Author: kannadanewsnow09

ಮಂಡ್ಯ: ಜಿಲ್ಲೆಯಲ್ಲಿ ಧ್ವಜ ವಿವಾದ ತಾರಕ್ಕಕೇರಿದೆ. ಹನುಧ್ವಜ ದಂಗಲ್ ಬಿಜೆಪಿಯ ಪ್ರತಿಭಟನೆ ತಾರಕ್ಕೇರಿದ್ದು, ಪೊಲೀಸರು ಪ್ರತಿಭಟನೆ ನಿಯಂತ್ರಿಸಲು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಮಹವೀರ್ ಸರ್ಕಲ್ ನಲ್ಲಿ ಹೈಡ್ರಾಮಾವೇ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರಿಂದ ಶಾಸಕ ಗಣಿಗ ರವಿ ಪ್ಲೆಕ್ ಹರಿದು ಹಾಕೋದಕ್ಕೆ ಯತ್ನಿಸಿದಂತ ವೇಳೆಯಲ್ಲಿ ವಾಗ್ವಾದ ನಡೆದು, ಪ್ರತಿಭಟನೆ ತೀವ್ರಗೊಂಡಿದೆ. ಡಿಸಿ ಕಚೇರಿಯತ್ತ ತೆರಳುತ್ತಿರೋ ಹನುಮಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಚದುರಿಸೋದಕ್ಕೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರು ನಡೆಸಿದಂತ ಲಾಠಿ ಚಾರ್ಜ್ ವೇಳೆಯಲ್ಲಿ ಪ್ರತಿಭಟನಾ ನಿರತ ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಮಂಡ್ಯದ ಡಿಸಿ ಕಚೇರಿಯ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. https://kannadanewsnow.com/kannada/lalu-yadav-reaches-ed-office-in-patna-to-appear-in-land-for-jobs-scam-case/ https://kannadanewsnow.com/kannada/by-election-to-bengaluru-teachers-constituency-nda-candidate-a-p-ranganath-files-nomination/

Read More

ಬೆಂಗಳೂರು : “ಜಿಎಎಫ್ಎಕ್ಸ್ ತಂತ್ರಜ್ಞಾನಗಳಿಂದಾಗಿ ಸಿನಿಮಾ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಈ ತಂತ್ರಜ್ಞಾನವನ್ನು ಶಿಕ್ಷಣ, ಆರೋಗ್ಯ ಹಾಗೂ ಇತರೆ ಸಾಮಾಜಿಕ ಕ್ಷೇತ್ರಗಳಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. 5ನೇ ಆವೃತ್ತಿಯ ಜಿಎಎಫ್ಎಕ್ಸ್ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; “ನಮ್ಮ ಬೆಂಗಳೂರಿನಲ್ಲಿ ಪ್ರತಿ ಮೂರ್ನಾಲ್ಕು ಕುಟುಂಬದಲ್ಲಿ ಒಬ್ಬ ಟೆಕ್ಕಿ ಇದ್ದೇ ಇರುತ್ತಾನೆ. ಬೆಂಗಳೂರಿನ್ಲ್ಲಿ ಸುಮಾರು 400ಕ್ಕೂ ಹೆಚ್ಚು ಸಂಸ್ಥೆಗಳಿದ್ದು, ತಂತ್ರಜ್ಞಾನವಿಲ್ಲದೆ ಶಿಕ್ಷಣ ಅಸಾಧ್ಯ ಎಂಬಂತಹ ಪರಿಸ್ಥಿತಿಗೆ ಬಂದಿದ್ದೇವೆ. ತಂತ್ರಜ್ಞಾನವಿಲ್ಲದ ಕ್ಷೇತ್ರವೇ ಇಲ್ಲ. ನೀವು ತಂತ್ರಜ್ಞಾನಗಳಿಂದ ಎಲ್ಲೇ ತಪ್ಪಿಸಿಕೊಂಡರು ಚಿತ್ರಮಂದಿರಗಳಲ್ಲಿ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಚಲನಚಿತ್ರ ಕ್ಷೇತ್ರದಲ್ಲಿ ತಂತ್ರಜ್ಞಾನಗಳ ಅಭಿವೃದ್ಧಿ ಹಾಗೂ ಅಳವಡಿಕೆ ಬಹಳ ಅಚ್ಚರಿಯಾಗುತ್ತದೆ. ಬೆಂಗಳೂರು ಗೇಮಿಂಗ್, ಅನಿಮೇಷನ್, ಸಿನಿಮಾ ಇತರೆ ಮನರಂಜನಾ ಕ್ಷೇತ್ರಗಳ ತಂತ್ರಜ್ಞಾನ(ಜಿಎಎಫ್ಎಕ್ಸ್)ದಲ್ಲಿ ದಾಪುಗಾಲಿಡುತ್ತಿದೆ. ನಾವು ಜಾಗತಿಕವಾಗಿ ಸ್ಪರ್ಧೆ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ಜಿಎಎಫ್ಎಕ್ಸ್ ತಂತ್ರಜ್ಞಾನವನ್ನು ಬಳಸಿಕೊಂಡು ಇನ್ನಷ್ಟು ಅತ್ಯುತ್ತಮ ಚಿತ್ರಗಳನ್ನು ತಯಾರಿಸುವ ಭರವಸೆಯಿದೆ. ಈಗ ಕೃತಕ ಬುದ್ಧಿಮತ್ತೆ…

