Author: kannadanewsnow09

ಮೈಸೂರು: ಜಾವಗಲ್‌ನಲ್ಲಿ ನಡೆಯುವ ವಾರ್ಷಿಕ ಉರುಸ್ ಹಬ್ಬಕ್ಕೆ ತೆರಳುವ ಭಕ್ತರ ಸಂಚಾರವನ್ನು ಸುಗಮಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆ 04.10.2025 ರಿಂದ 07.10.2025ರವರೆಗೆ ನಾಲ್ಕು ದಿನಗಳ ಕಾಲ ಬಾಣಾವರ ರೈಲು ನಿಲ್ದಾಣದಲ್ಲಿ ಕೆಳಕಂಡ ರೈಲುಗಳಿಗೆ ತಾತ್ಕಾಲಿಕ ನಿಲ್ದಾಣ ನೀಡಲು ತೀರ್ಮಾನಿಸಿದೆ. ರೈಲುಗಳ ಆಗಮನ ಮತ್ತು ನಿರ್ಗಮನ ವೇಳಾಪಟ್ಟಿಯ ವಿವರಗಳು ಹೀಗಿವೆ: 1. ರೈಲು ಸಂಖ್ಯೆ 56519 ಕೆಎಸ್‌ಆರ್ ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ಬಾಣಾವರದಲ್ಲಿ ಬೆಳಿಗ್ಗೆ 08.35ಕ್ಕೆ ಆಗಮಿಸಿ 08.36ಕ್ಕೆ ನಿರ್ಗಮಿಸುತ್ತದೆ. 2. ರೈಲು ಸಂಖ್ಯೆ 16206 ಮೈಸೂರು – ತಾಳಗುಪ್ಪ ಇಂಟರ್‌ಸಿಟಿ ಬಾಣಾವರದಲ್ಲಿ ಬೆಳಿಗ್ಗೆ 09.07ಕ್ಕೆ ಆಗಮಿಸಿ 09.08ಕ್ಕೆ ನಿರ್ಗಮಿಸುತ್ತದೆ. 3. ರೈಲು ಸಂಖ್ಯೆ 17326 ಮೈಸೂರು – ಬೆಳಗಾವಿ ಎಕ್ಸ್‌ಪ್ರೆಸ್ ಬಾಣಾವರದಲ್ಲಿ ಬೆಳಿಗ್ಗೆ 11.32ಕ್ಕೆ ಆಗಮಿಸಿ 11.33ಕ್ಕೆ ನಿರ್ಗಮಿಸುತ್ತದೆ. 4. ರೈಲು ಸಂಖ್ಯೆ 12725 ಕೆಎಸ್‌ಆರ್ ಬೆಂಗಳೂರು – ಧಾರವಾಡ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಬಾಣಾವರದಲ್ಲಿ ಮಧ್ಯಾಹ್ನ 15.38ಕ್ಕೆ ಆಗಮಿಸಿ 15.39ಕ್ಕೆ ನಿರ್ಗಮಿಸುತ್ತದೆ. 5. ರೈಲು ಸಂಖ್ಯೆ 12726 ಧಾರವಾಡ – ಕೆಎಸ್‌ಆರ್…

Read More

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು…

Read More

ಚಿತ್ರದುರ್ಗ: ರಾಜ್ಯದಲ್ಲೊಂದು ಭೀಕರ ಅಪಘಾತ ಎನ್ನುವಂತೆ ಚಿತ್ರದುರ್ಗದಲ್ಲಿ ಕಾರು ಪಲ್ಟಿಯಾಗಿ ಮೂವರು ದುರ್ಮರಣ ಹೊಂದಿದ್ದಾರೆ. ಈ ಅಪಘಾತದಲ್ಲಿ ಇನ್ನೂ ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಬಳಿಯಲ್ಲಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಯಾದಗಿರಿ ದಿಲ್ಲೆಯವರು ಎಂದು ಹೇಳಲಾಗುತ್ತಿದೆ. ಅಪಘಾತಕ್ಕೀಡಾದಂತ ಕಾರು ಚಿತ್ರದುರ್ಗ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಹಿರಿಯೂರಿನ ಮೇಟಿಕುರ್ಕೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More

ಚಿಕ್ಕಬಳ್ಳಾಪುರ: ಕೆರೆಗೆ ಈಜಾಡಲು ತೆರಳಿದಂದ ಮೂವರು ಬಾಲಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 14 ವರ್ಷದ ವಿಷ್ಣು, 12 ವರ್ಷದ ನಿಹಾಲ್ ರಾಜ್ ಹಾಗೂ 16 ವರ್ಷದ ಹರ್ಷವರ್ಧನ್ ಎಂದು ಗುರುತಿಸಲಾಗಿದೆ. ಕರೆಯಲ್ಲಿ ಮುಳುಗಿದ ಒಬ್ಬರನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ.

