Author: kannadanewsnow09

ಉತ್ತರ ಕನ್ನಡ: ಜಿಲ್ಲೆಯಲ್ಲಿ ಅರಬ್ಬಿ ಸಮುದ್ರದ ನೀರಿಗೆ ಇಳಿದಿದ್ದಂತ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋಗಿರುವಂತ ಘಟನೆ ನಡೆದಿದೆ. ಇವರಲ್ಲಿ ಓರ್ವ ಶವವಾಗಿ ಪತ್ತೆಯಾಗಿದ್ದರೇ, ಇನ್ನೂ ಮೂವರ ಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದ ಅರಬ್ಬಿ ಸಮುದ್ರದಲ್ಲಿ ಆಟವಾಡಲು ಶಾಲಾ ಮಕ್ಕಳು ಇಳಿದಿದ್ದರು. ಈ ಸಂದರ್ಭದಲ್ಲಿ ಅರಬ್ಬಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗೆ ನಾಲ್ವರು ಕೊಚ್ಚಿ ಹೋಗಿದ್ದಾರೆ. ಕೊಚ್ಚಿ ಹೋಗಿರುವಂತ ನಾಲ್ವರಲ್ಲಿ ಓರ್ವ ಶಾಲಾ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಇನ್ನೂ ಮೂವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಅವರ ಪತ್ತೆಗಾಗಿ ಈಜುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography – Kannada News | India News | Breaking news | Live news |…

Read More

ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನರಾದ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಹೀಗಾಗಿ ಸಾರ್ವತ್ರಿಕ ರಜೆ ಇರುವ ಕಾರಣ ನಾಳೆ ನಡೆಯಬೇಕಿದ್ದಂತ ಕೆಇಎ ನೇಮಕಾತಿ ಪರೀಕ್ಷೆಗಳನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 10-12-2024ರಂದು ಮಾಜಿ ಸಿಎಂ ಮತ್ತು ಕೇಂದ್ರ ಸಚಿವರಾಗಿದ್ದಂತ ಎಸ್ ಎಂ ಕೃಷ್ಣ ಅವರು ನಿಧನರಾಗಿರುವ ಕಾರಣ ದಿನಾಂಕ 11-12-2024ರಂದು ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದುದ್ದರಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 11-12-2024ರಂದು ನಿಗದಿಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 12-12-2024ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ. https://kannadanewsnow.com/kannada/namma-metro-rail-services-in-bengaluru-to-resume-as-usual-tomorrow-bmrcl/ https://kannadanewsnow.com/kannada/karnatakas-suit-boot-cm-sm-krishna-its-a-journey-of-ups-and-downs/

Read More

ಮುತೈದೆಯರು ಈ ಕೆಲಸವನ್ನು ಮಾಡಿದರೆ ಸಾಕು ಮನೆಯಲ್ಲಿ ನೆಮ್ಮದಿಯ ಸುಖ ಸಂಸಾರದ ಜೀವನ ನಡೆಸಲು..!!! ೧] ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು. ೨] ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು, ೩] ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣಲ್ಲಿ ನೀರು ಹಾಕಬಾರದು. ೪] ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ಹೂಗಳನ್ನು ಕೊಟ್ಟೆ ಕಳಿಸಬೇಕು. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ೫] ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ…

Read More

ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ನಾಳೆ ರಾಜ್ಯ ಸರ್ಕಾರದಿಂದ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಹೀಗಾಗಿ ನಮ್ಮ ಮೆಟ್ರೋದ ಅಧಿಕಾರಿ, ಸಿಬ್ಬಂದಿಗಳಿಗೆ ಮಾತ್ರವೇ ರಜೆಯನ್ನು ಘೋಷಿಸಲಾಗಿದೆ. ಅದರ ಹೊರತಾಗಿ ನಮ್ಮ ಮೆಟ್ರೋ ರೈಲು ಸಂಚಾರ ಸೇವೆ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂಬುದಾಗಿ ಬಿಎಂಆರ್ ಸಿಎಲ್ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ(BMRCL), ಮೆಟ್ರೋ ಕಾರ್ಯಾಚರಣೆಗಳು ಅತ್ಯಗತ್ಯ ಸೇವೆಯಾಗಿದೆ. ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾಳೆ ಸಾಮಾನ್ಯ ವೇಳಾಪಟ್ಟಿಯ ಪ್ರಕಾರ ಮೆಟ್ರೋ ಚಲಿಸುತ್ತದೆ ಎಂಬುದಾಗಿ ತಿಳಿಸಿದೆ. ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೆ ರಜೆ ಘೋಷಣೆ ರಾಜ್ಯ ಸರ್ಕಾರದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೂ ಬಿಎಂಆರ್ ಸಿಎಲ್ ರಜೆ ಘೋಷಿಸಿ ಆದೇಶಿಸಿದೆ. ಈ…

