Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೇಲೆಕೇರಿ ಬಂದರನಿಂದ ಅಕ್ರಮವಾಗಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ್ದಂತ ಶಿಕ್ಷೆಯ ಪ್ರಮಾಣವನ್ನು ಹೈಕೋರ್ಟ್ ಅಮಾನತ್ತಿನಲ್ಲಿಡಲು ಆದೇಶಿಸಿದೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಣಿಕೆ ಪ್ರಕರಣ ಸಂಬಂಧ 7 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಇಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಿ, ಶಿಕ್ಷೆಯ ಪ್ರಮಾಣವನ್ನು ಅಮಾನತ್ತಿನಲ್ಲಿ ಇಡಲು ಆದೇಶಿಸಿದೆ. ಅಲ್ಲದೇ 6 ವಾರಗಳಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್ ಗೆ ಠೇವಣಿ ಇಡೋದಕ್ಕೆ ಸೂಚಿಸಿದೆ. ಹೈಕೋರ್ಟ್ ನ ಈ ಆದೇಶಸಿಂದ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಅಲ್ಲದೇ ಜೈಲುಪಾಲಾಗಿರುವಂತ ಆರೋಪಿಗಳು ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ. https://kannadanewsnow.com/kannada/important-information-for-the-public-follow-this-step-and-apply-online-to-get-e-khata/ https://kannadanewsnow.com/kannada/breaking-marakumbi-dalit-atrocities-case-high-court-grants-bail-to-97-sentenced-to-life-imprisonment/
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ. ಇಂದು ಈ ಸಂಬಂಧ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದ ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಡಲು ಆದೇಶಿಸಿದೆ. ಇನ್ನೂ ಹೈಕೋರ್ಟ್ ನಿಂದ ದಂಡದ ಮೊತ್ತವನ್ನು ಶೇ.25ರಷ್ಟು ಕೋರ್ಟ್ ಗೆ ಠೇವಣಿ ಇಡಲು ಸೂಚಿಸಿದೆ. ಈ ಮೂಲಕ ಶಾಸಕ ಸತೀಶ್ ಸೈಲ್ ಹಾಗೂ ಇತರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಂದಹಾಗೇ ಈ ಕೇಸಲ್ಲಿ ಸತೀಶ್ ಸೈಲ್ ಗೆ 7 ವರ್ಷ ಶಿಕ್ಷೆಯನ್ನು ಕೋಟಿ ಕೋಟಿ ದಂಡವನ್ನು ವಿಧಿಸಲಾಗಿತ್ತು. https://kannadanewsnow.com/kannada/muda-case-fir-registered-against-complainant-snehamayi-krishna/ https://kannadanewsnow.com/kannada/important-information-for-the-public-follow-this-step-and-apply-online-to-get-e-khata/
ಬೆಂಗಳೂರು: ಸಾರ್ವಜನಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ಬಿಬಿಎಂಪಿಯಿಂದ ಅಂತಿಮ ಇ-ಖಾತಾ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಿಸಿದೆ. ಅದು ಹೇಗೆ ಅಂತ ಮುಂದೆ ಓದಿ. ಬಿಬಿಎಂಪಿಯ ಅಂತಿಮ ಇ-ಖಾತಾ ಪಡೆಯಲು ಬಹು ವಿಧಾನಗಳು: 1. ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಆಸ್ತಿಗಳನ್ನು ತಕ್ಷಣವೇ ಮಾರಾಟ ಮಾಡಲು ಅಥವಾ ವರ್ಗಾಯಿಸಲು ಅಗತ್ಯವಿಲ್ಲದ ನಾಗರಿಕರು ಅಂತಿಮ ಇಖಾತಾ ಪಡೆಯಲು ಆತುರ ಅಗತ್ಯವಿಲ್ಲ. ಕರಡು ಇ-ಖಾತಾವನ್ನು ಡೌನ್ಲೋಡ್ ಮಾಡಿ ಮತ್ತು ನಂತರ ನಿಮ್ಮ ಅನುಕೂಲಕರ ಸಮಯದಲ್ಲಿ ಅಂತಿಮ ಇ-ಖಾತಾ ಪಡೆಯಲು ಹೆಚ್ಚುವರಿ ಮಾಹಿತಿಯನ್ನು ಆನ್ಲೈನ್ನಲ್ಲಿ ಸಲ್ಲಿಸಿ. ತುರ್ತಾಗಿ ಮಾರಾಟ/ವ್ಯವಹಾರ ಮಾಡಬೇಕಾದವರು, ತ್ವರಿತ ಅಂತಿಮ ಇಖಾತಾಗಾಗಿ ಪಾಲಿಕೆಯ ಸಹಾಯವಾಣಿ ಲಭ್ಯವಿರುತ್ತದೆ. 