ಲಿ ಸಂಕಷ್ಟ ಎದುರಾಗಲಿದ್ಯಾ ಎಂಬುದು ಕುತೂಹಲ ಮೂಡಿಸಿದೆ. https://kannadanewsnow.com/kannada/bangladesh-boycotts-t20-world-cup/ https://kannadanewsnow.com/kannada/kochi-muziris-biennale-brings-new-impetus-to-kerala-tourism-road-show-across-the-country/

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಭಾರತದಲ್ಲಿ ಪಂದ್ಯಗಳನ್ನು ಆಡುವ ಬಗ್ಗೆ ಬಗೆಹರಿಯದ ಕಳವಳಗಳನ್ನು ಉಲ್ಲೇಖಿಸಿ ಬಾಂಗ್ಲಾದೇಶ ಸರ್ಕಾರ ತನ್ನ ಕ್ರಿಕೆಟ್ ತಂಡವು ಮುಂಬರುವ ವಿಶ್ವಕಪ್ ಅನ್ನು ಬಹಿಷ್ಕರಿಸುವುದಾಗಿ ಅಧಿಕೃತವಾಗಿ ಘೋಷಿಸಿದೆ. ಭಾರತದಿಂದ ತಮ್ಮ ಪಂದ್ಯಗಳನ್ನು ಸ್ಥಳಾಂತರಿಸುವ ಬಾಂಗ್ಲಾದೇಶದ ಮನವಿಯನ್ನು ಐಸಿಸಿ ತಿರಸ್ಕರಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಇದು ಮಂಡಳಿ, ಐಸಿಸಿ ಮತ್ತು ಭಾರತೀಯ ಕ್ರಿಕೆಟ್ ಅಧಿಕಾರಿಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ. https://kannadanewsnow.com/kannada/pay-salaries-of-gram-panchayat-staff-without-considering-e-attendance-state-government-orders/

Read More

ಬೆಂಗಳೂರು: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಪಂಚತಂತ್ರ ತಂತ್ರಾಂಶದಲ್ಲಿ ಇ-ಹಾಜರಾತಿ ದಾಖಲಿಸಲು ತಾಂತ್ರಿಕ ಸಮಸ್ಯೆಗಳು ಉಂಟಾದ ಸಂದರ್ಭಗಳಲ್ಲಿ ಅದನ್ನು ಪರಿಗಣಿಸದೇ ವೇತನ ಪಾವತಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ತಾಂತ್ರಿಕ ದೋಷದ ಕಾರಣ ಇ-ಹಾಜರಾತಿ ಸಿಗದೇ ವೇತನ ವಿಳಂಬ ಅನುಭವಿಸುತ್ತಿದ್ದಂತ ಗ್ರಾಮ ಪಂಚಾಯ್ತಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಸಿಇಓಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ತಾಂತ್ರಿಕ ದೋಷಗಳಿಂದಾಗಿ ಇ-ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗದೇ ಇದ್ದಾಗ, ಅಂಥಹ ತಾಂತ್ರಿಕ ದೋಷಗಳನ್ನು ಪಂಚತಂತ್ರ 2.0 ನಲ್ಲಿ ಸರಿಪಡಿಸಲು ಹಾಗೂ ಪೂರ್ಣ ವೇತನ ಪಾವತಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ (ರಿ), (ಸಿಐಟಿಯು ಸಂಯೋಜಿತ), ರವರು ಉಲ್ಲೇಖಿತ ಸಭೆಯಲ್ಲಿ ಮನವಿ ಸಲ್ಲಿಸಿರುತ್ತಾರೆ ಎಂದಿದ್ದಾರೆ. ಮುಂದುವರೆದು, ಪಂಚತಂತ್ರ 2.0 ತಂತ್ರಾಂಶದಲ್ಲಿ ಅಥವಾ ಮೊಬೈಲ್ ಆಪ್ ಮೂಲಕ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಇ-ಹಾಜರಾತಿಯನ್ನು ದಾಖಲಿಸಲು…

