Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತದಾದ್ಯಂತ ಡಿಜಿಟಲ್ ಪಾವತಿಗಳು ದೈನಂದಿನ ಜೀವನದಲ್ಲಿ ಆಳವಾಗಿ ಹುದುಗುತ್ತಿದ್ದಂತೆ, ಈ ವಹಿವಾಟುಗಳ ಸುರಕ್ಷತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಹೊಸ ಕ್ರಮಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಘೋಷಿಸಿದೆ. ಹೊಸ ದೃಢೀಕರಣ ನಿಯಮಗಳು ಯಾವುವು ಮತ್ತು ಅವು ಯಾವಾಗ ಪ್ರಾರಂಭವಾಗುತ್ತವೆ? ಫೆಬ್ರವರಿ 2024 ರಲ್ಲಿ, ದೇಶದ ಪಾವತಿ ಪರಿಸರ ವ್ಯವಸ್ಥೆಯಾದ್ಯಂತ ದೃಢೀಕರಣ ವಿಧಾನಗಳನ್ನು ಆಧುನೀಕರಿಸುವ ತನ್ನ ಯೋಜನೆಗಳನ್ನು RBI ವಿವರಿಸಿದೆ. ಈ ಯೋಜನೆಗಳನ್ನು ಈಗ ಭಾರತೀಯ ರಿಸರ್ವ್ ಬ್ಯಾಂಕ್ (ಡಿಜಿಟಲ್ ಪಾವತಿ ವಹಿವಾಟುಗಳಿಗೆ ದೃಢೀಕರಣ ಕಾರ್ಯವಿಧಾನಗಳು) ನಿರ್ದೇಶನಗಳು, 2025 ರಲ್ಲಿ ಔಪಚಾರಿಕಗೊಳಿಸಲಾಗಿದೆ, ಇದು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿದೆ. “ಬ್ಯಾಂಕ್‌ಗಳು ಮತ್ತು ಬ್ಯಾಂಕೇತರ ಘಟಕಗಳು ಸೇರಿದಂತೆ ಎಲ್ಲಾ ಪಾವತಿ ವ್ಯವಸ್ಥೆ ಪೂರೈಕೆದಾರರು ಮತ್ತು ಪಾವತಿ ವ್ಯವಸ್ಥೆ ಭಾಗವಹಿಸುವವರು ಏಪ್ರಿಲ್ 1, 2026 ರೊಳಗೆ ಈ ನಿರ್ದೇಶನಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಬೇಕು, ನಿರ್ದಿಷ್ಟ ನಿಬಂಧನೆಗಳಿಗೆ ಬೇರೆ ರೀತಿಯಲ್ಲಿ ನಿರ್ದಿಷ್ಟಪಡಿಸದ ಹೊರತು,” RBI ಹೇಳಿದೆ. SMS OTP ಇನ್ನು ಮುಂದೆ ಏಕೆ ಸಾಕಾಗುವುದಿಲ್ಲ?…
ಬೆಂಗಳೂರು: ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸಂಪೂರ್ಣ ಜವಾಬ್ದಾರಿ ಹಾಗೂ ಅಧಿಕಾರವನ್ನು ನಿರ್ದೇಶಕರಿಗೆ ಪುನಃ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಂಸ್ಥೆಯಲ್ಲಿ ನಡೆದಿದ್ದ ಅವ್ಯವಹಾರ ಹಾಗೂ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆಗೆ ನೇಮಿಸಲಾಗಿದ್ದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿ ಆದೇಶ ಹೊರಡಿಸಿದೆ. ಆಡಳಿತಾಧಿಕಾರಿಗಳಾಗಿ ನೇಮಕಗೊಂಡಿದ್ದ ಅಧಿಕಾರಿಗಳಿಗೆ ನೀಡಲಾಗಿದ್ದ ಎಲ್ಲಾ ಜವಾಬ್ದಾರಿಗಳನ್ನು ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ. ಆಡಳಿತಾತ್ಮಕ ವಿಷಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಿಬ್ಬಂದಿ ಸೇವಾ ವಿಷಯ, ಹಣಕಾಸು ನಿರ್ವಹಣೆ, ಸಂಗ್ರಹಣೆ, ಖರೀದಿ, ಮಾನವ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಎಲ್ಲಾ ಪೂರ್ಣ ಜವಾಬ್ದಾರಿಯನ್ನು ಈ ಹಿಂದೆ ಇದ್ದರಂತೆ ನಿರ್ದೇಶಕರಿಗೆ ಪುನಃ ಸ್ಥಾಪಿಸಿ ಆದೇಶ ಹೊರಡಿಸಲಾಗಿದೆ. https://kannadanewsnow.com/kannada/notice-has-been-served-to-the-bigg-boss-house-minister-eshwar-khandre/ https://kannadanewsnow.com/kannada/holiday-for-all-schools-in-the-state-till-october-18-decision-taken-at-a-meeting-led-by-cm-siddaramaiah/
ಬೆಂಗಳೂರು : ರಾಮನಗರ ಜಿಲ್ಲೆ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರ ಮಾಧ್ಯಮದಿಂದ ತಮಗೆ ತಿಳಿಯಿತು. ಈ ಬಗ್ಗೆ ಮಾಹಿತಿ ಪಡೆದಾಗ, ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲೇ 2 ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಮಾಡಿದ ಕಾರಣ ಈ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು. ಇಲ್ಲಿ ಎಸ್.ಟಿ.ಪಿ. ಕಾರ್ಯನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತಾಜ್ಯ ವಿಲೇವಾರಿ ಆಗುತ್ತಿಲ್ಲ, ಜನರೇಟರ್ ಸೆಟ್ ಗಳಿದ್ದು ಅದಕ್ಕೂ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಂಡಳಿ ಕ್ರಮ…
