Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬೆಲೆ ಹೆಚ್ಚಳ ಮಾಡುವ ಪರ್ವ, ಬೆಲೆ ಹೆಚ್ಚಳದ ಅಭಿಯಾನವನ್ನು ಈ ಸರಕಾರ ತೆಗೆದುಕೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸರಕಾರವು ಕಣ್ಣಿದ್ದೂ ಕುರುಡಾಗಿದೆ. ಕಿವಿ ಇದ್ದರೂ ಕಿವುಡಾಗಿದೆ. ತಲೆ ಇದ್ದರೂ ಬುದ್ಧಿ ಭ್ರಮಣೆ ಆಗಿದೆ ಎಂದು ಆಕ್ಷೇಪಿಸಿದರು. ಸರಕಾರದ ನೀತಿ, ನಿರ್ಧಾರ ಹಾಗೂ ಚಟುವಟಿಕೆಗಳನ್ನು ನೋಡಿದರೆ ಈ ಸರಕಾರಕ್ಕೆ ಮನುಷ್ಯತ್ವ ಇಲ್ಲ ಎಂದು ಯಾರಿಗಾದರೂ ಅನಿಸಿ, ಅದರ ಸ್ಪಷ್ಟ ಸೂಚನೆಗಳು ಗೊತ್ತಾಗುತ್ತದೆ. ಕರ್ನಾಟಕದಲ್ಲಿ ಡೆಂಗ್ಯೂ ಮನೆ ಮನೆಗೆ ಹಬ್ಬುತ್ತಿದೆ. ಡೆಂಗ್ಯೂಗೆ ಸರಿಯಾದ ಚಿಕಿತ್ಸೆ ಲಭಿಸುತ್ತಿಲ್ಲ. ವೈದ್ಯರು, ಔಷಧಿಯ ಲಭ್ಯತೆ ಇಲ್ಲ. ಡೆಂಗ್ಯೂ ಅವತಾರವನ್ನು ನಿಯಂತ್ರಿಸಲು, ಅದರ ಬಗ್ಗೆ ಮಾತನಾಡಲು ವೈದ್ಯಕೀಯ ಸಚಿವರು- ಆರೋಗ್ಯ ಸಚಿವರು ಎಲ್ಲಿ ಹೋಗಿದ್ದಾರೆ ಎಂಬುದನ್ನು ಹುಡುಕಬೇಕಾಗಿದೆ ಎಂದು ತಿಳಿಸಿದರು. ಪಿಯುಸಿ, ಎಸ್ಸೆಸ್ಸೆಲ್ಸಿ, ಎಂಜಿನಿಯರಿಂಗ್, ವೈದ್ಯಕೀಯ ಸೇರಿ ಎಲ್ಲ ವಿದ್ಯಾರ್ಥಿಗಳ ಶುಲ್ಕ ಹೆಚ್ಚು…

Read More

ಬೆಂಗಳೂರು: “ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ” ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನ ಹಂಚಿಕೆಯಲ್ಲಿ ಆಗಿರುವ ಅವ್ಯವಹಾರ ಹಾಗೂ ಅಕ್ರಮಗಳ ಕುರಿತು ಶಿಸ್ತು ಪ್ರಕರಣದ ತನಿಖೆಗೆ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ನೀಡಿದಂತ ವರದಿಯ ಆಧಾರದ ಮೇಲೆ ಶಿಸ್ತು ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವಾರು ಅಕ್ರಮಗಳು ಜರುಗಿದೆ ಎಂದು ತಿಳಿದು ಬಂದಿದೆ. ನಿವೇಶನಗಳ ಹಂಚಿಕೆಯಲ್ಲಿ ಆಗಿರುವ ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಜಂಟಿ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಈಗಾಗಲೇ ಆದೇಶಿಸಲಾಗಿದೆ. ಅದರಂತೆ ತನಿಖಾ ವರದಿ ಸಲ್ಲಿಸಿದ್ದು, ಸದರಿ ತನಿಖಾ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು, ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ, ಶಿಸ್ತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಆಯುಕ್ತರಿಗೆ ಕೋರಲಾಗಿದೆ ಎಂದಿದ್ದಾರೆ. ಈ…

