Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ, ಮೂವರು ಡಿಸಿಎಂ ಹುದ್ದೆ ಕೂಗು ಎದ್ದಿರುವಂತ ಈ ಸಂದರ್ಭದಲ್ಲಿಯೇ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ಇಂದು ದೆಹಲಿಗೆ ತೆರಳಿದ್ದಾರೆ. ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದರು. ಸಿಎಂ, ಡಿಸಿಎಂ ಅಲ್ಲದೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೂಡ ದೆಹಲಿಗೆ ತೆರಳಲಿದ್ದಾರೆ. ರಾಜ್ಯದ ಗೃಹ ಇಲಾಖೆಯ ಕೆಲವು ಪ್ರಾಜೆಕ್ಟ್ ಗಳಿಗೆ ಸಂಬಂಧಿಸಿದಂತೆ ಚರ್ಚಿಸೋದಕ್ಕೆ ತೆರಳುತ್ತಿರೋದಾಗಿ ಅವರು ತಿಳಿಸಿದ್ದಾರೆ. https://kannadanewsnow.com/kannada/big-news-carcinogenic-detection-background-panipuri-sauces-meetha-to-be-banned-in-the-state/ https://kannadanewsnow.com/kannada/34th-convocation-of-kuvempu-university-heres-the-key-information-for-students-who-have-passed-graduation-post-graduation/

Read More

ಬೆಂಗಳೂರು: ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಅದರ ಹೊರತಾಗಿ ಸ್ವಾಮೀಜಿ ಅವರಲ್ಲ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಗರಂ ಆಗೇ ನುಡಿದಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಅನ್ನುವಂತ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿಎಂ ಸಿದ್ಧರಾಮಯ್ಯ ಈ ತಿರುಗೇಟು ನೀಡಿದರು. ಇಂದು ಕೆಂಪೇಗೌಡ ಜಯಂತಿಯಂದು ಮಾತನಾಡಿದಂತ ಸ್ವಾಮೀಜಿಯವರು, ಸಿದ್ಧರಾಮಯ್ಯ ಅವರ ಮುಂದೆಯೇ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನವನ್ನು ಬಿಟ್ಟುಕೊಡಬೇಕು ಎಂಬುದಾಗಿ ಆಗ್ರಹಿಸಿದ್ದರು. https://kannadanewsnow.com/kannada/34th-convocation-of-kuvempu-university-heres-the-key-information-for-students-who-have-passed-graduation-post-graduation/ https://kannadanewsnow.com/kannada/big-news-carcinogenic-detection-background-panipuri-sauces-meetha-to-be-banned-in-the-state/

Read More

ಮನೆಯಲ್ಲಿ ಮಹಾಲಕ್ಷ್ಮಿಯ ಅಂಶವು ನೆರವೇರಲು ನಾವು ಮಾಡಬೇಕಾದ ಸುಲಭ ಪರಿಹಾರದ ಬಗ್ಗೆ ಇಂದು ನಾವು ನೋಡಲಿದ್ದೇವೆ. ಶುಕ್ರವಾರದಂದು ಮನೆಯಲ್ಲಿ ದೀಪವನ್ನು ಹಚ್ಚಿ ಮತ್ತು ಎಂದಿನಂತೆ ಮಹಾಲಕ್ಷ್ಮಿಗೆ ಸಣ್ಣ ಪೂಜೆಯನ್ನು ಮಾಡಿ ಮತ್ತು ಈ ಪರಿಹಾರವನ್ನು ಪ್ರಯತ್ನಿಸಿ. ನಿಮ್ಮ ಮನೆಯಲ್ಲಿನ ಹಣದ ಸಮಸ್ಯೆಗಳು ಖಂಡಿತವಾಗಿಯೂ ಪರಿಹಾರವಾಗುತ್ತವೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಈ ಸರಳ ಮತ್ತು ಅಗ್ಗದ ಪರಿಹಾರವನ್ನು ತಿಳಿದುಕೊಳ್ಳಲು ಆಸಕ್ತಿಯುಳ್ಳವರು ಈ ಆಧ್ಯಾತ್ಮಿಕ ಪುಸ್ತಕವನ್ನು ಓದುವುದನ್ನು ಮುಂದುವರಿಸಬಹುದು ಮತ್ತು ಪ್ರಯೋಜನ ಪಡೆಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು…

