Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿಬಿ ಜಿ ರಾಮ್ ಜಿ ಯೋಜನೆಗೆ ಹಣ ನೀಡಲು ಕೂಡ ಕಾಂಗ್ರೆಸ್ ಬಳಿ ಅನುದಾನವಿಲ್ಲ. ಆ ಮಟ್ಟಿಗೆ ಖಜಾನೆ ಖಾಲಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಇಷ್ಟು ದಿನ ಮನರೇಗಾ ಅಡಿಯಲ್ಲಿ ಹಣ ಕಳ್ಳತನ ಮಾಡುತ್ತಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ವಿಬಿ ಜಿ ರಾಮ್ ಜಿ ಯೋಜನೆ ಜಾರಿ ಮಾಡಿ ಪಾರದರ್ಶಕತೆ ಹೆಚ್ಚಿಸಿದ್ದಾರೆ. ಈ ಹಿಂದೆ ಪೂರ್ಣ ಅನುದಾನ ಬರುತ್ತಿದ್ದರೆ, ಈಗ 60-40 ರಂತೆ ಅನುದಾನ ಹಂಚಿಕೆ ಮಾಡಬೇಕಿದೆ. ಆದರೆ 40% ಹಣ ನೀಡಲು ಕೂಡ ಕಾಂಗ್ರೆಸ್ ಬಳಿ ಅನುದಾನವಿಲ್ಲ. ಆ ಮಟ್ಟಿಗೆ ಕಾಂಗ್ರೆಸ್ ಸರ್ಕಾರದ ಖಜಾನೆ ಖಾಲಿಯಾಗಿದೆ. ರೈಲು, ಮೆಟ್ರೋ ಸೇರಿದಂತೆ ಅನೇಕ ಯೋಜನೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದೆ. ಅದೇ ರೀತಿ ಈಗ ಪಾಲು ಮಾಡಬಹುದು ಎಂದರು. ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಈ ಯೋಜನೆಗೆ 2 ಲಕ್ಷ ಕೋಟಿ ರೂ. ನೀಡಿದ್ದರೆ, ಮೋದಿ ಸರ್ಕಾರದ…
ಬೆಂಗಳೂರು : ಕುಮಾರಸ್ವಾಮಿ ಅವರು ಕೇವಲವಾಗಿ ಮಾತನಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲಿ, ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿರುಗೇಟು ನೀಡಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿ ಗಲಭೆ ವಿಚಾರದಿಂದ ಡಿ.ಕೆ. ಶಿವಕುಮಾರ್ ಹಾಗೂ ಕುಮಾರಸ್ವಾಮಿ ನಡುವೆ ರಾಜಕೀಯ ಅನುಭವದ ವಾಕ್ಸಮರ ನಡೆಯುತ್ತಿರುವ ಬಗ್ಗೆ ಕೇಳಿದಾಗ, “ಸುಮ್ಮನೆ ಇಲ್ಲಸಲ್ಲದ್ದು ಯಾಕೆ ಹೇಳುತ್ತೀರಿ. ಮಂಡ್ಯ ಶಾಸಕ ಗಣಿಗ ರವಿ ಅವರು 100 ಎಕರೆ ಜಾಗವನ್ನು ನಿರ್ಧರಿಸಿದ್ದಾರಂತೆ. ಅವರಿಗೆ ಏನು ಅಧಿಕಾರ ಇದೆ ಎಂದು ಕುಮಾರಸ್ವಾಮಿ ಅವರು ಕೇಳುತ್ತಾರೆ. ಅವರಿಗೆ ಅಧಿಕಾರ ಇದೆಯೋ ಇಲ್ಲವೋ, ಸರ್ಕಾರಿ ಜಾಗ ಎಲ್ಲಿದೆ ಎಂದು ಅವರು ಗುರುತಿಸಿದ್ದಾರೆ. ಅಲ್ಲಿಯ ಜನರಿಗೆ ಉದ್ಯೋಗ ಕೊಡಿಸಲು ನಿಮ್ಮ ಇಲಾಖೆಯಿಂದ ಏನು ಮಾಡುತ್ತೀರಿ ಅದನ್ನು ಹೇಳಿ. ಹೆಚ್ಎಂಟಿ ಉದ್ಧಾರ ಮಾಡುವುದಾಗಿ ಮಾತನಾಡುತ್ತಿದ್ದರಲ್ಲ, ಆ ಕೆಲಸ ಮಾಡಲಿ” ಎಂದು ತಿರುಗೇಟು ನೀಡಿದರು. ಸಿಡಿ ಫ್ಯಾಕ್ಟರಿ ಇರುವುದು, ತಯಾರಾಗಿದ್ದು ಹಾಸನದ…