2. ಪಾಲಿಕೆಯು ಪ್ರತಿಯೊಬ್ಬ ನಾಗರಿಕರು ತಾವೇ ತಮ್ಮ ಇಖಾತಾವನ್ನು ಆನ್ಲೈನ್ನಲ್ಲಿ https://BBMPeAasthi.karnataka.gov.in ನಲ್ಲಿ ಪಡೆದುಕೊಳ್ಳಲು ಪ್ರೋತ್ಸಾಹಿಸುತ್ತದೆ ಮತ್ತು ವಿನಂತಿಸುತ್ತದೆ. 2. ತರಬೇತಿ ವೀಡಿಯೊ ಮೂಲಕ ಸ್ವತಃ ನೀವೇ ಇ-ಖಾತಾ ಪಡೆಯಿರಿ. (ನಾಗರಿಕನು ತಮ್ಮ ಸುತ್ತಲಿನಲ್ಲಿರುವ ಯಾರಿಂದಾದರೂ ಸಹಾಯ ಪಡೆದುಕೊಳ್ಳಬಹುದು) ಇಂಗ್ಲೀಷ್: https://youtu.be/GL8CWsdn3wo?si=Zu_EMs3SCw5-wQwT ಕನ್ನಡ: https://youtu.be/JR3BxET46po?si=jDoSKqy2V1IFUpf6…
ಬೆಂಗಳೂರು: ಮಾಜಿ ಸಿಎಂ ದಿವಂಗತ ಎಸ್.ನಿಜಲಿಂಗಪ್ಪ ಅವರ ಮನೆ ಮಾರಾಟಕ್ಕಿಟ್ಟಿರುವಂತ ಸುದ್ದಿ ವೈರಲ್ ಆಗಿತ್ತು. ಈಗ ಆ ಮನೆಯನ್ನು ರಾಜ್ಯ ಸರ್ಕಾರವೇ ಖರೀದಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರದಿಂದ ಇದಕ್ಕಾಗಿ 2020-21ನೇ ಸಾಲಿನ ಬಜೆಟ್ ನಲ್ಲಿ ಮಾಜಿ ಸಿಎಂ ಎಸ್ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಲು 5 ಕೋಟಿ ಅನುದಾನ ಘೋಷಿಸಿತ್ತು. ಅದರಂತೆ 5 ಕೋಟಿ ರೂಪಾಯಿಯನ್ನು ನೀಡಿ ಎಸ್.ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂದಹಾಗೇ ಚಿತ್ರದುರ್ಗದಲ್ಲಿರುವಂತ ಮಾಜಿ ಸಿಎಂ ದಿವಂಗತ ಎಸ್.ನಿಜಲಿಂಗಪ್ಪ ಅವರ ನಿವಾಸವನ್ನು ಮಾರಾಟಕ್ಕೆ ಇಟ್ಟಂತ ವಿಚಾರ ವೈರಲ್ ಆಗಿತ್ತು. ಅಲ್ಲದೇ ಸ್ಮಾರಕವಾಗಿ ಮಾಡಬೇಕಿದ್ದಂತ ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಸಾರ್ವಜನಿಕರು ಆಕ್ರೋಶದ ಮೂಲಕ ಹೊರ ಹಾಕಿದ್ರು. ಈ ಬೆನ್ನಲ್ಲೇ 5 ಕೋಟಿಯಲ್ಲಿ ಎಸ್.ನಿಜಲಿಂಗಪ್ಪ ಮನೆಯನ್ನು ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. https://kannadanewsnow.com/kannada/muda-case-fir-registered-against-complainant-snehamayi-krishna/ https://kannadanewsnow.com/kannada/breaking-marakumbi-dalit-atrocities-case-high-court-grants-bail-to-97-sentenced-to-life-imprisonment/
ಶಿವಮೊಗ್ಗ : ಶಿವಮೊಗ್ಗ ನಗರ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ನ.14 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣಕೇರಿ, ನಾಗಪ್ಪಕೇರಿ, ಅಶೋಕ ರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನುಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ. ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಆರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, https://bcwd.karnataka.gov.in ವೆಬ್‌ಸೈಟ್ ಮೂಲಕ ಡಿ. 