Author: kannadanewsnow09

ಬೆಂಗಳೂರು: ಮಂಡ್ಯ ಕೆರಗೋಡಿನಲ್ಲಿ ನಡೆದಂತ ಹನುಮ ಧ್ವಜ ವಿವಾದದ ಬಗ್ಗೆ ನಿನ್ನೆ ಇಡೀ ದಿನ ಮಂಡ್ಯದಲ್ಲಿ ಬಿಜೆಪಿಯಿಂದ ಹೈಡ್ರಾಮಾವೇ ನಡೆಸಲಾಯಿತು. ಇದಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಸಾಥ್ ನೀಡಿದ್ರು. ಇಂತಹ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗಂಭೀರ ಆರೋಪವನ್ನು ಮಾಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕುಮಾರಸ್ವಾಮಿನೇ ಪ್ರಚೋದನೆ ಮಾಡಿ ಗಲಾಟೆ ಎಬ್ಬಿಸಿರೋದು. ಜೆಡಿಎಸ್, ಬಿಜೆಪಿಯವರು ಜನಗಳನ್ನ ಪ್ರಚೋದನೆ ಮಾಡಿ ಗಲಾಟೆ ಎಬ್ಬಿಸಿರೋದು. ಶಾಂತಿಯನ್ನ ಕದಡಿರೋದು. ಈ ಘಟನೆಯಲ್ಲಿ ಕುಮಾರಸ್ವಾಮಿಯವರದ್ದು ತಪ್ಪು, ಬಿಜೆಪಿಯವರದ್ದು ತಪ್ಪು ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದರು. ಅಲ್ಲಿ ಪಂಚಾಯ್ತಿನಲ್ಲಿ ಪಂಚಾಯ್ತಿಯವರು ಇವರಿಗೆ ಪರ್ಮೀಷನ್ ಕೊಟ್ಟಿರೋದು ಯಾವ ಥರ? ಏನಂಥ ಕೊಟ್ಟಿರೋದು ಅಂದ್ರೆ ಧ್ವಜ ಸ್ಥಂಬದ ಮೇಲೆ ರಾಷ್ಟ್ರಧ್ವಜ ಹಾರಿಸಿ, ಅಥವಾ ಕನ್ನಡ ಧ್ವಜವನ್ನು ಹಾರಿಸಿ ಅಂತ ಹೇಳಿರೋದು. ಅದಕ್ಕೆ ಮುಚ್ಚಳಿಕೆ ಕೂಡ ಬರೆದುಕೊಟ್ಟಿದ್ದಾರೆ. ಹೀಗಿದ್ದೂ ಅವರು ಹಾರಿಸಿರೋದು ಮಾತ್ರ…

Read More

ಇಸ್ಲಾಮಾಬಾದ್: ಸೈಫರ್ ಪ್ರಕರಣದಲ್ಲಿ ಪಿಟಿಐ ಸಂಸ್ಥಾಪಕ ಇಮ್ರಾನ್ ಖಾನ್ ಮತ್ತು ಶಾ ಮೆಹಮೂದ್ ಖುರೇಷಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಸೋರಿಕೆಯಾದ ದಾಖಲೆಗೆ ಸಂಬಂಧಿಸಿದ ವಿವಾದಾತ್ಮಕ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ರಾಜ್ಯ ಮಾಧ್ಯಮ ಮತ್ತು ಪಿಟಿಐ ಪಕ್ಷದ ವಕ್ತಾರರು ತಿಳಿಸಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ರಾಜಕೀಯ ಪಕ್ಷ ಪಿಟಿಐ ಅವರ ಜೈಲು ಶಿಕ್ಷೆಯ ಬಗ್ಗೆ ಪ್ರತಿಕ್ರಿಯಿಸಿದೆ. “ಪಾಕಿಸ್ತಾನವನ್ನು ರಕ್ಷಿಸಿದ ಮತ್ತು ಹಕೀಕಿ ಆಜಾದಿ ಪರವಾಗಿ ನಿಂತ ಇಮ್ರಾನ್ ಖಾನ್ ಮತ್ತು ಶಾ ಮೆಹಮೂದ್ ಖುರೇಷಿ ಅವರೊಂದಿಗೆ ಪಾಕಿಸ್ತಾನ ನಿಲ್ಲುತ್ತದೆ. ಡೊನಾಲ್ಡ್ ಲು ಅವರ ಆದೇಶದ ಮೇರೆಗೆ ಮಾರ್ಚ್-ಏಪ್ರಿಲ್ 2022 ರಲ್ಲಿ ಏನಾಯಿತು ಎಂಬುದನ್ನು ಅಂತಹ ಯಾವುದೇ ಮೋಸದ ವಿಚಾರಣೆಯು ಬದಲಾಯಿಸಲು ಸಾಧ್ಯವಿಲ್ಲ ಎಂದಿದೆ.…

