Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಸರ್ಕಾರ ಪ್ರಕಟಿಸಿದೆ. ಈ ಬಾರಿ ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿಗೆ ಬಾಜನರಾಗಿದ್ದರೇ, ಅರ್ಚನಾ ಜೋಯ್ಸ್ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ರಾಜ್ಯ ಸರ್ಕಾರವು ಇಂದು ಪ್ರಶಸ್ತಿಯನ್ನು ಪ್ರಕಟಿಸಿದ್ದು, 2021ನೇ ಸಾಲಿನ ರಾಜ್ಯ ಅತ್ಯುತ್ತಮ ನಟ ಪ್ರಶಸ್ತಿಗೆ ರಕ್ಷಿತ್ ಶೆಟ್ಟಿ, ನಟಿ ಪ್ರಶಸ್ತಿಗೆ ಅರ್ಚನಾ ಜೋಯ್ಸ್ ಬಾಜನರಾಗಿದ್ದಾರೆ. ಇನ್ನೂ ದೊಡ್ಡಹಟ್ಟಿ ಬೋರೇಗೌಡ ಮೊದಲನೇ ಅತ್ಯುತ್ತಮ ಚಿತ್ರವಾಗಿದ್ದರೇ, 777 ಚಾರ್ಲಿಗೆ ಎರಡನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಬಂದಿದೆ. ಬಿಸಿಲು ಕುದುರೆಗೆ 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ, ಯುವರತ್ನ ಚಿತ್ರಕ್ಕೆ ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ಸಂದಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಚಿತ್ರ ಇದಾಗಿದೆ. ಭಾರತದ ಪ್ರಜೆಗಳಾದ ನಾವು ಚಿತ್ರಕ್ಕೆ ವಿಶೇಷ ಕಾಳಜಿಯ ಚಿತ್ರ ಪ್ರಶಸ್ತಿ ಸಂದಿದೆ.
ಮಹಾರಾಷ್ಟ್ರ: ಬೆಳಗಾವಿ ಜಿಲ್ಲೆಯ ಒಂದೇ ಕುಟುಂದ ಮೂವರು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಸರಾ ರಜೆಯ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದಿಂದ 8 ಜನರು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರತೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಬೆಳಗಾವಿ ಜಿಲ್ಲೆಯ ಆಳ್ನಾವರದಿಂದ ತೆರಳಿದ್ದಂತ 8 ಜನರಲ್ಲಿ ಮೂವರು ಸಮುದ್ರಪಾಲಾಗಿದ್ದಾರೆ. ಅವರ ಶವ ಪತ್ತೆಯಾಗಿದ್ದು, ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಸಮುದ್ರದಲ್ಲಿ ಕಣ್ಮರೆಯಾಗಿರುವಂತ ಉಳಿದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ಫರೀನ್ ಇರ್ಫಾನ್ ಕಿತ್ತೂರ(34), ಇಬಾದ್ ಕಿತ್ತೂರ(13) ಹಾಗೂ ಆಳ್ನಾವರದ ನಮೀರಾ ಅಕ್ತರಾ(16) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ನಿವಾಸಿಗಳಾಗಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಪದವಿ / ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅ.4ರಿಂದ (ಬೆ. 11) ಅ.9 (ಬೆಳಿಗ್ಗೆ 11) ರೊಳಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ನೀಟ್-ಪಿಜಿ 2025ರಲ್ಲಿ ಅರ್ಹತೆ ಪಡೆದಿರುವ ಹಾಗೂ ಅರ್ಹತಾ ಮಾನದಂಡಗಳನ್ನು ಪೂರೈಸುವ ಕರ್ನಾಟಕ ಸೇವಾನಿರತ ಅರ್ಹ ಅಭ್ಯರ್ಥಿಗಳಿಂದ 2025-26ನೇ ಸಾಲಿಗೆ ಕರ್ನಾಟಕ ರಾಜ್ಯದಲ್ಲಿನ ಸ್ನಾತಕೋತ್ತರ ಡಿ ಎನ್ ಬಿ ಹಾಗೂ ಡಿಪ್ಲೊಮಾ ವೈದ್ಯಕೀಯ ಕೋರ್ಸುಗಳಿಗೂ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳು, ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಾಗುವ ಸರ್ಕಾರಿ ಕೋಟಾ ಸೀಟುಗಳು ಮತ್ತು ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿನ ಖಾಸಗಿ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ನೋಂದಣಿ ಶುಲ್ಕ, ದಾಖಲಾತಿ ಪರಿಶೀಲನೆಯ ವಿವರಗಳು, ದಾಖಲಾತಿ…
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್ 25)ಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ವಿವರಗಳನ್ನು ತಿದ್ದುಪಡಿ ಮಾಡಲು ಅ.6ರವರೆಗೆ (ಸಂಜೆ 5.30) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ. ಮೊಬೈಲ್ ದೂರವಾಣಿ ಸಂಖ್ಯೆ ಹೊರತುಪಡಿಸಿ, ಆನ್ ಲೈನ್ ಅರ್ಜಿಯಲ್ಲಿನ ಎಲ್ಲ ವಿವರಗಳ ತಿದ್ದುಪಡಿಗೂ ಅವಕಾಶ ನೀಡಲಾಗಿದೆ. ಒಂದು ವೇಳೆ ದೂರವಾಣಿ ಸಂಖ್ಯೆ ಬದಲಿಸಿಕೊಳ್ಳಬೇಕೆನ್ನುವವರು ಖುದ್ದು ಕೆಇಎಗೆ ಬಂದು ಅರ್ಜಿ ಕೊಡಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ಎಚ್.ಪ್ರಸನ್ನ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಒಮ್ಮೆ ತಿದ್ದುಪಡಿ ಮಾಡಿದ ನಂತರ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಎಚ್ಚರ ವಹಿಸಲು ಅವರು ಸಲಹೆ ನೀಡಿದ್ದಾರೆ. ಪುನಃ ತಿದ್ದುಪಡಿ ಸಂಬಂಧ ಯಾವುದೇ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. https://twitter.com/KEA_karnataka/status/1974136959070257572?t=mzQSLhK9xDNZdQiozrQG_Q&s=08 https://kannadanewsnow.com/kannada/kea-announces-provisional-results-for-mba-mca/ https://kannadanewsnow.com/kannada/breaking-i-am-getting-married-soon-dimple-queen-rachita-ram-gave-good-news-to-fans/
ಬೆಂಗಳೂರು: ಎಂಬಿಎ, ಎಂಸಿಎ, ಎಂಟೆಕ್, ಎಂಇ, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಸಂಜೆ ಪ್ರಕಟಿಸಿದೆ. ಫಲಿತಾಂಶಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಅ.4ರಂದು ಮಧ್ಯಾಹ್ನ 1ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದು. ಬಳಿಕ ಪರಿಶೀಲಿಸಿ, ಅದೇ ದಿನ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಬೆಂಗಳೂರು: ಇಂದು ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ವಿಧವಶರಾಗಿದ್ದರು. