Author: kannadanewsnow09

ಮಂಡ್ಯ: ಜಿಲ್ಲೆಯ ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಫೆಬ್ರವರಿ.9ರಂದು ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಈ ಮೂಲಕ ಇಂದು ನಡೆಸಲಾಗುತ್ತಿದ್ದಂತ ಪ್ರತಿಭಟನೆಯನ್ನು ಕೈ ಬಿಡಲಾಗಿದೆ. ಮಂಡ್ಯ ತಾಲೂಕಿ ಕೆರಗೋಡಿನಲ್ಲಿ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಪ್ರತಿಭಟನೆಯನ್ನು ಬಿಜೆಪಿಯಿಂದ ನಡೆಸಲಾಯಿತು. ಕೆರಗೋಡಿನಿಂದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮೂಲಕ ಸಾಗಿ, ಜಿಲ್ಲಾಧಿಕಾರಿ ಕಚೇರಿಯ ಮುಂದೆ ಜಮಾಯಿಸಿದರು. ಈ ಪ್ರತಿಭಟನೆಗೆ ಜೆಡಿಎಸ್ ನ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಕೇಸರಿ ಶಾಲು ಧರಿಸಿ ಭಾಗಿಯಾದರು. ಈ ಪ್ರತಿಭಟನೆಯಲ್ಲಿ ಭಾಗಿಯಾದಂತ ಬಿಜೆಪಿ ನಾಯಕ ಸಿಟಿ ರವಿ ಮನೆ ಮನೆಯ ಮೇಲೂ ಹನುಮಧ್ವಜ ಹಾರಿಸೋದಕ್ಕೆ ಕರೆ ನೀಡಿದ್ರೇ, ಮಾಜಿ ಸಿಎಂ ಹೆಚ್ ಡಿಕೆ ಹೆಸರಿನಲ್ಲಿ ರಾಮನಿದ್ರೆ ಸಾಲದು, ನಡೆಯಲ್ಲೂ ಶ್ರೀರಾಮನಂತೆ ಇರಬೇಕು ಎಂಬುದಾಗಿ ಕಿಡಿಕಾರಿದರು. ಅಂತಿಮವಾಗಿ ಫೆಬ್ರವರಿ.9ರಂದು ಮಂಡ್ಯ ಬಂದ್ ಮಾಡಬೇಕು ಎಂಬುದಾಗಿ ಪ್ರತಿಭಟನಾ ನಿರತರು ಘೋಷಣೆ ಕೂಗುತ್ತಾ, ಫೆಬ್ರವರಿ.9ರಂದು ಮಂಡ್ಯ ಬಂದ್…

Read More

ಬೆಂಗಳೂರು: ಮೊನ್ನೆ ತಾನೇ ರಾಜ್ಯದಲ್ಲಿ ಮುಸ್ಲಿಂ ಪರ ಸರ್ಕಾರ ಇದೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಮುಸ್ಲಿಮರ ದಯೆಯಿಂದ ಎಂದು ಹಿಂದೂ ಮತದಾರರಿಗೆ ಅಪಮಾನ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಪೈಪೋಟಿ ಬಿದ್ದಂತೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊಹಲ್ಲಾ ಅಭಿವೃದ್ಧಿಗೆ 1,000 ಕೋಟಿ ರೂಪಾಯಿ ನೀಡಲು ಮುಂದಾಗಿದ್ದಾರೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು,  ಮೋಹಲ್ಲಾಗಳಿಗೆ 1000 ಕೋಟಿ ರೂಪಾಯಿ ನೀಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣ ಇದೆ. ಆದರೆ ಬರ ಬಂದು ಎಂಟು ತಿಂಗಳಾದರೂ ರೈತರಿಗೆ 2,000 ರೂಪಾಯಿ ಪರಿಹಾರ ನೀಡಲು ಹಣವಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಿಎಂ ಸಿದ್ಧರಾಮಯ್ಯನವರೇ, ಮುಸ್ಲಿಮರ ತುಷ್ಟೀಕರಣ ಮಾಡಲು ನಿಮ್ಮ ಕಾಂಗ್ರೆಸ್ ಪಕ್ಷ ಯಾವ ಮಟ್ಟಕ್ಕಾದರೂ ಹೋಗುತ್ತದೆ ಎಂದು ಪದೇ ಪದೇ ನಿರೂಪಿಸುತ್ತಲೇ ಇದ್ದೀರಿ. ಆದರೆ ಜಾತಿ, ಮತ, ಧರ್ಮದ ಭೇದವಿಲ್ಲದೆ ಎಲ್ಲರಿಗೂ ಅನ್ನ ನೀಡುವ ರೈತರನ್ನೂ ನಿಮ್ಮ ಓಲೈಕೆ ರಾಜಕಾರಣದಲ್ಲಿ ಬಲಿಪಶು ಮಾಡಬೇಡಿ ಎಂಬುದಾಗಿ ಗುಡುಗಿದ್ದಾರೆ.…