Read More

ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ( SSLC Students ) ಮುಂಬರುವಂತ ವಾರ್ಷಿಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ( Education Department ) ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಮಾದರಿ ಪ್ರಶ್ನೆಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು 2024ರ 10ನೇ ತರಗತಿ ವಾರ್ಷಿಕ ಪರೀಕ್ಷೆಗೆ ( SSLC Main Exam 2024 ) ಸಂಬಂಧಿಸಿದಂತೆ ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನು ( Model Question Paper ) ಬಿಡುಗಡೆ ಮಾಡಲಾಗಿದೆ ಎಂದಿದೆ. ಪ್ರತಿಯೊಂದು ವಿಷಯದ 5 ಸೆಟ್ ಮಾದರಿ ಪ್ರಶ್ನೆ ಪತ್ರಿಕೆಯನ್ನು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗೋ ನಿಟ್ಟಿನಲ್ಲಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಡಿಡಿಪಿಐ ಸಿದ್ಧಪಡಿಸಿದ ಮಾದರಿ ಪ್ರಶ್ನೆಪತ್ರಿಕೆಗಳು ಪರೀಕ್ಷೆಯ ಮಾದರಿಗೆ ಅನುಗುಣವಾಗಿ ಸಿದ್ಧತೆಗಳನ್ನು ವಿಶ್ಲೇಷಿಸಲು ಮತ್ತು ಯೋಜಿಸಲು ಬಹಳ ಸಹಾಯಕವಾಗಿವೆ. ಈ ಪ್ರಶ್ನೆ ಪತ್ರಿಕೆಗಳನ್ನು ಕನ್ನಡ/ ಇಂಗ್ಲಿಷ್/ ಹಿಂದಿ/ ಗಣಿತ/ ವಿಜ್ಞಾನ/…

Read More

ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ಜಯದೇವ ಹೃದ್ರೋಗ ಸಂಸ್ಥೆಯ ( Jayadeva Institute of Cardiology ) ನಿರ್ದೇಶಕರಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಸಿಎನ್ ಮಂಜುನಾಥ್ ( Dr.CN Manjunath ) ಅವರು, ಜನವರಿ.31ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಇಂತಹ ಅವರಿಗೆ ರಾಜ್ಯ ಸರ್ಕಾರದಿಂದ ಅದ್ಧೂರಿಯಾಗಿ ಇಂದು ಬೀಳ್ಕೊಡುಗೆ ನೀಡಲಾಯಿತು. ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಡಾ.ಸಿಎನ್ ಮಂಜುನಾಥ್ ಮಾಡಿದ ಕಾರ್ಯ, ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರವಾಗಿತ್ತು. ಅವರ ಸೇವಾವಧಿ ಕಳೆದ ವರ್ಷವೇ ಮುಕ್ತಾಯಗೊಳ್ಳುತ್ತಿದ್ದರೂ, ರಾಜ್ಯ ಸರ್ಕಾರ ಮತ್ತೊಂದು ಅವಧಿಗೆ ಮುಂದುವರೆಸಿ ಆದೇಶ ಮಾಡಿತ್ತು. ಇಂತಹ ಅವರು ಜನವರಿ.31ರಂದು ನಿವೃತ್ತರಾಗಲಿದ್ದಾರೆ. ಹೀಗಾಗಿ ಇದೇ ತಿಂಗಳ ಜ.31 ರಂದು ಸೇವೆಯಿಂದ ನಿವೃತ್ತಿಯಾಗಲಿರುವ ಜಯದೇವ ಹೃದ್ರೋಗ ಸಂಸ್ಥೆಯ ನಿದೇರ್ಶಕ ಡಾ. ಸಿ.ಎನ್. ಮಂಜುನಾಥ್ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ವೈದ್ಯಕೀಯ ಶಿಕ್ಷಣ) ಜಾವೀದ್ ಅಖ್ತರ್ ಅವರ ಬೀಳ್ಕೊಡೆಗೆ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್…