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕೆಎನ್ಎನ್ ಡಿಜಿಟಲ್ ಡೆಸ್ಕ್: ಜಾನ್ ಕ್ಲಾರ್ಕ್, ಮೈಕೆಲ್ ಎಚ್ ಡೆವೊರೆಟ್ ಮತ್ತು ಜಾನ್ ಎಂ ಮಾರ್ಟಿನಿಸ್ 2025 ರ ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ 2025 ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜಾನ್ ಕ್ಲಾರ್ಕ್, ಮೈಕೆಲ್ ಹೆಚ್. ಡೆವೊರೆಟ್ ಮತ್ತು ಜಾನ್ ಎಂ. ಮಾರ್ಟಿನಿಸ್ ಅವರಿಗೆ “ವಿದ್ಯುತ್ ಸರ್ಕ್ಯೂಟ್‌ನಲ್ಲಿ ಮ್ಯಾಕ್ರೋಸ್ಕೋಪಿಕ್ ಕ್ವಾಂಟಮ್ ಮೆಕ್ಯಾನಿಕಲ್ ಟನಲಿಂಗ್ ಮತ್ತು ಶಕ್ತಿ ಪರಿಮಾಣೀಕರಣದ ಆವಿಷ್ಕಾರಕ್ಕಾಗಿ” ನೀಡಲು ನಿರ್ಧರಿಸಿದೆ. https://twitter.com/NobelPrize/status/1975498493218394168
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಸಂದರ್ಭದಲ್ಲಿ ಮೂವರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅವರಿಗೆ ರಾಜ್ಯ ಸರ್ಕಾರದಿಂದ ತಲಾ 20 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಇಂದು ಸಮೀಕ್ಷೆ ಸಂಬಂಧ ಅಧಿಕಾರಗಳ ಜೊತೆಗೆ ಸಭೆಯನ್ನು ನಡೆಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು. ನಿನ್ನೆ ಶಿಕ್ಷಣ ಇಲಾಖೆಯಿಂದ ಒಂದು ಆದೇಶ ಮಾಡಲಾಗಿದೆ. ಹಿಂದುಳಿದ ಆಯೋಗದ ಜೊತೆಗೆ ಚರ್ಚಿಸಿ ಮಾಡಿರುವಂತ ಆದೇಶವಾಗಿದೆ. ಆ ಬಳಿಕ ಇಂದು ಚರ್ಚಿಸಿ ಎಲ್ಲಾ ಶಿಕ್ಷಕರನ್ನು ಸಮೀಕ್ಷೆಗೆ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ. ಒಂದು ದಿನಕ್ಕೆ ಕನಿಷ್ಠ 15 ಮನೆಗಳನ್ನು ಮಾಡಲು ಹೇಳಲಾಗಿತ್ತು. ಆದರೇ ಅದು ಸಾಧ್ಯವಾಗಿಲ್ಲ. ರಜೆ ವಿಸ್ತರಣೆ…
ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು. ನಾಳೆಯಿಂದ ಅಕ್ಟೋಬರ್ 8, 9, 10 ಮೂರು ದಿನ ವರ್ಕಿಂಗ್ ಡೇಸ್ ಇದೆ. 13, 14, 15, 16, 17, 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ಸಮೀಕ್ಷೆ ಹಿನ್ನಲೆಯಲ್ಲಿ ದಸರಾ ರಜೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದರು. ನಿನ್ನೆ ಶಿಕ್ಷಣ ಇಲಾಖೆಯಿಂದ ಒಂದು ಆದೇಶ ಮಾಡಲಾಗಿದೆ. ಹಿಂದುಳಿದ ಆಯೋಗದ ಜೊತೆಗೆ ಚರ್ಚಿಸಿ ಮಾಡಿರುವಂತ ಆದೇಶವಾಗಿದೆ. ಇಂದು ಈ…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೇ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಜಾತಿಗಣತಿ ಸಮೀಕ್ಷೆ ಮುಕ್ತಾಯವಾಗದ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಿಗೆ ರಜೆಯನ್ನು ಮುಂದುವರೆಸಲು ನಿರ್ಧರಿಸಲಾಯಿತು. ಅದರಂತೆ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ನಿರ್ಧರಿಸಲಾಗಿದೆ. ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ…
ರಾಮನಗರ: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ರಿಯಾಲಿಟಿ ಶೋ ಸ್ಥಗಿತಗೊಳಿಸುವಂತೆ ಕನ್ನಡಪರ ಸಂಘಟನೆಯಿಂದ ಬಿಗ್ ಬಾಸ್ ಸೆಟ್ ಬಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ರಾಮನಗರದ ಜಾಲಿವುಡ್ ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಬಳಿಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರಿಂದ ಶೋ ಸ್ಥಗಿತಗೊಳಿಸುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ. ಜಾಲಿವುಡ್ ಒಳಭಾಗದಲ್ಲಿ ನಡೆಯುತ್ತಿರುವಂತ ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. https://kannadanewsnow.com/kannada/7-daily-habits-that-damage-your-kidneys/
ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು. ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ…













