Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪ್ಯಾನ್ ಕಾರ್ಡ್ ಕಳೆದುಹೋಗುವುದು ಒತ್ತಡದಾಯಕವಾಗಬಹುದು. ಆದರೆ ನಕಲು ಪಡೆಯುವುದು ಈಗ ಸರಳ ಮತ್ತು ತೊಂದರೆ-ಮುಕ್ತವಾಗಿದೆ. ನೀವು ಕುಳಿತಲ್ಲೇ ಆನ್ ಲೈನ್ ನಲ್ಲಿ ಜಸ್ಟ್ ಹೀಗೆ ಅರ್ಜಿ ಹಾಕಿ ಸಾಕು, ರೂ.50ರಲ್ಲಿ ನಿಮ್ಮ ಮನೆಗೆ ಹೊಸ ಪ್ಯಾನ್ ಕಾರ್ಡ್ ಬರಲಿದೆ. ಭಾರತದಲ್ಲಿ, ಬ್ಯಾಂಕಿಂಗ್, ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಮತ್ತು ಹಲವಾರು ಹಣಕಾಸು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ. ನಿಮ್ಮ ಕಾರ್ಡ್ ಕದ್ದಿದ್ದರೆ ಅಥವಾ ಕಳೆದುಹೋದರೆ, ತ್ವರಿತ ಕ್ರಮವು ನಿಮ್ಮನ್ನು ದುರುಪಯೋಗದಿಂದ ರಕ್ಷಿಸಲು ಸಹಾಯ ಮಾಡುತ್ತದೆ ಮತ್ತು ವಿಳಂಬವಿಲ್ಲದೆ ಬದಲಿಯನ್ನು ಪಡೆಯುವುದನ್ನು ಖಚಿತಪಡಿಸುತ್ತದೆ. ಪೊಲೀಸ್ ವರದಿಯನ್ನು ಸಲ್ಲಿಸುವುದು ಮತ್ತು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವಂತಹ ಸಮಯೋಚಿತ ಕ್ರಮಗಳು ಪ್ರಕ್ರಿಯೆಯನ್ನು ಸುಗಮ ಮತ್ತು ಸುರಕ್ಷಿತಗೊಳಿಸಬಹುದು. ಕನಿಷ್ಠ ಶುಲ್ಕಗಳು ಮತ್ತು ಸುಲಭ ಟ್ರ್ಯಾಕಿಂಗ್ನೊಂದಿಗೆ, ಹೊಸ ಪ್ಯಾನ್ ಕಾರ್ಡ್ ದಿನಗಳಲ್ಲಿ ನಿಮ್ಮ ವಿಳಾಸವನ್ನು ತಲುಪಬಹುದು, ಇದು ಎಲ್ಲರಿಗೂ ಅನುಕೂಲಕರವಾಗಿರುತ್ತದೆ. FIR ನಿಮ್ಮ ಪ್ಯಾನ್ ಕಾರ್ಡ್ ಕಳೆದುಹೋದರೆ ಅಥವಾ ಕದ್ದಿದ್ದರೆ, ಮೊದಲ ಹಂತವೆಂದರೆ ನಿಮ್ಮ ಹತ್ತಿರದ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು. ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು. https://kannadanewsnow.com/kannada/actor-darshan-decides-to-approach-human-rights-commission-for-shift-to-another-prison/ https://kannadanewsnow.com/kannada/should-you-link-your-aadhaar-to-your-ration-card-just-do-this-online/
ನವದೆಹಲಿ: ಎಲ್ಲಾ ಪಡಿತರ ಚೀಟಿದಾರರು ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸುವುದನ್ನು ಭಾರತ ಸರ್ಕಾರ ಕಡ್ಡಾಯಗೊಳಿಸಿದೆ. ಈ ಹಂತವು ಪಡಿತರ ವಿತರಣೆಯನ್ನು ನ್ಯಾಯಯುತವಾಗಿ ಖಚಿತಪಡಿಸಿಕೊಳ್ಳುವುದು ಮತ್ತು ಯೋಜನೆಯ ಯಾವುದೇ ದುರುಪಯೋಗವನ್ನು ನಿಲ್ಲಿಸುವ ಗುರಿಯನ್ನು ಹೊಂದಿದೆ. ಹಾಗಾದ್ರೇ ಆನ್ ಲೈನ್ ಮೂಲಕ ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಹೇಗೆ ಮಾಡಬೇಕು ಅಂತ ಮುಂದೆ ಓದಿ. ಪಡಿತರ ಚೀಟಿಗಳಿಗೆ ಇ-ಕೆವೈಸಿ ಏಕೆ ಮುಖ್ಯ? ಇ-ಕೆವೈಸಿ, ಅಥವಾ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್, ಆಧಾರ್ ಕಾರ್ಡ್ ಹೊಂದಿರುವವರ ಗುರುತನ್ನು ತಮ್ಮ ಆಧಾರ್ ಕಾರ್ಡ್ ಬಳಸಿ ಪರಿಶೀಲಿಸುವ ಡಿಜಿಟಲ್ ಪ್ರಕ್ರಿಯೆಯಾಗಿದೆ. ಇದು ಅರ್ಹ ಜನರು ಮಾತ್ರ ಸಬ್ಸಿಡಿ ಪಡಿತರದಂತಹ ಸರ್ಕಾರಿ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಕಪ್ಪು ಮಾರುಕಟ್ಟೆ ಅಥವಾ ನಕಲಿ ಪಡಿತರ ಚೀಟಿಗಳಂತಹ ಸಮಸ್ಯೆಗಳನ್ನು ತಡೆಯುತ್ತದೆ. ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಯೊಂದಿಗೆ ಹೇಗೆ ಲಿಂಕ್ ಮಾಡುವುದು? ಆನ್ಲೈನ್ ವಿಧಾನ: – https://ahara.kar.nic.in/ ಈ ಲಿಂಕ್ ಕ್ಲಿಕ್ ಮಾಡಿ, ಇಲ್ಲವೇ ನಿಮ್ಮ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದದ ಜೈಲು ಪಾಲಾಗಿದ್ದಾರೆ. ಹಾಸಿಗೆ ದಿಂಬಿಗೆ ಬೇಡಿಕೆ ಇಟ್ಟಿದ್ದರೂ ಅದನ್ನು ಜೈಲು ಅಧಿಕಾರಿಗಳು ಈಡೇರಿಸುತ್ತಿಲ್ಲ. ಕನಿಷ್ಠ ಈ ಜೈಲಿನಿಂದ ಬೇರೆ ಜೈಲಿಗೆ ಶಿಫ್ಟ್ ಆದರೂ ಮಾಡಿಸಲು ಸೂಚಿಸುವಂತೆ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಲು ನಟ ದರ್ಶನ್ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ನಟ ದರ್ಶನ್ ಕ್ವಾರಂಟೈನ್ ಬ್ಯಾರಕ್ ನಲ್ಲಿ ನರಕ ಅನುಭವಿಸುತ್ತಿದ್ದಾರೆ ಎನ್ನಲಾಗುತ್ತಿದೆ. ನೆಲದಲ್ಲಾದ್ರೂ ಮಲಗ್ತೀನಿ ಬೇರೆ ಬ್ಯಾರಕ್ ಗೆ ಹಾಕಿ ಎಂಬುದಾಗಿ ಜೈಲು ಅಧಿಕಾರಿಗಳ್ನು ದುಂಬಾಲು ಬಿದ್ದಿರುವುದಾಗಿ ಹೇಳಲಾಗುತ್ತಿದೆ. ಹಾಸಿಗೆ, ದಿಂಬು ಕೊಡದಿದ್ರೂ ಓಕೆ, ಶಿಫ್ಟ್ ಮಾಡಿ ಎಂಬುದಾಗಿ ಒತ್ತಾಯಿಸಿರುವಂತ ನಟ ದರ್ಶನ್ ಒತ್ತಾಯಕ್ಕೆ ಜೈಲು ಅಧಿಕಾರಿಗಳು ಮಾತ್ರ ಜುಮ್ ಎನ್ನುತ್ತಿಲ್ಲ. ಯಾವುದೇ ಕೇಳಿದರೂ ರೂಲ್ಸ್, ರೂಲ್ಸ್ ಎನ್ನುತ್ತಿದ್ದಾರೆ. ಜೈಲು ಅಧಿಕಾರಿಗಳ ವಿರುದ್ಧ ದರ್ಶನ್ ತೀವ್ರ ಅಸಮಾಧಾನ ಹೊರಹಾಗಿದ್ದಾರೆ. ಹೀಗಾಗಿ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಲು ದಾಸ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರತಯೊಂದಕ್ಕೂ ನಿಯಮ, ನಿಯಮ,…
