Author: kannadanewsnow09

ಬೆಂಗಳೂರು: ಇಂದು ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ವಿಧವಶರಾಗಿದ್ದರು. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂತಾಪ ಸೂಚಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ (97)ಅವರು ನಿಧನಕ್ಕೆ KUWJ ಸಂತಾಪ ವ್ಯಕ್ತಪಡಿಸಿದೆ. ಕೆಯುಡಬ್ಲ್ಯೂಜೆ ಮನೆಯಂಗಳದ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿದ್ದು ಮರೆಯಲಾಗದ ಕ್ಷಣ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸ್ಮರಿಸಿದ್ದು, ಅನುಭವಿ ಪತ್ರಕರ್ತರೊಬ್ಬರನ್ನು ಸುದ್ದಿಮನೆ ಕಳೆದುಕೊಂಡಿದೆ ಎಂದು ಶೋಕಿಸಿದ್ದಾರೆ. https://twitter.com/kuwj_r/status/1974121371409293586?s=46&t=K__Bb-oISWk0C8ZNc8qCGw https://kannadanewsnow.com/kannada/good-news-for-enumerators-who-performed-duties-in-the-scheduled-caste-survey-in-the-state-honorarium-released/ https://kannadanewsnow.com/kannada/alert-smokers-beware-cigarettes-can-cause-these-serious-diseases/

Read More

2010 ರಲ್ಲಿ, ಭಾರತೀಯ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದರು. 8 ವರ್ಷಗಳ ನಂತರ, ದಂಪತಿಗಳು ತಮ್ಮ ಮೊದಲ ಮಗುವನ್ನು ಜಗತ್ತಿಗೆ ಸ್ವಾಗತಿಸಿದರು, ಅವರಿಗೆ ಅವರು ಇಜಾನ್ ಮಿರ್ಜಾ ಮಲಿಕ್ ಎಂದು ಹೆಸರಿಸಿದರು. ಇದೀಗ ತನ್ನ ಮೂರನೇ ಪತ್ನಿ ಸನಾ ಜಾವೇದ್ ನಿಂದ ವಿಚ್ಛೇದನ ಪಡೆಯಲು ಶೋಯೆಬ್ ಮಲ್ಲಿಕ್ ಮುಂದಾಗಿರುವುದಾಗಿ ವರದಿಯಾಗಿದೆ. 2024 ರ ಜನವರಿಯಲ್ಲಿ ಕರಾಚಿಯಲ್ಲಿರುವ ಅವರ ಮನೆಯಲ್ಲಿ ನಡೆದ ಖಾಸಗಿ ನಿಕಾಹ್ ಸಮಾರಂಭದಲ್ಲಿ ಶೋಯೆಬ್ ಪಾಕಿಸ್ತಾನಿ ಟಿವಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾದಾಗ, ನೆಟಿಜನ್‌ಗಳು ಆಘಾತಕ್ಕೊಳಗಾದರು. ಟೆನಿಸ್ ಆಟಗಾರ್ತಿ ತಮ್ಮ ಮೂರನೇ ಮದುವೆಗೆ ತಿಂಗಳುಗಳ ಮೊದಲು ಕ್ರಿಕೆಟಿಗರಿಂದ ‘ಖುಲಾ’ ಮೂಲಕ ವಿಚ್ಛೇದನ ಪಡೆದಿದ್ದಾರೆ ಎಂದು ಸಾನಿಯಾ ಅವರ ಕುಟುಂಬ ನಂತರ ದೃಢಪಡಿಸಿತು. ಸರಿ, ಶೋಯೆಬ್ ತಮ್ಮ ಮೂರನೇ ವಿಚ್ಛೇದನದತ್ತ ಸಾಗುತ್ತಿದ್ದಾರೆ ಎಂದು ಈಗ ಬಝ್ ಸೂಚಿಸುತ್ತದೆ. ಶೋಯೆಬ್ ಮತ್ತು ಸನಾ ಅವರ ಈ ವೀಡಿಯೊದ ಜೊತೆಗೆ “ಮತ್ತೊಂದು ಬ್ರೇಕ್-ಅಪ್ ದಾರಿಯಲ್ಲಿದೆಯೇ?”…