Read More

ನವದೆಹಲಿ: ನೀಟ್-ಯುಜಿ ಪರೀಕ್ಷೆಯಲ್ಲಿ ( NEET-UG exam ) ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (Central Bureau of Investigation – CBI) ಗುರುವಾರ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ಘಟಕವು ಕೇಂದ್ರಕ್ಕೆ ಕಳುಹಿಸಿದ ವರದಿಯ ಆಧಾರದ ಮೇಲೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಪಾಟ್ನಾದಲ್ಲಿ 17 ಅಭ್ಯರ್ಥಿಗಳಿಗೆ ನಿಷೇಧದ ಬೆದರಿಕೆ ಹಾಕಿ ಶೋಕಾಸ್ ನೋಟಿಸ್ ಕಳುಹಿಸಿತ್ತು. ಬಂಧಿತರನ್ನು ಮನೀಶ್ ಕುಮಾರ್ ಮತ್ತು ಅಶುತೋಷ್ ಕುಮಾರ್ ಎಂದು ಗುರುತಿಸಲಾಗಿದೆ. ಸಿಬಿಐ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿದ ನಂತರ, ಬಿಹಾರ ಮತ್ತು ಗುಜರಾತ್ ಸರ್ಕಾರಗಳು ತಮ್ಮ ಸ್ಥಳೀಯ ನೀಟ್-ಯುಜಿ “ಪ್ರಶ್ನೆ ಪತ್ರಿಕೆ ಸೋರಿಕೆ” ಪ್ರಕರಣಗಳನ್ನು ಕೇಂದ್ರ ಸಂಸ್ಥೆಗೆ ವರ್ಗಾಯಿಸಲು ಅಧಿಸೂಚನೆಗಳನ್ನು ಹೊರಡಿಸಿದವು. “ಈ ಪರೀಕ್ಷೆಯಲ್ಲಿ ನಡೆದ ದುಷ್ಕೃತ್ಯದ ಬಗ್ಗೆ ಗೋಧ್ರಾ ತಾಲ್ಲೂಕು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ, ಇದರಿಂದ ಇಡೀ ವಿಷಯದಲ್ಲಿ ವ್ಯಾಪಕ ತನಿಖೆ ನಡೆಸಬಹುದು” ಎಂದು…

Read More

ಬೆಂಗಳೂರು: ಪ್ರತಿ ಪಕ್ಷ ನಾಯಕ ಆರ್.ಅಶೋಕ್ ವಿರುದ್ಧ 2500 ಎಕರೆಯ ಭೂ ಹಗರಣವಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಆಗ್ರಹಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಸೋಲಿನಿಂದ ಕಂಗೆಟ್ಟ ರಾಷ್ಟ್ರೀಯ ಪಕ್ಷವಾದ ಭಾರತೀಯ ಜನತಾ ಪಕ್ಷವು ಕರ್ನಾಟಕ ವಿಧಾನಸಭೆಗೆ ಒಬ್ಬ ಸಮರ್ಥ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸುಮಾರು ಆರು ತಿಂಗಳ ಕಾಲ ಹುಡುಕಾಟ ನಡೆಸಿ ಸಮರ್ಥರು ಸಿಗದ ಕಾರಣ ಹೊಂದಾಣಿಕೆ ಗಿರಾಕಿ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಿರುತ್ತದೆ. ತನ್ನ ಇತಿಹಾಸದಲ್ಲಿ ಅನೇಕ ಸಮರ್ಥ ವಿರೋಧ ಪಕ್ಷದ ನಾಯಕರನ್ನು ಕಂಡ ವಿಧಾನಸಭೆಯು, ಇಂದು ಸಮರ್ಥ ವಿರೋಧ ಪಕ್ಷದ ನಾಯಕರಿಲ್ಲದೆ ಸೊರಗುತ್ತಿದೆ ಎಂದರು. ರಾಜ್ಯದ ಮುಖ್ಯಮಂತ್ರಿಗಳನ್ನು ವೈಯಕ್ತಿಕ ನೆಲಗಟ್ಟಿನಲ್ಲಿ ತೆಗಳುವುದನ್ನೇ ಕಾಯಕ ಮಾಡಿಕೊಂಡಿರುವ ಆರ್.ಅಶೋಕ್ ಅವರು ತಾವು ಪಿಯುಸಿ ವ್ಯಾಸಂಗ ಮಾಡುವಾಗ ತುರ್ತು ಪರಿಸ್ಥಿಯ ಸಂದರ್ಭದಲ್ಲಿ ಜೈಲು ಶಿಕ್ಷೆ ಅನುಭವಿಸಿರುವುದಾಗಿ…