Read More

ಮಂಡ್ಯ: ಸಿದ್ಧರಾಮಯ್ಯ ನನ್ನ ಹೆಸರಿನಲ್ಲೇ ರಾಮನಿದ್ದಾನೆ ಅಂತ ಹೇಳ್ತಾರೆ. ಹೆಸರಿನಲ್ಲಿ ರಾಮನಿದ್ರೆ ಸಾಲದು, ನಡೆತೆಯಲ್ಲಿ ಶ್ರೀರಾಮನಂತೆ ಇರಬೇಕು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ. ಮಂಡ್ಯದ ಡಿಸಿ ಕಚೇರಿಯ ಮುಂದೆ ಜೈ ಶ್ರೀರಾಮ್ ಎನ್ನುತ್ತಲೇ ಮಾತನಾಡಿದಂತ ಅವರು, ನಮ್ಮ ನಾಡಿನ ಸಂಸ್ಕೃತಿ, ಹನುಮನನ್ನು ಪ್ರತಿದಿನ ಪ್ರಾರ್ಥನೆ ಮಾಡುತ್ತೇವೆ ಎಂದರು. ರಾಜ್ಯ ಸರ್ಕಾರ ಉದ್ದತಟನ ಪ್ರದರ್ಶಿಸುತ್ತಿದೆ. ಯಾವನೋ ಹೇಳುತ್ತದೆ ಎಂದು ಸರ್ಕಾರ ಈ ರೀತಿ ಮಾಡುತ್ತಿದೆ. ಹನುಮಧ್ವಜ ತೆಗೆದಿದ್ದು ಸರಿಯಲ್ಲ ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು. ಸಿದ್ದರಾಮಯ್ಯನವರು ಈ ದೇಶದ ಕ್ಷಮೆ ಕೇಳಬೇಕು: MLC ಛಲವಾದಿ ನಾರಾಯಣಸ್ವಾಮಿ ಒತ್ತಾಯ ಬೆಂಗಳೂರು: ಗೌರವಾನ್ವಿತ ರಾಷ್ಟ್ರಪತಿಯವರನ್ನು ಅವಮಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ದೇಶದ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ…

Read More

ಬೆಂಗಳೂರು: ಗೌರವಾನ್ವಿತ ರಾಷ್ಟ್ರಪತಿಯವರನ್ನು ಅವಮಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ದೇಶದ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ನಿನ್ನೆ ಅಹಿಂದ ಹೆಸರಿನಲ್ಲಿ ಕರೆದ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೌರವಾನ್ವಿತ ರಾಷ್ಟ್ರಪತಿಗಳಾದ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದು ಖಂಡನೀಯ ಎಂದು ಹೇಳಿದರು. ಒಬ್ಬ ದಲಿತ ಮಹಿಳೆ ಎಂಬ ಕಾರಣಕ್ಕೆ ಮಾನ್ಯ ಮುಖ್ಯಮಂತ್ರಿಗಳು ಇಷ್ಟೊಂದು ಕೀಳಾಗಿ ಅವರನ್ನು ಸಂಬೋಧಿಸಿದ್ದು, ಇದು ಅವರ ವ್ಯಕ್ತಿತ್ವಕ್ಕೆ ಸರಿಯಾದ ಪದಗಳಲ್ಲ. ಅದಾದ ಬಳಿಕವೂ ಅವರು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ. ನಾವು ಹಿರಿಯರನ್ನು ಹಳ್ಳಿ ಭಾಷೆಯಲ್ಲಿ ಹಾಗೇ ಕರೆಯುವುದಾಗಿ ಹೇಳಿದ್ದಾರೆ. ಈ ರೀತಿ ಹೇಳುವ ಮೂಲಕ ಹಳ್ಳಿಯ ಜನರನ್ನೂ ಅವರು ಅಪಮಾನ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಯಾವ ಹಳ್ಳಿ ಜನರು, ಬಡವರು ಯಾರೇ ಇದ್ದರೂ ಕೂಡ ಯಾವತ್ತೂ…