05 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಹಾಗೂ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸಲು ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಅಲ್ಲದೇ ಈ ಸಂಬಂಧ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವಂತ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ. ಇಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸನ್ನು ಸಿಬಿಐ ತನಿಖೆಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ನಡೆಸಿತು. ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಲು ನಕಾರ ವ್ಯಕ್ತ ಪಡಸಿದಂತ ನ್ಯಾಯಪೀಠವು, ಯೂನಿಯನ್ ಬ್ಯಾಂಕ್ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ವಜಾಗೊಳಿಸಿತು. ಈ ಮೂಲಕ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/muda-case-fir-registered-against-complainant-snehamayi-krishna/ https://kannadanewsnow.com/kannada/breaking-marakumbi-dalit-atrocities-case-high-court-grants-bail-to-97-sentenced-to-life-imprisonment/
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವಂತ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ. ಇಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸನ್ನು ಸಿಬಿಐ ತನಿಖೆಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ನಡೆಸಿತು. ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಲು ನಕಾರ ವ್ಯಕ್ತ ಪಡಸಿದಂತ ನ್ಯಾಯಪೀಠವು, ಯೂನಿಯನ್ ಬ್ಯಾಂಕ್ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ವಜಾಗೊಳಿಸಿತು. ಈ ಮೂಲಕ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/breaking-marakumbi-dalit-atrocities-case-high-court-grants-bail-to-97-sentenced-to-life-imprisonment/ https://kannadanewsnow.com/kannada/muda-case-fir-registered-against-complainant-snehamayi-krishna/
ಮೈಸೂರು: ಮುಡಾ ಕೇಸ್ ದೂರುದಾರರಾದಂತ ಸ್ನೇಹಮಯಿ ಕೃಷ್ಣ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಗೆ ತೆರಳಿದ್ದಂತ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರತಿ ದಿನ ಒಂದಲ್ಲ ಒಂದು ಆರೋಪ ಮಾಡುತ್ತಿದ್ದಾರೆ. ಈ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬುದಾಗಿ ದೂರು ನೀಡಿದ್ದರು. ಲಕ್ಷ್ಮಣ್ ನೀಡಿದಂತ ದೂರು ಆಧರಿಸಿ ಸ್ನೇಹಮಯಿ ಕೃಷ್ಣ ವಿರುದ್ಧ ಬ್ಲಾಕ್ ಮೇಲ್ ಆರೋಪದಲ್ಲಿ ದೇವರಾಜ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಈ ಮೂಲಕ ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣಗೆ ಬಿಗ್ ಶಾಕ್ ನೀಡಿದ್ದಾರೆ. https://kannadanewsnow.com/kannada/ban-on-vehicles-should-not-be-lifted-at-night-in-bandipur-forest-area-vatal-nagaraj/ https://kannadanewsnow.com/kannada/breaking-marakumbi-dalit-atrocities-case-high-court-grants-bail-to-97-sentenced-to-life-imprisonment/