ನವದೆಹಲಿ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಜಾಗತಿಕ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ ಕಲ್ಪಿಸುವ ಉದೇಶಕ್ಕಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ₹14 ಕೋಟಿ ಮಂಜೂರು ಮಾಡಿದೆ. ಜಿಲ್ಲೆಯಲ್ಲಿ ಕ್ರೀಡಾ ಸೌಕರ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಸಚಿವ ಕುಮಾರಸ್ವಾಮಿ ಅವರು ಕೇಂದ್ರದ ಕ್ರೀಡಾ ಮತ್ತು ಯುವಜನ ಸಬಲೀಕರಣ ಖಾತೆ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದು ವಿನಂತಿಸಿದ್ದರು. ಮನವಿಗೆ ತಕ್ಷಣ ಸ್ಪಂದಿಸಿರುವ ಕ್ರೀಡಾ ಸಚಿವರು; ಖೇಲೋ ಇಂಡಿಯಾ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಬಹುಪಯೋಗಿ ಕ್ರೀಡಾ ಸೌಲಭ್ಯ ನಿರ್ಮಾಣಕ್ಕೆ ₹14 ಕೋಟಿ ಮಂಜೂರು ಮಾಡಿದ್ದಾರೆ. ₹14 ಕೋಟಿ ಅನುಮೋದಿತ ವೆಚ್ಚದಲ್ಲಿ ಮಂಡ್ಯದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬಹುಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಚಿವ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಅನೇಕ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ ಮತ್ತು ರಾಷ್ಟ್ರವನ್ನು ಪ್ರತಿನಿಧಿಸಿದ್ದಾರೆ. ಅನೇಕ ಯುವ ಪ್ರತಿಭೆಗಳು ಜಿಲ್ಲೆಯಲ್ಲಿ ಅವಕಾಶ ಸಿಗದೆ…
ಶಿವಮೊಗ್ಗ: ಬಡಜನರ ಹಸಿವು ನೀಗಿಸುವ ಸದುದ್ದೇಶದಿಂದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಂದಿರಾ ಕ್ಯಾಂಟಿನ್ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಶುಚಿ-ರುಚಿಯಾದ ಪೌಷ್ಟಿಕ ಆಹಾರವನ್ನು ಕೈಗೆಟುಕುವ ದರದಲ್ಲಿ ಪೂರೈಸುವ ಕನಸಿನೊಂದಿಗೆ ಕಾಂಗ್ರೆಸ್ ಸರ್ಕಾರ ಆರಂಭಿಸಿದ “ಇಂದಿರಾ ಕ್ಯಾಂಟೀನ್” ಅನ್ನು ಇಂದು ಶಿವಮೊಗ್ಗದ ವಿದ್ಯಾನಗರದಲ್ಲಿ ಉದ್ಘಾಟಿಸಿ, ಮುಖಂಡರುಗಳೊಂದಿಗೆ ಉಪಹಾರವನ್ನು ಸವಿದರು. ಶುಚಿ, ರುಚಿಯಾಗಿ ಹೊಸ ಬಗೆಯ ಆಹಾರದೊಂದಿಗೆ ಗ್ರಾಹಕರ ಸೇವೆಗೆ “ಇಂದಿರಾ ಕ್ಯಾಂಟೀನ್” ಸಿದ್ಧಗೊಂಡಿದ್ದು, ಗ್ರಾಹಕರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಈ ಕ್ಯಾಂಟೀನ್ ಆಟೋ ಚಾಲಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಬಡ ಕುಟುಂಬಗಳಿಗೆ ನಿಜವಾದ ಆಶಾಕಿರಣವಾಗಿದೆ. ಇದುವೇ ಕಾಂಗ್ರೆಸ್ ಸರ್ಕಾರದ ಜನಪರ ಚಿಂತನೆ ಮತ್ತು ಸಾಮಾಜಿಕ ನ್ಯಾಯದ ಪ್ರತಿರೂಪವಾಗಿದೆ ಎಂದರು.
