Author: kannadanewsnow09

ಬೆಂಗಳೂರು: ಅಶ್ಲೀಲ ಪ್ರಕರಣ, ಅತ್ಯಾಚಾರ ಕೇಸ್, ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಅವರು ಇಂದು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಅತ್ಯಾಚಾರ ಆರೋಪಿಗೆ ಬಿಗ್ ಶಾಕ್ ನೀಡಿದೆ. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದಂತ ಅವರನ್ನು, ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ. ಅಲ್ಲದೇ ಪ್ರಕರಣ ಸಂಬಂಧ ಸ್ಥಳಮಹಜರ್ ಕೂಡ ನಡೆಸಲಾಗುತ್ತಿದೆ. ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಿಚಾರಣೆಯ ಬಳಿಕ ವಜಾಗೊಳಿಸಿದ್ದಾರೆ. ಹೀಗಾಗಿ ಎಸ್ಐಟಿ ವಶದಲ್ಲಿರುವಂತ ಪ್ರಜ್ವಲ್ ರೇವಣ್ಣಗೆ…

Read More

ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ ಮಾಡಿದ ಸಂಬಂಧ ಪೊಲೀಸರಿ ದೂರು ನೀಡಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿದ ನಂತ್ರ, ಬ್ಲಾಕ್ ಮೇಲ್ ಮಾಡಲಾಗಿತ್ತು. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಪೊಲೀಸರು ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಎಂಬುವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಬ್ಬರೂ ಪ್ರಭಾವಿಗಳನ್ನು ಸಂಪರ್ಕಿಸಿ, ಅವರನ್ನು ಹಿಂಬಾಲಿಸುತ್ತಿದ್ದರು. ಆ ಬಳಿಕ ಅವರ ಮೊಬೈಲ್ ನಂಬರ್ ಪಡೆದು, ಅವರು ಉಳಿದುಕೊಂಡಿದ್ದಂತ ಹೋಟೆಲ್ ನಲ್ಲೇ ಉಳಿದುಕೊಳ್ಳುತ್ತಿದ್ದರು. ಇದಾದ ನಂತ್ರ ವಿಐಪಿಗಳು ಖಾಲಿ ಮಾಡಿದ ರೂಂ ಬಾಡಿಗೆಗೆ ಪಡೆದು ಯುವತಿಯನ್ನು ಬಳಸಿಕೊಂಡು ಅದೇ ರೂಂನಲ್ಲಿ ಹಿಡನ್ ಕ್ಯಾಮರಾ ಬಳಸಿ, ವೀಡಿಯೋ ಚಿತ್ರೀಕರಿಸಿ, ಪ್ರಭಾವಿಗಳಿಗೆ ತಮ್ಮದೇ ವೀಡಿಯೋ ಎಂದು ಹಣಕ್ಕಾಗಿ ಪೀಡಿಸುತ್ತಿದ್ದಾಗೆ ತನಿಖೆಯ ವೇಳೆ ತಿಳಿದು ಬಂದಿದೆ. https://kannadanewsnow.com/kannada/holenarasipura-police-first-case-prajwal-revannas-bail-plea-rejected/…

Read More

ಬೆಂಗಳೂರು: “ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ ಎಂದರು. ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಹೇಳಿದ್ದಾರೆ ಎಂದು ಕೇಳಿದಾಗ, “ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು…

Read More

ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರಕರಮ ಸಂಬಂಧ ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿಯನ್ನು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದರ ವಿಚಾರಣೆ ನಡೆಯಿತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಹೊಳೆನರಸೀಪುರ ಠಾಣೆಯ ಮೊದಲ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. https://kannadanewsnow.com/kannada/bigg-boss-contestant-varthur-santhosh-faces-another-trouble-complaint-filed-against-him-for-unsafe-animal-trafficking/ https://kannadanewsnow.com/kannada/we-have-information-about-who-shared-prajwals-obscene-video-g-parameshwara/