ಬೆಂಗಳೂರು: ಯಾವುದೇ ಕಾರಣಕ್ಕೂ ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನಗಳ ನಿಷೇಧ ತೆಗೆಯಬಾರದು. ಒಂದು ವೇಳೆ ತೆಗೆದಿದ್ದೇ ಆದ್ರೆ ರಾಜ್ಯಾಧ್ಯಂತ ಭಾರೀ ಪ್ರತಿಭಟನೆಯನ್ನು ನಡೆಸುವುದಾಗಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಹಿಂದುಳಿದ ಗಡಿ ಪ್ರದೇಶದ ಚಾಮರಾಜನಗರ ಜಿಲ್ಲೆಯ ಐತಿಹಾಸಿ ಬಂಡೀಪುರದ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನಗಳ ನಿಷೇಧವನ್ನು ಯಾವುದೇ ಕಾರಣಕ್ಕೂ ತೆಗೆಯಬಾರದು ಅಂತ ಆಗ್ರಹಿಸಿ, ಪ್ರತಿಭಟನೆ ನಡೆಸಲಿದ್ದಾರೆ. ಒಂದು ವೇಳೆ ನಿಷೇಧವನ್ನು ತೆಗೆದಿದ್ದೇ ಆದರೇ ರಾಜ್ಯಾಧ್ಯಂತ ಭಾರೀ ಹೋರಾಟ ನಡೆಸಲಾಗುವುದು. ಈ ಬಗ್ಗೆ ಇಂದು ಸಂಜೆ 4.30ಕ್ಕೆ ಬೆಂಗಳೂರಿನ 18ನೇ ಮಲ್ಲೇಶ್ವರಂ ಕ್ರಾಸ್ ನಲ್ಲಿರುವಂತ ಅರಣ್ಯ ಭವನದ ಮುಂದೆ ಪ್ರತಿಭಟನೆ ಕೂಡ ನಡೆಸಲಾಗುವುದು ಅಂತ ತಿಳಿಸಿದ್ದಾರೆ. https://kannadanewsnow.com/kannada/breaking-marakumbi-dalit-atrocities-case-high-court-grants-bail-to-97-sentenced-to-life-imprisonment/ https://kannadanewsnow.com/kannada/good-news-for-bengaluru-metro-commuters-digital-luggage-locker-facility-at-all-stations/
ಬೆಂಗಳೂರು: ಬಸ್, ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಲಗೇಜ್ ರೂಂಗಳ ವ್ಯವಸ್ಥೆ ಇದೆ. ಆದರೇ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇರಲಿಲ್ಲ. ಈಗ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲೂ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯವನ್ನು ಆರಂಭಿಸಲಾಗುತ್ತಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! SafeCloak ನ ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯವು ಈಗ ಮೆಜೆಸ್ಟಿಕ್ ಮತ್ತು ಇತರ ಆಯ್ದ ನಿಲ್ದಾಣಗಳಲ್ಲಿ ಲಭ್ಯ. ನಿಮ್ಮ ಬ್ಯಾಗ್‌ಗಳನ್ನು 6 ಗಂಟೆಗಳಿಗೆ (ಮಧ್ಯಮ ಗಾತ್ರ) ಕೇವಲ ₹70 ಮತ್ತು ದೊಡ್ಡ ಗಾತ್ರದ ಲಗೇಜ್ ಗೆ ₹100 ನಿಗದಪಡಿಸಲಾಗಿದೆ ಎಂದಿದೆ. ಸೋ ಇನ್ಮುಂದೆ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಂತ ಪ್ರಯಾಣಿಕರು ತಮ್ಮ ಲಗೇಜ್ ಗಳನ್ನು ಸೇಫ್ ಕ್ಲಾಕ್ ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್ ನಲ್ಲಿ ಇರಿಸಿ ತೆರಳಬಹುದು. ಆದರೇ ಇದಕ್ಕೆ ಹಣವನ್ನು ಪಾವತಿಸಬೇಕಾಗುತ್ತದೆ. https://kannadanewsnow.com/kannada/breaking-marakumbi-dalit-atrocities-case-high-court-grants-bail-to-97-sentenced-to-life-imprisonment/ https://kannadanewsnow.com/kannada/breaking-govt-to-take-major-steps-to-solve-e-account-problem-in-the-state/