Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ, ಜಿಎಸ್ ಮಂಜುನಾಥ್ ಅವರನ್ನು ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ.ಸುಮಿತ್ರ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಜಿಎಸ್ ಮಂಜುನಾಥ್, ಮುನಿಸಿಪಲ್ ಕಾಲೋನಿ, ಕೆಳಗೋಟೆ, ಚಿತ್ರದುರ್ಗ ಇವರನ್ನು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಂಪನಿ ಆಕ್ಟ್ 2013ರ ಆರ್ಟಿಕಲ್ಸ್ ಆಫ್ ಅಸೋಷಿಯೇಷನ್ ಆಫ್ ದಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಲಂ 29(i)ರ ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ. ಅಂದಹಾಗೇ ಜಿ.ಎಸ್ ಮಂಜುನಾಥ್ ಅವರು ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಹಿರಿಯೂರು ನಗರದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಆಗ ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಚಪ್ಪಲಿಯಲ್ಲಿ ಹೊಡೆಯುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಭಾಷಣ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಆ ಬಳಿಕ…

Read More

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವೀಡಿಯೋ ಕೇಸ್, ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಎಸ್ಐಟಿ ಕಸ್ಟಡಿಗೆ ಕೋರ್ಟ್ ನೀಡಿತ್ತು. ಇಂದು ಎಸ್ಐಟಿ ಕಸ್ಟಡಿ ಅಂತ್ಯಗೊಂಡ ಕಾರಣ, ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಲಯವು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಕಸ್ಟಡಿಯಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತೆ ನ್ಯಾಯಪೀಠವು, ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಮತ್ತೊಂದೆಡೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸಹೋದರ ಸೂರಜ್ ರೇವಣ್ಣ ಕೂಡ ಬಂಧನವಾಗಿದೆ. ಅವರನ್ನು ಜುಲೈ.1ರವರೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಹೀಗಾಗಿ ಅಣ್ಣ ಪರಪ್ಪನ ಅಗ್ರಹಾರ ಜೈಲು ಪಾಲಾದ್ರೇ, ತಮ್ಮ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಾಗಿದೆ. https://kannadanewsnow.com/kannada/unnatural-sexual-assault-case-court-sends-suraj-revanna-to-cid-custody-till-july-1/ https://kannadanewsnow.com/kannada/big-news-nissin-invites-to-set-up-food-parks-in-vijayapura-dharwad-districts/

Read More

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ತಮ್ಮ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಿದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣದ ವಿಚಾರಣೆ ನಡೆಸಿ, ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು. ಹೀಗಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಜೈಲುಪಾಲಾಗಿದ್ದಾರೆ. https://kannadanewsnow.com/kannada/unnatural-sexual-assault-case-court-sends-suraj-revanna-to-cid-custody-till-july-1/ https://kannadanewsnow.com/kannada/big-news-nissin-invites-to-set-up-food-parks-in-vijayapura-dharwad-districts/

Read More

ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಕೆಲ ಬೇಡಿಕೆ ಈಡೇರಿಸೋದಕ್ಕೆ ಅಸ್ತು ಎಂದಿರುವುದಾಗಿ ತಿಳಿದು ಬಂದಿದೆ. ಕಳೆದ ಗುರುವಾರದಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದರು. ಆ ಬಳಿಕ ಮಾತನಾಡಿದ್ದಂತ ಅವರು, ಅಂಗನವಾಡಿ ಕೇಂದ್ರಗಳಿಗೆ ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಯವರು ಕೂಡ ಅಂಗನವಾಡಿ ಕೇಂದ್ರಗಳ ಅಸ್ವಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬರುವ ಸೋಮವಾರ ಕೂಡ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಚರ್ಚಿಸಲಾಗುವುದು. ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟಕ್ಕೆ ಫಲ ಸಿಗಲಿದೆ ಎಂದು ಸಚಿವರು ಹೇಳಿದರು. ಇಂದು…

Read More

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಇಂತಹ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ.1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.