Read More

ಬೆಂಗಳೂರು: ನಗರ‌ ಪಾಲಿಕೆಯ ವ್ಯಾಪ್ತಿಯಲ್ಲಿ ನಾಳೆಯಿಂದ ಆರಂಭವಾಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025 ಕ್ಕೆ ನಾಗರಿಕರು ಸಹಕರಿಸುವಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಮನವಿ ಮಾಡಿದ್ದಾರೆ. ಸಮೀಕ್ಷೆದಾರರಿಗೆ 29-09-2025 ಮತ್ತು 03-10-2025ರಂದು ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆ ಸುಗಮವಾಗಿ ನಡೆಯಲು ಒಟ್ಟು 9 ಮಂದಿ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ 2 ವಲಯಗಳಲ್ಲಿನ ವಿಧಾನಸಭಾ ಕ್ಷೇತ್ರಗಳ 64 ವಾರ್ಡ್‌ಗಳ ಒಟ್ಟು 14.65 ಲಕ್ಷ ಮನೆಗಳು ಈ ಸಮೀಕ್ಷೆಗೆ ಒಳಪಡಲಿವೆ ಎಂದಿದ್ದಾರೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಗೆ ವಿಧಾನಸಭಾ ಕ್ಷೇತ್ರಗಳಾದ ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ (ಭಾಗಶಃ), ರಾಜರಾಜೇಶ್ವರಿ ನಗರ, ಯಶವಂತಪುರ ಹಾಗೂ ದಾಸರಹಳ್ಳಿ (ಭಾಗಶಃ) ಸೇರಿವೆ. ಹಿಂದುಳಿದ ವರ್ಗಗಳ ಆಯೋಗ ಮತ್ತು ಸರ್ಕಾರದ ನಿರ್ದೇಶನದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025 ನಡೆಸಲು ಎಲ್ಲಾ ಪೂರ್ವ ತಯಾರಿಗಳನ್ನು…

Read More

ಬೆಂಗಳೂರು: ಇದೇ‌ ಮೊದಲ ಬಾರಿಗೆ ವಾರಣಾಸಿಯ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಮಂಡ್ಯ ಜಿಲ್ಲೆ ಕೆ ಆರ್ ಎಸ್ ನಲ್ಲಿ ಐತಿಹಾಸಿಕ ಕಾವೇರಿ ಆರತಿಯನ್ನು ಅಭೂತಪೂರ್ಣವಾಗಿ ನೆರವೇರಿಸಿದ ಪಂಡಿತ, ಪುರೋಹಿತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸನ್ಮಾನಿಸಿದರು. ಮಂಡ್ಯ ಜಿಲ್ಲೆ ಕೆಆರ್ ಎಸ್ ನ ಬೃಂದಾವನ ಉದ್ಯಾನದಲ್ಲಿ ಸತತ 5 ದಿನಗಳ ಕಾಲ ಕಾವೇರಿ ಆರತಿಯಲ್ಲಿ ಪಾಲ್ಗೊಂಡ 55 ಮಂದಿ ಅರ್ಚಕರನ್ನು ಶಿವಕುಮಾರ್ ಅವರು ಕುಮಾರಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಸರಕಾರಿ ನಿವಾಸದಲ್ಲಿ ಶುಕ್ರವಾರ ಫಲ, ತಾಂಬೂಲ, ವಸ್ತ್ರ ನೀಡಿ ಸಾಂಪ್ರದಾಯಿಕವಾಗಿ ಅಭಿನಂದಿಸಿದರು. ತಮ್ಮನ್ನು ಸನ್ಮಾನಿಸಿ ಸತ್ಸಂಪ್ರದಾಯ ಮೆರೆದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕಾವೇರಿ ಆರತಿ ಪ್ರಧಾನ ಅರ್ಚಕ ವಿಜಯಕುಮಾರ್ ಪಂಡಿತ್ ಅವರು ಆಶೀರ್ವದಿಸಿದರು. ಕಾವೇರಿ ಆರತಿ ನಿಲ್ಲುವುದಿಲ್ಲ ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು,”ಕಾವೇರಿ ಆರತಿಯನ್ನು ನಿಲ್ಲಿಸುವುದಿಲ್ಲ,‌ ಮುಂದುವರೆಸುತ್ತೇವೆ.‌ ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ.‌ ನಾವೆಲ್ಲರೂ ‌ಸೇರಿ ಪ್ರಾರ್ಥನೆ ಸಲ್ಲಿಸೋಣ.‌ ಆರತಿಗಾಗಿ ಸ್ಟೇಡಿಯಂ ಮಾದರಿ…