Read More

ಬೆಂಗಳೂರು: ರಾಜ್ಯದ 25 ಬಿಜೆಪಿ ಲೋಕಸಭಾ ಸದಸ್ಯರು ಬಾಯಿಗೆ ಬೀಗ ಹಾಕಿ ಕೂತಿದ್ದಾರೆ. ಇವರೆಲ್ಲ ಯಾವ ಮುಖ ಹೊತ್ತು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ ಕೇಳಲು ಜನರ ಬಳಿ ಹೋಗುತ್ತಾರೆ? ಇಂತಹವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯೇ ತಕ್ಕ ಪಾಠ ಕಲಿಸುತ್ತಾರೆ. ರೈತರಿಗೆ ದ್ರೋಹ ಬಗೆದರೆ ಯಾವ ಶ್ರೀರಾಮಚಂದ್ರನೂ ಕಾಪಾಡಲಾರ ತಿಳಿದಿರಲಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಾಗದ ರಾಜ್ಯದ ಪುಕ್ಕಲು ಬಿಜೆಪಿ ನಾಯಕರು ನಮ್ಮ ವಿರುದ್ಧ ‘‘ಪರಿಹಾರ ಕೊಡಿ ಕುರ್ಚಿ ಬಿಡಿ’’ ಎಂಬ ನಾಟಕ ಪ್ರದರ್ಶನಕ್ಕೆ ಹೊರಟಿರುವುದು ಹಾಸ್ಯಾಸ್ಪದ ಮಾತ್ರವಲ್ಲ ನಾಡಿನ ರೈತರಿಗೆ ಬಗೆಯುತ್ತಿರುವ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದಾಗ ಬೀಜ-ಗೊಬ್ಬರ ಕೇಳಿದ ರೈತರನ್ನು…

Read More

ಬೆಂಗಳೂರು: ವಿಧಾನ ಪರಿಷತ್‌ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು ಉಪಸ್ಥಿತರಿದ್ದರು. ಅಲ್ಲದೆ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು. https://kannadanewsnow.com/kannada/breaking-nationwide-caa-to-be-implemented-in-7-days-union-ministers-big-guarantee/ https://kannadanewsnow.com/kannada/lalu-yadav-reaches-ed-office-in-patna-to-appear-in-land-for-jobs-scam-case/

