Author: kannadanewsnow09

ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್ ಲಾರಿಯೊಂದಕ್ಕೆ ಡಿಕ್ಕಿಯಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಚಿಕ್ಕಜೇನಿಯ ಬಳಿಯಲ್ಲಿ ಖಾಸಗಿ ಬಸ್ ಆದಂತ ದುರ್ಗಾಂಬ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದಂತ ದುರ್ಗಾಂಬ ಬಸ್, ಹೊಸನಗರದಿಂದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತ್ತಿದ್ದಂತ ಲಾರಿಗೆ ಡಿಕ್ಕಿಯಾಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಬಸ್ ಪಲ್ಟಿಯಾದಂತ ಸಂದರ್ಭದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇವರಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ರಿಪ್ಪನ್ ಪೇಟೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/minister-zameer-ahmed-apologises-for-calling-kumaraswamy-kariyanna/ https://kannadanewsnow.com/kannada/breaking-if-i-rape-i-will-die-of-blood-bjp-mla-muniraths-statement/

Read More

ಮೈಸೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಸಚಿವ ಜಮೀರ್ ಅಹ್ಮದ್ ವಿರುದ್ಧ ಮುಗಿ ಬಿದ್ದಿದ್ದರು. ಅಲ್ಲದೇ ಜನಾಂಗೀಯ ನಿಂದನೆಯ ಹೇಳಿಕೆ ನೀಡಿದ್ದಂತ ಜಮೀರ್ ವಿರುದ್ಧ ಕಿಡಿಕಾರಿದ್ದರು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವಂತ ಅವರು, ನಾನು ಮೊದಲಿನಿಂದಲೇ ಕರಿಯಣ್ಣ ಅಂತಾನೇ ಕರೆಯೋದು. ಇದಕ್ಕೆ ನೋವಾಗಿದ್ದರೇ ಕ್ಷಮೆ ಕೇಳುವೆ ಎಂದಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾನು ಹೆಚ್.ಡಿ ಕುಮಾರಸ್ವಾಮಿ ಅವರನ್ನು ಮೊದಲಿನಿಂದಲೂ ಕುಮಾರಣ್ಣ ಅಂತಾನೇ ಕರೆಯೋದು. ಅವರು ನನ್ನ ಕುಳ್ಳ ಅಂತ ಕರೆಯುತ್ತಾರೆ. ಆ ಕಾರಣದಿಂದಲೇ ನಾನು ಕರಿಯಣ್ಣ ಅಂತ ಕುಮಾರಸ್ವಾಮಿ ಕರೆದಿದ್ದು ಎಂಬುದಾಗಿ ಸ್ಪಷ್ಟ ಪಡಿಸಿದರು. ಜೆಡಿಎಸ್ ಮುಖಂಡರಿಗೆ ನಾನು ಕುಮಾರಸ್ವಾಮಿ ಅವರನ್ನು ಕರಿಯಣ್ಣ ಅಂತ ಕರೆದಿದ್ದರಿಂದ ನೋವಾಗಿದೆ ಎಂಬುದಾಗಿ ತಿಳಿದು ಬಂದಿದೆ. ನನ್ನ ಕರಿಯಣ್ಣ ಹೇಳಿಕೆಯಿಂದ ನೋವಾಗಿದ್ದರೇ ದಯವಿಟ್ಟು ಕ್ಷಮಿಸಿ ಎಂಬುದಾಗಿ ಕ್ಷಮೆಯನ್ನು ಕೋರಿದರು. https://kannadanewsnow.com/kannada/yoga-guru-sharath-jois-passes-away-in-us-due-to-cardiac-arrest/ https://kannadanewsnow.com/kannada/breaking-if-i-rape-i-will-die-of-blood-bjp-mla-muniraths-statement/