Read More

ಬೆಂಗಳೂರು: ಬಿಬಿಎಂಪಿಯ ಯಲಹಂಕ ವಲಯ ಆಯುಕ್ತರಾದ ಕರೀಗೌಡ ರವರ ನಿರ್ದೇಶನದಂತೆ ನಗರದ ಯಲಹಂಕ ವಲಯದಲ್ಲಿ ಇಂದು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಯಿತು. ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದರಿಂದ ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ತೊಂದರೆಯಾಗುತ್ತಿರುವುದನ್ನು ಪಾಲಿಕೆಯು ಗಮನಿಸಲಾಗಿ, ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಇಂದು ಯಲಹಂಕ ವಲಯ ಯಲಹಂಕ ಉಪ ವಿಭಾಗದ ವಾರ್ಡ್ ನಂ.1ಕೆಂಪೇಗೌಡ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಯಲಹಂಕ ರೈತರ ಸಂತೆ (ಜಕ್ಕೂರು ಮುಖ್ಯರಸ್ತೆ), ಬಿ.ಬಿ.ರಸ್ತೆ, ಸರ್ಕಾರಿ ಆಸ್ಪತ್ರೆ ರಸ್ತೆ, ಯಲಹಂಕ ಮತ್ತು ಡೌನ್ ಬಜಾರ್ ರಸ್ತೆಗಳಲ್ಲಿ ರಸ್ತೆಬದಿ ಮತ್ತು ಪಾದಚಾರಿ ಮಾರ್ಗಗಳಲ್ಲಿ ಇಟ್ಟಿರುವ ಅಂಗಡಿ ಮುಂಗಟ್ಟುಗಳನ್ನು ಮಾರ್ಷಲ್ ಗಳು ಹಾಗು ಪೊಲೀಸ್ ಸಿಬ್ಬಂದಿಗಳ ಸಹಯೋಗದೊಂದಿಗೆ ತೆರವುಗೊಳಿಸಿ, ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಓಡಾಟಕ್ಕೆ ಸುಗಮಗೊಳಿಸಲಾಯಿತು. ಈ ಸಮಯದಲ್ಲಿ ಅಂಗಡಿ ಮುಂಗಟ್ಟುಗಳಿಗೆ ದಂಡ ವಿಧಿಸಿ, ದಂಡದ ರೂಪದಲ್ಲಿ ರೂ.12000/- ಗಳನ್ನು ವಸೂಲಿ ಮಾಡಲಾಯಿತು. ಈ ವೇಳೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ…