Read More

ತಿರುವನಂತಪುರಂ: ರಾಜ್ಯದ ಹೆಸರನ್ನು ‘ಕೇರಳಂ’ ನಿಂದ ‘ಕೇರಳಂ’ ಎಂದು ಬದಲಾಯಿಸಲು ಸಾಂವಿಧಾನಿಕ ತಿದ್ದುಪಡಿ ತರುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ರಾಜ್ಯ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದ ಸುಮಾರು ಒಂದು ವರ್ಷದ ನಂತರ, ವಿಧಾನಸಭೆ ಸೋಮವಾರ ಸಣ್ಣ ತಿದ್ದುಪಡಿಗಳೊಂದಿಗೆ ಮತ್ತೆ ನಿರ್ಣಯವನ್ನು ಅಂಗೀಕರಿಸಿತು. ತಿದ್ದುಪಡಿಗಳನ್ನು ಸೂಚಿಸಿ ಕೇಂದ್ರವು ಹಿಂದಿನದನ್ನು ಹಿಂದಿರುಗಿಸಿದ ನಂತರ ಸದನವು ಹೊಸ ನಿರ್ಣಯವನ್ನು ಅಂಗೀಕರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಡಿಸಿದ ನಿರ್ಣಯದಲ್ಲಿ, ಸಂವಿಧಾನದ ಮೊದಲ ಅನುಸೂಚಿಯಲ್ಲಿ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸಲು ಸಂವಿಧಾನದ 3 ನೇ ವಿಧಿಯ ಅಡಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಐಯುಎಂಎಲ್ ಶಾಸಕ ಎನ್ ಶಂಸುದ್ದೀನ್ ನಿರ್ಣಯಕ್ಕೆ ತಿದ್ದುಪಡಿಯನ್ನು ಮಂಡಿಸಿದರು, ಹೆಚ್ಚಿನ ಸ್ಪಷ್ಟತೆಯನ್ನು ತರಲು ಪದಗಳನ್ನು ಪುನರ್ರಚಿಸಲು ಸಲಹೆ ನೀಡಿದರು. ಆದಾಗ್ಯೂ, ಸದನವು ತಿದ್ದುಪಡಿಯನ್ನು ತಿರಸ್ಕರಿಸಿತು. ರಾಜ್ಯದ ಹೆಸರನ್ನು ಅಧಿಕೃತವಾಗಿ ಬದಲಾಯಿಸುವ ನಿರ್ಣಯವನ್ನು ಕಳೆದ ವರ್ಷ ಆಗಸ್ಟ್ 9 ರಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಸಂವಿಧಾನದ ಮೊದಲ ಅನುಸೂಚಿಯಲ್ಲಿ ರಾಜ್ಯದ ಹೆಸರನ್ನು ‘ಕೇರಳಂ’ ಎಂದು…

