Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ ಸುವರ್ಣಸೌಧ: ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್‌ಟಿಒ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ. ಆರ್ ಟಿ ಓ ಕಚೇರಿಗಳಲ್ಲಿ ಬ್ರೋಕರ್ ಗಳು ಕಾಣಿಸಿಕೊಂಡರೇ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದರು. ಆರ್‌ಟಿಒ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ/ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ. ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ…
ದಕ್ಷಿಣ ಕನ್ನಡ: ದೀಪಾವಳಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ದಾಖಲಾಗಿದ್ದಂತ ಕೇಸಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಕೇಸ್ ದಾಖಲಾದ ಸಂದರ್ಭದಲ್ಲಿ ಬಲವಂತದ ಕ್ರಮ ಬೇಡವೆಂದಿತ್ತು. ನಂತರ ಪ್ರಭಾಕರ ಭಟ್ ಗೆ ಮಧ್ಯಂತರ ಜಾಮೀನು ನೀಡಿತ್ತು. ಇಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ದ್ವೇಷ ಭಾಷಣ ಪ್ರಕರಣದಲ್ಲಿ ಪೂರ್ಣ ಪ್ರಮಾಣದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನನ್ನು ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಂಜೂರು ಮಾಡಿದೆ. https://kannadanewsnow.com/kannada/japan-hit-by-another-7-6-magnitude-earthquake-after-a-few-days/ https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/
ಜಪಾನ್‌ನಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದು ಸತತ ಮೂರನೇ ದಿನವೂ ಆಗ್ನೇಯ ಏಷ್ಯಾದ ದೇಶದಲ್ಲಿ ಸಂಭವಿಸಿದ ಭೂಕಂಪವಾಗಿದೆ. ಜಪಾನಿನ ಮಾಪನದ ಪ್ರಕಾರ, ಭೂಕಂಪವು 5.9 ತೀವ್ರತೆಯದ್ದಾಗಿತ್ತು. ಇತ್ತೀಚಿನ ಭೂಕಂಪದ ನಂತರ ಯಾವುದೇ ಸುನಾಮಿ ಬೆದರಿಕೆಯನ್ನು ನೀಡಲಾಗಿಲ್ಲ. ಬುಧವಾರದ ಭೂಕಂಪವು ಮುಖ್ಯವಾಗಿ ಪೂರ್ವ ಅಮೋರಿ ಮತ್ತು ಹೊಕ್ಕೈಡೊ ಪ್ರಾಂತ್ಯಗಳಲ್ಲಿ ಕಂಡುಬಂದಿದೆ. ಭೂಕಂಪದ ಆಳ 30 ಕಿಲೋಮೀಟರ್ ಆಗಿತ್ತು. ಸೋಮವಾರ, ಜಪಾನ್‌ನಲ್ಲಿ 7.6 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದರೆ, ಮಂಗಳವಾರ, ದೇಶದ ಹೊಂಚೋ ಪಟ್ಟಣದಲ್ಲಿ 6.7 ತೀವ್ರತೆಯ ಕಂಪನಗಳು ಅನುಭವಿಸಿವೆ. https://kannadanewsnow.com/kannada/bmtc-to-purchase-4500-electric-buses-under-central-governments-pm-e-drive-scheme/ https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/
ಬೆಳಗಾವಿ ಸುವರ್ಣಸೌಧ: ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್. ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25 ಕಿ.ಮೀ.ವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುಲಭ, ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ ಎಂದಿದ್ದಾರೆ. ಪ್ರತಿದಿನ ಹವಾನಿಯಂತ್ರಿತ ಸಾರಿಗೆಗಳನ್ನು ಒಳಗೊಂಡಂತೆ 1,817 ಮಾರ್ಗಗಳಲ್ಲಿ 6,274 ಅನುಸೂಚಿಗಳನ್ನು 65,934 ಸುತ್ತುವಳಿಗಳೊಂದಿಗೆ 13 ಲಕ್ಷ ಕಿ.ಮೀ.ಗಳಲ್ಲಿ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ದಟ್ಟಣೆ / ಅವಶ್ಯಕತೆಗನುಗುಣವಾಗಿ ಕಾರ್ಯಾಚರಣೆ ಮಾಡುತ್ತಿದ್ದು, ಸರಾಸರಿ 44…