Read More

ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿ, ಸಂಕಷ್ಟಕ್ಕೆ ಸಿಲುಕಿ, ಜೈಲು ಪಾಲಾಗಿದ್ದಂತ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅದೇ ಪ್ರಾಣಿಗಳನ್ನು ಅಸುರಕ್ಷಿತವಾಗಿ ಸಾಗಾಟ ಮಾಡಿದ ಆರೋಪದಲ್ಲಿ ಅಧಿಕಾರಿಯೊಬ್ಬರು ಅವರ ವಿರುದ್ಧ ದೂರು ನೀಡಿದ್ದಾರೆ. ಹೌದು ಬಿಗ್ ಬಾಸ್ ಸೆಲೆಬ್ರೆಟಿ ವರ್ತೂರು ಸಂತೋಷ್ ಅವರು ಪ್ರಾಣಿಗಳ ಸಾಗಾಟ ನಿಯಮವನ್ನು ಮೀರಿ, ಪ್ರಾಣಿಗಳನ್ನು ಅಸುರಕ್ಷಿತವಾಗಿ ಸಾಗಾಟ ಮಾಡಿದ್ದಾರೆ ಅಂತ ಪ್ರಾಣಿ ಕಲ್ಯಾಣಾಧಿಕಾರಿ ಹರೀಶ್ ಎಂಬುವರು ಪೊಲೀಸರಿಗೆ ವರ್ತೂರು ಸಂತೋಷ್ ವಿರುದ್ಧ ದೂರು ನೀಡಿದ್ದಾರೆ. ಪ್ರಾಣಿ ಕಲ್ಯಾಣಾಧಿಕಾರಿ ಹರೀಶ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ವರ್ತೂರು ಠಾಣೆಯ ಪೊಲೀಸರು ವರ್ತೂರು ಸಂತೋಷ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹಳ್ಳಿಕಾರ್ ರೇಸ್ ಮಾಡಲು ಟ್ರಕ್ ಒಂದರಲ್ಲಿ ಒಂಭತ್ತು ಹೋರಿಗಳನ್ನು ತುಂಬಿಕೊಂಡು ಸಾಟ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಟ್ರಕ್ ನಲ್ಲಿ ಕೆಲ ವಸ್ತುಗಳನ್ನು ಸಹ ತುಂಬಲಾಗಿತ್ತು. ಇವುಗಳೊಂದಿಗೆ…

Read More

ಬನ್ನೇರುಘಟ್ಟ :  ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಚಾಲನೆ ನೀಡಿದರು. ಇದು ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದೆ. ಪ್ರಸ್ತುತ 8  ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಚಿರತೆ ಸಫಾರಿ ಪ್ರದೇಶವು ನೈಸರ್ಗಿಕ ಬಂಡೆಗಳಿಂದ ಹಾಗೂ ಅರೆ-ಎಲೆ ಉದುರುವ ಕಾಡುಗಳಿಂದ ಕೂಡಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ, 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ರೈಲ್ವೆ ಬ್ಯಾರಿಕೇಡ್ ಹಾಕಲಾಗಿದೆ. ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಈ ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಲಂಬ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದ್ದು, ಎಂಎಸ್ ಶೀಟ್…

Read More

ಬನ್ನೇರುಘಟ್ಟ : ರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿಂದು ದಕ್ಷಿಣ ಭಾರತದ ಮೊದಲ ಹಾಗೂ ದೇಶದ ಅತಿ ದೊಡ್ಡ ಚಿರತೆ ಸಫಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೈವಿಕ ಉದ್ಯಾನಕ್ಕೆ ಬರುವ ಜನರು ವನ್ಯ ಜೀವಿಗಳನ್ನು ನೋಡಿ ಸಂತೋಷ ಪಡುತ್ತಾರೆ. ಜೊತೆಗೆ ಅವರಿಗೆ ಇಲ್ಲಿರುವ ಪ್ರತಿಯೊಂದು ಪ್ರಬೇಧದ ವೃಕ್ಷಗಳ ಬಗ್ಗೆ ತಿಳಿಸಿ ಜನರು ಕನಿಷ್ಠ 10 ಪ್ರಬೇಧದ ವೃಕ್ಷ ಗುರುತಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು. ಸಂದರ್ಶಕರಿಗೊಂದು ಸಸಿ ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಪ್ರಾಣವಾಯು- ಆಮ್ಲಜನಕ ನೀಡುವ ವೃಕ್ಷಗಳ ಮಹತ್ವದ ಬಗ್ಗೆ ತಿಳಿಸಿ, ಅವರು ಮನೆಗೆ ತೆರಳುವಾಗ ಒಂದು ಸಸಿ ಖರೀದಿಸಿ ತೆಗೆದುಕೊಂಡು ಹೋಗಿ ತಮ್ಮ ಮನೆಯ ಮುಂದೆ ನೆಟ್ಟು, ಪೋಷಿಸುವಂತೆ ಪ್ರೇರೇಪಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ರೀತಿಯಲ್ಲೇ…