Read More

ಶಿವಮೊಗ್ಗ: ಪ್ರತಿ ಹಂತದಲ್ಲೂ ರೈತ ಸಮುದಾಯವನ್ನು ಹತ್ತಿಕ್ಕುವ ಕೆಲಸ ಸರ್ಕಾರದಿಂದ ನಡೆಯುತ್ತಿದ್ದು, ರೈತರ ಹಿತ ಕಾಯಲು ನಿಟ್ಟಿನಲ್ಲಿ ವೀರ ಸೇನಾನಿಯಂತೆ ಹೋರಾಡಲಾಗುವುದು ಎಂದು ಸೊರಬ ತಾಲೂಕು ರೈತ ಸಂಘದ ನೂತನ ಅಧ್ಯಕ್ಷ ಸುಭಾಷ್ ಜಿರಲೆಕೊಪ್ಪ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ರೈತ‌ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಕಾಲದಲ್ಲೂ ರೈತರ ಬಗ್ಗೆ ಸರ್ಕಾರದ ಮಲತಾಯಿ ಧೋರಣೆ ಹೆಚ್ಚಾಗಿದೆ. ಪಕ್ಷಾತೀತವಾಗಿ ಯುವಕರು ರೈತ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಸರ್ಕಾರದ ನೀತಿ ಖಂಡಿಸುವುದು ಮುಖ್ಯವಾಗಿದೆ ಎಂದರು. ತಾಲ್ಲೂಕಿನ ಕೆಲವು ಭಾಗಗಳಲ್ಲಿ ಬಗರ್ ಹುಕುಂ ಸಾಗುವಳಿ ಮಾಡಲಾಗುತ್ತಿದೆ. ರೈತರ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಸರ್ಕಾರ ಯೋಚಿಸುತ್ತಿದೆ. ರೈತರಿಗೆ ಶಾಪವಾಗಿರುವ ಕೃಷಿ ಕಾಯ್ದೆ ರದ್ದುಗೊಳಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜನವರಿ 28 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ರೈತ ಬಾಂಧವರು ಭಾಗವಹಿಸುವಂತೆ ಮನವಿ ಮಾಡಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷ ಉಮೇಶ್ ಪಾಟೀಲ್…

Read More

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿದಂತ ಆರೋಪದಡಿ ಬಂಧಿಸಲಾಗಿದೆ. 1 ಕೋಟಿ ಹಣ ನೀಡುವಂತೆ ಸ್ವಾಮೀಜಿಗೆ ಬಂಧಿತ ಆರೋಪಿ ಸ್ಪೂರ್ತಿ ಬ್ಲ್ಯಾಕ್ ಮೇಲ್ ಮಾಡಿದ್ದರಂತೆ. ಸ್ವಾಮೀಜಿಗೆ ಮಹಿಳೆ ಬ್ಲ್ಯಾಕ್ ಮೇಲ್ ಮಾಡಿದ್ದರಿಂದ 4.5 ಲಕ್ಷ ಹಣವನ್ನು ನೀಡಲಾಗಿತ್ತು. ಮತ್ತೆ 1 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಸ್ವಾಮೀಜಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬಾಕೆಯನ್ನು ಬಂಧಿಸಲಾಗಿದೆ. https://kannadanewsnow.com/kannada/massive-operation-by-custom-officials-in-bengaluru-7-72-kg-of-cocaine-seized/

Read More

ಬೆಂಗಳೂರು: ನಗರದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 7.72 ಕೆಜಿ ಕೊಕೇನ್ ವಶ ಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 38.60 ಕೋಟಿ ಎಂಬುದಾಗಿ ಅಂದಾಜಿಸಲಾಗಿದೆ. ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಏರ್ ಪೋರ್ಟ್ ನಲ್ಲಿ 38.60 ಕೋಟಿ ಮೌಲ್ಯದ 7.72 ಕೆಜಿ ಕೊಕೇನ್ ವಶ ಪಡಿಸಿಕೊಳ್ಳಲಾಗಿದೆ. ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆಸಿ ವಶ ಪಡಿಸಿಕೊಳ್ಳಲಾಗಿದೆ. https://kannadanewsnow.com/kannada/kochi-muziris-biennale-brings-new-impetus-to-kerala-tourism-road-show-across-the-country/

