Author: kannadanewsnow09

ನವದೆಹಲಿ: ಜುಲೈ-ಸೆಪ್ಟೆಂಬರ್ 2024 ರ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಬದಲಾಯಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ನಿರ್ಧಾರವು ಪ್ರಸ್ತುತ ದರಗಳು ಈ ತ್ರೈಮಾಸಿಕದಲ್ಲಿಯೂ ಅನ್ವಯವಾಗುವುದನ್ನು ಮುಂದುವರಿಸುತ್ತವೆ. ಅಂಚೆ ಕಚೇರಿ ಉಳಿತಾಯ ಯೋಜನೆಗಳಲ್ಲಿ ಸಾರ್ವಜನಿಕ ಭವಿಷ್ಯ ನಿಧಿ, ಹಿರಿಯ ನಾಗರಿಕರ ಉಳಿತಾಯ ಯೋಜನೆ (ಎಸ್ಸಿಎಸ್ಎಸ್), ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ), ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್ಎಸ್ಸಿ), ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ (ಪಿಒಟಿಡಿ), ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಮತ್ತು ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (ಪಿಒಎಂಐಎಸ್) ಸೇರಿವೆ. “ಜುಲೈ 2024 ರಿಂದ ಪ್ರಾರಂಭವಾಗಿ 2024-25 ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2024-25 ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (2024 ರ ಏಪ್ರಿಲ್ 1 ರಿಂದ 2024 ರ ಜೂನ್ 30 ರವರೆಗೆ) ಅಧಿಸೂಚಿತವಾದವುಗಳಿಂದ ಬದಲಾಗುವುದಿಲ್ಲ” ಎಂದು ಹಣಕಾಸು ಸಚಿವಾಲಯ ಜೂನ್ 2, 2024ರಂದು ಬಿಡುಗಡೆ ಮಾಡಿದ ಪತ್ರಿಕಾ…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಕರೆಯಲಾಗಿದ್ದಂತ ಕೆಎಎಸ್ ಅಧಿಕಾರಿಗಳ ಹುದ್ದೆಗಳಿಗೆ ನಿಗದಿ ಪಡಿಸಿದ್ದಂತ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ:21-06-2024ರಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (one time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು 15 ದಿನಗಳ ಕಾಲಾವಕಾಶವನ್ನು ನೀಡುವಂತೆ ಆದೇಶಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳಿಗೆ ದಿನಾಂಕ:21-07-2024ರಂದು ನಡೆಸಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:25-08-2024ರಂದು ನಡೆಸಲು ಮರುನಿಗದಿಪಡಿಸಿರುತ್ತದೆ ಅಂತ ಮಾಹಿತಿ ನೀಡಿದ್ದಾರೆ. https://kannadanewsnow.com/kannada/shimoga-dcc-bank-elections-congress-candidates-win-bjp/ https://kannadanewsnow.com/kannada/breaking-congress-mp-phulo-devis-health-deteriorates-during-protest-in-parliament-hospitalised/

Read More

ಶಿವಮೊಗ್ಗ: ಇಂದು ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭಾರೀ ಮುಖಭಂಗ ಅನುಭವಿದೆ. 13 ಸ್ಥಾನಗಳಲ್ಲಿ ಒರ್ವ ಅಭ್ಯರ್ಥಿ ಮಾತ್ರ ಗೆದ್ರೇ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಸಹಕಾರಿ ಧುರೀಣ ಆರ್.ಎಂ ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕುರಿತಂತೆ ಚುನಾವಣಾಧಿಕಾರಿ ಸತ್ಯನಾರಾಯಣ್ ಮಾಹಿತಿ ನೀಡಿದ್ದು, ಬೇಳೂರು ಗೋಪಾಲಕೃಷ್ಣ, ಸಿ.ಹನುಮಂತಪ್ಪ, ಎಸ್ ಪಿ ಚಂದ್ರಶೇಖರ್ ಗೌಡ, ಎಸ್.ಕೆ ಮರಿಯಪ್ಪ, ಜಿಎನ್ ಸುಧೀರ, ಕೆ.ಪಿ ರುದ್ರಗೌಡ, ಟಿ.ಶಿವಶಂಕರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 13 ಮಂದಿ ಗೆಲುವು ಸಾಧಿಸಿದದಾರೆ ಅಂತ ತಿಳಿಸಿದ್ದಾರೆ. ಹೀಗಿದೆ ಕ್ಷೇತ್ರವಾರು ಗೆದ್ದ ಅಭ್ಯರ್ಥಿಗಳು ಹಾಗೂ ಪಡೆದ ಮತಗಳ ವಿವರ ಕ್ಷೇತ್ರ 1, ಶಿವಮೊಗ್ಗ ತಾಲ್ಲೂಕು : ಕೆ.ಪಿ ದುಗ್ಗಪ್ಪ ಗೌಡ – 13 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಶಿವನಂಜಪ್ಪ – 12 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಭದ್ರಾವತಿ ತಾಲ್ಲೂಕು: ಸಿ.ಹನುಮಂತಪ್ಪ 9 ಮತಗಳನ್ನು ಪಡೆದು…

Read More

ವ್ಯಕ್ತಿಯ ಶರೀರದಲ್ಲಿ ಅತ್ಯಂತ ನೋವಾಗುವುದು, ಶರೀರದಲ್ಲಿ ಬಿಸಿ ಹೆಚ್ಚಾಗುವುದು, ತಲೆ ಭಾರವಾಗುವುದು, ಶೂನ್ಯದ ಕಡೆಗೆ ನೋಡುವುದು, ಕೈಕಾಲುಗಳಲ್ಲಿ ಸಿಡಿತ ಉಂಟಾಗುವುದು, ಹುಚ್ಚು ಮಾತನಾಡುವುದು, ಇನ್ನೊಬ್ಬರಿಗೆ ತೊಂದರೆ ಕೊಡುವುದು, ಯಾವುದೇ ರೀತಿಯ ಔಷಧಿ ನಾಟದಿರುವುದು, ಮಂಕಾಗಿ ಕುಳಿತಿರುವುದು, ಯದ್ವಾತದ್ವಾ ಉತ್ತರ ಕೊಡುವುದು, ಅಕಾರಣವಾಗಿ ಸಿಟ್ಟಿಗೇಳುವುದು ಮುಂತಾದ ಪರಿಣಾಮಗಳು ಉಂಟಾಗುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ…

Read More

ಬೆಂಗಳೂರು: ನಾನು ರಾಜಕೀಯ ನಿವೃತ್ತಿಯಾಗೋ ಪ್ರಶ್ನೆಯೇ ಇಲ್ಲ. ಅದೆಲ್ಲವನ್ನು ಕಾಲವೇ ಉತ್ತರಿಸಲಿದೆ. ನಾನು ಈಗ ಪ್ರಜ್ವಲ್, ಸೂರಜ್ ಬಗ್ಗೆ ಯಾವುದೇ ಮಾತನಾಡೋದಿಲ್ಲ ಅಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜ್ವಲ್, ಸೂರಜ್ ಪ್ರಕರಣ ಕೋರ್ಟ್ ನಲ್ಲಿ ಇದೆ. ಹೀಗಾಗಿ ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ನನಗೆ ಕಾನೂನು, ನ್ಯಾಯಾಂಗದ ಮೇಲೆ ನಂಬಿಕೆ, ಗೌರವವಿದೆ. ಯಾವುದೇ ವಿಷಯ ಇದ್ರೂ ನ್ಯಾಯಾಂಗ, ದೇವರ ಮೇಲೆ ನಂಬಿಕೆಯಿದೆ ಎಂದರು. ಪ್ರಕರಮ ಕೋರ್ಟ್ ನಲ್ಲಿ ಇರುವಾಗ ನಾನು ಏನೂ ಮಾತನಾಡುವುದಿಲ್ಲ. ಮಾಜಿ ಶಾಸಕ ಪ್ರೀತಂ ಗೌಡ ಷಡ್ಯಂತ್ರದ ಬಗ್ಗೆಯೂ ಮಾತನಾಡಲ್ಲ. ನಾನು ರಾಜಕೀಯ ನಿವೃತ್ತಿಯಾಗೋ ಪ್ರಶ್ನೆಯೇ ಇಲ್ಲ. ಎಲ್ಲವನ್ನು ಕಾಲವೇ ಉತ್ತರಿಸಲಿದೆ ಅಂತ ತಿಳಿಸಿದರು. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಗೊತ್ತಿಲ್ಲ. ಅದೆಲ್ಲ ದೊಡ್ಡವರ ವಿಷಯವಾಗಿದೆ ಎಂದರು. ಚಂದ್ರಶೇಖರ ಸ್ವಾಮೀಜಿ ಯಾವ ಮಟ್ಟದಲ್ಲಿ ಇದ್ದರು. ಹೆಚ್ ಡಿಡಿ ಬಗ್ಗೆ…

Read More

ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕರ್ನಾಟಕದ ಹಲವು ಸಚಿವರು ದೆಹಲಿ ಭೇಟಿಗೆ ನೀಡಿ, ಕೇಂದ್ರ ಸರ್ಕಾರದ ಕೆಲ ಸಚಿವರನ್ನು ಭೇಟಿಯಾಗಿ, ರಾಜ್ಯ ಸರ್ಕಾರದ ಪ್ರಸ್ತಾವನೆಗಳನ್ನು ಮುಂದಿಟ್ಟಿದ್ದಾರೆ. ಹಾಗಾದ್ರೆ ಆ ಎಲ್ಲಾ ಪ್ರಸ್ತಾವನೆಗಳು ಏನು? ಆ ಬಗ್ಗೆ ಹೈಲೈಟ್ಸ್ ಮುಂದಿದೆ ಓದಿ. ಈ ಬಗ್ಗೆ ದೆಹಲಿಯ ಕರ್ನಾಟಕ‌ಭವನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿಯನ್ನು ಹಂಚಿಕೊಂಡರು. • ದಿನಾಂಕ 27-6-2024 ರಂದು ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಕೇಂದ್ರ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇರುವ ಪ್ರಸ್ತಾವನೆಗಳು ಹಾಗೂ ರಾಜ್ಯದ ಹಿತದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳ ಕುರಿತು ಸಭೆ ನಡೆಸಿ ಚರ್ಚಿಸಲಾಯಿತು. • ಸಭೆಯಲ್ಲಿ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರದ ಸಚಿವರುಗಳು ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು, ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. •ರಾಜಕೀಯ ಉದ್ದೇಶವಿಲ್ಲದ, ಅದಕ್ಕೂ ಮೀರಿ ನಮ್ಮ ರಾಜ್ಯದ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜೂನ್.30ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಜೂ.30 ರ ಬೆಳಗ್ಗೆ 09-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತ ಹೇಳಿದೆ. ಜೂ.30ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆ.ಹೆಚ್.ಬಿ ಕಾಲೋನಿ, ಮೇಲಿನ ತುಂಗಾನಗರ ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ,…