ಬೆಂಗಳೂರು: ವಿಶೇಷಚೇತನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಸಚಿವ ಸಂಪುಟದ ಮುಂದೆ ಈ ಮಸೂದೆ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಹೇಳಿದರು. ಸ್ನೇಹದೀಪ ಅಂಗವಿಕಲರ ಸಂಸ್ಥೆಯು ಮಲ್ಲೇಶ್ವರಂನ ಜಲಮಂಡಳಿ ರಜತ ಭವನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ (ರಾಜ್ಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ) ದಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ೩೫ ಲಕ್ಷ ವಿಶೇಷಚೇತನರು ಇದ್ದಾರೆ ಎಂಬ ಅಂದಾಜು ಇದೆ. ಇವರಿಗೆ ಸರ್ಕಾರದ ನೆರವು ಸಿಗಬೇಕು. ಆದ್ದರಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ಚಿಂತನೆ ನಡೆದಿದೆ. ಖಾಸಗಿ ಉದ್ದಿಮೆಗಳಲ್ಲಿ ಶೇ ೫ ರಷ್ಟು ಮೀಸಲು ಸಿಗಬೇಕು. ಇಡೀ ದೇಶದಲ್ಲೇ ಮೊದಲ ಬಾರಿಗೆ ಇಂತಹ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. ಅಧಿಕಾರದಲ್ಲಿ ಇರುವವರು ಸಮಾಜಕ್ಕೆ ಏನಾದರೂ ಉಪಯೋಗವಾಗುವಂತ ಕೆಲಸ ಮಾಡಬೇಕು. ಎಷ್ಟು ದಿನ ಅಧಿಕಾರದಲ್ಲಿ…
ಬಾಂಗ್ಲಾದೇಶ: ದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಮುಂದುವರೆದಿದೆ. ಇದೀಗ ಮತ್ತೊಬ್ಬ ಹಿಂದೂವನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಸದಸ್ಯರ ಮೇಲಿನ ಹಿಂಸಾಚಾರ ಹೆಚ್ಚುತ್ತಲೇ ಇದೆ, ಇತ್ತೀಚಿನ ವಾರಗಳಲ್ಲಿ ಹಲವಾರು ಘಟನೆಗಳು ವರದಿಯಾಗಿವೆ. ಇತ್ತೀಚಿನ ಪ್ರಕರಣ ಸುನಮ್‌ಗಂಜ್ ಜಿಲ್ಲೆಯಿಂದ ಬಂದಿದ್ದು, ಅಲ್ಲಿ ಜಾಯ್ ಮಹಾಪಾತ್ರೋ ಎಂದು ಗುರುತಿಸಲ್ಪಟ್ಟ ಹಿಂದೂ ವ್ಯಕ್ತಿಯನ್ನು ಸ್ಥಳೀಯ ನಿವಾಸಿಯೊಬ್ಬರು ಥಳಿಸಿ ವಿಷಪ್ರಾಶನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಹಾಪಾತ್ರೋ ಅವರನ್ನು ಸಿಲ್ಹೆಟ್ ಎಂಎಜಿ ಉಸ್ಮಾನಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಯಿತು ಆದರೆ ಗುರುವಾರ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದರು. ವೈಯಕ್ತಿಕ ವಿವಾದದ ನಂತರ ಸ್ಥಳೀಯ ವ್ಯಕ್ತಿಯೊಬ್ಬರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿದೆ ಮತ್ತು ಪೊಲೀಸರು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅಧಿಕಾರಿಗಳು ಇನ್ನೂ ಹೆಚ್ಚಿನ ವಿವರಗಳನ್ನು ಹಂಚಿಕೊಂಡಿಲ್ಲ, ಆದರೆ ಈ ಘಟನೆಯು ದೇಶದ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಕಳವಳವನ್ನು ಹುಟ್ಟುಹಾಕಿದೆ.
ಬೆಂಗಳೂರು: ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ವಾಕ್ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವೇಷಭಾಷಣ ಪ್ರತಿಬಂಧಕ ಮಸೂದೆಯ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕಿತ್ತು. ಇಂತಹ ಮಸೂದೆ ತರುವಾಗ ಅದು ಜನರ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನೋಡಬೇಕಾಗುತ್ತದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಮಸೂದೆ ಬಗ್ಗೆ ಚರ್ಚೆ ನಡೆಸಲು ಅವಕಾಶವಿದೆ. ವಿಧಾನಸಭೆ ಇರುವುದು ಮಸೂದೆ ಮಂಡನೆ ಹಾಗೂ ಚರ್ಚೆಗೇ ಹೊರತು ಗಲಾಟೆ ಮಾಡುವುದಕ್ಕಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಇದರ ಚರ್ಚೆಗೆ ಅವಕಾಶ ನೀಡಲಿಲ್ಲ. ನಾನು ಮಸೂದೆಯ ಬಗ್ಗೆ ಚರ್ಚೆ ಮಾಡಲು ಮುಂದಾದಾಗ ಕಾಂಗ್ರೆಸ್ ಶಾಸಕರು, ಸಚಿವರು ಭಯಗೊಂಡು ತರಾತುರಿಯಲ್ಲಿ ಮಸೂದೆ ಮಂಡನೆ ಮಾಡಿದರು. ಈ ವಿಚಾರದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ನಡೆಯೂ ನನಗೆ ಬೇಸರ ತಂದಿದೆ ಎಂದರು. ಬಿಜೆಪಿಯಲ್ಲಿ 15 ಶಾಸಕರು ಈ ಬಗ್ಗೆ ಮಾತನಾಡುವುದಿತ್ತು. ಬಳಿಕ ಮಸೂದೆಯನ್ನು ಸದನ ಸಮಿತಿಗೆ…
ಬೆಂಗಳೂರು: ಕೇಂದ್ರ ಸರಕಾರದ ಯೋಜನೆಗಳ ಕುರಿತು ತಪ್ಪು ಮಾಹಿತಿ ನೀಡಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. “ಗೋಲ್ಡ್ ಫಿಂಚ್ ಹೊಟೇಲ್” ನಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರು ವಿಬಿ ಜಿ ರಾಮ್ ಜಿ ಯೋಜನೆ ಜಾರಿಯ ಮೂಲಕ ಲಕ್ಷಾಂತರ ಕೋಟಿ ಹೂಡಿಕೆ ಮಾಡಿ ಗ್ರಾಮೀಣ ಅಭಿವೃದ್ಧಿ ಕನಸು ನನಸಾಗಿಸಲು ಮುಂದಾದುದು ತಪ್ಪೇ ಎಂದು ಕೇಳಿದರು. ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗಲು ಏಳೆಂಟು ಲಕ್ಷ ಕೋಟಿ ಖರ್ಚು ಮಾಡುವ ಈ ಯೋಜನೆ ಸುಲಲಿತವಾಗಿ ಸಾಗಬೇಕು; ಬಡವರಿಗೆ ತಲುಪಬೇಕೆಂದು ಪ್ರಧಾನಿಯವರು ಆಲೋಚಿಸಿದ್ದೇ ತಪ್ಪೇ ಹಾಗಿದ್ದರೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಹತ್ತಾರು ವರ್ಷ ಆಡಳಿತ ಮಾಡಿದಾಗ ಸ್ಕೀಂ ಬಗ್ಗೆ ಯೋಚಿಸಿಲ್ಲ; ಸ್ಕ್ಯಾಮ್ ಬಗ್ಗೆಯೇ ಅವರು ಯೋಚಿಸಿದರು ಎಂದು ಟೀಕಿಸಿದರು. ಜಿ ರಾಮ್ ಜಿ ಮೂಲಕ ಮೋದಿಜೀ…
ಬೆಂಗಳೂರು: ನೊಂದವರಿಗೆ ನ್ಯಾಯ ಒದಗಿಸಲು ವಿಳಂಬವಾಗುತ್ತಿರುವ ಬಗ್ಗೆ ಚರ್ಚಿಸಿ, ಬದಲಾವಣೆಗಳನ್ನು ಕಂಡುಕೊಳ್ಳಬೇಕಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಕೆಇಬಿ ಇಂಜಿನಿಯರ್ ಅಸೋಸಿಯೇಷನ್ ರಜತ ಮಹೋತ್ಸವ ಕಟ್ಟಡದ ಸಭಾಂಗಣದಲ್ಲಿ ಆಯೋಜಿಸಿದ್ದ ‘ತರಬೇತಿ ಕಾರ್ಯಾಗಾರ ಮತ್ತು 17ನೇ ರಾಜ್ಯಮಟ್ಟದ ಸಮ್ಮೇಳನದ ಉದ್ಘಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಿ ಅವರು ಮಾತನಾಡಿದರು. ಹಲವು ವರ್ಷಗಳಿಂದ ಕರ್ನಾಟಕದ ನ್ಯಾಯಾಲಯಗಳಲ್ಲಿ 20 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ. ಹೈಕೋರ್ಟ್‌ನಲ್ಲಿ ಸುಮಾರು 3 ಲಕ್ಷ ಪ್ರಕರಣಗಳು, ಕೆಳಹಂತದ ನ್ಯಾಯಾಲಯಗಳಲ್ಲಿ 17 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ. ಇವು ಬರೀ ಒಂದೆರಡು ವರ್ಷದ ಪ್ರಕರಣಗಳಲ್ಲ. ಹಲವು ವರ್ಷಗಳಿಂದ ಬಾಕಿ ಉಳಿದಿವೆ. ಬಡವನಿಗೆ ನ್ಯಾಯ ಒದಗಿಸಲು ಎಷ್ಟು ವರ್ಷ ತೆಗೆದುಕೊಳ್ಳುತ್ತಿದ್ದೇವೆ ಎಂಬುದರ ಬಗ್ಗೆ ಚರ್ಚಿಸಬೇಕಿದೆ ಎಂದರು. ವಿಶ್ವ ಮಟ್ಟದಲ್ಲಿ ಭಾರತವು ಆರ್ಥಿಕವಾಗಿ ಮತ್ತು ತಾಂತ್ರಿಕವಾಗಿ ಬಹಳಷ್ಟು ಪ್ರಗತಿ ಕಂಡಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಅಷ್ಟೇ…
ಮಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. “ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು. ಜ.6ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು, ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ನರೇಗಾ ಯೋಜನೆ ಫಲಾನುಭವಿಗಳು…