Read More

ತುಮಕೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಪ್ರಕರಣ ಎನ್ನುವಂತೆ ಮಕ್ಕಳನ್ನು ಮಾರಾಟ ಮಾಡುತ್ತಿದ್ದಂತ ಗ್ಯಾಂಗ್ ಅನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಆಸ್ಪತ್ರೆಯ ಮ್ಯಾನೇಜರ್, ನರ್ಸ್, ಫಾರ್ಮಸಿಸ್ಟ್ ಗಳೇ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದದ್ದು ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ 6 ಆರೋಪಿಗಳನ್ನು ಗುಬ್ಬಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೌದು ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಅಪಹರಣ, ಮಾರಾಟ ಮಾಡುವಂತ ಗ್ಯಾಂಗ್ ಅನ್ನು ಗುಪ್ಪಿ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ. 11 ತಿಂಗಳ ರಾಕಿ ಎನ್ನುವಂತ ಮಗುವನ್ನು ಅಪಹರಣದ ಬೆನ್ನತ್ತಿದಂತ ಪೊಲೀಸರಿಗೆ, ಮಕ್ಕಳನ್ನು ಕಿಡ್ನ್ಯಾಪ್ ಮಾಡಿ, ಮಾರಾಟ ಮಾಡುವಂತ ಜಾಲವೇ ಪತ್ತೆಯಾಗಿದೆ. ಒಂದೇ ಗ್ಯಾಂಗ್ ನಿಂದ ಬರೋಬ್ಬರಿ 9 ಮಕ್ಕಳನ್ನು ಮಾರಾಟ ಮಾಡಿರೋದಾಗಿ ತಿಳಿದು ಬಂದಿದೆ. ಮಕ್ಕಳನ್ನು ಮಾರಾಟ ಮಾಡೋದಕ್ಕೆ ಅವಿವಾಹಿತೆಯರನ್ನೇ ಟಾರ್ಗೆಟ್ ಮಾಡಿ, ಅವರನ್ನು ಅಕ್ರಮ ಸಂಬಂಧದ ಮೂಲಕ ಗರ್ಭಧರಿಸುವಂತೆ ಮಾಡುತ್ತಿದ್ದಂತ ಗ್ಯಾಂಗ್ ಅವರಿಗೆ ಹುಟ್ಟಿದಂತ ಮಗುವನ್ನು ಮಕ್ಕಳು ಇಲ್ಲದವರಿಗೆ ಮಾರಾಟ ಮಾಡುತ್ತಿತ್ತಂತೆ. ಸದ್ಯ ಮಾರಾಟ ಮಾಡಲಾಗಿದ್ದಂತ 9 ಮಂದಿಯ ಪೈಕಿ…

Read More

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಜೂನ್ 28 ರಂದು ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಲಿದೆ. 2028-29 ನೇ ಸಾಲಿನ 05 ವರ್ಷಗಳ ಅವಧಿಯಲ್ಲಿನ ಚುನಾವಣೆಗೆ ಉದೇದುವಾರಿಕೆ ವಾಪಸ್ಸು ಪಡೆದ ನಂತರ ಅಂತಿವಾಗಿ ಚುನಾವಣಾ ಕಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸೇರಿದಂತೆ ಒಟ್ಟು 27 ಅಭ್ಯರ್ಥಿಗಳು ಅಂತಿಮ ಉಳಿದಿದ್ದಾರೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾರೆಲ್ಲ ಕಣದಲ್ಲಿ ಇದ್ದಾರೆ.? ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಶಿವಮೊಗ್ಗ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ ದುಗ್ಗಪ್ಪಗೌಡ, ಶಿವನಂಜಪ್ಪ.ಜೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಭದ್ರಾವತಿ ತಾಲ್ಲೂಕು ಕ್ಷೇತ್ರದಿಂದ ಹೆಚ್.ಎಲ್. ಷಡಾಕ್ಷರಿ, ಸಿ.ಹನುಮಂತಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ತೀರ್ಥಹಳ್ಳಿ ತಾ. ಕ್ಷೇತ್ರದಿಂದ ಬಸವಾನಿ ವಿಜಯದೇವ್, ಕೆ.ಎಸ್.ಶಿವಕುಮಾರ್, ಪ್ರಾ ಕೃ ಪ ಸ ಸಂಘ ನಿ ಸಾಗರ ತಾಲ್ಲೂಕು ಕ್ಷೇತ್ರದಿಂದ…