Read More

ಬೀದರ್: ಜಿಲ್ಲೆಗೆ ಲೋಕಸಭಾ ಚುನಾವಣೆಗಾಗಿ ಒಳ್ಳೆಯ ಅಭ್ಯರ್ಥಿಯನ್ನು ತನ್ನಿ ಎಂಬುದಾಗಿ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾಲಿಗೆ ಬಿದ್ದು ಗೋಗರೆದ ಪ್ರಸಂಗ ಬೀದರ್ ನಲ್ಲಿ ನಡೆದಿದೆ. ಇಂದು ಬೀದರ್ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತ್ರ ಬಿ.ವೈ ವಿಜಯೇಂದ್ರ ಭೇಟಿ ನೀಡಿದ್ದರು. ಅವರಿಗೆ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ ಸಮಾರಂಭ ಕೂಡ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರು ವೇದಿಕೆಯಲ್ಲೇ 2024ರಲ್ಲಿ ಲೋಕಸಭೆಗೆ ಒಳ್ಳೆಯ ಅಭ್ಯರ್ಥಿ ತನ್ನಿ ಎಂದು ಭಾಷಣ ಮಾಡುತ್ತಲೇ ದೀರ್ಘ ದಂಡ ನಮಸ್ಕಾರ ಮಾಡುತ್ತಲೇ ಮನವಿ ಮಾಡಿದ್ದಾರೆ. ಇದಕ್ಕೂ ಮುನ್ನ ನನಗೆ 10 ವರ್ಷಗಳಿಂದ ಅನ್ಯಾಯವಾಗಿದೆ. ಬೀದರ್ ಗೆ ಒಳ್ಳೆಯ ಅಭ್ಯರ್ಥಿಯನ್ನು ನೀಡಿ. ಕಾರ್ಯಕರ್ತರನ್ನ ಜೈಲಿಗೆ ಕಳುಹಿಸುವವರು ಬೇಡ. ಕಾರ್ಯಕರ್ತರಿಂದಲೇ ನಾವಿದ್ದೇವೆ. ಕಾರ್ಯಕರ್ತರನ್ನ ಗೌರವಿಸೋರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು. ಅಂದಹಾಗೇ ಗಡಿ ಜಿಲ್ಲೆ ಬೀದರ್ ನಲ್ಲಿ ಬಿಜೆಪಿಯಲ್ಲಿ ಅಮಸಾಧಾನದ ಹೊಗೆ ಆಡುತ್ತಿದೆ. ಕೇಂದ್ರ ಸಚಿವ ಭಗವಂತ್…

Read More

ರಾಯಚೂರು: ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ಬಿ.ವೈ ವಿಜಯೇಂದ್ರ ಮುಂದಿನ ಸಿಎಂ ಎಂಬುದಾಗಿ ಸ್ವಾಗತ ಮಾಡುತ್ತಲೇ, ಹೇಳಿದಂತ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಿನ್ನೆ ರಾಯಚೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿದ್ದರು. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿಯೂ ಭಾಗಿಯಾಗಿದ್ದರು. ಈ ವೇಳೆ ಅವರನ್ನು ಶಾಸಕ ಶಿವರಾಜ್ ಪಾಟೀಲ್ ಮುಂದಿನ ಮುಖ್ಯಮಂತ್ರಿ ಬಿವೈ ವಿಜಯೇಂದ್ರ ಎಂಬುದಾಗಿಯೇ ಸ್ವಾಗತಿಸಿದ್ದರು. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಶಿವರಾಜ್ ಪಾಟೀಲ್ ಹೇಳಿದಂತ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಂತೆ ಪರ ವಿರೋಧದ ಚರ್ಚೆಗಳು ಕೂಡ ನಡೆಯುತ್ತಿವೆ. ಒಟ್ಟಾರೆಯಾಗಿ ವಿಧಾನಸಭಾ ಚುನಾವಣೆ ಇನ್ನೂ ಐದು ವರ್ಷ ಇರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮುಂದಿನ ಸಿಎಂ ಎಂಬ ವಿಚಾರ ಬಿಜೆಪಿಯಲ್ಲಿ ಬಿಸಿ ಬಿಸಿ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಮೂಲಕ ಈಗಲೇ ಸದ್ದು ಮಾಡುತ್ತಿದೆ. https://kannadanewsnow.com/kannada/good-news-for-farmers-applications-invited-for-availing-farm-implements-at-50-discount/ https://kannadanewsnow.com/kannada/shivamogga-power-outages-in-these-areas-of-the-district-on-january-31/

Read More

ಮಂಡ್ಯ: ಇಂದು ಬಿಜೆಪಿ ಕಾರ್ಯಕರ್ತರು ನಡೆಸಿದಂತ ಹನುಮ ಧ್ವಜ ವಿವಾದದ ಪ್ರತಿಭಟನೆಯಲ್ಲಿ ನನ್ನ ಪ್ಲೆಕ್ಸ್ ಅನ್ನೇ ಬಿಟ್ಟಿಲ್ಲ. ಈ ವಿವಾದ ಸಂಬಂಧ ಸಂಧಾನ ಸಭೆಯನ್ನು ನಾನು ಮಾಡಿ, ಅದರಲ್ಲಿ ಭಾಗಿಯಾಗಿದ್ರೇ ನನ್ನನ್ನೇ ಕೊಲೆ ಮಾಡ್ತಿದ್ರು ಎಂಬುದಾಗಿ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನಗೂ ಕೇಸರಿ ಧ್ವಜದ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಾವು ಶಾಂತಿ ಯಾತ್ರೆ ಮಾಡುತ್ತೇವೆ. ಶೀಘ್ರದಲ್ಲೇ ಶಾಂತಿ ಯಾತ್ರೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು. ನಾನು ಕೂಡ ಹಿಂದೂ. ಎಲ್ಲಾ ದೇವರನ್ನು ಪೂಜೆ ಮಾಡ್ತೀನಿ. ಮಂಡ್ಯ ಆರ್ ಎಸ್ ಎಸ್ ಕಚೇರಿಗೆ ನಾನು 1 ಲಕ್ಷ ದೇಣಿಗೆ ಕೊಟ್ಟಿದ್ದೇನೆ. ಜನವರಿ.22ರಂದು ಸ್ಥಳೀಯ ರಾಮಮಂದಿರಕ್ಕೆ ಹೋಗಿದ್ದೇನೆ. ಇವರಿಂದ ದೇವರನ್ನು ಪೂಜೆ ಮಾಡುವುದನ್ನು ಕಲಿಯಬೇಕಾಗಿಲ್ಲ ಎಂದರು. ಇಂದಿನ ಪ್ರತಿಭಟನೆಯ ಸ್ವರೂಪದ ಬಗ್ಗೆ ನಮ್ಮ ಇಂಟೆಲಿಜೆನ್ಸ್ ಫೇಲ್ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆಯುತ್ತೇನೆ ಎಂಬುದಾಗಿ ತಿಳಿಸಿದರು.…

Read More

ಬೆಂಗಳೂರು; ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪುಟ್ಟಣ್ಣ ಅವರು ಇಂದು ಪ್ರಾದೇಶಿಕ ಆಯುಕ್ತರ ಕಚೇರಿಗೆ ತರಳಿ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ವಿಧಾನಪರಿಷತ್‌ ಸದಸ್ಯರಾಗಿದ್ದ ಪುಟ್ಟಣ್ಣ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸ್ವತಃ ಪುಟ್ಟಣ್ಣ ಅವರೇ ಕಣಕ್ಕಿಳಿದಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾತನಾಡಿ, ಪುಟ್ಟಣ್ಣ ಅವರು ಶಿಕ್ಷಕರ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸುವ ನಾಯಕರಾಗಿದ್ದು, ಅವರು ಈ ಬಾರಿ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲುವು…