Read More

ಬೆಂಗಳೂರು: ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ನೋವಾಯಿತು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಭಾರತೀಯ ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಟಿ.ಜೆ.ಎಸ್ ಜಾರ್ಜ್ ಅವರು ಅಂಕಣಕಾರರಾಗಿ ರಾಜಕೀಯ ವಿದ್ಯಮಾನಗಳ ವಿಶ್ಲೇಷಣೆ ಮೂಲಕ ರಾಜಕೀಯ ವ್ಯವಸ್ಥೆಯನ್ನು ಸದಾ ಜಾಗೃತಗೊಳಿಸುವ ಕೆಲಸ ಮಾಡಿದ್ದರು. ಸುಮಾರು 25. ವರ್ಷಗಳ ಕಾಲ ನಿರಂತರ ಅಂಕಣಕಾರರಾಗಿ ಸಾಮಾಜಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ದ ನಿರಂತರ ತಮ್ಮ ಲೇಖನಿ ಮೂಲಕ ಧ್ವನಿ ಎತ್ತುವ ಕೆಲಸ ಮಾಡಿದ್ದರು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಅವರು  ಸಾಹಿತ್ಯ ಮತ್ತು ಪತ್ರಿಕಾ ರಂಗದಲ್ಲಿ ಸಲ್ಲಿಸಿದ ಸೇವೆಗೆ  ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅವರ…

Read More

ಮೈಸೂರು: ಜಾವಗಲ್‌ನಲ್ಲಿ ನಡೆಯುವ ವಾರ್ಷಿಕ ಉರುಸ್ ಹಬ್ಬಕ್ಕೆ ತೆರಳುವ ಭಕ್ತರ ಸಂಚಾರವನ್ನು ಸುಗಮಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆ 04.10.2025 ರಿಂದ 07.10.2025ರವರೆಗೆ ನಾಲ್ಕು ದಿನಗಳ ಕಾಲ ಬಾಣಾವರ ರೈಲು ನಿಲ್ದಾಣದಲ್ಲಿ ಕೆಳಕಂಡ ರೈಲುಗಳಿಗೆ ತಾತ್ಕಾಲಿಕ ನಿಲ್ದಾಣ ನೀಡಲು ತೀರ್ಮಾನಿಸಿದೆ. ರೈಲುಗಳ ಆಗಮನ ಮತ್ತು ನಿರ್ಗಮನ ವೇಳಾಪಟ್ಟಿಯ ವಿವರಗಳು ಹೀಗಿವೆ: 1. ರೈಲು ಸಂಖ್ಯೆ 56519 ಕೆಎಸ್‌ಆರ್ ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ಬಾಣಾವರದಲ್ಲಿ ಬೆಳಿಗ್ಗೆ 08.35ಕ್ಕೆ ಆಗಮಿಸಿ 08.36ಕ್ಕೆ ನಿರ್ಗಮಿಸುತ್ತದೆ. 2. ರೈಲು ಸಂಖ್ಯೆ 16206 ಮೈಸೂರು – ತಾಳಗುಪ್ಪ ಇಂಟರ್‌ಸಿಟಿ ಬಾಣಾವರದಲ್ಲಿ ಬೆಳಿಗ್ಗೆ 09.07ಕ್ಕೆ ಆಗಮಿಸಿ 09.08ಕ್ಕೆ ನಿರ್ಗಮಿಸುತ್ತದೆ. 3. ರೈಲು ಸಂಖ್ಯೆ 17326 ಮೈಸೂರು – ಬೆಳಗಾವಿ ಎಕ್ಸ್‌ಪ್ರೆಸ್ ಬಾಣಾವರದಲ್ಲಿ ಬೆಳಿಗ್ಗೆ 11.32ಕ್ಕೆ ಆಗಮಿಸಿ 11.33ಕ್ಕೆ ನಿರ್ಗಮಿಸುತ್ತದೆ. 4. ರೈಲು ಸಂಖ್ಯೆ 12725 ಕೆಎಸ್‌ಆರ್ ಬೆಂಗಳೂರು – ಧಾರವಾಡ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಬಾಣಾವರದಲ್ಲಿ ಮಧ್ಯಾಹ್ನ 15.38ಕ್ಕೆ ಆಗಮಿಸಿ 15.39ಕ್ಕೆ ನಿರ್ಗಮಿಸುತ್ತದೆ. 5. ರೈಲು ಸಂಖ್ಯೆ 12726 ಧಾರವಾಡ – ಕೆಎಸ್‌ಆರ್…