Read More

ಕೊಡಗು: ನಾಳೆ ಭಾರೀ ಮಳೆ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಎರಡು ಜಿಲ್ಲೆಯ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಮೂಲಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಬಗ್ಗೆ ಬಿಇಓ ರಜೆ ಘೋಷಣೆಯ ಆದೇಶ ಹೊರಡಿಸಿದ್ದು, ನಾಳೆ ವಿರಾಜಪೇಟೆ,. ಪೊನ್ನಂಪೇಟೆ ತಾಲೂಕಿನಲ್ಲಿ ಭಾರೀ ಮಳೆಯ ಕಾರಣ, ನಾಳೆ ಶಾಲೆಗಳಿಗೆ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ನೀಡಲಾಗಿದೆ ಅಂತ ತಿಳಿಸಿದ್ದಾರೆ. https://kannadanewsnow.com/kannada/atika-gold-company-owner-babu-arrested-for-accepting-stolen-goods/ https://kannadanewsnow.com/kannada/students-note-pg-cet-2024-exam-scheduled-for-july-13-14-postponed/

Read More

ಬೆಂಗಳೂರು: ಕಳವು ಮಾಲು ಸ್ವೀಕರಿಸಿದ ಆರೋಪದಡಿ ಅಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅವರನ್ನು ತುಮಕೂರಿನ ತುರುವೇಕೆರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.  ಈ ಸಂಬಂಧ ತುಮಕೂರು ಜಿಲ್ಲೆಯ ತುರುವೇಕೆರೆ ಠಾಣೆಯಲ್ಲಿ ಕಳವು ಮಾಲು ಸ್ವೀಕರಿಸಿದ ಆರೋಪದಡಿ ಅಟಿಕಾ ಬಾಬು ವಿರುದ್ಧ ಕೇಸ್ ದಾಖಲಾಗಿತ್ತು. ಇಂದು ಬೆಂಗಳೂರಿನ ನಿವಾಸದಲ್ಲಿ ತುರುವೇಕೆರೆ ಸಿಪಿಐ ಲೋಹಿತ್ ನೇತೃತ್ವದಲ್ಲಿ ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ. ಅಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಗಾ ಬಾಬು ಅವರ ವಿರುದ್ಧ ಐಪಿಸಿ ಸೆಕ್ಷನ್ 454, 380, 411, 413ರಡಿ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಂದಹಾಗೇ ಅಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಬಂಧನ ಇದೇನು ಮೊದಲೇನಲ್ಲ. ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಅಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದರು. ಈಗ ಕಳವು ಮಾಲು ಸ್ವೀಕರಿಸಿದಂತ ಆರೋಪದಡಿ ಬಂಧಿಸಲಾಗಿದೆ. https://kannadanewsnow.com/kannada/students-note-pg-cet-2024-exam-scheduled-for-july-13-14-postponed/ https://kannadanewsnow.com/kannada/three-terrorists-killed-in-encounter-as-gunfight-rages-in-jks-doda/

Read More

ಮಡಿಕೇರಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಜುಲೈ.31 ರವರೆಗೆ ಇಲಾಖಾ ವೆಬ್‍ಸ್ಯಟ್ www.sw.kar.nic.in ಹಾಗೂ www.tw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 3 ಅಥವಾ 5 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ…