ನವದೆಹಲಿ: ಭಾರತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ಸೆಪ್ಟೆಂಬರ್ನಲ್ಲಿ ವಾರ್ಷಿಕ ಆಧಾರದ ಮೇಲೆ ಶೇ. 9.1 ರಷ್ಟು ಹೆಚ್ಚಾಗಿ 1.89 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ ಎಂದು ಸರ್ಕಾರಿ ಡೇಟಾವನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಭಾರತದ ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ಸೆಪ್ಟೆಂಬರ್ನಲ್ಲಿ ವರ್ಷದಿಂದ ವರ್ಷಕ್ಕೆ ಶೇ. 9.1 ರಷ್ಟು ಹೆಚ್ಚಾಗಿ ₹1.89 ಲಕ್ಷ ಕೋಟಿಗಳಿಗೆ ತಲುಪಿದೆ ಎಂದು ಹಣಕಾಸು ಸಚಿವಾಲಯದ ದತ್ತಾಂಶ ಬುಧವಾರ ತೋರಿಸಿದೆ. ಕಳೆದ ವರ್ಷ ಇದೇ ತಿಂಗಳಲ್ಲಿ ಸಂಗ್ರಹವಾದ ₹1.73 ಲಕ್ಷ ಕೋಟಿಗಳಿಗೆ ಹೋಲಿಸಿದರೆ ಈ ಮೊತ್ತ ಹೆಚ್ಚಾಗಿದೆ. ಆಗಸ್ಟ್ನಲ್ಲಿ ಜಿಎಸ್ಟಿ ಸಂಗ್ರಹವು ವರ್ಷದಿಂದ ವರ್ಷಕ್ಕೆ ಶೇ. 6.5 ರಷ್ಟು ಹೆಚ್ಚಾಗಿ ₹1.86 ಲಕ್ಷ ಕೋಟಿಗಳಿಗೆ ತಲುಪಿದೆ. ಏಪ್ರಿಲ್-ಆಗಸ್ಟ್ ಅವಧಿಯಲ್ಲಿ, ಒಟ್ಟು ಸಂಗ್ರಹವು 9.9 ರಷ್ಟು ಹೆಚ್ಚಾಗಿ ₹10.04 ಲಕ್ಷ ಕೋಟಿಗಳಿಗೆ ತಲುಪಿದೆ, ಇದು ಹಿಂದಿನ ವರ್ಷದ ₹9.14 ಲಕ್ಷ ಕೋಟಿಗಳಿಂದ ಹೆಚ್ಚಾಗಿದೆ. ಆ ಮೊದಲ ಐದು ತಿಂಗಳಲ್ಲಿ…
ಬೆಂಗಳೂರು: ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಕೇಂದ್ರದ ಪ್ರವಾಹಪರಿಹಾರ ಕೊಡಿಸಲಿ ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯಸರ್ಕಾರ ಸಲ್ಲಿಸುವುದು ಎಂದರು. ಕೇಂದ್ರಸರ್ಕಾರವೂ ಜಾತಿಗಣತಿಗೆ ಮುಂದಾಗಿದೆ ಜಾತಿಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಈ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು…
ಬೆಂಗಳೂರು: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು. ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು. https://kannadanewsnow.com/kannada/bjps-self-deceiving-protests-are-not-needed-in-kalaburagi-minister-priyank-kharge/
ಬೆಂಗಳೂರು: ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ. ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ. ತಮ್ಮ ” ಎಕ್ಸ್ ” ಖಾತೆಯಲ್ಲಿ ಈ ಬಗ್ಗೆ ಅಂಕಿ ಅಂಶಗಳ ಸಮೇತ ಸುದೀರ್ಘವಾಗಿ ಬರೆದುಕೊಂಡಿರುವ ಅವರು ಬಿಜೆಪಿ ಆಡಳಿತವಧಿಯಲ್ಲಿ ಕಲಬುರಗಿ ಜಿಲ್ಲೆಗೆ ಒಂದು ಮಂತ್ರಿ ಸ್ಥಾನವನ್ನು ಕೊಟ್ಟಿರಲಿಲ್ಲ, ಆಗ ಇದ್ದಂತಹ ಉಸ್ತುವಾರಿ ಮಂತ್ರಿಗಳು ಜಿಲ್ಲೆಯ ಕಡೆ ತಲೆ ಹಾಕುತ್ತಿರಲಿಲ್ಲ, ಇಂತಹ ಬಿಜೆಪಿಗೆ ಇಂದು ನಮ್ಮ ಕಡೆ ಬೆರಳು ತೋರಿಸುವುದಕ್ಕೆ ಕನಿಷ್ಠ ಮಟ್ಟದ ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ. ಕಲಬುರಗಿಯ…