Read More

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು…

Read More

ಚಿತ್ರದುರ್ಗ: ರಾಜ್ಯದಲ್ಲೊಂದು ಭೀಕರ ಅಪಘಾತ ಎನ್ನುವಂತೆ ಚಿತ್ರದುರ್ಗದಲ್ಲಿ ಕಾರು ಪಲ್ಟಿಯಾಗಿ ಮೂವರು ದುರ್ಮರಣ ಹೊಂದಿದ್ದಾರೆ. ಈ ಅಪಘಾತದಲ್ಲಿ ಇನ್ನೂ ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಬಳಿಯಲ್ಲಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಯಾದಗಿರಿ ದಿಲ್ಲೆಯವರು ಎಂದು ಹೇಳಲಾಗುತ್ತಿದೆ. ಅಪಘಾತಕ್ಕೀಡಾದಂತ ಕಾರು ಚಿತ್ರದುರ್ಗ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಹಿರಿಯೂರಿನ ಮೇಟಿಕುರ್ಕೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More

ಚಿಕ್ಕಬಳ್ಳಾಪುರ: ಕೆರೆಗೆ ಈಜಾಡಲು ತೆರಳಿದಂದ ಮೂವರು ಬಾಲಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 14 ವರ್ಷದ ವಿಷ್ಣು, 12 ವರ್ಷದ ನಿಹಾಲ್ ರಾಜ್ ಹಾಗೂ 16 ವರ್ಷದ ಹರ್ಷವರ್ಧನ್ ಎಂದು ಗುರುತಿಸಲಾಗಿದೆ. ಕರೆಯಲ್ಲಿ ಮುಳುಗಿದ ಒಬ್ಬರನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ.

Read More

ಬೆಂಗಳೂರು: ಪ್ರಹ್ಲಾದ್ ಜೋಷಿಯವರೇ ಕೇಂದ್ರ ನಡೆಸಲಿರುವ ಸಮೀಕ್ಷೆಯಲ್ಲಿ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಮತಾಂತರ ಹಾಗೂ ಜಾತಿಗಳನ್ನು ಒಡೆಯುವ ದೃಷ್ಠಿಯಿಂದ ರಾಜ್ಯ ಸರ್ಕಾರ ಸಮೀಕ್ಷೆ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆ ಅವರ ಅಜ್ಞಾನಕ್ಕೆ ಹಿಡಿದ ಕನ್ನಡಿಯಾಗಿದೆ. ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರ ಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ ಎಂದು ಹೇಳಿದ್ದಾರೆ. ಕ…

Read More