Read More

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ, ಮೂವರು ಡಿಸಿಎಂ ಹುದ್ದೆ ಕೂಗು ಎದ್ದಿರುವಂತ ಈ ಸಂದರ್ಭದಲ್ಲಿಯೇ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ಇಂದು ದೆಹಲಿಗೆ ತೆರಳಿದ್ದಾರೆ. ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದರು. ಸಿಎಂ, ಡಿಸಿಎಂ ಅಲ್ಲದೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೂಡ ದೆಹಲಿಗೆ ತೆರಳಲಿದ್ದಾರೆ. ರಾಜ್ಯದ ಗೃಹ ಇಲಾಖೆಯ ಕೆಲವು ಪ್ರಾಜೆಕ್ಟ್ ಗಳಿಗೆ ಸಂಬಂಧಿಸಿದಂತೆ ಚರ್ಚಿಸೋದಕ್ಕೆ ತೆರಳುತ್ತಿರೋದಾಗಿ ಅವರು ತಿಳಿಸಿದ್ದಾರೆ. https://kannadanewsnow.com/kannada/big-news-carcinogenic-detection-background-panipuri-sauces-meetha-to-be-banned-in-the-state/ https://kannadanewsnow.com/kannada/34th-convocation-of-kuvempu-university-heres-the-key-information-for-students-who-have-passed-graduation-post-graduation/

Read More

ಬೆಂಗಳೂರು: ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಅದರ ಹೊರತಾಗಿ ಸ್ವಾಮೀಜಿ ಅವರಲ್ಲ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಗರಂ ಆಗೇ ನುಡಿದಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಅನ್ನುವಂತ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿಎಂ ಸಿದ್ಧರಾಮಯ್ಯ ಈ ತಿರುಗೇಟು ನೀಡಿದರು. ಇಂದು ಕೆಂಪೇಗೌಡ ಜಯಂತಿಯಂದು ಮಾತನಾಡಿದಂತ ಸ್ವಾಮೀಜಿಯವರು, ಸಿದ್ಧರಾಮಯ್ಯ ಅವರ ಮುಂದೆಯೇ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನವನ್ನು ಬಿಟ್ಟುಕೊಡಬೇಕು ಎಂಬುದಾಗಿ ಆಗ್ರಹಿಸಿದ್ದರು. https://kannadanewsnow.com/kannada/34th-convocation-of-kuvempu-university-heres-the-key-information-for-students-who-have-passed-graduation-post-graduation/ https://kannadanewsnow.com/kannada/big-news-carcinogenic-detection-background-panipuri-sauces-meetha-to-be-banned-in-the-state/