Read More

ಮೈಸೂರು: ಅಮೇರಿಕಾದಲ್ಲಿ ಮೈಸೂರಿನ ಅಷ್ಟಾಂಗ ಯೋಗ ಗುರುವಾಗಿದ್ದಂತ ಶರತ್ ಜೋಯಿಸ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಮೇರಿಕಾದ ವರ್ಜೇನಿಯದಲ್ಲಿ ನೆಲೆಸಿದ್ದಂತ ಅಷ್ಟಾಂಗ ಯೋಗ ಗುರು ಶರತ್ ಜೋಯಿಸ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನ ಯೋಗ ಗುರು ಪಟ್ಟಾಭಿ ಜೋಯಿಸ್ ಅವರ ಮೊಮ್ಮಗರಾಗಿದ್ದಂತ ಶರತ್ ಅವರು, ಗೋಕುಲಂ ನಿವಾಸಿಯಾಗಿದ್ದರು. ದೇಶ ವಿದೇಶಗಳಲ್ಲಿ ಯೋಗವನ್ನು ಕಲಿಸಿಕೊಡುತ್ತಿದ್ದರು. ಇಂತಹ ಸದ್ಯ ವರ್ಜೇನಿಯಾದಲ್ಲಿ ನೆಲೆಸಿದ್ದಂತ ಅವರು ಇನ್ನಿಲ್ಲವಾಗಿದ್ದಾರೆ. https://kannadanewsnow.com/kannada/good-news-for-pensioners-digital-life-certificate-submission-system-introduced-at-doorstep/ https://kannadanewsnow.com/kannada/breaking-if-i-rape-i-will-die-of-blood-bjp-mla-muniraths-statement/

Read More

ಬೆಂಗಳೂರು: ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ಕುಟುಂಬ ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಭಾರತೀಯ ಅಂಚೆ ಇಲಾಖೆಯು “ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್”, ಪಿಂಚಣಿದಾರರ ಮನೆಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಸಲ್ಲಿಸುವ ವ್ಯವಸ್ಥೆಯನ್ನು ಮಾಡಿದೆ. ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ಮನ್ ಮೂಲಕ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಓ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದಾಗಿದೆ. ತಮ್ಮಲ್ಲಿರುವ ಮೊಬೈಲ್ ಮುಖಾಂತರ ಜೀವನ ಪ್ರಮಾಣ ಪತ್ರ ಮಾಡಿ ಕೊಡುವ ವ್ಯವಸ್ಥೆಯಲ್ಲಿ ಯಾವುದೆ ಕಾಗದ ಪತ್ರವನ್ನು ಕೊಡಬೇಕಾಗಿಲ್ಲ. ಡಿಜಿಟಲ್ ಜೀವನ ಪ್ರಮಾಣ ಪತ್ರವು ಪಿಂಚಣಿ ಪಡೆಯುವ ಕಚೇರಿಗೆ ತಂತ್ರಾಂಶ ಮೂಲಕ ರವಾನೆಯಾಗುವುದು ಹಾಗೂ ಮೊಬೈಲ್ ಗೆ ಇದರ ವಿವರ ಸಂದೇಶದ ಮೂಲಕ ಬರುತ್ತದೆ. ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ…

Read More

ಬಳ್ಳಾರಿ: ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಾಳೆ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಮನೆ ಮನೆ ಪ್ರಚಾರಕ್ಕೆ ಮಾತ್ರವೇ ಅವಕಾಶವಿದೆ. ಈ ವೇಳೆಯಲ್ಲಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಮಾತ್ರ ತಾನು ಚುನಾವಣಾ ಪ್ರಚಾರಕ್ಕೂ ಜೈ, ಬೋಂಡಾ ಮಾಡೋದಕ್ಕೂ ಸೈ ಎಂಬುದಾಗಿ ಹೋಟೆಲ್ ಒಂದರಲ್ಲಿ ಮಿರ್ಚಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ವೀಡಿಯೋ ಸಹಿತ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಹೊನ್ನಾಳಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು, ಸಂಡೂರು ತಾಲೂಕಿನ ಕಳಸಿಗೆರೆ ಗ್ರಾಮದಲ್ಲಿ ನೆನ್ನೆ ಮತಯಾಚನೆ ಸಂದರ್ಭದಲ್ಲಿ ನಾಗೇಂದ್ರ ಗೌಡ ಅವರ ಹೋಟೆಲ್ ನಲ್ಲಿ ಅವರ ಅಪೇಕ್ಷೆ ಮೇರೆಗೆ ಮಿರ್ಚಿ ಮಾಡಿದ ಸಂದರ್ಭ ಎಂದಿದ್ದಾರೆ. https://twitter.com/MPRBJP/status/1856225489511121380 https://kannadanewsnow.com/kannada/no-objection-to-release-of-taxique-forest-minister-ishwar-khandre/ https://kannadanewsnow.com/kannada/breaking-if-i-rape-i-will-die-of-blood-bjp-mla-muniraths-statement/

