Author: kannadanewsnow09

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪವನ್ನು ಸೂಚಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ ಎಂದಿದ್ದಾರೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ ಎಂದು ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. https://twitter.com/CMofKarnataka/status/2000215539734749379 https://kannadanewsnow.com/kannada/the-mortal-remains-of-shamanur-shivashankarappa-will-be-sent-to-davangere-tomorrow-afternoon/ https://kannadanewsnow.com/kannada/dogital-arrest-man-1-crore/

Read More

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋಸಜತೆಯಿಂದ ನಿಧನರಾದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಕೊಂಡೊಯ್ಯೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ 1 ತಿಂಗಳಿನಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇಂದು ಸಂಜೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಕೊಂಡೊಯ್ಯುತ್ತಿರುವುದಾಗಿ ತಿಳಿದು ಬಂದಿದೆ. ದಾವಣಗೆರೆಯ ಬಾಪೂಜಿ ಸಂಸ್ಥೆಯ ಎಂಬಿಎ ಕಾಲೇಜು ಆವರಣದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. https://kannadanewsnow.com/kannada/sagar-mla-gopalakrishna-belur-condoles-the-death-of-senior-congress-leader-shamanur-shivashankarappa/ https://kannadanewsnow.com/kannada/dogital-arrest-man-1-crore/

Read More

ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ವಯೋಸಜಹತೆಯಿಂದ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪವನ್ನು ಸೂಚಿಸಿದ್ದಾರೆ. ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ದಾವಣಗೆರೆ ಜಿಲ್ಲೆಯ ಮುತ್ಸದ್ದಿ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು, ಮಾಜಿ ಮಂತ್ರಿ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು ಎಂದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶಾಮನೂರು ಶಿವಶಂಕರಪ್ಪ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. 6 ಬಾರಿ ಶಾಸಕರಾಗಿ, ಮಂತ್ರಿಯಾಗಿಯೂ ಸೇವೆಯನ್ನು ಶಾಮನೂರು ಶಿವಶಂಕರಪ್ಪ ಸಲ್ಲಿಸಿದ್ದಾರೆ. ಅವರ ನಿಧನಕ್ಕೆ ಹೃದಯಾಂತರಾಳದಿಂದ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಬಂದು ಬಳಗ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/minister-eshwar-khandre-condoles-the-death-of-senior-leader-shamanur-shivashankarappa/ https://kannadanewsnow.com/kannada/dogital-arrest-man-1-crore/

Read More

ನವದೆಹಲಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷರು ಮತ್ತು ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ಶಾಮನೂರು ಶಿವಶಂಕರಪ್ಪ ಅವರು ಈ ಹಿಂದೆ ತೋಟಗಾರಿಕಾ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆಯನ್ನು ಬಲಪಡಿಸಲು ಶ್ರಮಿಸಿದ್ದರು, ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನು ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ನಮ್ಮ ತಂದೆ ಭೀಮಣ್ಣ ಖಂಡ್ರೆ ಹಾಗೂ ತಮಗೆ…

Read More

ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಮಂಗಗಳ ಸರಣಿ ಸಾವುಗಳು ಸಂಭವಿಸಿರೋದಾಗಿ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಹೀಗಾಗಿ ತಾಲ್ಲೂಕಿನಲ್ಲಿ ಮತ್ತೆ ಮಂಗನ ಕಾಯಿಲೆಯ ಆಂತಕ ಹೆಚ್ಚಾಗಿದೆ. ಮಂಗನ ಕಾಯಿಲೆ ಭೀತಿ ಮತ್ತೆ ಸಾಗರ ತಾಲ್ಲೂಕಿನಲ್ಲಿ ಎದುರಾಗಿರುವ ಪರಿಣಾಮ ಜನರನ್ನು ಆತಂಕಕ್ಕೆ ದೂಡುವಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಳೆದ ಕೆಲ ತಿಂಗಳಿನಿಂದ ಮಂಗಗಳು ನಿರಂತರವಾಗಿ ಸಾವನ್ನಪ್ಪುತ್ತಿರುವುದಾಗಿ ತಿಳಿದು ಬಂದಿದೆ. ಸಾಗರ ತಾಲ್ಲೂಕಿನ ಹೆಗ್ಗೂಡು ಸಮೀಪದ ಮಾವಿನ ಸರದಲ್ಲಿ ಎರಡು, ಆವಿನಹಳ್ಳಿ ವ್ಯಾಪ್ತಿಯಲ್ಲಿ ಐದು, ಹೆಡ್ಜಿಗಳೆ ಮನೆ, ಆಡೂರು, ಸುಳುಗೋಡು ಗ್ರಾಮದಲ್ಲಿ ತಲಾ ಒಂದೊಂದು ಮಂಗಗಳು ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಮಂಗಗಳ ಸಾವಿನ ಮಾಹಿತಿ ತಿಳಿದಂತ ಆರೋಗ್ಯ ಇಲಾಖೆ, ಅರಣ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತೆಯರು ಸ್ಥಳಕ್ಕೆ ತೆರಳಿ ಅವುಗಳ ಮಾದರಿಯನ್ನು ಸಂಗ್ರಹಿಸಿ ಮಂಗನ ಕಾಯಿಲೆಯ ಪತ್ತೆಗಾಗಿ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಆ ಬಳಿಕ ಸಾವನ್ನಪ್ಪಿದ್ದಂತ ಮಂಗಗಳ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಮಂಗಗಳು ಸಾವನ್ನಪ್ಪಿರುವುದರಿಂದ ಮುಂಜಾಗ್ರತಾ…