Read More

ಲಕ್ನೋ: ಈ ವರ್ಷದ ಆರಂಭದಲ್ಲಿ ಪರಿಶೀಲನಾ ಅಧಿಕಾರಿಗಳು ಮತ್ತು ಸಹಾಯಕ ಪರಿಶೀಲನಾ ಅಧಿಕಾರಿಗಳ ಹುದ್ದೆಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಭಾನುವಾರ ಆರು ಜನರನ್ನು ಬಂಧಿಸಿದೆ. ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್ಸಿ) ಫೆಬ್ರವರಿ 11 ರಂದು ರಾಜ್ಯಾದ್ಯಂತ ಪರೀಕ್ಷೆ ನಡೆಸಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳು ಕೇಳಿಬಂದ ನಂತರ ರಾಜ್ಯ ಸರ್ಕಾರ ಮಾರ್ಚ್ 2 ರಂದು ಅದನ್ನು ರದ್ದುಗೊಳಿಸಿತು. ಬಂಧಿತರನ್ನು ಮಧ್ಯಪ್ರದೇಶದ ಭೋಪಾಲ್ ನಿವಾಸಿ ಸುನಿಲ್ ರಘುವಂಶಿ, ಬಿಹಾರದ ಮಧುಬನಿ ನಿವಾಸಿ ಸುಭಾಷ್ ಪ್ರಕಾಶ್, ಪ್ರಯಾಗ್ರಾಜ್ ನಿವಾಸಿಗಳಾದ ವಿಶಾಲ್ ದುಬೆ ಮತ್ತು ಸಂದೀಪ್ ಪಾಂಡೆ, ಬಿಹಾರದ ಗಯಾ ನಿವಾಸಿ ಅಮರ್ಜೀತ್ ಶರ್ಮಾ ಮತ್ತು ಬಲ್ಲಿಯಾ ನಿವಾಸಿ ವಿವೇಕ್ ಉಪಾಧ್ಯಾಯ ಎಂದು ಗುರುತಿಸಲಾಗಿದೆ. ಪ್ರಯಾಗ್ ರಾಜ್ ನಲ್ಲಿ ಈ ಬಂಧನಗಳನ್ನು ಮಾಡಲಾಗಿದೆ ಎಂದು ಎಸ್ ಟಿಎಫ್ ತಿಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಸ್ಟರ್ ಮೈಂಡ್ ರಾಜೀವ್ ನಯನ್ ಮಿಶ್ರಾ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಅವರನ್ನು ನೋಡೋದಕ್ಕೆ ತೆರಳಿದ್ದಂತ ಪತ್ನಿ, ಮಗನನ್ನು ಕಂಡಂತ ಅವರು ಕಣ್ಣೀರಿಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ. ನಟ ವಿನೋದ್ ಪ್ರಭಾಕರ್ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚಿಸಿದ ನಂತ್ರ, ದರ್ಶನ್ ಮೌನಕ್ಕೆ ಶರಣಾಗಿದ್ದಾರೆ. ಅವರನ್ನು ಕೈ ಕುಲುಕಿ ಭೇಟಿಯಾಗಿ ಬಂದೆ ಅಂತ ಹೇಳಿದ್ದರು. ಈ ಬಳಿಕ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪತ್ನಿ ವಿಜಯಲಕ್ಷ್ಮೀ, ಪುತ್ರ ಭೇಟಿಯಾದರು. ಪತ್ನಿ ಹಾಗೂ ಮಗನನ್ನು ನೋಡುತ್ತಿದ್ದಂತೇ, ಜೈಲಿನಲ್ಲಿ ನಟ ದರ್ಶನ್ ಕಣ್ಣೀರಿಟ್ಟಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಮಗನನ್ನು ತಬ್ಬಿಕೊಂಡು ಕೆಲ ಹೊತ್ತು ಕಣ್ಣೀರನ್ನು ನಟ ದರ್ಶನ್ ಹಾಕಿದ್ದಾರೆ. ಅಲ್ಲದೇ ಈ ಪ್ರಕರಣ ಸಂಬಂಧ ಪತ್ನಿಯ ಜೊತೆಗೆ ಕೆಲ ಕಾಲ ಮಾತುಕತೆಯನ್ನು ಅವರು…