Read More

ಬೆಂಗಳೂರು: ಅಕ್ರಮವಾಗಿ ಮರ ಕಡಿದಿದ್ದರ ಕಾರಣ ಟ್ಯಾಕ್ಸಿಕ್ ಚಿತ್ರ ತಂಡದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೇ ಇದೇ ಕಾರಣಕ್ಕೆ ಚಿತ್ರ ಬಿಡುಗಡೆಗೆ ಯಾವುದೇ ತೊಂದ್ರೆ ಇಲ್ಲ. ಚಿತ್ರತಂಡದ ನಿರ್ಧರಿಸಿದಂತೆ ಸಿನಿಮಾ ಬಿಡುಗಡೆಯಾಗಲಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಇಂದು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪೀಣ್ಯದ ಹೆಚ್ ಎಂ ಟಿ ಅರಣ್ಯ ಪ್ರದೇಶದಲ್ಲಿ ಟ್ಯಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕಾಗಿ ಅಕ್ರಮವಾಗಿ ಮರಗಳನ್ನು ಕಡಿದಿದ್ದು ಗಮನಕ್ಕೆ ಬಂದಿತ್ತು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೂಡ ನಡೆಸಿದ್ದರು ಎಂದರು. ಈ ಹಿಂದೆ ಹೆಚ್ ಎಂ ಟಿ ಅರಣ್ಯ ಪ್ರದೇಶದಲ್ಲಿ ಮರಗಳು ಹೇಗಿದ್ದವು. ಟ್ಯಾಕ್ಸಿಕ್ ಚಿತ್ರೀಕರಣದ ಸಮಯದಲ್ಲಿ ಹೇಗಿದೆ ಎನ್ನುವ ಸ್ಯಾಟಲೈಟ್ ಚಿತ್ರಗಳನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಅಕ್ರಮವಾಗಿ ಮರಗಳನ್ನು ಕಡಿದದ್ದು ಗಮನಕ್ಕೆ ಬಂದಿತ್ತು ಎಂದು ತಿಳಿಸಿದರು. ಅನುಮತಿಯಿಲ್ಲದೇ ಅರಣ್ಯ ಪ್ರದೇಶದಲ್ಲಿನ ಮರಗಳನ್ನು ಕಡಿದಿದ್ದರಿಂದಾಗಿ ಟ್ಯಾಕ್ಸಿಕ್ ಚಿತ್ರತಂಡ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಯಾರು ಮರ ಕಡಿದಿದ್ದಾರೋ ಗೊತ್ತಿಲ್ಲ. ಮರ ಕಡಿದವ…

Read More

ಬೆಂಗಳೂರು: ಕಾಂಗ್ರೆಸ್ ಸರಕಾರವು 38 ಇಲಾಖೆಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದೆಲ್ಲವನ್ನೂ ನಮ್ಮ ಮುಖಂಡರು ಒಂದೊಂದಾಗಿ ಬೆಳಕಿಗೆ ತರುತ್ತಿದ್ದಾರೆ. ಮುಖ್ಯಮಂತ್ರಿಗಳು ಭ್ರಷ್ಟಾಚಾರದ ಕೂಪದಲ್ಲಿ ಕುಳಿತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬವು ಮುಡಾದ 14 ನಿವೇಶನ ವಾಪಸ್ ಮಾಡಿದ್ದು, ಪ್ರಿಯಾಂಕ್ ಖರ್ಗೆಯವರು 5 ಎಕರೆ ವಾಪಸ್ ಮಾಡಿದ್ದರಿಂದ ಭ್ರಷ್ಟಾಚಾರ ಸಾಬೀತಾಗಿದೆ. ಅದರ ತನಿಖೆ ಏನಿದ್ದರೂ ನಿಮ್ಮ ಕಸರತ್ತು ಅಷ್ಟೇ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯನವರೇ, ನೀವು ಮಾತನಾಡುವಾಗ ಯಾವ ಮಟ್ಟಕ್ಕೆ ಹೋಗುತ್ತೀರಿ? ಪ್ರಧಾನಿಯವರ ಯೋಗ್ಯತೆ, ತಮ್ಮ ಯೋಗ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕು. ವಯಸ್ಸು, ಅಧಿಕಾರದಲ್ಲಿ ನೀವು ಅವರ ಮಟ್ಟಕ್ಕಿದ್ದರೆ ಅವರನ್ನು ಪ್ರಶ್ನೆ ಮಾಡುವುದರಲ್ಲಿ ಅರ್ಥವಿದೆ. ಸಣ್ಣಸಣ್ಣ ವ್ಯಕ್ತಿಗಳೂ ಪ್ರಧಾನಮಂತ್ರಿಗಳನ್ನು ಕೀಳು ಭಾಷೆಯಲ್ಲಿ ಮಾತನಾಡುವುದು ಎಷ್ಟು ಸರಿ? ಎಂದು ಕೇಳಿದರು. ಈಚೆಗೆ ವೈನ್ ಮರ್ಚೆಂಟ್ ಅಸೋಸಿಯೇಶನ್‍ನವರು ಒಂದು ಆಪಾದನೆ ಮಾಡಿದ್ದಾರೆ. ಸುಮಾರು 500…

