Author: kannadanewsnow09

ಚಿತ್ರದುರ್ಗ: ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಹಿರಿಯೂರು ತಾಲ್ಲೂಕು ಧರ್ಮಪುರ ಹೋಬಳಿಯ ಧರ್ಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಾಂತ್ರಿಕ ಸಹಾಯಕ ವಿಜಯೇಂದ್ರ ಅವರನ್ನು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಅವರು ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ. ತಾಂತ್ರಿಕ ಸಹಾಯಕ ವಿಜಯೇಂದ್ರ ಅವರು, ನರೇಗಾ ಯೋಜನೆಯ ಕಾಮಗಾರಿಗಳ ಸಾಮಗ್ರಿ ಬಿಲ್ಲುಗಳ ಎಂಐಎಸ್ ಮಾಡಿ ಎಫ್‍ಟಿಒಗಳನ್ನು ಸೃಜಿಸಿದ್ದು, ಈ 33 ಕಾಮಗಾರಿಗಳ ಎಂ.ಬಿಯನ್ನು ದಾಖಲಿಸದೆ ಕರ್ತವ್ಯ ಲೋಪವೆಸಗಿದ್ದಾರೆ ಎಂದು ಹಿರಿಯೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ವರದಿ ನೀಡಿರುತ್ತಾರೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮೊಬೈಲ್ ರೆಕಾರ್ಡ್ ಕ್ಲಿಪ್‍ನಲ್ಲಿ ಸಾರ್ವಜನಿಕರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೂ.3 ಲಕ್ಷದ ಕಾಮಗಾರಿ ಅನುಷ್ಠಾನಗೊಳಿಸುವಲ್ಲಿ ಶೇ.4 ನಂತೆ ರೂ.12,000/-ಗಳಿಗೆ ಹಣದ ಬೇಡಿಕೆ ಇಟ್ಟಿರುತ್ತಾರೆ. ಹೀಗೆ ಹಣದ ಬೇಡಿಕೆಯನ್ನು ಇಟ್ಟು ನರೇಗಾ ಯೋಜನೆಯ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುತ್ತಾರೆ. ಆದ್ದರಿಂದ ಇವರ ಸೇವೆಯು ಇಲಾಖೆಗೆ ಅವಶ್ಯಕತೆ ಇಲ್ಲದೇ ಇರುವುದರಿಂದ ವಿಜಯೇಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ. https://kannadanewsnow.com/kannada/sc-st-farmers-in-the-state-applications-invited-for-cultivation-of-horticulture-crops/ https://kannadanewsnow.com/kannada/kumaraswamy-jamir-relationship-is-a-matter-of-concern-bjp-is-doing-politics-over-them-dks/

Read More

ಬೆಂಗಳೂರು : “ಕುಮಾರಸ್ವಾಮಿ-ಜಮೀರ್ ಅವರ ಸಂಬಂಧ ಗಳಸ್ಯ-ಕಂಠಸ್ಯ ರೀತಿಯದು. ಅವರ ನಡುವಣ ಮಾತುಕತೆ ಅವರ ವೈಯಕ್ತಿಕ ವಿಚಾರ. ಅದರಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ದೂರು ನೀಡಲಿ: ಉಪಚುನಾವಣೆ ಪ್ರಚಾರದ ವೇಳೆ ಕುಮಾರಸ್ವಾಮಿ ಅವರ ಬಗ್ಗೆ ಜಮೀರ್ ಅವರು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಕೇಳಿದಾಗ, “ಅವರಿಬ್ಬರ ನಡುವೆ ಹಳೆಯ ಸ್ನೇಹ ಇದೆ. ಜಮೀರ್ ಅವರು ಕುಮಾರಸ್ವಾಮಿ ಯಾವ ಚಡ್ಡಿ ಹಾಕಿದ್ದಾರೆ ನೋಡಿದ್ದೇನೆ ಎನ್ನುತ್ತಾರೆ. ಕುಮಾರಸ್ವಾಮಿ ಕೂಡ ಜಮೀರ್ ಅವರ ಬಗ್ಗೆ ನನಗೆ ಗೊತ್ತು ಎನ್ನುತ್ತಾರೆ. ಜಮೀರ್ ಹೇಳಿಕೆ ಬಗ್ಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರಾ? ಅವರ ನಡುವೆ ಸ್ನೇಹದಲ್ಲಿ ಹಿಂದೆಂದೂ ಇಂತಹ ಮಾತು ಬಂದಿಲ್ಲವಾದರೆ ಕುಮಾರಸ್ವಾಮಿ ಅವರು ಜಮೀರ್ ವಿರುದ್ಧ ಜನಾಂಗೀಯ ನಿಂದನೆ ದೂರು ನೀಡಲಿ” ಎಂದರು. ವೈಯಕ್ತಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ: ಜಮೀರ್ ಹೇಳಿಕೆ ಸಮರ್ಥನೆ ಮಾಡಿಕೊಳ್ಳುತ್ತೀರಾ ಎಂದು ಕೇಳಿದಾಗ,…