Read More

ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್‌ ಜನರ ಕ್ಷಮೆ ಕೇಳಬೇಕು. ರಾಹುಲ್‌ ಗಾಂಧಿ ರಾಮ್‌ ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ನಡೆದ, ತುರ್ತು ಪರಿಸ್ಥಿತಿ ಸಂಬಂಧ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂಬ ಆಗ್ರಹದ ಪೋಸ್ಟರ್‌ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಮೂಲೆಗೆ ತಳ್ಳಿ ಸರ್ವಾಧಿಕಾರಿ ಧೋರಣೆ ತೋರಿದ ಕಾಂಗ್ರೆಸ್‌ ಪಕ್ಷ ಹಾಗೂ ಇಂದಿರಾಗಾಂಧಿ ರಾತ್ರೋರಾತ್ರಿ ತುರ್ತು ಪರಿಸ್ಥಿತಿ ಹೇರಿದ್ದರು. ನ್ಯಾಯಾಂಗ ವ್ಯವಸ್ಥೆಯನ್ನು ಕಪಿಮುಷ್ಟಿಗೆ ತೆಗೆದುಕೊಂಡು, ಪತ್ರಕರ್ತರನ್ನು ಜೈಲಿಗೆ ಹಾಕಿದ್ದರು. ಎಲ್‌.ಕೆ.ಅಡ್ವಾಣಿ, ಅಟಲ್‌ ಬಿಹಾರಿ ವಾಜಪೇಯಿ ಮೊದಲಾದ ಘಟಾನುಘಟಿ ನಾಯಕರನ್ನು ಜೈಲಿಗೆ ತಳ್ಳಿದ್ದರು ಎಂದರು. ಆಗ ನಾನು ವಿವಿ ಪುರ ಕಾಲೇಜಿನಲ್ಲಿ ಮೊದಲ ಪಿಯುಸಿ ವಿದ್ಯಾರ್ಥಿಯಾಗಿದ್ದೆ. ಯಶವಂತಪುರ ಸರ್ಕಲ್‌ನಲ್ಲಿ ಆರ್‌ಎಸ್‌ಎಸ್‌ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಇಂದಿರಾಗಾಂಧಿ ವಿರುದ್ಧ ಎರಡು ವಾಕ್ಯ ಘೋಷಣೆ ಕೂಗಿದ್ದೆ. ಆಗ ಯಶವಂತಪುರ ಪೊಲೀಸರು…

Read More

ಬೆಂಗಳೂರು: ವಿಧಾನಸಭೆ ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಆನ ಪರಿಷತ್ತಿಗೆ ಆಯ್ಕೆಯಾದಂತ 17 ನೂತನ ಸದಸ್ಯರು, ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನ ಪರಿಷತ್ತಿಗೆ ವಿಧಆನಸಭೆಯಿಂದ ಆಯ್ಕೆಯಾದ ಐವಾನ್ ಡಿಸೋಜಾ, ಕೆ.ಗೋವಿಂದರಾಜ್, ಜಗದೇವ ಗುತ್ತೇದಾರ್, ಬಿಲ್ಲೀಸ್ ಬಾನು, ಎನ್ ಎಸ್ ಬೋಸರಾಜು, ಡಾ.ಯತೀಂದ್ರ ಸಿದ್ಧರಾಮಯ್ಯ, ಎ ವಸಂತ ಕುಮಾರ್, ಮೂಳೆ ಮಾರುತಿ ರಾವ್, ಟಿಎನ್ ಜವರಾಯಿ ಗೌಡ, ಸಿಟಿ ರವಿ ಮತ್ತು ಎನ್ ರವಿಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಅಲ್ಲದೇ ಪವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದಂತ ಚಂದ್ರಶೇಖರ ಪಾಟೀಲ್ ಬಸವರಾಜ, ಡಾ.ಧನಂಜಯ್ ಸರ್ಜಿ, ರಾಮೋಜಿಗೌಡ, ಎಸ್.ಎಲ್ ಬೋಜೇಗೌಡ, ಕೆ.ವಿವೇಕಾನಂದ ಮತ್ತು ಡಿ.ಟಿ ಶ್ರೀನಿವಾಸ್ ಅವರು ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಚಿವ ಹೆಚ್.ಕೆ ಪಾಟೀಲ್ ಸೇರಿದಂತೆ ಇತರರು ಹಾಜರಿದ್ದರು. https://kannadanewsnow.com/kannada/big-news-nissin-invites-to-set-up-food-parks-in-vijayapura-dharwad-districts/ https://kannadanewsnow.com/kannada/breaking-producer-soundarya-jagadeesh-commits-suicide-pavithra-gowda-paid-rs-2-crore/

Read More