Read More

ಬೆಳಗಾವಿ : ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೂಗು ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಬೆಳಗಾವಿಯಲ್ಲಿ ಈ ರೀತಿ ಪ್ರತಿಕ್ರಿಯೆ ನೀಡಿದರು. ಹೋರಾಟಕ್ಕೆ ವಿರೋಧವಿಲ್ಲ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು. ನಾಳೆ ಅಂತ್ಯಕ್ರಿಯೆಯಲ್ಲಿ ಭಾಗಿ ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರು ಅವರು ದಕ್ಷ ಆಡಳಿತಗಾರ . ವಿಧಾನ ಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆಗಳ ಸದಸ್ಯರಾಗಿದ್ದ ಎಸ್ ಎಂ ಕೃಷ್ಣ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ವಿಧಾನಸಭೆ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗದ ದೇವರಬೀಸನಹಳ್ಳಿ ಮತ್ತು ಆಡುಗೋಡಿ ಉಪಕೇಂದ್ರ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 11.12.2024 (ಬುಧವಾರ) ಮತ್ತು 12.12.2024 (ಗುರುವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಬೆಳ್ಳಂದೂರು, ಆರ್ ಎಮ್ ಜೆಡ್, ಎಕ್ಸೊಸ್ಪೇಸ್ ಎಕೋವರ್ಲ್ಡ, ದೇವರಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ, ಸಕ್ರ ಆಸ್ಪತ್ರೆ, ಪಾಸ್ ಪೋರ್ಟ್ ಆಫೀಸ್, ಶೋಭ ಅಪಾರ್ಟಮೆಂಟ್, ಹೊರ ವರ್ತುಲ ರಸ್ತೆ, 5ನೇ ಇಂಡಸ್ಟ್ರಿಯಲ್ ಲೇಔಟ್, ಕೋರಮಂಗಲ, ಮಡಿವಾಳ ವೆಂಕಟೇಶ್ವರ ಬಡಾವಣೆ, ಚಿಕ್ಕ ಆಡುಗೋಡಿ, ಜೋಗಿ ಕಾಲೋನಿ, ಈಸ್ಟ್ ಲ್ಯಾಂಡ್ ಹೊಲ್ಡಿಂಗ್ ಬಿಲ್ಡಿಂಗ್, ಸೈಂಟ್ ಜಾನ್ ಸ್ಟಾಫ್ ಕ್ವಾಟ್ರಸ್, ಮಾರುತಿನಗರ, ಆಡುಗೋಡಿ 7ನೇ ಮತ್ತು 8ನೇ ಬ್ಲಾಕ್, ಸಿ.ಎ.ಆರ್. ಪೊಲೀಸ್ ಕ್ವಾಟ್ರಸ್, ಆಡುಗೊಡಿ ಮುಖ್ಯ ರಸ್ತೆ, ಸೈಂಟ್ ಜಾನ್ ಆಸ್ಪತ್ರೆ, ಮಡಿವಾಳ, ಮಾರುತಿ ನಗರ, ಡಾಲರ್ಸ್ ಕಾಲೋನಿ, 100 ಫೀಟ್ ರಿಂಗ್ ರಸ್ತೆ, ಆರ್ಯಾಕಲ್ ಕಂಪನಿ, ಬಿ.ಜಿ.ರಸ್ತೆ, ಕೆ.ಹೆಚ್.ಬಿ. ಕಾಲೋನಿ,…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನಲೆಯಲ್ಲಿ ನಾಳೆ ರಾಜ್ಯ ಸರ್ಕಾರದಿಂದ ಸರ್ಕಾರಿ ರಜೆ ಘೋಷಿಸಿ ಆದೇಶಿಸಿದೆ. ಈ ಕಾರಣದಿಂದಾಗಿ ಕೆ ಎಸ್ ಆರ್ ಟಿ ನಿಗಮಗಳ ಅಧಿಕಾರಿ, ಸಿಬ್ಬಂದಿಗಳಿಗೆ ನಾಳೆ ಸರ್ಕಾರಿ ರಜೆ ಘೋಷಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದು, ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರ ನಿಧನದ ಪ್ರಯುಕ್ತ ದಿವಂಗತರ ಗೌರವಾರ್ಥವಾಗಿ ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಶಾಲಾ ಕಾಲೇಜುಗಳಿಗೆ ದಿನಾಂಕ 11-12-2024ರಂದು ಸಾರ್ವಜನಿಕ ರಜೆಯನ್ನು ಸರ್ಕಾರ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಕೆ ಎಸ್ ಆರ್ ಟಿ ಸಿ ನಿಗಮದ ಕೇಂದ್ರ ಕಚೇರಿ, ವಿಭಾಗೀಯ ಕಚೇರಿಗಳು, ತರಬೇತಿ ಕೇಂದ್ರಗಳಿಗೆ ಅನ್ವಯಿಸುವಂತೆ ದಿನಾಂಕ 11-12-2024ರಂದು ರಜೆ ಘೋಷಿಸಲು ಸೂಕ್ತಾಧಿಕಾರಿಗಳು ಅನುಮೋದಿಸಿರುತ್ತಾರೆ. ಅದರಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಇನ್ನೂ ಕೆ ಎಸ್ ಆರ್ ಟಿಸಿಯ ನಂತ್ರ ಇತರೆ ಸಾರಿಗೆ ನಿಗಮಗಳು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೂ ಬಿಎಂಆರ್ ಸಿಎಲ್ ರಜೆ ಘೋಷಿಸಿ ಆದೇಶಿಸಿದೆ. ಈ ಸಂಬಂಧ ಕಚೇರಿ ಆದೇಶವನ್ನು ಹೊರಡಿಸಿರುವಂತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು, ದಿನಾಂಕ 10.12.2024ರಂತೆ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್ ಎಂ ಕೃಷ್ಣ ರವರ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಪ್ರಕಟಿಸಿದೆ ಎಂದಿದೆ. ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ:11.12.2024ರ ಬುಧವಾರದಂದು ರಜೆಯನ್ನು ಘೋಷಿಸಿದೆ ಎಂದು ತಿಳಿಸಿದೆ. https://kannadanewsnow.com/kannada/india-blocks-over-59000-whatsapp-accounts-linked-to-online-frauds/ https://kannadanewsnow.com/kannada/karnatakas-suit-boot-cm-sm-krishna-its-a-journey-of-ups-and-downs/