Read More

ಬೆಂಗಳೂರು : “ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲದ ಬಿಜೆಪಿಯು ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ. ಮಂಡ್ಯದಲ್ಲಿ ಹನುಮಧ್ವಜ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಮಾಧ್ಯಮಗಳು ಸೋಮವಾರ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಉತ್ತರಿಸಿದರು. “ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ದೇಶದ ಕಾನೂನಿಗೆ ನಾವು ಗೌರವ ನೀಡಬೇಕು. ಬಿಜೆಪಿ ಅಭ್ಯರ್ಥಿಗಳು ಅನೇಕ ಕಡೆಗಳಲ್ಲಿ ಠೇವಣಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಸೇರಿಕೊಂಡಿದ್ದಾರೆ. ಮಂಡ್ಯದಲ್ಲಿ ರಾಜಕೀಯ ನೆಲೆ ಕಂದುಕೊಳ್ಳಲು ಇಂತಹ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದರಿಂದ ಏನೂ ಪ್ರಯೋಜನವಿಲ್ಲ. ಮಂಡ್ಯದ ಜನರು ಬಹಳ ಸಹಿಷ್ಣುತೆಯುಳ್ಳವರು, ಜಾತ್ಯಾತೀತರಾಗಿದ್ದಾರೆ. ಅವರು ಇಂತಹ ವಿಚಾರಗಳಿಗೆ ಮಾರುಹೋಗುವುದಿಲ್ಲ. ನಮಗೆ ನಮ್ಮದೇ ಆದ ಸಂವಿಧಾನವಿದೆ. ಈ ಭಾಗವನ್ನು ನಮ್ಮ ಮಹಾರಾಜರು ಹೇಗೆ ಆಳ್ವಿಕೆ ನಡೆಸಿದ್ದಾರೆ ಎಂಬ ಇತಿಹಾಸವಿದೆ. ಈ ಎಲ್ಲಾ ಗೊಂದಲಗಳು ಬಿಜೆಪಿಯ ಸೃಷ್ಟಿ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ನಮ್ಮ ಆದ್ಯತೆ ಎಂದರು. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಎಂಬ…

Read More

ಬೆಂಗಳೂರು : ಪಕ್ಷಕ್ಕೆ ದುಡಿದ ಎಲ್ಲಾ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ ಎಂದು ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ನಿಗಮ ಮಂಡಳಿ ಅಧಿಕಾರವಧಿಯನ್ನು ಎರಡು ವರ್ಷ ಮೀಸಲಿಗೆ ಒಂದಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅವರು “ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವಧಿ ಎಂದು ಹೇಳಿದ್ದೇವೆ ಎಂದರು. ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ಇಲ್ಲ, ಡಿ.ಕೆ.ಶಿವಕುಮಾರ್ ಅವರದ್ದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು ಎಂದರು. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಕೇಳಿದಾಗ, “ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು…