Read More

ಮಡಿಕೇರಿ :-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಪೊನ್ನಂಪೇಟೆಯಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟ ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ನವೆಂಬರ್, 26 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್…

Read More

ಮಡಿಕೇರಿ :-220/66/11ಕೆವಿ, 66/11ಕೆವಿ ಮತ್ತು 33/11ಕೆ.ವಿ ಸ್ವೀಕರಣಾ ಕೇಂದ್ರದಿಂದ ನವೆಂಬರ್, 13 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಣೆ ಹಿನ್ನೆಲೆ ನವೆಂಬರ್, 13 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಶಾಲನಗರ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಕುಶಾಲನಗರ ಪಟ್ಟಣ, ಗೊಂದಿಬಸವನಹಳ್ಳಿ, ಮುಳ್ಳುಸೋಗೆ, ನಂಜರಾಯಪಟ್ಟಣ, ಗುಡ್ಡೆಹೊಸೂರು, ಕೆದಕಲ್, ನಾಕೂರು, ಹೊಸಕೋಟೆ, ಮತ್ತಿಕಾಡು, ಗರ್ಗಂದೂರು, ಮಾದಾಪುರ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಕೂಡಿಗೆ, ಕೂಡುಮಂಗಳೂರು, ದೊಡ್ಡತ್ತೂರು, ಚಿಕ್ಕತ್ತೂರು, ಹೆಬ್ಬಾಲೆ, ತೊರೆನೂರು, ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ದೊಡ್ಡಮಳ್ತೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೇಳೂರು, ಯಡವಾರೆ, ಕುಂಬೂರು ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. https://kannadanewsnow.com/kannada/sc-st-farmers-in-the-state-applications-invited-for-cultivation-of-horticulture-crops/ https://kannadanewsnow.com/kannada/first-in-india-gender-minority-womans-name-mentioned-in-passport-as-mother/

Read More

ದಾವಣಗೆರೆ : ತೋಟಗಾರಿಕೆ ಇಲಾಖೆಯಿಂದ ಚನ್ನಗಿರಿ ತಾಲ್ಲೂಕಿನವರಿಗೆ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನರೇಗಾದಡಿ ಸಣ್ಣ, ಅತಿಸಣ್ಣ, ರೈತರು ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು ನವಂಬರ್ 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಚನ್ನಗಿರಿ ಕಚೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/first-in-india-gender-minority-womans-name-mentioned-in-passport-as-mother/ https://kannadanewsnow.com/kannada/centre-tells-sc-that-it-approves-menstrual-cycle-policy-for-school-girls/

Read More

ಬೆಂಗಳೂರು: ತಂದೆಯ ಹೆಸರಿಲ್ಲದೆ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರನ್ನು ಮಾತ್ರ ತಾಯಿ ಎಂದು ಪಾಸ್‌ಪೋರ್ಟ್‌ನಲ್ಲಿ ನಮೂದಿಸಿರುವುದು ಭಾರತದಲ್ಲಿ ಇದೇ ಮೊದಲು ಆಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅವರ ಮಗ ಅವಿನ್‌ ಅಕ್ಕೈ ಪದ್ಮಶಾಲಿ ಅವರಿಗೆ ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯು ತಂದೆಯ ಹೆಸರನ್ನು ಉಲ್ಲೇಖಿಸದೆ ಪಾಸ್‌ಪೋರ್ಟ್‌ ನೀಡಿದೆ. ತಂದೆಯ ಹೆಸರಿಲ್ಲದೆ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರನ್ನು ಮಾತ್ರ ತಾಯಿ ಎಂದು ಪಾಸ್‌ಪೋರ್ಟ್‌ನಲ್ಲಿ ನಮೂದಿಸಿರುವುದು ಭಾರತದಲ್ಲಿ ಇದೇ ಮೊದಲು ಎಂದಿದೆ. ತಂದೆಯ ಹೆಸರಿಲ್ಲದೆ ನೀಡಲಾದ ಪಾಸ್‌ಪೋರ್ಟ್‌ ದೇಶದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಪೋಷಕರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪಾಸ್‌ಪೋರ್ಟ್‌ ಪಡೆಯಲು ಸಹಕಾರವಿತ್ತ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳಿಗೆ ಅಕ್ಕೈ ಪದ್ಮಶಾಲಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka …

Read More

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಅನುಮೋದಿಸಿದ “ಶಾಲೆಗೆ ಹೋಗುವ ಬಾಲಕಿಯರಿಗೆ ಮುಟ್ಟಿನ ನೈರ್ಮಲ್ಯ ನೀತಿ” ಯನ್ನು ರೂಪಿಸುವ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಕೇಂದ್ರವು ಏಪ್ರಿಲ್ 10, 2023 ರ ಉನ್ನತ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಿತು ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಹಿಳಾ ಶಾಲಾ ಮಕ್ಕಳ ಮುಟ್ಟಿನ ನೈರ್ಮಲ್ಯದ ಬಗ್ಗೆ ನೀತಿಯನ್ನು ರೂಪಿಸಿದೆ, ಇದನ್ನು ಸಂಬಂಧಪಟ್ಟ ಸಚಿವರು ನವೆಂಬರ್ 2, 2024 ರಂದು ಅನುಮೋದಿಸಿದ್ದಾರೆ ಎಂದು ಹೇಳಿದರು. 6 ರಿಂದ 12 ನೇ ತರಗತಿಯ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲು ಮತ್ತು ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ಪ್ರತ್ಯೇಕ ಮಹಿಳಾ ಶೌಚಾಲಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಜಯಾ ಠಾಕೂರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಈ…

Read More

ದಾವಣಗೆರೆ: ಹಿಂದೆ ಮತಾಂತ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಿದ್ದೀರಿ. ಈಗ ಮತ್ತೆ ಬೆಂಕಿ ಹಚ್ಚಲು ಸ್ವತಃ ನೀವೇ ಮುಂದಾಗಿದ್ದೀರಿ. ಓಲೈಕೆ ರಾಜಕಾರಣ ಮಾಡಲು ಇತಿಮಿತಿ ಇರಬೇಕು. ಅತಿಯಾದರೆ ಅಮೃತ ಕೂಡ ವಿಷವಾಗುತ್ತದೆ ಜೋಕೆ ಎಂಬುದಾಗಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಕ್ಪ್ ಬೋರ್ಡ್ ಮೂಲಕ ರಾಜ್ಯದ ಹಿಂದೂಗಳ ಆಸ್ತಿ ಕಬಳಿಸಲು ಯತ್ನಿಸಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಸಿವಿಲ್ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4 ರಷ್ಟು ಮೀಸಲಾತಿ ನೀಡಲು ಹೊರಟಿರುವುದು ತುಷ್ಟೀಕರಣದ ಪರಾಕಾಷ್ಠೆ ಎಂಬುದಾಗಿ ಗುಡುಗಿದ್ದಾರೆ. ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು CM ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು…

Read More

ಬೆಂಗಳೂರು: ಇಂದು ರಾಜ್ಯಾಧ್ಯಂತ 8 ಭ್ರಷ್ಟ ಅಧಿಕಾರಿಗಳ ವಿರುದ್ಧ 37 ಸ್ಥಳಗಲ್ಲಿ ಕರ್ನಾಟಕ ಲೋಕಾಯುಕ್ತದಿಂದ ದಾಳಿಯನ್ನು ನಡೆಸಲಾಯಿತು. ಹಾಗಾದ್ರೇ ಈ ದಾಳಿಯ ವೇಳೆಯಲ್ಲಿ ಪತ್ತೆಯಾದಂತ ಅಸಮತೋನ ಆಸ್ತಿ ಎಷ್ಟು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಳಗಾವಿ-2, ಹಾವೇರಿ-1, ದಾವಣಗೆರೆ-1, ಬೀದರ್‌-1, ಮೈಸೂರು-1, ರಾಮನಗರ-1 ಮತ್ತು ಧಾರವಾಡ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 08 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ ಎಂದಿದೆ. ಈ ದಿನ ದಿನಾಂಕ: 12.11.2024 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 37 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ. 1) ವಿಠಲ್‌ ಶಿವಪ್ಪ ಧವಳೇಶ್ವರ್‌,…

Read More

ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನವೆಂಬರ್ 13 ರ ಬುಧವಾರದಂದು ನಡೆಯಲಿದ್ದು, ಚುನಾವಣಾ ಆಯೋಗದಂತೆ ವೇತನ ಸಹಿತ ರಜೆ ನೀಡಲು ನಿರ್ದೇಶನವಿದ್ದು, 95-ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಂಡೂರು ವ್ಯಾಪ್ತಿಯ ಕಾರ್ಖಾನೆ, ವಾಣಿಜ್ಯ ಸಂಸ್ಥೆ, ಅಂಗಡಿ ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮತದಾನ ಮಾಡಲು ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಅವರು ತಿಳಿಸಿದ್ದಾರೆ. ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ) ರನ್ವಯ ಕಾರ್ಮಿಕರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ ಸಂವಿಧಾನಾತ್ಮಕ ಹಕ್ಕಾದ ಕಡ್ಡಾಯವಾಗಿ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿಕೊಡಬೇಕು. 95-ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯುವ ಕ್ಷೇತ್ರದ ವ್ಯಾಪ್ತಿಯ ಎಲ್ಲಾ…

Read More