Read More

ಮಂಡ್ಯ: ಹನುಮಧ್ವಜವನ್ನು ಹಾರಿದೋನ್ನ ಕಾಂಗ್ರೆಸ್ ಸರ್ಕಾರ ತಡೆದಿರೋದು ಈಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಮಂಡ್ಯದ ಕೆರಗೋಡಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಿದ ಬಳಿಕ, ಡಿಸಿ ಕಚೇರಿಯ ಮುಂದೆ ಜಮಾವಣೆಗೊಂಡಿರುವಂತ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದೆ. ಇದೇ ವೇಳೆಯಲ್ಲಿ ರಾಜ್ಯದ ಪ್ರತಿಯೊಂದು ಮನೆಯ ಮೇಲೂ ಹನುಮಧ್ವಜ ಹಾರಿಸುತ್ತೇವೆ, ತಾಕತ್ತಿದ್ರೆ ತಡೆಯಿರಿ ಅಂತ ಸರ್ಕಾರಕ್ಕೆ ಸಿ.ಟಿ ರವಿ ಸವಾಲ್ ಹಾಕಿದ್ದಾರೆ. ಮಂಡ್ಯದ ಡಿಸಿ ಕಚೇರಿಯ ಮುಂದೆ ನೆರೆದಿದ್ದಂತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದಂತ ಅವರು, ಪ್ರತಿಯೊಂದು ಮನೆಯ ಮೇಲೂ ಹನುಮ ಧ್ವಜ ಹಾರಿಸುತ್ತೇವೆ. ಸರ್ಕಾರಕ್ಕೆ ತಾಕತ್ತಿದ್ರೇ ತಡೆಯೋ ಧೈರ್ಯ ಮಾಡಲಿ ಎಂಬುದಾಗಿ ಗುಡುಗಿದರು. ನಮ್ಮ ಹೋರಾಟ ಹಿಂದೂ ವಿರೋಧಿಗಳ ಮೇಲೆ ಆಗಿದೆ. ಧ್ವಜ ತೆಗೆದ ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಭಸ್ಮವಾಗಲಿದೆ. ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ್ದರಿಂದ ಲಂಗೆ ಭಸ್ಮವಾಯಿತು. ಲಂಕೆಗೆ ಆದ ಪರಿಸ್ಥಿತಿಯೇ ಈ ಸರ್ಕಾರಕ್ಕೂ ಬರಲಿದೆ ಎಂಬುದಾಗಿ ವಾಗ್ಧಾಳಿ ನಡೆಸಿದರು. https://kannadanewsnow.com/kannada/lalu-yadav-reaches-ed-office-in-patna-to-appear-in-land-for-jobs-scam-case/ https://kannadanewsnow.com/kannada/mandya-cm-siddaramaiah-mla-ganiga-ravis-banners-torn-by-mob-pelting-stones/

Read More

ತುಮಕೂರು: ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, ಒಂದೇ ದಿನ 697.27 ಕೋಟಿ ರೂ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಸರ್ಕಾರದಲ್ಲಿ ಹಣ ಇಲ್ಲ ಎಂದು ಸುಳ್ಳೋತ್ಪಾದಿಕರಿಗೆ ಈ ಕಾರ್ಯಕ್ರಮವೇ ಒಂದು ಉತ್ತರ. ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಈ ಯೋಜನೆಗಳ ಫಲಾನುಭವಿಗಳು ಸುಳ್ಳೋತ್ಪಾದಕರ ಮುಖಕ್ಕೆ ಸರಿಯಾಗಿ ಉತ್ತರ ನೀಡಬೇಕು ಎಂದರು. ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ ಎಂದು ದಾಖಲೆಗಳ ಸಮೇತ ವಿವರಿಸಿದರು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ.…

Read More

ಮಂಡ್ಯ: ಜಿಲ್ಲೆಯ ಕೆರಗೋಡಿನಲ್ಲಿ ನಡೆದಂತ ಹನುಮಧ್ವಜ ದಂಗಲ್ ಕುರಿತಂತೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕೆರಗೋಡಿನಿಂದ ಪಾದಯಾತ್ರೆ ಮೂಲಕ ಆಗಮಿಸಿದಂತ ಬಿಜೆಪಿ ನಾಯಕರು, ಡಿಸಿ ಕಚೇರಿಗೆ ಮುತ್ತಿಗೆ ಹಾಕೋದಕ್ಕೆ ಜಮಾಯಿಸಿದ್ದಾರೆ. ಇಂತಹ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವಂತ ಧರ್ಮ ದಂಗಲ್ ಬಿಜೆಪಿ ಪ್ರತಿಭಟನೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆಗೆ ಮೈತ್ರಿ ಮಾಡಿಕೊಂಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಧುಮುಕಿದ್ದಾರೆ. ಕೇಸರಿ ಶಾಲು ಧರಿಸಿ, ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ನಡೆಸುತ್ತಿರುವಂತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿಯ ಸುರೇಶ್ ಗೌಡ, ಅನ್ನದಾನಿ, ಸಿಟಿ ರವಿ, ನಾರಾಯಣಗೌಡ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ. https://kannadanewsnow.com/kannada/lalu-yadav-reaches-ed-office-in-patna-to-appear-in-land-for-jobs-scam-case/ https://kannadanewsnow.com/kannada/mandya-cm-siddaramaiah-mla-ganiga-ravis-banners-torn-by-mob-pelting-stones/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಾಗಲಕೋಟೆಯಲ್ಲಿ ಅಪಘಾತದಲ್ಲಿ ಮೃತಪಟ್ಟಂತ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡೋದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, ಒಂದೇ ದಿನ 697.27 ಕೋಟಿ ರೂ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ದಾರಿಯುದ್ದಕ್ಕೂ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೂಮಳೆಗರೆದು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಶಿವಕುಮಾರ್, ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಕೃಷ್ಣ ಭೈರೇಗೌಡ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ…