ಬೆಳಗಾವಿ ಸುವರ್ಣಸೌಧ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಅಂತ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹೆಚ್.ಡಿ ರೇವಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರ ಉತ್ತರಿಸಿದರು. 2024-25ನೇ ಸಾಲಿನಲ್ಲಿ ಮಂಜೂರಾಗಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣವನ್ನು ಲೋಕೋಪಯೋಗಿ ಇಲಾಖೆ, ಹಾಸನ ಇವರ ಮೂಲಕ ಕೈಗೊಳ್ಳಲಾಗಿದೆ. ಈಗಾಗಲೇ 2.50ಕೋಟಿ ರೂ.ಗಳನ್ನು ಹಾಸನ ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆ ಮಾಡಲಾಗಿರುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಆದಷ್ಟು ಶೀಘ್ರವಾಗಿ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. https://twitter.com/KarnatakaVarthe/status/1998745244163260681 https://kannadanewsnow.com/kannada/finance-department-approves-filling-of-24300-vacant-posts-in-the-state-cm-siddaramaiah/ https://kannadanewsnow.com/kannada/this-is-a-true-incident-that-happened-in-the-presence-of-the-king-the-miracle-that-happened-that-night-in-the-mantralaya/
ಬೆಳಗಾವಿ ಸುವರ್ಣಸೌಧ: ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಸರ್ಕಾರ ಉದ್ದೇಶ ಹೊಂದಿದೆಯೇ ಎಂಬ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಸಿಎಂ ಲಿಖಿತ ಉತ್ತರ ನೀಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿ 79694, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37572, ಒಳಾಡಳಿತದಲ್ಲಿ 28188 ಹುದ್ದೆಗಳು ಗರಿಷ್ಠ ಪ್ರಮಾಣದಲ್ಲಿ ಖಾಲಿ ಇವೆ. ಈ ರೀತಿ 2025-26ನೇ ಸಾಲಿನಲ್ಲಿ ಒಟ್ಟು 43 ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಭರ್ತಿ ಮಾಡಲು ಆರ್ಥಿಕ ಇಲಾಖೆಯಿಂದ ಅನುಮೋದಿತವಾದ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಲು ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. https://twitter.com/KarnatakaVarthe/status/1998744724971114638 https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/ https://kannadanewsnow.com/kannada/this-is-a-true-incident-that-happened-in-the-presence-of-the-king-the-miracle-that-happened-that-night-in-the-mantralaya/
ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ ನಿಜಕ್ಕೂ ನನಗೆ ಗೊತ್ತಿಲ್ಲ.. ಆದರೆ ಏನೋ ತಿಳಿಯದು ಅಷ್ಟು ಭಕ್ತಿ ಬರುತ್ತಿರಲಿಲ್ಲ.. ಕೆಲ ತಿಂಗಳ ಹಿಂದೆ ಉಡುಗೊರೆಯಾಗಿ ಕೊಟ್ಟ ರಾಘವೇಂದ್ರ ಸ್ವಾಮಿಗಳ ಮೂರ್ತಿಯೊಂದು ಮನೆಗೆ ಬಂತು.. ದೇವರ ಮನೆಯಲ್ಲಿ ಇಟ್ಟು ಪೂಜಿಸಲು ಶುರು ಮಾಡಿದೆ.. ಪೂಜೆ ಮಾಡುವ ಸಮಯದಲ್ಲಿ ಏನಾದರು ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಪ್ಪ ತಂದೆ ಎಂದು ಭಕ್ತಿಯಿಂದ ಒಮ್ಮೆ ಕೇಳಿಕೊಂಡೆ ಅಷ್ಟೇ ನೋಡಿ.. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ…
ದಾವಣಗೆರೆ/ನವದೆಹಲಿ; ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಕರ್ನಾಟಕದ ಸಂಸದರ ನಿಯೋಗ ತೆರಳಿ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಅವರ ಮನವಿಯನ್ನು ಪರಿಗಣಿಸುವಂತೆ ಈ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದರು ಉಲ್ಲೇಖಿಸಿದ್ದಾರೆ. ಕೇಂದ್ರ ಸರ್ಕಾರದ ವಿಳಂಬದ ಪರಿಣಾಮವಾಗಿ ಕರ್ನಾಟಕದ ತೊಗರಿ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಪ್ರಸ್ತುತ ಖಾರೀಫ್ ಹಂಗಾಮು 2025–26 ರಲ್ಲಿ, ಕರ್ನಾಟಕದಲ್ಲಿ ಸುಮಾರು 16.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಬಿತ್ತನೆಗೊಂಡಿದ್ದು, 12.60 ಲಕ್ಷ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚಿನ ಉತ್ಪಾದನೆಯ ನಿರೀಕ್ಷೆಯಿದೆ. ಈ ಬೆಳೆ ಕಲಬುರಗಿ,…
ಬೆಂಗಳೂರು : ತಂದೆ ಪೋಸ್ಟ್ ಮಾಸ್ಟರ್, ತಾಯಿ ಅಂಗನವಾಡಿ ಕಾರ್ಯಕರ್ತೆ. ನಾನು ಬಡ ಕುಟುಂಬದಿಂದ ಬಂದವನು. ಜೀವನದಲ್ಲಿ ನಿಖರ ಗುರಿ, ಕಠಿಣ ಪರಿಶ್ರಮ, ಶಿಸ್ತು, ಸಚ್ಚಾರಿತ್ರ್ಯ ಇದ್ದಲ್ಲಿ ಯಾವುದೇ ಪರೀಕ್ಷೆಯಲ್ಲಾದರೂ ಯಶಸ್ವಿಯಾಗಿ ಉತ್ತೀರ್ಣರಾಗಬಹುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡ್ಲ್ಯೂಎಸ್ ಎಸ್ ಬಿ) ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತಿರುವ ಆಸಕ್ತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಆರಂಭಿಸಿರುವ “ಅಸ್ಪೈರ್ ವಿತ್ ರಾಮ್ ಐಎಎಸ್” ಎಂಬ ಉಪನ್ಯಾಸಕ ಮಾಲಿಕೆಯ ಭಾಗವಾಗಿ ವಿಜಯನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀವನದಲ್ಲಿ ಕುಟುಂಬ ಸಮಸ್ಯೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಮ್ಮಲ್ಲಿರುವ ನಮ್ಮ ಶಕ್ತಿಯನ್ನು ನಾವೇ ಎಚ್ಚರಗೊಳಿಸಿಕೊಳ್ಳಬೇಕು. ಸಮಾಜಕ್ಕೆ ಯಾವುದೇ ಸೋಲುಗಳು ಬೇಕಿಲ್ಲ. ಬೇಕಿರುವುದು ಗೆಲುವು ಅಷ್ಟೇ. ಇದನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದಲೇ ನಿಮ್ಮ ವ್ಯಾಸಂಗ ಮುಂದುವರಿಸಿ ಎಂದು ಅತ್ಮವಿಶ್ವಾಸ ತುಂಬಿದರು. ನಮ್ಮ ತಂದೆಗೆ ಬರುತ್ತಿದ್ದ ವೇತನದಲ್ಲಿ ನಮ್ಮ ಕುಟುಂಬ ನಡೆಸುವುದು ಕಷ್ಟವಾಗಿತ್ತು.…
ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು. ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ…