Read More

ಬೆಂಗಳೂರು: ಬದಲಾದ ಜೀವನ ಶೈಲಿ ಹಾಗೂ ಪಾಶ್ಚಾತ್ಯ ಆಹಾರ ಪದ್ದತಿ ಅಳವಡಿಕೆಯಿಂದಾಗಿ ವಿವಿಧ ರೀತಿಯ ಕ್ಯಾನ್ಸರ್‌ ಕಾಯಿಲೆಗೆ ತುತ್ತಾಗುವವರ ಸಂಖ್ಯೆ ಹೆಚ್ಚುತ್ತಿದೆ, ಹೀಗಾಗಿ ಆರಂಭದಲ್ಲಿಯೇ ಕ್ಯಾನ್ಸರ್‌ನನ್ನು ಪತ್ತೆ ಹಚ್ಚುವ ಕೆಲಸ ಹೆಚ್ಚಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಫೋರ್ಟಿಸ್‌ ಆಸ್ಪತ್ರೆ ನಗರದಲ್ಲಿ ಆಯೋಜಿಸಿದ್ದ “ಫೊರ್ಟಿಸ್‌ ಕ್ಯಾನ್ಸರ್‌ ಸಮ್ಮಿಟ್‌”ನನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್‌ ಮಾರಕವಾಗಿ ಎಲ್ಲರನ್ನು ಹರಡುತ್ತಿದೆ. ಹಿಂದೆಲ್ಲಾ ಈ ಕಾಯಿಲೆ ವಯಸ್ಸಾದ ಬಳಿಕ ಅಥವಾ ಕೆಲವರಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿತ್ತು, ಆದರಿಂದ ಸಾಕಷ್ಟು ಜನರು ಕ್ಯಾನ್ಸರ್‌ಗೆ ತುತ್ತಾಗುತ್ತಿರುವುದು ಆತಂಕ ಸೃಷ್ಟಿಸುತ್ತಿದೆ. ಹೀಗಾಗಿ ಕ್ಯಾನ್ಸರ್‌ನ ಬಗ್ಗೆ ಮೊದಲು ಜಾಗೃತಿ ಮೂಡಿಸುವ ಕೆಲಸವಾಗಬೇಕು. ಕ್ಯಾನ್ಸರ್‌ಗೆ ಔಷಧಿ ಕಂಡುಹಿಡಿಯುವ ಕೆಲಸ ನಿರಂತರವಾಗಿ ಸಾಕುತ್ತಿರುವುದು ಎಲ್ಲರಿಗೂ ತಿಳಿದಿದೆ, ಆದಾಗ್ಯ ಈ ಕಾಯಿಲೆ ಬಗ್ಗೆ ಹೆಚ್ಚು ಜಾಗೃತಿ ವಹಿಸಿ, ನಮ್ಮ ಜೀವನ ಶೈಲಿಯನ್ನು ಉತ್ತಮಗೊಳಿಸಿಕೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದರು. ಇನ್ನು, ಕ್ಯಾನ್ಸರ್‌ ಪತ್ತೆ ಹಚ್ಚುವ ಕೆಲಸ ಪ್ರಾರಂಭದಲ್ಲಿಯೇ ಆಗುವುದರಿಂದ ಅದರ ಚಿಕಿತ್ಸೆ…

Read More

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ನಾನೇ ಅಭ್ಯರ್ಥಿ ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದರು. ಆದ್ರೇ ಬಿಜೆಪಿಯ ಕೆಲವರು ಈ ಕ್ಷೇತ್ರದಿಂದ ಕಣಕ್ಕೆ ಇಳಿಡೋದಾಗಿ ಹೇಳಲಾಗುತ್ತಿತ್ತು. ಆದ್ರೇ ಆ ಊಹಾಪೋಹಗಳಿಗೆ ತೆರೆ ಎಳೆದಂತೆ ನಾನು ಲೋಕಸಭಾ ಚುನಾವಣೆಗೆ ನಿಲ್ಲೋದಿಲ್ಲ. ಜೋಶಿಯೇ ಅಭ್ಯರ್ಥಿ ಎಂಬುದಾಗಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನನಗೆ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಹಲವರು ಸಲಹೆ ನೀಡಿದ್ದಾರೆ. ಆದ್ರೇ ನಾನು ಬಿಜೆಪಿ ಬಿಟ್ಟು ಹೋಗೋದಿಲಲ್. ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ ಅಂತ ಹೇಳಿದರು. ಬಿಜೆಪಿ ನಾಯಕರಾದ ಜೆ.ಪಿ. ನಡ್ಡಾ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಹಾಗೂ ಪ್ರಹ್ಲಾದ ಜೋಶಿ ಅವರು ಜಗದೀಶ ಶೆಟ್ಟರ ಅವರನ್ನು ಕರೆತಂದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಶೆಟ್ಟರ, ಬಿಜೆಪಿಗೆ ವಾಪಸಾಗಿರುವುದರಿಂದ ಪಕ್ಷಕ್ಕೆ ಇನ್ನಷ್ಟು ಬಲ ಬಂದಂತಾಗಿದೆ ಎಂದು ತಿಳಿಸಿದರು. https://kannadanewsnow.com/kannada/your-speech-was-a-poison-of-impatience-that-filled-your-heart-hdk-on-siddaramaiah/ https://kannadanewsnow.com/kannada/breaking-nationwide-caa-to-be-implemented-in-7-days-union-ministers-big-guarantee/