Read More

ಮಂಡ್ಯ: ಜಿಲ್ಲೆಯಲ್ಲಿ ಹನುಮಧ್ವಜ ವಿವಾದ ತಾರಕ್ಕೇರಿದೆ. ಬಿಜೆಪಿ ನಡೆಸುತ್ತಿರುವಂತ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ನಗರದಲ್ಲಿ ಸಿಕ್ಕ ಸಿಕ್ಕ ಕಾಂಗ್ರೆಸ್ ಬ್ಯಾನರ್ ಗಳನ್ನು ಹರಿದು ಹಾಕಲಾಗುತ್ತಿದೆ. ಅಲ್ಲದೇ ಸಿಎಂ ಸಿದ್ಧರಾಮಯ್ಯ, ಗಣಿಗ ರವಿ ಬ್ಯಾನರ್ ಮೇಲೆ ಕಲ್ಲು ತೂರಾಟ ನಡೆಸಿ, ಹರಿದು ಹಾಕಿ ಆಕ್ರೋಶವನ್ನು ಹೊರ ಹಾಕಲಾಗಿದೆ. ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದೆ. ಡಿಸಿ ಕಚೇರಿಗೆ ಸಾಗೋ ದಾರಿಯುದ್ಧಕ್ಕೂ ಕಾಂಗ್ರೆಸ್ ಪಕ್ಷದ ಬ್ಯಾನರ್ ಗಳನ್ನು ಹರಿದು ಹಾಕಲಾಗುತ್ತಿದೆ. ಕಾಂಗ್ರೆಸ್ ಶಾಸಕ ಗಣಿಕ ರವಿ ಬ್ಯಾನರ್ ಹರಿದು ಹಾಕೋ ವೇಳೆಯಲ್ಲಿ ಮಾತಿನ ಚಕಮಕಿ ನಡೆದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸೋದಕ್ಕೆ ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಮಂಡ್ಯ ತಾಲೂಕಿ ಕೆರಗೋಡಿನಲ್ಲಿ ಹನುಮಧ್ವಜ ವಿವಾದದ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನೆಗೆ ಬಿಜೆಪಿ ನಾಯಕರು ಕಣಕ್ಕಿಳಿದ ಕಾರಣ, ಮತ್ತಷ್ಟು ತಾರಕ್ಕೇರಿದೆ. ಮಂಡ್ಯ ಡಿಸಿ ಕಚೇರಿಗೆ ಮುತ್ತಿಗೆ ಹಾಕೋ ಮುನ್ನವೇ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದರ ನಡುವೆ ಪೊಲೀಸರು ನಡೆಸಿದಂತ ಲಾಠಿ ಚಾರ್ಜ್ ನಲ್ಲಿ…

Read More

ಬೆಂಗಳೂರು: ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮ ಪಂಚಾಯತಿಯಲ್ಲಿ ವಿವಾದ ಸೃಷ್ಠಿಸಿ ಕೋಮು ಸೌಹಾರ್ದ ಕೆಡಿಸಲು ಬಿಜೆಪಿಯ ಹುನ್ನಾರದ ಕುರಿತಂತೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು, ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ ಎಂದಿದ್ದಾರೆ. ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ವಿರೋಧ ಪಕ್ಷದ ನಾಯಕನೆಂದರೆ ಘನತೆಯುಕ್ತ ಸ್ಥಾನ, ಆ ಸ್ಥಾನದ ಗೌರವವನ್ನು ಮಣ್ಣುಪಾಲು ಮಾಡುತ್ತಿರುವ ಆರ್ ಅಶೋಕ್ ಹಾಗೂ ಬಿವೈ ವಿಜಯೇಂದ್ರ ಅವರೇ, ನಿಮ್ಮ ಗಮನಕ್ಕೆ ಕೆಲವು ವಿಚಾರಗಳು ಎಂದು ಈ ಕೆಳಗಿನಂತೆ ಮಾಹಿತಿ ಹಂಚಿಕೊಂಡಿದ್ದಾರೆ. ◆29/12/2023…

Read More