Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುವ ಸಂವಿಧಾನಕ್ಕೆ ವಿರೋಧಿಯಾಗಿದೆ. ಈ ಕೂಡಲೇ ವಿಧೇಯಕವನ್ನು ವಾಪಸ್ ಪಡೆಯಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶಗೌಡ ಅವರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ಲಾಭ ಆಗುವ ರೀತಿಯಲ್ಲಿ ವಾರ್ಡ್ ವಿಂಗಡಣೆ ಮಾಡಿದೆ. ಈ ವಿಂಗಡಣೆಯು ಸಾಕಷ್ಟು ನ್ಯೂನತೆಗಳಿಂದ ಕೂಡಿದೆ. ಬೆಂಗಳೂರು ಅಭಿವೃದ್ಧಿಗೆ ಮಾರಕವಾಗಿರುತ್ತದೆ. ಈ ವಿಧೇಯಕವನ್ನು ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದರು. ರಾಜ್ಯ ಸರಕಾರವು ಸಂವಿಧಾನಕ್ಕೆ ವಿರೋಧವಾಗಿ ಜಿಬಿಎ ಕಾಯ್ದೆ ತಿದ್ದುಪಡಿ ಮಾಡಲು ವಿಧೇಯಕ ಮಂಡನೆ ಮಾಡಿರುವುದು ಖಂಡನೀಯ. ಕೊನೇ ಹಂತದಲ್ಲಿ ಬಿಲ್ ಮಂಡನೆ ಮಾಡಿ ಅಂಗೀಕಾರ ಪಡೆಯುವ ಹುನ್ನಾರವನ್ನು ಸರಕಾರ ನಡೆಸಿದೆ ಎಂದು ಅವರು ಆರೋಪಿಸಿದರು. ಚುನಾವಣೆ ನಡೆಸಲು ಹೊಸ ವಾರ್ಡ್ ಗಳಿಗೆ ಕಾರ್ಪೋರೇಟರ್ ಗಳನ್ನ ನಾಮನಿರ್ದೇಶನ ಮಾಡಲು ಸಂವಿಧಾನವು ಸರಕಾರಕ್ಕೆ ಅವಕಾಶ ನಿಡುವುದಿಲ್ಲ. 74ನೇ ತಿದ್ದುಪಡಿ ಕಾಯ್ದೆ 1992ರಿಂದ ಸ್ಥಾಪಿಸಲ್ಪಟ್ಟ ಪುರಸಭೆಯನ್ನು…
ನವದೆಹಲಿ: ವೋಟ್ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಗಂಭೀರ ಎಚ್ಚರಿಕೆ ನೀಡಿದರು. ರಾಜ್ಯಸಭೆಯಲ್ಲಿ ಸೋಮವಾರ ಈ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿಗಳು; ಪ್ರತಿಪಕ್ಷಗಳು ನಿರಂತರವಾಗಿ ಸುಳ್ಳಿನ ಕಥೆಗಳನ್ನು ಪ್ರಚಾರ ಮಾಡುತ್ತಾ ಹೋದರೆ, ಮತದಾರರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟು ಹಾಕಿದರೆ ಅದರಿಂದ ಪ್ರತಿಪಕ್ಷಗಳಿಗೆ ಒಳ್ಳೆಯದು ಮಾಡುವುದಿಲ್ಲ ಎಂದು ಹೇಳಿದರು. ಪ್ರತಿಪಕ್ಷಗಳು ಪ್ರಧಾನಿಯವರ ಬಗ್ಗೆ ಹಾದಿಬೀದಿಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಕಟ್ಟದ್ದಾಗಿ ಟೀಕೆ ಮಾಡುತ್ತಿರುವ ಬಗ್ಗೆ ಮಾಜಿ ಪ್ರಧಾನಿಗಳು ಹರಿಹಾಯ್ದರು. “ನಮ್ಮದು ಬಹಳ ದೊಡ್ಡ ರಾಷ್ಟ್ರ. ಕಾಂಗ್ರೆಸ್ ಪಕ್ಷವು ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರಬಹುದು. ನನ್ನ ಪ್ರತಿಪಕ್ಷ ಸ್ನೇಹಿತರೇ ದಯವಿಟ್ಟು ನೆನಪಿಡಿ ‘ವೋಟ್ ಚೋರಿ’ ಎಂಬ ಪದಗಳನ್ನು ಬಳಸುವುದರಿಂದ ನೀವು ಮುಂಬರುವ ದಿನಗಳಲ್ಲಿ ತೊಂದರೆ ಅನುಭವಿಸುತ್ತೀರಿ. ನೀವು ಯುದ್ಧದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು…