Read More

ಬೆಂಗಳೂರು: ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ! ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಎಂದಾಯಿತು! ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ @siddaramaiah ನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂಬುದಾಗಿ ಶಿಷ್ಟಾಚಾರ ಗೆಟ್ಟ ಮುಖ್ಯಮಂತ್ರಿ ಎಂಬುದಾಗಿ ಗುಡುಗಿದ್ದಾರೆ. “ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ..” ಎಂದು ನೀವು ಸಮರ್ಥಿಸಿಕೊಳ್ಳುತ್ತಿರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು…

Read More

ದಾವಣಗೆರೆ: ನನಗೆ ಕಾಂಗ್ರೆಸ್ ಬಿಟ್ಟಿದ್ದಕ್ಕೆ ಯಾವುದೇ ಪಾಪ ಪ್ರಜ್ಞೆ ಕಾಡ್ತಿಲ್ಲ. ಮತ್ತೆ ಬಿಜೆಪಿ ಸೇರಿದ್ದು ಖುಷಿಯಾಗಿದೆ ಎಂಬುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಮತ್ತೆ ಸೇರಿದ್ದು ಖುಷಿಯಾಗಿದೆ. ಪ್ರಧಾನಿ ಮೋದಿ ಹತ್ತು ವರ್ಷ ಉತ್ತಮ ಸರ್ಕಾರ ಕೊಟ್ಟಿದ್ದಾರೆ. ಮತ್ತೊಮ್ಮೆ ಅವರು ಪ್ರಧಾನ ಮಂತ್ರಿಯಾಗಬೇಕೆನ್ನುವ ಬಯಕೆ ಇದೆ. ಅದಕ್ಕೆ ಎಲ್ಲರೂ ಕೈ ಜೋಡಿಸಬೇಕು. ಅದರಲ್ಲಿ ನಮ್ಮದು ಅಳಿಲು ಸೇವೆ ಇರಲಿ ಎಂಬ ಉದ್ದೇಶದಿಂದ ಪಾರ್ಟಿ ಸೇರಿದ್ದೇನೆ ಎಂದರು. ಲೋಕಸಭೆಗೆ ನಿಲ್ಲಲು ಕ್ಷೇತ್ರ ಹಂಚಿಕೆ ವಿಚಾರವಾಗಿ ಮಾತನಾಡಿದಂತ ಅವರು, ಕೇಂದ್ರದ ವರಿಷ್ಠರು ಏನು ನಿರ್ದೇಶನ ಮಾಡುತ್ತಾರೆ ನೋಡಬೇಕು. ಶೆಟ್ಟರೆ ಈ ಜವಾಬ್ದಾರಿ ಮಾಡಿ ಎಂದ್ರೆ ಅದನ್ನೇ ಮಾಡುತ್ತೇನೆ ಎಂದರು. ಲಕ್ಷ್ಮಣ ಸವಧಿ ಏನು ಮಾಡುತ್ತಾರೆ ಗೊತ್ತಿಲ್ಲ, ಅವರು ನನ್ನ ಸಂಪರ್ಕದಲ್ಲಿಲ್ಲ. ಕಾಂಗ್ರೆಸ್ ಬಿಟ್ಟಿದ್ದು ನನಗೆ ಯಾವುದೇ ಪಾಪ ಪ್ರಜ್ಞೆ ಕಾಡುತ್ತಿಲ್ಲ. ಶಾಮನೂರು ಶಿವಶಂಕರಪ್ಪ ರಾಘವೇಂದ್ರ ಗೆಲ್ಲಲಿ ಅಂತ ಹೇಳಿದ್ದು ಒಳ್ಳೆಯದೇ ಆಯಿತು. ಕಾಂಗ್ರೆಸ್ ನವರು ಬಿಜೆಪಿ ಗೆಲ್ಲಲಿ ಎನ್ನುವುದು ಒಳ್ಳೆಯದೇ ಆಯಿತು. ಬಿಜೆಪಿಗೆ ಬರುವಂತೆ ನಾವೇನು ಅವರ ಸಂಪರ್ಕ ಮಾಡಿಲ್ಲ. ಮತ್ತೆ…

Read More