Read More

ಮಣಿಪುರ: ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪನವು ಬುಧವಾರ ಸಂಜೆ ಮಣಿಪುರದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಭೂಕಂಪದ ಕೇಂದ್ರ ಬಿಂದು ಬಂಕುರಾ ಜಿಲ್ಲೆಯ ಬಿಷ್ಣುಪುರ ಪ್ರದೇಶದಲ್ಲಿ 25 ಕಿಲೋಮೀಟರ್ ಆಳದಲ್ಲಿದೆ ಎಂದು ಎನ್ಸಿಎಸ್ ತಿಳಿಸಿದೆ. ಎನ್ಸಿಎಸ್ ಪ್ರಕಾರ, ಸಂಜೆ 7:09 ಕ್ಕೆ ಭೂಕಂಪ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. https://twitter.com/ANI/status/1805963961415917871 https://kannadanewsnow.com/kannada/students-note-pg-cet-2024-exam-scheduled-for-july-13-14-postponed/ https://kannadanewsnow.com/kannada/three-terrorists-killed-in-encounter-as-gunfight-rages-in-jks-doda/

Read More

ಬೆಂಗಳೂರು: ನಗರದ ಪ್ರಯಾಣಿಕರ ಹಿತದೃಷ್ಠಿಯಿಂದ ಹೊಸ ಮಾರ್ಗದಲ್ಲಿ ಬಿಎಂಟಿಸಿಯಿಂದ ಬಸ್ ಸಂಚಾರ ಆರಂಭಿಸಲಾಗಿದೆ. ಈ ಮೂಲಕ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ 01.07.2024 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ/ ಸುತ್ತುವಳಿಗಳ ಸಂಖ್ಯೆ ಚಕ್ರ-1 ನೆಲಮಂಗಲ ನೆಲಮಂಗಲ ಬಸವನಹಳ್ಳಿ, ಬೊಮ್ಮಶೆಟ್ಟಿಹಳ್ಳಿ ಕ್ರಾಸ್‍, ಹುಸ್ಕೂರು ಕ್ರಾಸ್‍, ಹೊನ್ನಸಂದ್ರ ಕ್ರಾಸ್, ನಗರೂರು ಕ್ರಾಸ್‍, ನಂದರಾಮನ ಪಾಳ್ಯ, ಬಿನ್ನಮಂಗಲ. 1 ಬಸ್ಸು 9 ಸುತ್ತುವಳಿಗಳು ಚಕ್ರ-1ಎ ನೆಲಮಂಗಲ ನೆಲಮಂಗಲ ಬಿನ್ನಮಂಗಲ, ನಂದರಾಮನ ಪಾಳ್ಯ, ನಗರೂರು, ನಗರೂರು ಕ್ರಾಸ್‍, ಹೊನ್ನಸಂದ್ರ ಕ್ರಾಸ್, ಹುಸ್ಕೂರು ಕ್ರಾಸ್‍, ಬೊಮ್ಮಶೆಟ್ಟಿಹಳ್ಳಿ ಕ್ರಾಸ್‍, ಬಸವನಹಳ್ಳಿ, 1…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪಿಡಿಓಗಳಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಗ್ರಾ.ಪಂ) ಅವರು ನಡವಳಿಯನ್ನು ಹೊರಡಿಸಿದ್ದು,  2024-25 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ:237 ರ ಉಪ ಕ್ರಮ ಸಂಖ್ಯೆ: 01 ರಲ್ಲಿ, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಎಂದು ಘೋಷಿಸಲಾಗಿದೆ ಎಂದಿದ್ದಾರೆ. ಅದರಂತೆ, ಗ್ರಾಮ…

Read More

ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಅವರ ಬಂಧನದ ನಂತ್ರ ಪತ್ನಿ ವಿಜಯಲಕ್ಷ್ಮೀ ಡಿ ಬಾಸ್ ಅಭಿಮಾನಿಗಳಿಗಾಗಿ ಭಾವನಾತ್ಮಕ ಪೋಸ್ಟ್ ಒಂದನ್ನು ಇನ್ ಸ್ಟಾಗ್ರಾಂನಲ್ಲಿ ಹಾಕಿದ್ದಾರೆ. ಸೋ ನಟ ದರ್ಶನ್ ಅಭಿಮಾನಿಗಳಿಗಾಗಿ ಏನು ವಿಶೇಷ ವಿನಂತಿ ಮಾಡಿದ್ದಾರೆ ಅಂತ ಪೋಸ್ಟ್ ಮುಂದಿದೆ ಓದಿ. ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ,ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು…

Read More