Read More

ಶಿವಮೊಗ್ಗ: ರಂಗಭೂಮಿ ಎನ್ನುವ ಪದದಲ್ಲಿ ಭೂಮಿ ಎನ್ನುವ ಪದವಿದೆ. ಭೂಮಿ ಎಂದರೆ ಹೆಣ್ಣು, ಫಲವತ್ತತೆ. ಹೀಗಾಗಿ ಹೆಣ್ಣು ರಂಗಭೂಮಿಯ ಅವಿಭಾಜ್ಯ ಅಂಗವೆಂದು ಖ್ಯಾತ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಅಭಿಪ್ರಾಯ ಪಟ್ಟರು. ಮಂಗಳವಾರದಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಇಂದಿರಾಗಾಂಧಿ ಮಹಿಳಾ ಕಾಲೇಜು ಮತ್ತು ಡಿಜಿಟಲ್ ಮೀಡಿಯಾ ಪ್ರೆಸ್ ಕ್ಲಬ್ ಜಂಟಿಯಾಗಿ ಆಯೋಜಿದ್ದ ರಂಗಭೂಮಿ ಮತ್ತು ಮಹಿಳೆ ಎಂಬ ವಿಶೇಷ ಉಪನ್ಯಾಸ ನೀಡುತ್ತಾ ಹೇಳಿದರು. ಗಂಡಾಳ್ವಿಕೆಯ ನೆಲೆಯಲ್ಲಿ ರಂಗಭೂಮಿ ಚಟುವಟಿಕೆ ನಡೆಯುತ್ತಿದ್ದ ಕಾಲಘಟ್ಟದಲ್ಲಿ ಹಲವು ಮಹಿಳಾ ಹೋರಾಟಗಾರರು, ಬರಹಗಾರರು ಸೌಂದರ್ಯ ಸ್ಪರ್ಧೆಯ ಸಮಯದಲ್ಲಿ ಸಿಡಿದು ವಿರೋಧಿಸಿದರು ಎಂದರು. ರಂಗಭೂಮಿ ಸಾಹಿತ್ಯ, ಪ್ರದರ್ಶನ ಮತ್ತು ತಾಂತ್ರಿಕ ಅಂಶವನ್ನು ಒಳಗೊಂಡಿರುತ್ತದೆ. ಇಲ್ಲಿ ಆಡುವವರು, ನೋಡುವವರು ಇರಬೇಕು. ಕೆಲವು ಮನುಷ್ಯರು ಹಲವು ಮನುಷ್ಯರ ಜೊತೆಗೆ ಮನುಷ್ಯರ ಕಥೆಗಳನ್ನ ಹೇಳುತ್ತಾರೆ. ಇವರು ರಂಗಭೂಮಿ ಜಗತ್ತಿನ ಎಲ್ಲ ಅವಸ್ಥೆಗಳನ್ನು ನೋಡಲು ಇರುವ ಒಂದು ಜಾತ್ಯಾತೀತ ಸ್ಪೇಸ್. ನಾಲ್ಕು ವೇದಗಳು ಜನ ಸಮಾನ್ಯರಿಗೆ ಅರ್ಥವಾಗದೆ ಇರುವ ಕಾರಣಕ್ಕೆ ನಾಟ್ಯವೇದದ ಹುಟ್ಟಿಗೆ ಕಾರಣವಾಯಿತು.…

Read More