Read More

ಬೆಂಗಳೂರು : ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟೆಲಿಸ್ಕೊಪ್ ಒದಗಿಸುವ ಯೋಜನೆ ಬಹಳ ವಿಶೇಷವಾಗಿದ್ದು, ಭವಿಷ್ಯದ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಇಸ್ರೋ ಚೇರ್ಮನ್ ಸೋಮನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿ ಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯೋಜನೆಯ ಬಗ್ಗೆ ಶ್ಲಾಘಿಸಿದರು. ಮಕ್ಕಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಯೋಜನೆ ಬಹಳ ವಿಶೇಷ ವಾಗಿದೆ. ಸಣ್ಣ ವಯಸ್ಸಿನಲ್ಲೇ ಬಾಹ್ಯಾಕಾಶದ ಬಗ್ಗೆ ಆಸಕ್ತಿ ಬೆಳೆಸುವುದರಿಂದ ಮಕ್ಕಳಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿವು ಮೂಡಿಸಬಹುದಾಗಿದೆ. ಇಂತಹ ಯೋಜನೆಯನ್ನು ಯೋಜಿಸಿ ಅನುಷ್ಟಾನಗೊಳಿಸುತ್ತಿರುವ ಸರಕಾರದ ಕ್ರಮ ಅನುಕರಣೀಯ. ಈ ಯೋಜನೆಯಿಂದ ಭವಿಷ್ಯದ ವೈಜ್ಞಾನಿಕ ಕ್ಷೇತ್ರದಲ್ಲಿ ನಮ್ಮ ಮಕ್ಕಳ ಕೊಡುಗೆಯೂ ಹೆಚ್ಚಲಿದೆ ಎಂದರು. ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಮಾತನಾಡಿ, ಸನ್ಮಾನ್ಯ ಮುಖ್ಯಮಂತ್ರಿಗಳಾದ…

Read More

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ನಾಳೆ ಬೆಂಗಳೂರಿನ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಬೆಸ್ಕಾಂ ಇಇ ಯೋಗೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಗರದ 66/11 ಕೆ.ವಿ. ಸಾರಕ್ಕಿ ನ.13 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲವೆಂದು ತಿಳಿಸಿದ್ದಾರೆ. ನಾಳೆ ಈ ಏರಿಯಾಗಳಲ್ಲಿ ಪವರ್ ಕಟ್ ಶಾಕಂಬರಿನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗ‍ಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 4, 5, 7, 8ನೇ ಬ್ಲಾಕ್, ಐಟಿಐ ಲೇಹ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಜಿ.ಪಿ.ನಗರ 5ನೇ ಹಂತ, ಸಾಯಿ ನಸ‍ರಿ ರಸ್ತೇ, ಜಿ.ಪಿ.ನಗರ 1,2,3,4,5,6ನೇ ಹಂತ, 15ನೇ ಕ್ರಾಸ್, 16 &…

Read More

ಬೆಂಗಳೂರು: ಶಕ್ತಿ ಯೋಜನೆಯ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಅಲ್ಲದೇ ಬಹಿರಂಗವಾಗಿಯೇ ಚರ್ಚೆಗೆ ಆಹ್ವಾನಿಸಿ ಈ ಸವಾಲ್ ಹಾಕಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ವಿರೋಧ ಪಕ್ಷದ ನಾಯಕರೇ, ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ‌.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ. ಇಂದೇ ಸ್ಥಳ ಮತ್ತು ಸಮಯವನ್ನು ನಿಗದಿ ಮಾಡಿ ನಾನು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ‌ ಎಂದಿದ್ದಾರೆ. ಅಂಕಿಅಂಶಗಳೇ ನಮ್ಮ‌ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂಬುದನ್ನು ಹತ್ತು ಹಲವು ಬಾರಿ ನಾನು ತಿಳಿಸಿದ್ದೇನೆ‌. ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ಎಂಬುದಕ್ಕೆ ಶ್ಚೇತಪತ್ರ ಹೊರಡಿಸಿ ತಮ್ಮ ಅವಧಿಯ ಆಡಳಿತವನ್ನು ಜನರಿಗೆ ತೋರಿಸಬೇಕೆಂಬ ತಮ್ಮ ಮಹದಾಸೆಗೆ ನಾವು ಅಭಾರಿ ಎಂದು ಹೇಳಿದ್ದಾರೆ. ನಮ್ಮ ಸರ್ಕಾರದ‌ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳ…

Read More