Read More

ರಾಮನಗರ: ರಾಜ್ಯ ಸರ್ಕಾರಕ್ಕೆ ಕೋಟ್ಯಂತರ ರೂ ವಂಚನೆ ಮಾಡಿರುವ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಇಂದು ಲೋಕಾಯುಕ್ತ ಪೊಲೀಸರು ರಾಮನಗರದ ಆರ್ ಟಿಓ ಕಚೇರಿ, ಬ್ರೋಕರ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆಯಲ್ಲಿ ಸಿಕ್ಕ ದಾಖಲೆಗಳನ್ನು ಆಧರಿಸಿ ಆರ್ ಟಿಓ, ಸಿಬ್ಬಂದಿ, ಬ್ರೋಕರ್ ಅರೆಸ್ಟ್ ಮಾಡಿದ್ದಾರೆ. ರಾಮನಗರ ಆರ್ ಟಿಓ ಅಧಿಕಾರಿ ಶಿವಕುಮಾರ್, ಎಸ್ ಡಿಎ ರಚಿತ್ ರಾಮ್ ಹಾಗೂ ಬ್ರೋಕರ್ ಸತೀಶ್ ಸೇರಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರೂ ವಂಚನೆ ಮಾಡಿರೋ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ಕೂಡ ನೀಡಲಾಗಿತ್ತು. ಇಂದು ರಾಮನಗರ ಆರ್ ಟಿ ಓ ಶಿವಕುಮಾರ್, ಎಸ್ ಡಿಎ ರಚಿತ್ ರಾಮ್ ಹಾಗೂ ಬ್ರೋಕರ್ ಸತೀಶ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ಆರ್ ಟಿಓ ಶಿವಕುಮಾರ್, ಎಸ್ ಡಿಎ ರಚಿತ್ ರಾಮ್, ಬ್ರೋಕರ್ ಸತೀಶ್…

Read More

ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಉಂಟಾದ ಪರಿಣಾಮ, ಕುಸಿದು ಬಿದ್ದು ಸರ್ಕಾರಿ ನೌಕರರೊಬ್ಬ ಸಾವನ್ನಪ್ಪಿರೋ ಘಟನೆ ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಊಟ ಮಾಡುತ್ತಿದ್ದಾಗಲೇ ಯೋಗೇಶ್ ಎಂಬುವರಿಗೆ ಹೃದಯಾಘಾತ ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಂದಹಾಗೇ ಚನ್ನಪಟ್ಟಣ ಮೂಲದ ಯೋಗೇಶ್, ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದನು. ಅವರು ಇಂದು ಊಟ ಮಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. https://kannadanewsnow.com/kannada/shimoga-dcc-bank-mla-belur-gopalakrishna-wins-by-a-huge-margin/ https://kannadanewsnow.com/kannada/breaking-congress-mp-phulo-devis-health-deteriorates-during-protest-in-parliament-hospitalised/

Read More

ಶಿವಮೊಗ್ಗ: ಇಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಗೆ ಮತದಾನ ನಡೆಯಿತು. ಈ ಚುನಾವಣೆಗೆ ನಿರ್ದೇಶಕರ ಸ್ಥಾನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಸ್ಪರ್ಧಿಸಿದ್ದರು. ಇಂತಹ ಚುನಾವಣೆಯಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಿತು. ಆ ಬಳಿಕ ಮತಏಣಿಕೆ ಕೂಡ ನಡೆದು, ಫಲಿತಾಂಶ ಪ್ರಕಟವಾಗಿದೆ.  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಾಗರ ತಾಲ್ಲೂಕು ಕ್ಷೇತ್ರದಿಂದ ಶಾಸಕ ಗೋಪಾಲಕೃಷ್ಣ ಬೇಳೂರು, ರತ್ನಾಕರ ಹೊನಗೋಡು ಕಣದಲ್ಲಿದ್ದರು. ತೀವ್ರ ಪೈಪೋಟಿಯ ನಡುವೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭರ್ಜರಿ ಗೆಲುವು ಸಾಧಿಸಿರೋದಾಗಿ ತಿಳಿದು ಬಂದಿದೆ. ಅಂದಹಾಗೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಇಂದು…

Read More