Read More

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. 6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದರು. ಕಳೆದ 1 ತಿಂಗಳಿನಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ಇಂದು ಸಂಜೆ 6.45ಕ್ಕೆ ಚಿಕಿತ್ಸೆ ಫಲಿಸದೇ ನಿಧರಾಗಿರುವುದಾಗಿ ತಿಳಿದು ಬಂದಿದೆ.

Read More

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. 6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದರು. ಕಳೆದ 1 ತಿಂಗಳಿನಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ಇಂದು ಸಂಜೆ 6.45ಕ್ಕೆ ಚಿಕಿತ್ಸೆ ಫಲಿಸದೇ ನಿಧರಾಗಿರುವುದಾಗಿ ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಜೂನ್.16, 1931ರಲ್ಲಿ ದಾವಣಗೆರೆಯಲ್ಲಿ ಜನಿಸಿದ್ದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ಇದೀಗ ಶಾಮನೂರು ಶಿವಶಂಕರಪ್ಪ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಭಾನುವಾರ ದುಬೈನಲ್ಲಿ ನಡೆದ ಮಳೆಯಿಂದಾಗಿ ಸೀಮಿತಗೊಂಡ U19 ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಸಮಗ್ರ ಜಯ ಸಾಧಿಸಿತು. 241 ರನ್‌ಗಳ ಗುರಿಯನ್ನು ರಕ್ಷಿಸಿಕೊಂಡ ಭಾರತ, ಪಾಕಿಸ್ತಾನವನ್ನು 150 ರನ್‌ಗಳಿಗೆ ಆಲೌಟ್ ಮಾಡಿ ಪಂದ್ಯವನ್ನು 90 ರನ್‌ಗಳಿಂದ ಗೆದ್ದುಕೊಂಡಿತು. ಭಾರತೀಯ ಬೌಲರ್‌ಗಳು ಪಾಕಿಸ್ತಾನ ಬ್ಯಾಟ್ಸ್‌ಮನ್‌ಗಳ ಮೇಲೆ ಮೇಲುಗೈ ಸಾಧಿಸಲು ಬಿಡಲಿಲ್ಲ ಮತ್ತು ನಿರಂತರವಾಗಿ ಆರ್ಥಿಕ ಬೌಲಿಂಗ್ ಮೂಲಕ ಒತ್ತಡ ಹೇರಿದರು. ಹುಜೈಫಾ ಅಹ್ಸಾನ್ 70 ರನ್‌ಗಳೊಂದಿಗೆ ಉತ್ತಮ ಪ್ರದರ್ಶನ ನೀಡಿದರು ಆದರೆ ಇನ್ನೊಂದು ತುದಿಯಿಂದ ಯಾವುದೇ ಬೆಂಬಲ ಸಿಗಲಿಲ್ಲ. ಕನಿಷ್ಕ್ ಚೌಹಾಣ್ ಮತ್ತು ದೀಪೇಶ್ ದೇವೇಂದ್ರನ್ ತಲಾ ಮೂರು ವಿಕೆಟ್ ಪಡೆದರು. ಇದಕ್ಕೂ ಮೊದಲು, ಪಾಕಿಸ್ತಾನ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ ನಂತರ ಭಾರತ 46.1 ಓವರ್‌ಗಳಲ್ಲಿ 240 ರನ್‌ಗಳಿಗೆ ಆಲೌಟ್ ಆಯಿತು. ಮೊಹಮ್ಮದ್ ಸಯ್ಯಮ್ ಮತ್ತು ಅಬ್ದುಲ್ ಸುಭಾನ್ ತಲಾ ಮೂರು ವಿಕೆಟ್‌ಗಳನ್ನು ಮತ್ತು ನಿಕಾಬ್ ಶಫೀಕ್ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಭಾರತ ಪರ,…