Read More

ಬೆಂಗಳೂರು: ಪ್ರಹ್ಲಾದ್ ಜೋಷಿಯವರೇ ಕೇಂದ್ರ ನಡೆಸಲಿರುವ ಸಮೀಕ್ಷೆಯಲ್ಲಿ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಮತಾಂತರ ಹಾಗೂ ಜಾತಿಗಳನ್ನು ಒಡೆಯುವ ದೃಷ್ಠಿಯಿಂದ ರಾಜ್ಯ ಸರ್ಕಾರ ಸಮೀಕ್ಷೆ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆ ಅವರ ಅಜ್ಞಾನಕ್ಕೆ ಹಿಡಿದ ಕನ್ನಡಿಯಾಗಿದೆ. ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರ ಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ ಎಂದು ಹೇಳಿದ್ದಾರೆ. ಕ…

Read More

ಬೆಂಗಳೂರು: ಬಿ.ಎಸ್ಸಿ. ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿ ಕೋರ್ಸುಗಳಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅ.6ರ ಬೆಳಿಗ್ಗೆ 11ರೊಳಗೆ ಹೊಸದಾಗಿ ತಮ್ಮ ಇಚ್ಛೆ/ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೂಚಿಸಿದೆ. ಬಿ.ಎಸ್ಸಿ. ನರ್ಸಿಂಗ್ ಕೋರ್ಸಿಗೆ ಸರ್ಕಾರ ಹೆಚ್ಚಿಸಿರುವ ಸೀಟುಗಳು, ಹಿಂದಿನ ಸೀಟುಗಳ ಹಂಚಿಕೆಯ ನಂತರ ಭರ್ತಿಯಾಗದೆ ಉಳಿದಿರುವ/ರದ್ದುಗೊಂಡಿರುವ/ಹೊಸದಾಗಿ ಸೇರಿಸಲಾದ ಬಿ.ಫಾರ್ಮ ಮತ್ತು ಫಾರ್ಮ-ಡಿ ಸೀಟುಗಳನ್ನು ಈ ಹಂಚಿಕೆಗೆ ಪರಿಗಣಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿರುವ ಸೀಟುಗಳು ಹಾಗೂ ಖಾಸಗಿ ಕಾಲೇಜುಗಳ ‘ಜಿ’ ಸೀಟುಗಳು ಈ ಹಂಚಿಕೆ ವ್ಯಾಪ್ತಿಗೆ ಒಳಪಡುತ್ತವೆ. ಅಭ್ಯರ್ಥಿಗಳು ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಈ ಹಂತದ ಹಂಚಿಕೆಗೆ ಪರಿಗಣಿಸುವುದಿಲ್ಲ. ಕಾಲೇಜುವಾರು, ವರ್ಗವಾರು ಮತ್ತು ಕೋರ್ಸುವಾರು ವಿವರವಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರೂ 10,000 ಕಾಷನ್ ಡಿಪಾಸಿಟ್…

Read More

ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ನೇರ ನಗದು ವರ್ಗಾವಣೆ ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಿ, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ. ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆಯಂತ್ರ ಯೋಜನೆ, ಸಾಧನ ಸಲಕರಣೆ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್‍ಚೇರ್ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಮೇಲ್ಕಂಡ ಯೋಜನೆಗಳಿಗೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಪೋರ್ಟಲ್‍ನಡಿ (https://sevasindhu.karnataka.gov.in/sevasindhu/kannada) ಆನ್‍ಲೈನ್ ಮೂಲಕ ವಿಕಲಚೇತನರು ಅರ್ಜಿ…