Read More

ಬೆಂಗಳೂರು : ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೂ ಆ ಬಗ್ಗೆ ಕೆಲವೇ ಗಂಟೆಗಳಲ್ಲಿ ಮಾಹಿತಿ ನೀಡುವ ದೂರಸಂವೇದಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಲ್ಲೇಶ್ವರದ ಅರಣ್ಯ ಭವನದಲ್ಲಿಂದು ಕಾಡ್ಗಿಚ್ಚು ತಡೆ – ನಿಯಂತ್ರಣಕ್ಕೆ ಸಿದ್ಧತೆ ಕುರಿತಂತೆ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಕಾಲದಲ್ಲಿ ಮಾಹಿತಿ ನೀಡುವ ದೂರಸಂವೇದಿ ತಂತ್ರಜ್ಞಾನದ ಪ್ರಾತ್ಯಕ್ಷಿಕೆ ವೀಕ್ಷಿಸಿದ ಸಚಿವರು, ಈ ಮಾಹಿತಿಯ ಬಗ್ಗೆ ಅರಣ್ಯ ಇಲಾಖೆಯ ಅಗ್ನಿ ನಿಗ್ರಹ ಕೋಶದಿಂದ ಸತತ ನಿಗಾ ಇಡುವಂತೆ ಸೂಚಿಸಿದರು. ಬೆಂಕಿ ಕಾಣಿಸಿಕೊಂಡ ಮಾಹಿತಿ ಸಕಾಲದಲ್ಲಿ ಲಭ್ಯವಾದರೆ, ಕಾಡಿಗೆ ಹೆಚ್ಚಿನ ಹಾನಿ ಆಗದಂತೆ ತಡೆಯಬಹುದು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಂಡು ಕಾಡ್ಗಿಚ್ಚು ತಡೆಯಲು ಮತ್ತು ನಿಯಂತ್ರಿಸಲು ಸೂಚಿಸಿದರು. ಹಾಟ್ ಸ್ಪಾಟ್: ರಾಜ್ಯದ ಕೆಲವು ಅರಣ್ಯಗಳ ನಿರ್ದಿಷ್ಟ ಪ್ರದೇಶಗಳಲ್ಲಿ ಪದೇಪದೆ ಕಾಡ್ಗಿಚ್ಚು ಸಂಭವಿಸುತ್ತಿರುವುದನ್ನು 15 ವರ್ಷಗಳ ದತ್ತಾಂಶದಿಂದ ಕ್ರೋಡೀಕರಿಸಿದ್ದು, ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ ಎಂಬ…

Read More

ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿ ಶಾಂತಿ ಕದಡಲು ಜಿಲ್ಲಾಡಳಿತವೇ ನೇರ ಕಾರಣ ಎಂದು ಗಂಭೀರ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೂಡಲೇ ಮಂಡ್ಯ ಜಿಲ್ಲಾಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು. ಕೆರಗೋಡು ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು; ಶಾಂತಿಯಿಂದ ಇದ್ದ ಕೆರಗೋಡು ಗ್ರಾಮದಲ್ಲಿ ಅಶಾಂತಿ ಉಂಟಾಗಿದೆ. ಇದಕ್ಕೆ ಸರಕಾರ ಮತ್ತು ಜಿಲ್ಲಾಧಿಕಾರಿಯೇ ಹೊಣೆ ಎಂದು ದೂರಿದರು. ನಾನು ಸರಕಾರಕ್ಕೆ ನೇರವಾಗಿ ಪ್ರಶ್ನೆ ಕೇಳುತ್ತೇನೆ. ಎಷ್ಟು ದಿನ ಈ ಉದ್ಧಟತನ? ಎಷ್ಟು ದಿನ ನಿಮ್ಮ ಆಟ? ಬಹಳ ದಿನ ನಡೆಯಲ್ಲ, ಎಚ್ಚರಿಕೆಯಿಂದ ಇರಿ ಎಂದ ಅವರು; ಪೊಲೀಸ್ ಅಧಿಕಾರಿಗಳು ಜವಾಬ್ದಾರಿ ವಹಿಸಿ ಕೆಲಸ ಮಾಡಬೇಕು. ಈ ಬಗ್ಗೆ ಶಾಂತಿ ಕಾಪಾಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದೆ. ಗ್ರಾಮಸ್ಥರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಿ ಅಂತ ಹೇಳಿದ್ದೆ. ಆದರೆ, ಜಿಲ್ಲಾಧಿಕಾರಿ ಮಾಡಿದ್ದೇನು? ಕೆರಗೋಡು ಕೆಂಡವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.…

Read More