ಬೆಂಗಳೂರು: “ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದಿದ್ದಾರೆ. ಕೆಪಿಸಿಸಿ ಕಚೇರಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಜೈಲಿಗೆ ಹೋಗುವ ದಿನ ಹತ್ತಿರವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರಲ್ಲಾ ಎಂದು ಕೇಳಿದಾಗ, “ಮೊದಲಿನಿಂದಲೂ ನನ್ನನ್ನು ಜೈಲಿಗೆ ಹಾಕಿಸಲೇಬೇಕು ಎಂದು ಕುಮಾರಸ್ವಾಮಿ ಅವರು ಸಂಕಲ್ಪ ಮಾಡಿ ಷಡ್ಯಂತ್ರ ಮಾಡುತ್ತಿದ್ದಾರೆ. ಈಗಲೂ ಅದನ್ನೇ ಮುಂದುವರಿಸುತ್ತಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿರಬರುತ್ತಿದೆ ಎಂದಿದ್ದಾರೆ. ಹಬ್ಬ ಮುಗಿದ ಬಳಿಕ ಅವರಿಗೆ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು. ನನ್ನ ವಿರುದ್ಧ ಇರುವ ದಾಖಲೆ ಜನರ ಮುಂದಿಡಲಿ: “ಕುಮಾರಸ್ವಾಮಿ ಅವರು ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಅವರ ಕುಟುಂಬ ನನ್ನ ಕುಟುಂಬದ ಮೇಲೆ…
ಬೆಂಗಳೂರು: ರಾಜ್ಯದ 2025-26ನೇ ಸಾಲಿನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಯ ಶೈಕ್ಷಣಿಕ ಪರಿಷ್ಕೃತ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಸಂಬಂಧ ನಡವಳಿಯನ್ನು ಹೊರಡಿಸಿರುವಂತ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಜಿ ಶಶಿಧರ್ ಅವರು, 2025-26ನೇ ಸಾಲಿನ ಶೈಕ್ಷಣಿಕ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ವಿಶ್ವವಿದ್ಯಾಲಯಗಳು ಕಾಲೇಜು ಶಿಕ್ಷಣ/ಅನುದಾನ/ ಅನುದಾನ ರಹಿತ ಕಾಲೇಜುಗಳಲ್ಲಿ (ತಾಂತ್ರಿಕ ಶಿಕ್ಷಣವನ್ನು ಹೊರತುಪಡಿಸಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಕಡ್ಡಾಯವಾಗಿ ಜಾರಿಗೊಳಿಸಲು ಆದೇಶಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು 3.2 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಹೆಚ್ಚುವರಿ ಬೋಧನಾ ಕಾರ್ಯಭಾರವನ್ನು ನಿರ್ವಹಿಸಲು ಸರ್ಕಾರಿ ಕಾಲೇಜಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಆದರೆ ಅತಿಥಿ ಉಪನ್ಯಾಸಕರಿಗೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳಿಂದಾಗಿ 2025-26ನೇ ಸಾಲಿನ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯುವ ಪ್ರಕ್ರಿಯೆಯು ವಿಳಂಬಗೊಂಡಿರುತ್ತದೆ.…