Read More

ಮೈಸೂರು : ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು. ರಾಜ್ಯಕ್ಕೆ ಕೇಂದ್ರದ ಸುಮಾರು 17000 ಕೋಟಿ ಅನುದಾನದಲ್ಲಿ ಖೋತಾ…

Read More

ಉತ್ತರ ಪ್ರದೇಶ: ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧಿಸಲ್ಪಟ್ಟ ಸ್ವಯಂ ಘೋಷಿತ ‘ದೇವಮಾನವ’ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕಳೆದ ವಾರ ಅವರನ್ನು ಉತ್ತರ ಪ್ರದೇಶದ ಆಗ್ರಾದಿಂದ ವಶಕ್ಕೆ ಪಡೆಯಲಾಯಿತು. ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ 17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಸ್ವಾಮಿ ಚೈತನ್ಯಾನಂದ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿ ಮುಗಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಂದು, ಪೊಲೀಸರು ಹೆಚ್ಚಿನ ಕಸ್ಟಡಿ ವಿಚಾರಣೆಯನ್ನು ಕೋರಲಿಲ್ಲ ಮತ್ತು ಅಪರಾಧಗಳ ಗಂಭೀರತೆ ಮತ್ತು ಸಾಕ್ಷ್ಯಗಳನ್ನು ಹಾಳುಮಾಡುವುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದನ್ನು ತಡೆಯುವ ಅಗತ್ಯವನ್ನು ಉಲ್ಲೇಖಿಸಿ ನ್ಯಾಯಾಂಗ ಕಸ್ಟಡಿಗೆ ಅರ್ಜಿ ಸಲ್ಲಿಸಿದರು. ಆದಾಗ್ಯೂ, ಚೈತನ್ಯಾನಂದ ಅವರ ವಕೀಲರು ನ್ಯಾಯಾಂಗ ಕಸ್ಟಡಿಗೆ ಕೋರಲು ಕಾರಣಗಳನ್ನು ಪ್ರಶ್ನಿಸಿದರು. ವಿಚಾರಣೆಯ ಸಮಯದಲ್ಲಿ, ಹಿಂದಿನ ದಾಖಲಾತಿಗಳಲ್ಲಿ ಐಪಿಸಿಯ ಸೆಕ್ಷನ್ 232 ಇಲ್ಲದಿರುವುದನ್ನು ಗಮನಿಸಿ, ಆರೋಪಗಳಿಗೆ ಸೇರಿಸಲಾಗಿದೆಯೇ ಎಂದು…

Read More

ಹಾಸನ: ಅಡುಗೆ ಮಾಡುವಂತ ವಿಚಾರಕ್ಕೆ ತಾಯಿ ಮತ್ತು ಮಗನ ನಡುವೆ ಜಗಳ ಉಂಟಾಗಿದೆ. ಈ ಜಗಳ ತಾರಕ್ಕೇರಿದಂತ ಸಂದರ್ಭದಲ್ಲಿ ಕಂಠಪೂರ್ತಿ ಕುಡಿದಿದ್ದಂತ ಪುತ್ರ ತಾಯಿಯನ್ನೇ ಕೊಲೆ ಮಾಡಿದಂತ ಘಟನೆ ಹಾಸನದ ಆಲೂರಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಆಲೂರಿನ ಕದಾಳುಚನ್ನಾಪುರದಲ್ಲಿ ಅಡುಗೆ ಮಾಡುವಂತ ವಿಚಾರಕ್ಕೆ ತಾಯಿ-ಮಗನ ನಡುವೆ ಜಗಳ ಉಂಟಾಗಿದೆ. ಈ ಜಗಳ ತಾರಕ್ಕೇರಿದಂತ ಸಂದರ್ಭದಲ್ಲಿ ಕಂಠಪೂರ್ತಿ ಕೂಡಿದಿದ್ದಂತ ಪುತ್ರ ಸಂತೋಷ್(19), ತಾಯಿ ಪ್ರೇಮ(45)ಗೆ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದಂತ ತಾಯಿ ಪ್ರೇಮರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/alert-smokers-beware-cigarettes-can-cause-these-serious-diseases/ https://kannadanewsnow.com/kannada/breaking-i-am-getting-married-soon-dimple-queen-rachita-ram-gave-good-news-to-fans/

Read More