Read More

ಹಾವೇರಿ: ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಓಟ್ ಚೋರಿ ಸುಳ್ಳನ್ನು ಸತ್ಯ ಮಾಡುವ ಅಭಿಯಾನ ಬಹಳಷ್ಟು ಕಾಂಗ್ರೆಸ್ ನಾಯಕರಿಗೆ ಅದರ ಬಗ್ಗೆ ನಂಬಿಕೆ ಇಲ್ಲ. ಅವರ ಪ್ರತಿಷ್ಠೆಗೆ ಅಲ್ಲಿಗೆ ಹೋಗುತ್ತಿದ್ದಾರೆ. ಸುಳ್ಳು ಸಾವಿರ ಬಾರಿ ಹೇಳಿ ಸತ್ಯ ಮಾಡಲು ಹೊರಟವರ ಮೇಲೆ ಕಾಂಗ್ರೆಸ್ ನವರಿಗೆ ನಂಬಿಕೆ ಇದೆ. ಅದರಿಂದ ಏನೂ‌ ಆಗಲ್ಲ. ಬಿಹಾರ್ ನಲ್ಲಿ ಇದನ್ನೇ ಮುಂದಿಟ್ಟುಕೊಂಡು ಚುನಾವಣೆ ಮಾಡಿದರು. ಅಲ್ಲಿ ಕಾಂಗ್ರೆಸ್ ಅತ್ಯಂತ ಕಡಿಮೆ ಸ್ಥಾನ ಪಡೆಯಿತು. ಅದರಿಂದ ಇನ್ನೂ ಪಾಠ ಕಲಿತಿಲ್ಲ ಅಂದರೆ ಏನು ಮಾಡಲು ಆಗುವುದಿಲ್ಲ ಎಂದು ಹೇಳಿದರು. ಸತ್ಯ ಹೊರಬರುತ್ತದೆ ಆಳಂದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತಿದಾರ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಾರ್ಜ್ ಶೀಟ್ ಸಲ್ಲಿಸಿದ ತಕ್ಷಣ…

Read More

ಆಸ್ಟ್ರೇಲಿಯಾ: ಸಿಡ್ನಿ ಬೋಂಡಿ ಬೀಚ್ ಗುಂಡಿನ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಇದೊಂದು ಭಯೋತ್ಪಾದಕರ ಕೃತ್ಯವೆಂದು NSW ಪೊಲೀಸ್ ಮುಖ್ಯಸ್ಥರು ಆರೋಪಿಸಿದ್ದಾರೆ. ‘ಇದು ಭಯೋತ್ಪಾದಕ ಘಟನೆ’ ಎಂದು NSW ಪೊಲೀಸ್ ಮುಖ್ಯಸ್ಥರು ಹೇಳುತ್ತಾರೆ. ಬೋಂಡಿ ಬೀಚ್ ಶೂಟೌಟ್‌ನ ಪತ್ರಿಕಾಗೋಷ್ಠಿಯಲ್ಲಿ, NSW ಪೊಲೀಸ್ ಮುಖ್ಯಸ್ಥ ಮಾಲ್ ಲ್ಯಾನ್ಯನ್ ಈ ದಾಳಿಯನ್ನು “ಭಯೋತ್ಪಾದಕ ಘಟನೆ” ಎಂದು ಕರೆದರು. “ಇದು ಭಯೋತ್ಪಾದಕ ಘಟನೆ” ಎಂದು ಲ್ಯಾನ್ಯನ್ ಹೇಳಿದರು, “ನಮ್ಮ ಭಯೋತ್ಪಾದನಾ ನಿಗ್ರಹ ಕಮಾಂಡ್ ರಾಜ್ಯ ಅಪರಾಧ ಕಮಾಂಡ್‌ನ ತನಿಖಾಧಿಕಾರಿಗಳೊಂದಿಗೆ ಈ ತನಿಖೆಯನ್ನು ಮುನ್ನಡೆಸುತ್ತದೆ. ಯಾವುದೇ ವ್ಯಕ್ತಿಗಳ್ನು ಬಿಡಲಾಗುವುದಿಲ್ಲ ಎಂದಿದ್ದಾರೆ. ಮೂರನೇ ಅಪರಾಧಿ ಇದ್ದಾರೆಯೇ ಎಂದು ಅಧಿಕಾರಿಗಳು ಪ್ರಸ್ತುತ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. “ನಮ್ಮಲ್ಲಿ ಇಬ್ಬರು ಖಚಿತ ಅಪರಾಧಿಗಳಿದ್ದಾರೆ ಎಂದು ನಮಗೆ ತಿಳಿದಿದೆ, ಆದರೆ ಸಮುದಾಯ ಸುರಕ್ಷಿತವಾಗಿದೆ ಎಂದು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ” ಎಂದು ಅವರು ಹೇಳಿದರು. “ಇದು ಪ್ರತೀಕಾರದ ಸಮಯವಲ್ಲ. ಪೊಲೀಸರು ತಮ್ಮ ಕರ್ತವ್ಯವನ್ನು ಮಾಡಲು…

Read More