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಶೇ. 100 % ರಷ್ಟು ಪಲ್ಸ್ ಪೋಲಿಯೋ ಗುರಿ ಸಾಧಿಸಲು ಅಗತ್ಯ ಕ್ರಮವಹಿಸುವಂತೆ ಮುಖ್ಯ ಆಯಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕುರಿತು ವರ್ಚುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಸೆಂಬರ್ 21 ರಿಂದ 24 ರವರೆಗೆ 4 ದಿನಗಳ ಕಾಲ “ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರ” ಮದ ಭಾಗವಾಗಿ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಅಗತ್ಯ ಕ್ರಮವಹಿಸಿ ಶೇ. 100 % ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಾದ್ಯಂತ ಪಲ್ಸ್ ಫೋಲಿಯೋ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ನರ್ಸಿಂಗ್ ಕಾಲೇಜುಗಳು, ವೈದ್ಯಕೀಯ ಕಾಲೇಜುಗಳು, ಪ್ಯಾರಾ ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಸ್ವಯಂಸೇವಕರನ್ನಾಗಿ ಬಳಸಿಕೊಂಡು ಎಲ್ಲರಿಗೂ ಪೊಲೀಯೋ ಹನಿ ಹಾಕುವ ಕಾರ್ಯವಾಗಬೇಕೆಂದು ಸೂಚನೆ ನೀಡಿದರು. ನಗರದ ಬಸ್ ನಿಲ್ದಾಣ, ಮಾರುಕಟ್ಟೆ, ರೈಲ್ವೇ ಮತ್ತು ಮೆಟ್ರೊ ನಿಲ್ದಾಣ, ಮಾಲ್ ಗಳು, ಪ್ರಮುಖ ಉದ್ಯಾನವನಗಳು, ಪ್ರವಾಸಿ…
ನೀವು ಯಾವುದಾದರೂ ಮನೆ ಅಥವಾ ಅಂಗಡಿ ಕಟ್ಟಿ ಬೇಕಾಗಿರುವ ಸ್ಥಳದಲ್ಲಿ ಅಥವಾ ತೆಗೆದುಕೊಳ್ಳಬೇಕೆಂಬ ಅಪೇಕ್ಷೆ ಇದ್ದಲ್ಲಿ ಆ ಸ್ಥಳದಲ್ಲಿ ವಿನಾದರೂ ದೋಷಗಳಿವೆಯೇ ಯಾವ ದಿಕ್ಕಿಗೆ ಮನೆ ಅಥವಾ ಅಂಗಡಿಯನ್ನು ಕಟ್ಟಿದರೆ ಶ್ರೇಯಸ್ಸಾಗುತ್ತದೆ. ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564 ಹಾಗೂ ಆ ಸ್ಥಳವನ್ನು ವಾಸ್ತು ಶಾಸ್ತ್ರಕ್ಕೆ ಅನುಗುಣವಾಗಿ ಯಾವ ರೀತಿ ಸರಿ ಪಡಿಸಿ ಕೊಳ್ಳಬೇಕು. ಮತ್ತು ಯಾವ ಆಯಾದಲ್ಲಿ ಯಾವ ರೀತಿಯಾಗಿ ಮನೆ ಯನ್ನು ಕಟ್ಟಬೇಕು ಆ ಮನೆಯ ಯಜ ಮಾನುನಯೇ ಸ್ಥಳಕ್ಕೆ ಸಾಲಾವಳಿ ಆಗಿ ಬರುತ್ತದೆಯೇ ಮತ್ತು ಆ ಮನೆಯ ಯಜಮಾನರಿಗೆ ಗುರುಬಲ ಇದೆಯೇ ಯಾವ ದೆಶೆ ನಡೆಯುತ್ತಿದೆ ಯಾವ ದಿಕ್ಕಿಗೆ ಜಾತಕದ ಪ್ರಕಾರ ಬಾಗಿಲನ್ನು…
ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಾಂತಿನಗರ ವಿಭಾಗದ ಮಹಾತ್ಮ ಗಾಂಧಿ ಉದ್ಯಾನದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಶಾಸಕರಾದ ಎನ್.ಎ. ಹ್ಯಾರಿಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಹಾತ್ಮ ಗಾಂಧಿ ಉದ್ಯಾನದ ಪುನರ್‌ಅಭಿವೃದ್ಧಿ ಕಾಮಗಾರಿಯ ವಿನ್ಯಾಸವನ್ನು ಪರಿಶೀಲಿಸಿ, ಕೂಡಲೇ ಕಾಮಗಾರಿಯನ್ನು ಆರಂಭಿಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಂ.ಜಿ. ರಸ್ತೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ರಸ್ತೆ ಮೇಲ್ದರ್ಜೆಗೇರಿಸುವ ಸಲುವಾಗಿ ಸ್ಟೋನ್ ಮೆಟ್ರಿಕ್ಸ್ ಆಸ್ಫಾಲ್ಟ್ ಅಥವಾ ಮೈಕ್ರೋ ಸರ್ಫೇಸಿಂಗ್ ಮಾಡಬೇಕು. ಫಾಮ್ ಗ್ರೂವ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಾಂತಿನಗರ ವಿಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು, ಮೂಲಸೌಕರ್ಯ ಯೋಜನೆಗಳು ಹಾಗೂ ಸಾರ್ವಜನಿಕ ಸೌಲಭ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಎಲ್ಲಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸುವಂತೆ…
ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಂಸ್ಥೆಯಾದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಸಾರ್ವಜನಿಕ ಜಾಗೃತಿಗಾಗಿ ಕೈಗೊಂಡ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳಿಂದ ಮೂಲದಲ್ಲಿಯೇ ತ್ಯಾಜ್ಯದ ವಿಂಗಡಣೆಯ ಪ್ರಮಾಣವು ವೃದ್ಧಿಯಾಗಿದ್ದು, ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್-Refused Derived Fuel) ಸಂಗ್ರಹಣೆಯ ಪ್ರಮಾಣದಲ್ಲಿಯೂ ಸಹ ವೃದ್ಧಿಯಾಗಿರುತ್ತದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಸಾಧಿಸಿದ ದಿಟ್ಟ ಕ್ರಮವಾಗಿರುತ್ತದೆ. ಪ್ರಸ್ತುತ, ಪ್ರತಿದಿನ 350 ಮೆ.ಟನ್ ರಿಂದ 400 ಮೆ.ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್ – Refused Derived Fuel) ಸಂಗ್ರಹಣೆಯಾಗುತ್ತಿದೆ. * ಅಂದಾಜು 100-150 ಮೆ.ಟನ್ ತ್ಯಾಜ್ಯವನ್ನು ಬಿಡದಿ ಬಳಿಯ ತ್ಯಾಜ್ಯದಿಂದ ಇಂಧನ ಉತ್ಪಾದನೆ ಸ್ಥಾವರಕ್ಕೆ ಕಳುಹಿಸಲಾಗುತ್ತಿದೆ. * 200-250 ಮೆ.ಟನ್ ತ್ಯಾಜ್ಯವನ್ನು ನೆರೆಯ ಕಡಪ ಜಿಲ್ಲೆಯ ಮೆ||ದಾಲ್ಮಿಯಾ ಸಿಮೆಂಟ್ ಲಿಮಿಟೆಡ್ ಘಟಕಕ್ಕೆ ಸಾಗಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಇಂದು (ದಿನಾಂಕ:15.12.2025) ಮೊದಲನೇ ದಿನ ಒಟ್ಟು 160 ಮೆ.ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್ – Refused…
ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಇನ್ಮುಂದೆ ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ನೆನಪು ಮಾತ್ರವೇ ಆಗುವಂತಾಗಿದೆ. ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ನಿನ್ನೆಯ ಭಾನುವಾರದ ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದರು. ಶಾಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆಯಲ್ಲಿ ನೀರವಮೌನವೇ ಆವರಿಸಿತ್ತು. ಕೊಡುಗೈ ದಾನಿಯ ಕೊನೆಯ ಯಾತ್ರೆಯಲ್ಲಿ ಜನಸಾಗರವೇ ಸೇರಿತ್ತು. ಭಾವುಕರಾಗಿಯೇ ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಇಂದು ದಾವಣಗೆರೆಯಲ್ಲಿ ಅಂತಿನ ದರ್ಶನದ ಬಳಿಕ ಕಲ್ಲೇಶ್ವರ ಮಿಲ್ ಗೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ವೀರ ಶೈವ ಲಿಂಗಾಯತ ಸಂಪ್ರದಾಯದಂತೆ ಪತ್ನಿ ಸಮಾಧಿಯ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ…
ಬೆಂಗಳೂರು: ಅಪಘಾತ, ಅಪರಾಧ ರಹಿತವಾಗಿ ಸೇವೆ ಸಲ್ಲಿಸುವಂತ ಕೆ ಎಸ್ ಆರ್ ಟಿ ಸಿ ಚಾಲಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿ ನಿಗಮವು ಆದೇಶ ಹೊರಡಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷಾ ಅವರು ಸುತ್ತೋಲೆ ಹೊರಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನಿಗಮದ ವಾಹನಗಳಲ್ಲಿ ಪಯಾಣಿಸುವವರ ಸುರಕ್ಷತೆಗಾಗಿ ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಅದರಲ್ಲಿ ಮುಖ್ಯವಾಗಿ ಅಪಘಾತ ರಹಿತ ಚಾಲನೆಯ ಪ್ರವೃತ್ತಿಯನ್ನು ಹೊಂದಿರುವ ಚಾಲಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಪಘಾತ ಮುಕ್ತ ಚಾಲನೆಗೆ ಪ್ರೇರೆಪಿಸುವ ಸಲುವಾಗಿ ಅಪಘಾತರಹಿತ ಮತ್ತು ಅಪರಾಧರಹಿತ ಸೇವೆ ಸಲ್ಲಿಸಿರುವ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಮತ್ತು ಬೆಳ್ಳಿ ಪದಕ ವಿತರಿಸುವ ಜೊತೆಗೆ ಪ್ರಶಂಸನಾ ಪತ್ರದೊಂದಿಗೆ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ. ನಂತರ ಪದಕ ಪಡೆದ ಚಾಲಕರಿಗೆ ಪ್ರತಿ ತಿಂಗಳು ಮಾಸಿಕ ಭತ್ಯೆಯನ್ನು ನೀಡಲಾಗುತ್ತಿದೆ ಎಂದಿದ್ದಾರೆ. ಮುಂದುವರೆದು, ಮುಖ್ಯ ಮಂತ್ರಿ ಚಿನ್ನದ ಪದಕ ಮತ್ತು ಬೆಳ್ಳಿ…