Read More

ಬೆಂಗಳೂರು : ಭಾರತದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’ (Kochi-Muziris Biennale) ಈ ಬಾರಿಯ ಪ್ರವಾಸಿ ಋತುವನ್ನು ಮತ್ತಷ್ಟು ವರ್ಣರಂಜಿತವಾಗಿಸಿದೆ. ಸಮಕಾಲೀನ ಕಲೆಗೆ (Contemporary Art) ಜಾಗತಿಕ ವೇದಿಕೆಯಾಗಿರುವ ಕೊಚ್ಚಿ, ಪ್ರತಿ ಎರಡು ವರ್ಷಗಳಿಗೊಮ್ಮೆ ಸಾಂಸ್ಕೃತಿಕವಾಗಿ ಮರುಹುಟ್ಟು ಪಡೆಯುತ್ತದೆ. ಕೊಚ್ಚಿ ಕೋಟೆಯ ಐತಿಹಾಸಿಕ ಮತ್ತು ಪಾರಂಪರಿಕ ಪರಿಸರದಲ್ಲಿ ನಡೆಯುತ್ತಿರುವ ಈ ಕಲಾ ಹಬ್ಬವು ಕಲೆ, ಇತಿಹಾಸ ಮತ್ತು ಪ್ರವಾಸೋದ್ಯಮವನ್ನು ಬೆಸೆಯುವ ಮೂಲಕ ಪ್ರವಾಸಿಗರಿಗೆ ಅನನ್ಯ ಅನುಭವವನ್ನು ನೀಡುತ್ತಿದೆ. ದಕ್ಷಿಣ ಏಷ್ಯಾದಲ್ಲೇ ಅತ್ಯಂತ ದೊಡ್ಡದಾದ ಈ ಕಲಾ ಉತ್ಸವವು ಮಾರ್ಚ್ 31ರವರೆಗೆ ಮುಂದುವರಿಯಲಿದ್ದು, ವಿಶ್ವದ ಮೂಲೆಮೂಲೆಗಳ ಕಲಾವಿದರ ಅತ್ಯಾಧುನಿಕ ಕಲಾಕೃತಿಗಳು ಇಲ್ಲಿನ ಪಾರಂಪರಿಕ ತಾಣಗಳಲ್ಲಿ ಪ್ರದರ್ಶನಗೊಳ್ಳುತ್ತಿವೆ. ಕಲೆಯನ್ನೇ ಪ್ರವಾಸೋದ್ಯಮದ ಕೇಂದ್ರಬಿಂದುವಾಗಿಸಿಕೊಂಡಿರುವ ಈ ಉತ್ಸವವು, ಕೊಚ್ಚಿಯನ್ನು ಇತಿಹಾಸ ಮತ್ತು ಸೃಜನಶೀಲತೆಯ ಸಂಗಮ ತಾಣವನ್ನಾಗಿ ಮರುರೂಪಿಸಿದೆ. ಪ್ರವಾಸೋದ್ಯಮ ಸಚಿವರ ಮಾತು: ಈ ಕುರಿತು ಮಾತನಾಡಿದ ಕೇರಳ ಪ್ರವಾಸೋದ್ಯಮ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್, “ಕೋವಿಡ್ ನಂತರದ ದಿನಗಳಲ್ಲಿ ಕೇರಳಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ…

Read More

ಹಾಸನ: ಜಿಲ್ಲೆಯ ಕಚೇರಿಯೊಂದರಲ್ಲಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಹಾಸನದ ಬೇಲೂರಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನ ತಾಲ್ಲೂಕು ಕಚೇರಿಯಲ್ಲೇ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಬೇಕಂತಲೇ ಕೆಲಸದ ಒತ್ತಡ ಹೇರುತ್ತಿದ್ದಾರೆಂಬ ಆರೋಪದಡಿ ಶಿರಸ್ತೇದಾರ್ ತನ್ವೀರ್ ಅಹ್ಮದ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಕಚೇರಿ ಮುಂಭಾಗದಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೇ ಬೇಲೂರು ತಹಶೀಲ್ದಾರ್ ಶ್ರೀಧರ್ ಮಾತ್ರ ಶಿರಸ್ತೇದಾರ್ ತನ್ವೀರ್ ಅಹ್ಮದ್ ಸುಳ್ಳು ಆರೋಪ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಅವರ ವಿರುದ್ಧವೇ ದೂರು ನೀಡಲು ತಹಶೀಲ್ದಾರ್ ನಿರ್ಧರಿಸಿದ್ದಾರೆ. https://kannadanewsnow.com/kannada/site-for-family-members-of-prajwal-ritti-who-found-treasure-in-lakkundi-lakkundi-gram-panchayat-announcement/

Read More