Read More

ನವದೆಹಲಿ: ಗೃಹ ವ್ಯವಹಾರಗಳ ಸಚಿವಾಲಯದ ಭಾಗವಾಗಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (ಐ 4 ಸಿ) ಡಿಜಿಟಲ್ ವಂಚನೆಯನ್ನು ಎದುರಿಸಲು ಮತ್ತು ಸೈಬರ್ ಅಪರಾಧಗಳಿಂದ ನಾಗರಿಕರನ್ನು ರಕ್ಷಿಸಲು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಮಂಗಳವಾರ ಲೋಕಸಭೆಯಲ್ಲಿ ನೀಡಿದ ಹೇಳಿಕೆಯ ಪ್ರಕಾರ, ಡಿಜಿಟಲ್ ವಂಚನೆಗಾಗಿ ಬಳಸಲಾಗುತ್ತಿದ್ದ 1,700 ಕ್ಕೂ ಹೆಚ್ಚು ಸ್ಕೈಪ್ ಐಡಿಗಳು ಮತ್ತು 59,000 ಕ್ಕೂ ಹೆಚ್ಚು ವಾಟ್ಸಾಪ್ ಖಾತೆಗಳನ್ನು (  WhatsApp accounts ) ಐ 4 ಸಿ ನಿರ್ಬಂಧಿಸಿದೆ. ಈ ಉಪಕ್ರಮವು ಸೈಬರ್ ಅಪರಾಧವನ್ನು ನಿಗ್ರಹಿಸುವ ಮತ್ತು ತನ್ನ ನಾಗರಿಕರನ್ನು ಆನ್ಲೈನ್ ಬೆದರಿಕೆಗಳಿಂದ ರಕ್ಷಿಸುವ ಭಾರತದ ವಿಶಾಲ ಪ್ರಯತ್ನಗಳ ಭಾಗವಾಗಿದೆ. ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರು ಐ 4 ಸಿ ಅಡಿಯಲ್ಲಿ 2021 ರಲ್ಲಿ ಪ್ರಾರಂಭಿಸಲಾದ ‘ಸಿಟಿಜನ್ ಫೈನಾನ್ಷಿಯಲ್ ಸೈಬರ್ ಫ್ರಾಡ್ ರಿಪೋರ್ಟಿಂಗ್ ಮತ್ತು ಮ್ಯಾನೇಜ್ಮೆಂಟ್ ಸಿಸ್ಟಮ್’ ನ ಮಹತ್ವವನ್ನು ಒತ್ತಿ ಹೇಳಿದರು. ಈ ವ್ಯವಸ್ಥೆಯು ನಾಗರಿಕರಿಗೆ ನೈಜ ಸಮಯದಲ್ಲಿ ಹಣಕಾಸು…

Read More