ದಾವಣಗೆರೆ: ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾಗಿದ್ದ ದಾವಣಗೆರೆಯನ್ನು ವಿದ್ಯಾನಗರಿಯಾಗಿ ಪರಿವರ್ತಿಸಿದ ಶಾಮನೂರು ಶಿವಶಂಕಪ್ಪ ಅವರು ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಶಾಮನೂರು ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ದಶಕಕ್ಕೂ ಹೆಚ್ಚುಕಾಲ ಅವರು ಸಲ್ಲಿಸಿರುವ ಸೇವೆ ಅನುಪಮವಾದ್ದು ಎಂದರು. ಸಭಾದ ನಿಕಟಪೂರ್ವ ಅಧ್ಯಕ್ಷರಾಗಿದ್ದ ತಮ್ಮ ತಂದೆ ಶತಾಯುಷಿ ಭೀಮಣ್ಣ ಖಂಡ್ರೆ ಅವರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಶಾಮನೂರು ಅವರು ತಮಗೂ ಮಾರ್ಗದರ್ಶಕರಾಗಿದ್ದರು ಎಂದು ತಿಳಿಸಿದರು. ದಾವಣಗೆರೆ ತಾಲೂಕನ್ನು ಜಿಲ್ಲೆಯಾಗಿ ಮಾಡುವಲ್ಲಿ ಅವರ ಕೊಡುಗೆ ಅಪಾರವಾಗಿದೆ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು. ನೇರ ನಿಷ್ಟುರ ವಾದಿಯಾಗಿದ್ದ ಅವರ ಆಗಲಿಕೆಯಿಂದ ರಾಷ್ಟ್ರ ಒಬ್ಬ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ಈಶ್ವರ ಖಂಡ್ರೆ ಶೋಕ ವ್ಯಕ್ತಪಡಿಸಿದರು. https://kannadanewsnow.com/kannada/good-news-for-ksrtc-bus-drivers-monthly-allowance-cash-reward-for-accident-free-crime-free-service-increased/ https://kannadanewsnow.com/kannada/government-orders-appointment-of-taluk-medical-officers-for-84-taluks-of-the-state-here-is-the-list/
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಚಾಲಕರಿಗೆ ಅಪಘಾತ ರಹಿತ ಮತ್ತು ಅಪರಾಧ ರಹಿತವಾಗಿ ಸೇವೆ ಸಲ್ಲಿಸಿದವರಿಗೆ ಮಾಸಿಕ ಭತ್ಯೆಯನ್ನು ಮತ್ತು ನಗದು ಪುರಸ್ಕಾರ ನೀಡಲಾಗುತ್ತದೆ. ಈ ನಗದು ಪುರಸ್ಕಾರದ ಮೊತ್ತವನ್ನು ಹೆಚ್ಚಳ ಮಾಡಿ ಕೆ ಎಸ್ ಆರ್ ಟಿಸಿ ಆದೇಶಿಸಿದೆ. ಈ ಮೂಲಕ ಕೆ ಎಸ್ ಆರ್ ಟಿ ಸಿ ಚಾಲಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷಾ ಅವರು ಸುತ್ತೋಲೆ ಹೊರಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನಿಗಮದ ವಾಹನಗಳಲ್ಲಿ ಪಯಾಣಿಸುವವರ ಸುರಕ್ಷತೆಗಾಗಿ ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಅದರಲ್ಲಿ ಮುಖ್ಯವಾಗಿ ಅಪಘಾತ ರಹಿತ ಚಾಲನೆಯ ಪ್ರವೃತ್ತಿಯನ್ನು ಹೊಂದಿರುವ ಚಾಲಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಪಘಾತ ಮುಕ್ತ ಚಾಲನೆಗೆ ಪ್ರೇರೆಪಿಸುವ ಸಲುವಾಗಿ ಅಪಘಾತರಹಿತ ಮತ್ತು ಅಪರಾಧರಹಿತ ಸೇವೆ ಸಲ್ಲಿಸಿರುವ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಮತ್ತು ಬೆಳ್ಳಿ ಪದಕ ವಿತರಿಸುವ ಜೊತೆಗೆ ಪ್ರಶಂಸನಾ…