Read More

ಮನೆಯಲ್ಲಿ ಮಹಾಲಕ್ಷ್ಮಿಯ ಅಂಶವು ನೆರವೇರಲು ನಾವು ಮಾಡಬೇಕಾದ ಸುಲಭ ಪರಿಹಾರದ ಬಗ್ಗೆ ಇಂದು ನಾವು ನೋಡಲಿದ್ದೇವೆ. ಶುಕ್ರವಾರದಂದು ಮನೆಯಲ್ಲಿ ದೀಪವನ್ನು ಹಚ್ಚಿ ಮತ್ತು ಎಂದಿನಂತೆ ಮಹಾಲಕ್ಷ್ಮಿಗೆ ಸಣ್ಣ ಪೂಜೆಯನ್ನು ಮಾಡಿ ಮತ್ತು ಈ ಪರಿಹಾರವನ್ನು ಪ್ರಯತ್ನಿಸಿ. ನಿಮ್ಮ ಮನೆಯಲ್ಲಿನ ಹಣದ ಸಮಸ್ಯೆಗಳು ಖಂಡಿತವಾಗಿಯೂ ಪರಿಹಾರವಾಗುತ್ತವೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಈ ಸರಳ ಮತ್ತು ಅಗ್ಗದ ಪರಿಹಾರವನ್ನು ತಿಳಿದುಕೊಳ್ಳಲು ಆಸಕ್ತಿಯುಳ್ಳವರು ಈ ಆಧ್ಯಾತ್ಮಿಕ ಪುಸ್ತಕವನ್ನು ಓದುವುದನ್ನು ಮುಂದುವರಿಸಬಹುದು ಮತ್ತು ಪ್ರಯೋಜನ ಪಡೆಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು…

Read More

ಕೊಡಗು: ನಾಳೆ ಭಾರೀ ಮಳೆ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಎರಡು ಜಿಲ್ಲೆಯ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಮೂಲಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಬಗ್ಗೆ ಬಿಇಓ ರಜೆ ಘೋಷಣೆಯ ಆದೇಶ ಹೊರಡಿಸಿದ್ದು, ನಾಳೆ ವಿರಾಜಪೇಟೆ,. ಪೊನ್ನಂಪೇಟೆ ತಾಲೂಕಿನಲ್ಲಿ ಭಾರೀ ಮಳೆಯ ಕಾರಣ, ನಾಳೆ ಶಾಲೆಗಳಿಗೆ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ನೀಡಲಾಗಿದೆ ಅಂತ ತಿಳಿಸಿದ್ದಾರೆ. https://kannadanewsnow.com/kannada/atika-gold-company-owner-babu-arrested-for-accepting-stolen-goods/ https://kannadanewsnow.com/kannada/students-note-pg-cet-2024-exam-scheduled-for-july-13-14-postponed/

Read More

ಬೆಂಗಳೂರು: ಕಳವು ಮಾಲು ಸ್ವೀಕರಿಸಿದ ಆರೋಪದಡಿ ಅಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅವರನ್ನು ತುಮಕೂರಿನ ತುರುವೇಕೆರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.  ಈ ಸಂಬಂಧ ತುಮಕೂರು ಜಿಲ್ಲೆಯ ತುರುವೇಕೆರೆ ಠಾಣೆಯಲ್ಲಿ ಕಳವು ಮಾಲು ಸ್ವೀಕರಿಸಿದ ಆರೋಪದಡಿ ಅಟಿಕಾ ಬಾಬು ವಿರುದ್ಧ ಕೇಸ್ ದಾಖಲಾಗಿತ್ತು. ಇಂದು ಬೆಂಗಳೂರಿನ ನಿವಾಸದಲ್ಲಿ ತುರುವೇಕೆರೆ ಸಿಪಿಐ ಲೋಹಿತ್ ನೇತೃತ್ವದಲ್ಲಿ ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ. ಅಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಗಾ ಬಾಬು ಅವರ ವಿರುದ್ಧ ಐಪಿಸಿ ಸೆಕ್ಷನ್ 454, 380, 411, 413ರಡಿ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಂದಹಾಗೇ ಅಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಬಂಧನ ಇದೇನು ಮೊದಲೇನಲ್ಲ. ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಅಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದರು. ಈಗ ಕಳವು ಮಾಲು ಸ್ವೀಕರಿಸಿದಂತ ಆರೋಪದಡಿ ಬಂಧಿಸಲಾಗಿದೆ. https://kannadanewsnow.com/kannada/students-note-pg-cet-2024-exam-scheduled-for-july-13-14-postponed/ https://kannadanewsnow.com/kannada/three-terrorists-killed-in-encounter-as-gunfight-rages-in-jks-doda/

Read More