Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ : “ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಬೆಳಗಾವಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ ಸರಿಯಾಗಿ ಸಿಗುತ್ತಿಲ್ಲ. ರೈತರಿಗೆ ಸಹಾಯ ಮಾಡಲು ಮಹದಾಯಿ ಯೋಜನೆ ಬಗ್ಗೆ ತೀರ್ಮಾನ ಮಾಡಲು ಇವರೆಗೂ ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಮೇಕೆದಾಟು ವಿಚಾರದಲ್ಲಿ ನಮ್ಮ ಹೋರಾಟದಿಂದ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಕ್ಕಿದ್ದು, ಒಂದೇ ದಿನದಲ್ಲಿ ಅನುಮತಿ ಕೊಡಿಸುತ್ತೇವೆ ಎಂದು ಹೇಳಿದ್ದವರು ಇನ್ನೂ ಕೊಡಿಸಿಲ್ಲ. ಭದ್ರ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಘೋಷಿಸಿದ ₹5,400 ಹಣವನ್ನು ಇದುವರೆಗೂ ಕೊಟ್ಟಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ…
ಮುಂಬೈ,: ಅನಂತ್ ಅಂಬಾನಿ ಅವರು ವನ್ಯಪ್ರಾಣಿಗಳ ಸಂರಕ್ಷಣೆ ಹಾಗೂ ಆರೈಕೆ ವಿಚಾರವನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಆರಂಭಿಸಿದ ವಂತಾರ ಉಪಕ್ರಮಕ್ಕಾಗಿ ಜಾಗತಿಕ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಮಾನವೀಯ ದಯಾಪರತೆ ವ್ಯಕ್ತಿಗಳನ್ನು ಗುರುತಿಸಿ, ನೀಡುವಂಥ ಪ್ರತಿಷ್ಠಿತ ಗೌರವ ಇದಾಗಿದೆ. ಗ್ಲೋಬಲ್ ಹ್ಯುಮೇನ್ ಸೊಸೈಟಿ ನೀಡುವಂಥ ‘ಗ್ಲೋಬಲ್ ಹ್ಯುಮಾನಿಟೇರಿಯನ್ ಅವಾರ್ಡ್ ಫಾರ್ ಅನಿಮಲ್ ವೆಲ್ಫೇರ್’ ಪ್ರಶಸ್ತಿಯು ಅನಂತ್ ಅಂಬಾನಿ ಅವರಿಗೆ ಸಂದಿದೆ. ಅಮೆರಿಕದಲ್ಲಿ ಇರುವಂಥ ಅತ್ಯಂತ ಹಳೆಯ ರಾಷ್ಟ್ರೀಯ ಮಾನವೀಯ ದಯಾಪರತೆ ಸಂಘಟನೆಯಾಗಿದ್ದು, ಆ ಅಮೆರಿಕನ್ ಹ್ಯುಮೇನ್ ಸೊಸೈಟಿಯ ಅಂತಾರಾಷ್ಟ್ರೀಯ ಬ್ರ್ಯಾಂಡ್ ಆಗಿ ಗ್ಲೋಬಲ್ ಹ್ಯುಮೇನ್ ಸೊಸೈಟಿ ಸೇವೆ ಸಲ್ಲಿಸುತ್ತಿದೆ. ಅಂದ ಹಾಗೆ ಇದು ಪ್ರಾಣಿಗಳ ಹಿತರಕ್ಷಣೆಯನ್ನು ದೃಢೀಕರಿಸುವ ವಿಶ್ವದ ಅತಿದೊಡ್ಡ ಸಂಘಟನೆ ಸಹ ಹೌದು. ವನ್ಯಪ್ರಾಣಿಗಳ ಸಂರಕ್ಷಣೆಗೆ ಅಂತಲೇ ಮೀಸಲಾದ ಅಂತರರಾಷ್ಟ್ರೀಯ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಯಿತು. ಈ ಪ್ರಶಸ್ತಿಯು ಹಲವು ರೀತಿಯಲ್ಲಿ ಐತಿಹಾಸಿಕ ಎನಿಸಿಕೊಂಡಿತು. ಏಕೆಂದರೆ, ಈ ಪ್ರಶಸ್ತಿಯನ್ನು ಪಡೆದ ಅತ್ಯಂತ ಕಿರಿಯ ವಯಸ್ಸಿನ ವ್ಯಕ್ತಿ ಹಾಗೂ ಮೊದಲ ಏಷ್ಯನ್…
ಇಂಡೋನೇಷ್ಯಾ: ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಮಂಗಳವಾರ ಏಳು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಬೆಂಕಿಯನ್ನು ನಂದಿಸಲಾಗಿದ್ದು, ಕಟ್ಟಡದೊಳಗೆ ಹೆಚ್ಚಿನ ಬಲಿಪಶುಗಳನ್ನು ಹುಡುಕುವ ಪ್ರಯತ್ನಗಳು ಮುಂದುವರೆದಿವೆ ಎಂದು ಸೆಂಟ್ರಲ್ ಜಕಾರ್ತಾ ಪೊಲೀಸ್ ಮುಖ್ಯಸ್ಥ ಸುಸತ್ಯೊ ಪೂರ್ಣೊಮೊ ಕೊಂಡ್ರೊ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬೆಳಗಾವಿ : “ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಮೊದಲನೇ ಬಾರಿಗೆ ಮಹಾರಾಷ್ಟ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ವಿವಿಧ ಶಾಸಕರುಗಳು ನೀರಾವರಿ ಯೋಜನೆಗಳ ಸಂಬಂಧ ಕೇಳಿದ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಉತ್ತರಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆ (ಹಂತ-3) ಸಂಬಂಧ ಭೂಸ್ವಾಧೀನ ಪರಿಹಾರ ಸೇರಿದಂತೆ ಇತರೇ ವಿಚಾರಗಳ ಬಗ್ಗೆ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, “ದೆಹಲಿಯಲ್ಲಿರುವ ತಮ್ಮ ಸ್ನೇಹಿತರ ಮೇಲೆ ಒತ್ತಡ ಹೇರಿ ಈ ಯೋಜನೆಗೆ ಅನುಮತಿ ಕೊಡಿಸಿದರೆ, ಕೂಡಲೇ ಸಾಲ ಮಾಡಿ ಈ ಯೋಜನೆ ಪೂರ್ಣಗೊಳಿಸಲಾಗುವುದು. ಕೇಂದ್ರ ಸಚಿವರಾದ ಸೋಮಣ್ಣ ಅವರ ಜೊತೆ ಮೂರು ಬಾರಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿದ್ದೇವೆ. ಕೇಂದ್ರ…
ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ. ಎಸ್. ಸುರೇಶ್ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ ಪಂಚಾಯತಿಯಲ್ಲಿನ ಒಂದು ಎಕರೆ ಒಳಗಿನ ಜಮೀನುಗಳಿಗೆ ಅನುಮೋದನೆ ನೀಡುವ ಪ್ರಕರಣಗಳಿಗೆ ತಾಂತ್ರಿಕ ಅನುಮೋದನೆ ನೀಡಲು ಸಹಾಯಕ ನಿರ್ದೇಶಕರ ಕಛೇರಿ ಹಾಗೂ ಹತ್ತಿರದ ಯೋಜನಾ ಪ್ರಾಧಿಕಾರಗಳ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ, ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿಯೇ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಆದೇಶಿಸಲಾಗಿದೆ. ಕರಾವಳಿ ಜಿಲ್ಲೆ ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಏಕ/ಬಹು ನಿವೇಶನ…
ಬೆಳಗಾವಿ ಸುವರ್ಣಸೌಧ: ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಹತ್ತಿರದ ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರ್ಕಾರವು ಕ್ರಮವಹಿಸಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ ಅವರು ಹೇಳಿದರು. ಪರಿಷತ್ತಿನಲ್ಲಿ ಡಿ.09 ರಂದು ಪರಿಷತ್ ಸದಸ್ಯರಾದ ಭೀಮರಾಯ ಬಸವರಾಜ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 299ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಈ ಕಾರ್ಖಾನೆಯ ಪುನಶ್ಚೇತನದ ಪ್ರಕ್ರಿಯೆಯು 2022ರಿಂದಲೇ ಆರಂಭವಾಗಿದೆ. 2022-23ನೇ ಹಂಗಾಮಿನಿಂದ 40 ವರ್ಷಗಳ ಅವಧಿಗೆ ಎಲ್.ಆರ್.ಓ.ಟಿ. ಆಧಾರದ ಮೇಲೆ ಇದ್ದಲ್ಲಿ, ಯಥಾಸ್ಥಿತಿಯಲ್ಲಿ ಖಾಸಗಿ ಅವರಿಗೆ ಗುತ್ತಿಗೆ ನೀಡಲು 2023ರಲ್ಲಿ ದಿನಪತ್ರಿಕೆಯಲ್ಲಿ ಟೆಂಡರ್ ಕರೆದರೂ ಸಹ ಬಿಡ್ಡುದಾರರು ಆಸಕ್ತಿ ತೋರಲಿಲ್ಲ. ಎರಡನೇ ಬಾರಿಗೆ ಟೆಂಡರ್ ಕರೆದರು ಸಹ ಯಾರೊಬ್ಬ ಬಿಡ್ಡುದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗಿಯಾಗಲಿಲ್ಲ. ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಸ್ತಾವನೆಯನ್ನು ಒಳಗೊಂಡಂತೆ ಒಟ್ಟು 06 ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಎನ್.ಸಿ.ಡಿ.ಸಿ.ಯಿಂದ ನೆರವನ್ನು ಪಡೆಯುವ ಕುರಿತು…
ಬೆಳಗಾವಿ ಸುವರ್ಣ ವಿಧಾನಸೌಧ: ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು. 2025-26ನೇ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗುವ ಕಂಬಳ ಉತ್ಸವಗಳಿಗೆ ಅನುದಾನ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿವೆ. ಇದಕ್ಕೆ ಸರ್ಕಾರದಿಂದ ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಕಡತ ರವಾನಿಸಲಾಗಿದೆ. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ,ಮಂಗಳೂರು, ನರಿಂಗಾಣ, ಮೂಡಬಿದ್ರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ…
ಬೆಳಗಾವಿ : ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣ ಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ವಿಧಾನ ಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಧ್ವಜವನ್ನು ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಿಸಿದ್ದಾರೆ.
ಬೆಳಗಾವಿ : “ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸುತ್ತಿರುವುದು ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಬೃಹತ್ ರಾಷ್ಟ್ರಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “ಹೊಸ ದಾಖಲೆ ಬರೆಯುತ್ತಿರುವ ಸ್ಪೀಕರ್ ಖಾದರ್ ಅವರಿಗೆ ಅಭಿನಂದನೆಗಳು. ಕಳೆದ ವರ್ಷ ಮಹಾತ್ಮ ಗಾಂಧಿ ಅವರ ಸ್ವಾತಂತ್ರ್ಯ ಹೋರಾಟದ ನೇತೃತ್ವದ ಶತಮಾನೋತ್ಸವ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಸುವರ್ಣಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಸ್ಥಾಪನೆ ಮಾಡಿದ್ದರು. ಈ ಸಂದರ್ಭದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ನಮ್ಮ ಧಾರವಾಡದ ಖಾದಿ ಕೇಂದ್ರದಿಂದ ಬೃಹತ್ ತ್ರಿವರ್ಣ ಧ್ವಜ ತಯಾರಿಸಿ ಸುವರ್ಣಸೌಧದಲ್ಲಿ ಪ್ರದರ್ಶನ ಮಾಡಿದ್ದಾರೆ” ಎಂದರು. “ರಾಜ್ಯದ ಜನರ ಪರವಾಗಿ ಸ್ಪೀಕರ್ ಹಾಗೂ ಅವರ ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ.…
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್ನಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 11 ರಂದು ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.00ರವರೆಗೆ ನಗರ ಉಪವಿಭಾಗ 2 ರ ಘಟಕ 5 ವ್ಯಾಪ್ತಿಗೆ ಬರುವ ಆರ್.ಎಂ.ಎಲ್. ನಗರ 1ನೇ ಮತ್ತು 2ನೇ ಹಂತ, ಎಲ್.ಎಲ್.ಆರ್. ರಸ್ತೆ, ಜೆ.ಸಿ.ನಗರ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ ಸುತ್ತಮುತ್ತ, ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ಬಿ ಕಾಲೋನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಡಿ.11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ವ್ಯತ್ಯಯ ಶಿವಮೊಗ್ಗ: ನಗರದ ಮಂಡ್ಲಿ…