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂತಾಪ ಸೂಚಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ (97)ಅವರು ನಿಧನಕ್ಕೆ KUWJ ಸಂತಾಪ ವ್ಯಕ್ತಪಡಿಸಿದೆ. ಕೆಯುಡಬ್ಲ್ಯೂಜೆ ಮನೆಯಂಗಳದ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿದ್ದು ಮರೆಯಲಾಗದ ಕ್ಷಣ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸ್ಮರಿಸಿದ್ದು, ಅನುಭವಿ ಪತ್ರಕರ್ತರೊಬ್ಬರನ್ನು ಸುದ್ದಿಮನೆ ಕಳೆದುಕೊಂಡಿದೆ ಎಂದು ಶೋಕಿಸಿದ್ದಾರೆ. https://twitter.com/kuwj_r/status/1974121371409293586?s=46&t=K__Bb-oISWk0C8ZNc8qCGw https://kannadanewsnow.com/kannada/good-news-for-enumerators-who-performed-duties-in-the-scheduled-caste-survey-in-the-state-honorarium-released/ https://kannadanewsnow.com/kannada/alert-smokers-beware-cigarettes-can-cause-these-serious-diseases/
2010 ರಲ್ಲಿ, ಭಾರತೀಯ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದರು. 8 ವರ್ಷಗಳ ನಂತರ, ದಂಪತಿಗಳು ತಮ್ಮ ಮೊದಲ ಮಗುವನ್ನು ಜಗತ್ತಿಗೆ ಸ್ವಾಗತಿಸಿದರು, ಅವರಿಗೆ ಅವರು ಇಜಾನ್ ಮಿರ್ಜಾ ಮಲಿಕ್ ಎಂದು ಹೆಸರಿಸಿದರು. ಇದೀಗ ತನ್ನ ಮೂರನೇ ಪತ್ನಿ ಸನಾ ಜಾವೇದ್ ನಿಂದ ವಿಚ್ಛೇದನ ಪಡೆಯಲು ಶೋಯೆಬ್ ಮಲ್ಲಿಕ್ ಮುಂದಾಗಿರುವುದಾಗಿ ವರದಿಯಾಗಿದೆ. 2024 ರ ಜನವರಿಯಲ್ಲಿ ಕರಾಚಿಯಲ್ಲಿರುವ ಅವರ ಮನೆಯಲ್ಲಿ ನಡೆದ ಖಾಸಗಿ ನಿಕಾಹ್ ಸಮಾರಂಭದಲ್ಲಿ ಶೋಯೆಬ್ ಪಾಕಿಸ್ತಾನಿ ಟಿವಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾದಾಗ, ನೆಟಿಜನ್ಗಳು ಆಘಾತಕ್ಕೊಳಗಾದರು. ಟೆನಿಸ್ ಆಟಗಾರ್ತಿ ತಮ್ಮ ಮೂರನೇ ಮದುವೆಗೆ ತಿಂಗಳುಗಳ ಮೊದಲು ಕ್ರಿಕೆಟಿಗರಿಂದ ‘ಖುಲಾ’ ಮೂಲಕ ವಿಚ್ಛೇದನ ಪಡೆದಿದ್ದಾರೆ ಎಂದು ಸಾನಿಯಾ ಅವರ ಕುಟುಂಬ ನಂತರ ದೃಢಪಡಿಸಿತು. ಸರಿ, ಶೋಯೆಬ್ ತಮ್ಮ ಮೂರನೇ ವಿಚ್ಛೇದನದತ್ತ ಸಾಗುತ್ತಿದ್ದಾರೆ ಎಂದು ಈಗ ಬಝ್ ಸೂಚಿಸುತ್ತದೆ. ಶೋಯೆಬ್ ಮತ್ತು ಸನಾ ಅವರ ಈ ವೀಡಿಯೊದ ಜೊತೆಗೆ “ಮತ್ತೊಂದು ಬ್ರೇಕ್-ಅಪ್ ದಾರಿಯಲ್ಲಿದೆಯೇ?”…
ಬೆಂಗಳೂರು: ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಾಳೆಯಿಂದ ಆರಂಭವಾಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025 ಕ್ಕೆ ನಾಗರಿಕರು ಸಹಕರಿಸುವಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಮನವಿ ಮಾಡಿದ್ದಾರೆ. ಸಮೀಕ್ಷೆದಾರರಿಗೆ 29-09-2025 ಮತ್ತು 03-10-2025ರಂದು ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆ ಸುಗಮವಾಗಿ ನಡೆಯಲು ಒಟ್ಟು 9 ಮಂದಿ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ 2 ವಲಯಗಳಲ್ಲಿನ ವಿಧಾನಸಭಾ ಕ್ಷೇತ್ರಗಳ 64 ವಾರ್ಡ್ಗಳ ಒಟ್ಟು 14.65 ಲಕ್ಷ ಮನೆಗಳು ಈ ಸಮೀಕ್ಷೆಗೆ ಒಳಪಡಲಿವೆ ಎಂದಿದ್ದಾರೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಗೆ ವಿಧಾನಸಭಾ ಕ್ಷೇತ್ರಗಳಾದ ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ (ಭಾಗಶಃ), ರಾಜರಾಜೇಶ್ವರಿ ನಗರ, ಯಶವಂತಪುರ ಹಾಗೂ ದಾಸರಹಳ್ಳಿ (ಭಾಗಶಃ) ಸೇರಿವೆ. ಹಿಂದುಳಿದ ವರ್ಗಗಳ ಆಯೋಗ ಮತ್ತು ಸರ್ಕಾರದ ನಿರ್ದೇಶನದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025 ನಡೆಸಲು ಎಲ್ಲಾ ಪೂರ್ವ ತಯಾರಿಗಳನ್ನು…
ಬೆಂಗಳೂರು: ಇದೇ ಮೊದಲ ಬಾರಿಗೆ ವಾರಣಾಸಿಯ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಮಂಡ್ಯ ಜಿಲ್ಲೆ ಕೆ ಆರ್ ಎಸ್ ನಲ್ಲಿ ಐತಿಹಾಸಿಕ ಕಾವೇರಿ ಆರತಿಯನ್ನು ಅಭೂತಪೂರ್ಣವಾಗಿ ನೆರವೇರಿಸಿದ ಪಂಡಿತ, ಪುರೋಹಿತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸನ್ಮಾನಿಸಿದರು. ಮಂಡ್ಯ ಜಿಲ್ಲೆ ಕೆಆರ್ ಎಸ್ ನ ಬೃಂದಾವನ ಉದ್ಯಾನದಲ್ಲಿ ಸತತ 5 ದಿನಗಳ ಕಾಲ ಕಾವೇರಿ ಆರತಿಯಲ್ಲಿ ಪಾಲ್ಗೊಂಡ 55 ಮಂದಿ ಅರ್ಚಕರನ್ನು ಶಿವಕುಮಾರ್ ಅವರು ಕುಮಾರಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಸರಕಾರಿ ನಿವಾಸದಲ್ಲಿ ಶುಕ್ರವಾರ ಫಲ, ತಾಂಬೂಲ, ವಸ್ತ್ರ ನೀಡಿ ಸಾಂಪ್ರದಾಯಿಕವಾಗಿ ಅಭಿನಂದಿಸಿದರು. ತಮ್ಮನ್ನು ಸನ್ಮಾನಿಸಿ ಸತ್ಸಂಪ್ರದಾಯ ಮೆರೆದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕಾವೇರಿ ಆರತಿ ಪ್ರಧಾನ ಅರ್ಚಕ ವಿಜಯಕುಮಾರ್ ಪಂಡಿತ್ ಅವರು ಆಶೀರ್ವದಿಸಿದರು. ಕಾವೇರಿ ಆರತಿ ನಿಲ್ಲುವುದಿಲ್ಲ ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು,”ಕಾವೇರಿ ಆರತಿಯನ್ನು ನಿಲ್ಲಿಸುವುದಿಲ್ಲ, ಮುಂದುವರೆಸುತ್ತೇವೆ. ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ. ನಾವೆಲ್ಲರೂ ಸೇರಿ ಪ್ರಾರ್ಥನೆ ಸಲ್ಲಿಸೋಣ. ಆರತಿಗಾಗಿ ಸ್ಟೇಡಿಯಂ ಮಾದರಿ…
ಬೆಂಗಳೂರು: ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ನೋವಾಯಿತು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಭಾರತೀಯ ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಟಿ.ಜೆ.ಎಸ್ ಜಾರ್ಜ್ ಅವರು ಅಂಕಣಕಾರರಾಗಿ ರಾಜಕೀಯ ವಿದ್ಯಮಾನಗಳ ವಿಶ್ಲೇಷಣೆ ಮೂಲಕ ರಾಜಕೀಯ ವ್ಯವಸ್ಥೆಯನ್ನು ಸದಾ ಜಾಗೃತಗೊಳಿಸುವ ಕೆಲಸ ಮಾಡಿದ್ದರು. ಸುಮಾರು 25. ವರ್ಷಗಳ ಕಾಲ ನಿರಂತರ ಅಂಕಣಕಾರರಾಗಿ ಸಾಮಾಜಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ದ ನಿರಂತರ ತಮ್ಮ ಲೇಖನಿ ಮೂಲಕ ಧ್ವನಿ ಎತ್ತುವ ಕೆಲಸ ಮಾಡಿದ್ದರು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಅವರು ಸಾಹಿತ್ಯ ಮತ್ತು ಪತ್ರಿಕಾ ರಂಗದಲ್ಲಿ ಸಲ್ಲಿಸಿದ ಸೇವೆಗೆ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅವರ…