Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ನಿನ್ನೆ ಮಹಿಳೆಯೊಬ್ಬರು ಭೇಟಿಯಾಗಿ, ತನಗೆ ನಿವೇಶನ ಇಲ್ಲ. ಗಂಡ ಮತ್ತು ಇಬ್ಬರು ಮಕ್ಕಳಿದ್ದಾರೆ. ಬಾಡಿಗೆ ಕಟ್ಟೋದಕ್ಕೂ ಕಷ್ಟವಾಗುತ್ತಿದೆ ಎಂಬುದಾಗಿ ಅಲವತ್ತುಕೊಂಡು, ನಿವೇಶನಕ್ಕೆ ಮನವಿ ಮಾಡಿದ್ದರು. ಅವರು ಮನವಿ ಮಾಡಿದಂತ ಒಂದೇ ದಿನದಲ್ಲಿ ನಿವೇಶನ ಮಂಜೂರು ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ತುಮಕೂರು ಜಿಲ್ಲೆಯ ಶಿರಾ ನಗರಸಭೆಯ ಪೌರಾಯುಕ್ತರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ದಿನಾಂಕ 02-12-2024ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತುಮಕೂರಿಗೆ ಭೇಟಿ ನೀಡಿದಂತ ಸಂದರ್ಭದಲ್ಲಿ ರಾಬಿಯಾ ಕೋಂ ಅಸ್ಲಂ ಪಾಷಾ ಎಂಬುವರು ತಾತ್ಕಾಲಿಕ ನಿವೇಶನ ಕೋರಿ ಮನವಿ ಸಲ್ಲಿಸಿದ್ದರು. ಅವರು ಸಲ್ಲಿಸಿದಂತ ಮನವಿಯಲ್ಲಿ ತಾನು ಶಿರಾ ಟೌನ್ ನಿವಾಸಿಯಾಗಿದ್ದು, ಕಡು ಬಡವರಾಗಿದ್ದೇವೆ. ಗಂಡ ಮತ್ತು ಎರಡು ಪುಟ್ಟ ಮಕ್ಕಳನ್ನು ನೋಡಿಕೊಂಡು ಬಾಡಿಗೆ ಕಟ್ಟಲು ಸಾಧ್ಯವಿಲ್ಲದ ಕಾರಣ ತಾತ್ಕಾಲಿಕವಾಗಿ ನಿವೇಶನವನ್ನು ಕಲ್ಪಿಸುವಂತೆ ಕೋರಿದ್ದರು ಎಂದಿದ್ದಾರೆ. ಸದರಿ ಕೋರಿಯನ್ನು ಶಿರಾ ಆಶ್ರಯ ಸಮಿತಿಯ ಸಭೆಯಲ್ಲಿ ಪರಿಗಣಿಸಿ, ಶಿರಾ ನಗರದ ಸರ್ವೆ ನಂಬಬರ್.100ರಲ್ಲಿ ನಗರ ಆಶ್ರಯ ಯೋಜನೆಯಡಿ ರಚಿಸಲಾಗಿರುವ ನಿವೇಶನಗಳ…
ಭರೂಚ್: ಗುಜರಾತ್ನ ಭರೂಚ್ ಜಿಲ್ಲೆಯ ಅಂಕಲೇಶ್ವರ ಜಿಐಡಿಸಿ ಪ್ರದೇಶದ ಕೈಗಾರಿಕಾ ಘಟಕದಲ್ಲಿ ಮಂಗಳವಾರ ಮಧ್ಯಾಹ್ನ ಶೇಖರಣಾ ಟ್ಯಾಂಕ್ ಸ್ಫೋಟಗೊಂಡು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೈಗಾರಿಕಾ ತ್ಯಾಜ್ಯ ಸಂಸ್ಕರಣೆಯಲ್ಲಿ ತೊಡಗಿರುವ ಡಿಟಾಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆವರಣದಲ್ಲಿರುವ ಶೇಖರಣಾ ಟ್ಯಾಂಕ್ ಮೇಲೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಚಾವ್ಡಾ ತಿಳಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಚಾವ್ಡಾ ಹೇಳಿದರು. https://kannadanewsnow.com/kannada/ias-officer-srinivas-appointed-head-of-state-drug-control-department/
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರದಿಂದ ಔಷಧ ನಿಯಂತ್ರಣ ಇಲಾಖೆಯ ಮುಖ್ಯಸ್ಥರನ್ನಾಗಿ ಐಎಎಸ್ ಅಧಿಕಾರಿ ಶ್ರೀನಿವಾಸ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರಾಗಿದ್ದಂತ ಐಎಎಸ್ ಅಧಿಕಾರಿ ಶ್ರೀನಿವಾಸ ಇವರನ್ನು ಔಷಧ ನಿಯಂತ್ರಣ ಇಲಾಖೆಯ ಆಡಳಿತಾತ್ಮಕ ಮುಖ್ಯಸ್ಥರನ್ನಾಗಿ ಆದೇಶಿಸಲಾಗಿದೆ. ಅಂದಹಾಗೇ ಈ ಹುದ್ದೆಯಲ್ಲಿದ್ದಂತ ಉಮೇಶ್ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಮಾನತುಗೊಳಿಸಿದ್ದರು. ಹೀಗಾಗಿ ಐಎಎಸ್ ಅಧಿಕಾರಿ ಶ್ರೀನಿವಾಸ ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಔಷಧ ನಿಯಂತ್ರಣ ಇಲಾಖೆಯ ಆಡಳಿತಾತ್ಮಕ ಮುಖ್ಯಸ್ಥರನ್ನಾಗಿ ನೇಮಿಸಿ ಆದೇಶಿದ್ದಾರೆ
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಲ್ಲಿ ದಾಖಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಆದರ್ಶ ಅಯ್ಯರ್ ಎಂಬುವರು ದಾಖಲಿಸಿದ್ದಂತ ಖಾಸಗಿ ದೂರು ನೀಡಿದ್ದರು. ಈ ಸಂಬಂಧ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕೇಸ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ನಳೀನ್ ಕುಮಾರ್ ಕಟೀಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ಪ್ರಕರಣ ರದ್ದುಗೊಳಿಸಿ, ಅರ್ಜಿಯನ್ನು ಪರಸ್ಕರಿಸಿದೆ. ಈ ಮೂಲಕ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಇತರರಿಗೆ ಬಿಗ್ ರಿಲೀಫ್ ನೀಡಿದೆ.
ಚಿತ್ರದುರ್ಗ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಗಿರಿಜನ ಉಪಯೋಜನೆ ಅಡಿಯಲ್ಲಿ ಕುರಿ, ಮೇಕೆ ಘಟಕ ಪೂರೈಕೆ ಯೋಜನೆಯನ್ನು ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗಾಗಿ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಡಿ.15 ಅರ್ಜಿ ಸಲ್ಲಿಸಲು ಕೊನೆಯ ದಿನ. ಅರ್ಜಿ ಸಲ್ಲಿಸುವವರು 18 ರಿಂದ 60 ವರ್ಷ ಒಳಗಿನ ಮಹಿಳಾ, ಪುರುಷ ಸದಸ್ಯರಾಗಿದ್ದು, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ, ಮೇಕೆ, 01 ಟಗರು, ಹೋತಕ್ಕೆ ಒಟ್ಟು ಘಟಕ ದರ ರೂ.66,000/-ಗಳಿದ್ದು, ಶೇ.90ರಷ್ಟು ಸಹಾಯಧನ ಹೊಂದಿರುತ್ತದೆ. ಚಿತ್ರದುರ್ಗ ಜಿಲ್ಲೆಗೆ ಒಟ್ಟು 14 ಗುರಿ ನಿಗಧಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಪಶು ಆಸ್ಪತ್ರೆ…
ಚಿತ್ರದುರ್ಗ : ಹೊಳಲ್ಕೆರೆ ಪುರಸಭೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ವ್ಯಾಪಾರಿಗಳು ಪ್ರತ್ಯೇಕವಾಗಿ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಪುರಸಭೆಯಿಂದ ಅರ್ಜಿ ನಮೂನೆ ಪಡೆದು, ಅಗತ್ಯ ಮಾಹಿತಿಗಳೊಂದಿಗೆ, ಅರ್ಜಿ ಶುಲ್ಕ ರೂ.500/- ಆಗಿದ್ದು, 1 ವರ್ಷ ಚಾಲ್ತಿಯಲ್ಲಿರುತ್ತದೆ. ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬಾಡಿಗೆ ಕರಾರು ಪತ್ರ, ಉದ್ಯಮ ಪರವಾನಿಗೆ, ಉದ್ಯಮ ಫೋಟೋ ಹಾಗೂ ಮಾಲೀಕರ ಫೋಟೋ ದಾಖಲೆಗಳು ಬೇಕು. ಡಿ.15ರ ನಂತರ ಪ್ರತ್ಯೇಕ ಪರವಾನಿಗೆ ಪಡೆಯದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ತಂಬಾಕು ವ್ಯಾಪಾರಸ್ಥರ ಮೇಲೆ ದಂಡ ವಿಧಿಸುವುದಲ್ಲದೆ ಉದ್ದಿಮೆ ಪರವಾನಿಗೆಯನು ಸಹ ರದ್ದುಪಡಿಸಿ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/sc-youth-of-the-state-applications-invited-for-training-camp-on-folk-art-forms/ https://kannadanewsnow.com/kannada/breaking-lok-sabha-rajya-sabha-to-discuss-constitution-from-december-13-all-party-meeting-ends-logjam/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/
ಚಿತ್ರದುರ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಅನುಷ್ಠಾನಗೊಳಿಸಿರುವ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಿ.08 ಅರ್ಜಿ ಸಲ್ಲಿಸಲು ಕೊನೆಯ ದಿನ. ಎಸ್ಎಸ್ಎಲ್ಸಿ ಪಾಸ್, ಫೇಲ್ ಆದ 16 ರಿಂದ 40 ವರ್ಷ ವಯೋಮಿತಿಯವರಿಗೆ ಡಿಸೆಂಬರ್ 10 ರಿಂದ 17 ರವರೆಗೆ ಬೆಂಗಳೂರಿನಲ್ಲಿ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ ನಡೆಯಲಿದೆ. ತರಬೇತಿ ಶಿಬಿರಕ್ಕೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿಯ ಯುವ ಜನರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆದು ಇದೇ ಡಿ.08ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ತರಬೇತಿ ಶಿಬಿರಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಈ ಶಿಬಿರದಲ್ಲಿ ಭಾಗಹಿಸುವವರಿಗೆ ಸಾಮಾನ್ಯ ವಸತಿ ವ್ಯವಸ್ಥೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235635ಗೆ ಮತ್ತು ಸಹಾಯವಾಣಿ ಸಂಖ್ಯೆ 155265 ಹಾಗೂ ಮೊಬೈಲ್ 9731251411 ಸಂಪರ್ಕಿಸಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ…
ಬೆಂಗಳೂರು : ಕುಣಿಗಲ್ ಶಾಸಕ ಡಾ. ಎಚ್ ಡಿ ರಂಗನಾಥ್ ಅವರ ತಂದೆ ಡಾ. ಎಚ್ ಆರ್ ದೊಡ್ಡಯ್ಯ ಅವರು ದೀರ್ಘಕಾಲದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮೃತರಿಗೆ ಪತ್ನಿ ಲಕ್ಷ್ಮಮ್ಮ, ಪುತ್ರರಾದ ಶಾಸಕ ಡಾ. ಎಚ್ ಡಿ ರಂಗನಾಥ್, ಡಾ. ಎಚ್ ಡಿ ರಾಮಚಂದ್ರಪ್ರಭು, ಎಚ್ ಡಿ ಶ್ರೀನಿವಾಸ್, ಸೊಸೆಯಂದಿರು, ಮೊಮ್ಮಕ್ಕಳು ಇದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗದ ಆಲ್ಕೆರೆ ಹೊಸಹಳ್ಳಿ ಗ್ರಾಮದ ಮೂಲದವರಾದ ಡಾ. ಎಚ್ ಆರ್ ದೊಡ್ಡಯ್ಯ ಅವರು ಅರೇಳು ತಿಂಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಇಂದು ಸಂಜೆ 7 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು. ದೊಡ್ಡಯ್ಯ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಕುಣಿಗಲ್ ನ ಸ್ವಗ್ರಾಮ ಆಲ್ಕೆರೆ ಹೊಸಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಸಿಎಂ, ಡಿಸಿಎಂ ಸಂತಾಪ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ…
ಹಾಸನ: “ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಪ್ರಚಾರ ಮಾಡಲು ಹಾಸನದಲ್ಲಿ ಕೆಪಿಸಿಸಿ ಹಾಗೂ ಸ್ವಾಭಿಮಾನಿಗಳ ಒಕ್ಕೂಟದ ಜಂಟಿ ಆಶ್ರಯದಲ್ಲಿ ಜನಕಲ್ಯಾಣ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹಾಸನದಲ್ಲಿ ಡಿಸೆಂಬರ್ 5 ರಂದು ಸಮಾವೇಶ ನಡೆಯಲಿರುವ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಈ ಸಮಾವೇಶ ಕೆಪಿಸಿಸಿ ನೇತೃತ್ವದಲ್ಲಿ ನಡೆಯುತ್ತಿದೆ. ಪಕ್ಷಕ್ಕೆ ಬೆಂಬಲವಾಗಿ ನಿಂತಿರುವ ಸ್ನೇಹಿತರು, ಸ್ವಾಭಿಮಾನಿಗಳ ಒಕ್ಕೂಟಗಳು ಕೂಡ ಮುಖ್ಯಮಂತ್ರಿಗಳು ಹಾಗೂ ಸರ್ಕಾರ ಮಾಡುತ್ತಿರುವ ಕೆಲಸಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ನಿರ್ಧರಿಸಿದ್ದು, ನಮ್ಮ ಜತೆ ಕೈ ಜೋಡಿಸಿರುವ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರ ಬದುಕು ಬದಲಾವಣೆ ಹಾಗೂ ಕಲ್ಯಾಣಕ್ಕೆ ಈ ಸಮಾವೇಶ ಮಾಡುತ್ತಿದ್ದೇವೆ” ಎಂದು ತಿಳಿಸಿದರು. ವಿರೋಧ ಪಕ್ಷಗಳ ಟೀಕೆಗಳು ಸತ್ತಿವೆ, ಜನರೇ ಉತ್ತರ ಕೊಟ್ಟಿದ್ದಾರೆ: “ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತಾ…
ಮಂಡ್ಯ: ಮೂರನೇ ಬಾರಿಗೆ ಮಂಡ್ಯದಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸುವುದರ ಜೊತೆಗೆ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಿಸುವ ಕೆಲಸವಾಗಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕರೆಕೊಟ್ಟರು. ಡಿಸೆಂಬರ್ ೨೦,೨೧,೨೨ರಂದು ಮೂರು ದಿನಗಳ ಕಾಲ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕುರಿತಂತೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಸ್ವಾಗತ ಸಮಿತಿ ಸಭೆಯ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಮಂಡ್ಯ ಜಿಲ್ಲೆಯ ಆಚಾರ ವಿಚಾರ, ಇಲ್ಲಿನ ಪ್ರೇಕ್ಷಣೀಯ, ಐತಿಹಾಸಿಕ ಸ್ಥಳಗಳ ಮಹತ್ವ, ಐತಿಹ್ಯವನ್ನು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೆ ಸಾರುವ ಅವಕಾಶ ಇದೆ. ಇದಕ್ಕಾಗಿ ಒಂದು ಕ್ರಿಯಾಯೋಜನೆ ರೂಪಿಸಿ ಮಂಡ್ಯಕ್ಕೆ ತನ್ನದೇ ಆದ ಐಡೆಂಟಿಟಿ ಸಿಗುವಂತ ಕೆಲಸವಾಗಬೇಕು ಎಂದು ಸ್ವಾಮೀಜಿಗಳು ಸಲಹೆ ನೀಡಿದರು. ಸಮ್ಮೇಳನದ ಪೂರ್ವ ಸಿದ್ಧತೆಗಳ ಮಾಹಿತಿ ಪಡೆದ ಸ್ವಾಮೀಜಿಗಳು, ಇದು ನಮ್ಮ ಹಬ್ಬ. ಮನೆಯ ಹಬ್ಬದಂತೆ ಆಚರಣೆ ಮಾಡಬೇಕು. ಜಿಲ್ಲೆಯ…