Author: kannadanewsnow09

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ತನಗೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ಬೆಂಗಳೂರಿನ ಸಂಜಯ್ ನಗರ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರ್ ಹಾಗೂ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಎಫ್ಐಆರ್ ರದ್ದುಕೋರಿ, ಹೆಚ್ ಡಿಕೆ, ನಿಖಿಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.…

Read More

ಬೆಂಗಳೂರು: ಸಾಂಸ್ಕ್ರತಿಕ ನಗರಿ ಮೈಸೂರು ಜನತೆಗೆ ಗುಡ್ ನ್ಯೂಸ್ ಎನ್ನುವಂತೆ, ಶೀಘ್ರವೇ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಅಂತ ಸಾಗಿರೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಮೈಸೂರಿನಲ್ಲಿ ಸುಸಜ್ಜಿತ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತದೆ. ಸುಮಾರು 14 ಎಕರೆ ಜಾಗದಲ್ಲಿ ಅಂದಾಜು ರೂ.120 ಕೋಟಿ ವೆಚ್ಚದಲ್ಲಿ ಸಮಗ್ರ ಸಾರಿಗೆ ಸೌಲಭ್ಯ ಕಲ್ಪಿಸಲು ಪಾರಂಪರಿಕ ಹಾಗೂ ಆಧುನಿಕ ವಿನ್ಯಾಸ ಒಳಗೊಂಡಂತೆ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ ಎಂದಿದ್ದಾರೆ. ಮೈಸೂರು ನಗರದ ಹೃದಯ ಭಾಗದ ಇಕ್ಕಟ್ಟಾದ ಜಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣ (ಸಬ್ ಅರ್ಬನ್)ದ ಮೇಲಿನ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬನ್ನಿಮಂಟಪದಲ್ಲಿರುವ ಡಿಪೋ ಪಕ್ಕದ ಜಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹೊರತುಪಡಿಸಿದರೆ ಅತೀ ಹೆಚ್ಚಾಗಿ…

Read More

ಶಿವಮೊಗ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದು ಬಂದಿದೆ. ಇಂತಹ ಕೀಚಕ ಕೃತ್ಯ ನಡೆಸಿದಂತ ಶಾಲಾ ಮುಖ್ಯಸ್ಥನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿರುವಂತ ಘಟನೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಹಿಂದೆಯೂ ಶಾಲೆಯಲ್ಲಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಸಾಗರದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇಂದು ಮತ್ತೊಂದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕೇಸ್ ಹಾಗೂ ಅಟ್ರಾಸಿಟಿ ಪ್ರಕರಣ ಕೂಡ ದಾಖಲಾಗಿದೆ. ಇಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದಂತ ಬೆಂಗಳೂರು ಮೂಲದ ವಿದ್ಯಾರ್ಥಿನಿ ಹಾಗೂ ಪೋಷಕರು ಕಳೆದ ನಾಲ್ಕು ತಿಂಗಳಿನಿಂದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ಮಂಜಪ್ಪ ಅವರು ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಈ…

Read More

ಶಿವಮೊಗ್ಗ: ಈ ಹಿಂದೆಯೂ ಶಾಲೆಯಲ್ಲಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಸಾಗರದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇಂದು ಮತ್ತೊಂದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕೇಸ್ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಇಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದಂತ ಬೆಂಗಳೂರು ಮೂಲದ ವಿದ್ಯಾರ್ಥಿನಿ ಹಾಗೂ ಪೋಷಕರು ಕಳೆದ ನಾಲ್ಕು ತಿಂಗಳಿನಿಂದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ಮಂಜಪ್ಪ ಅವರು ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಈ ಪ್ರಕರಣದ ಬಳಿಕ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್, ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ವನಶ್ರೀ ವಸತಿ ವಿದ್ಯಾಲಯಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಪೋಕ್ಸೋ ಕೇಸ್ ದಾಖಲಾದ ಬಳಿಕ ಆರೋಪಿ ವನಶ್ರೀ ಮಂಜಪ್ಪ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವರದಿ:…

Read More

ಚಿತ್ರದುರ್ಗ : ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. 2024ರ ನ.06 ರಿಂದ 26 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುತ್ತದೆ. ನ.06ರ ಇಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ. ನ.12ರಂದು ಮಂಗಳವಾರ ನಾಮ ಪತ್ರ ಸಲ್ಲಿಸಲು ಕೊನೆಯ ದಿನ. ನ.13ರಂದು ಬುಧವಾರ ನಾಮಪತ್ರಗಳ ಪರಿಶೀಲನೆ, ನ.15ರಂದು ಶುಕ್ರವಾರ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ನ.23ರಂದು ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮರು ಮತದಾನ ಅವಶ್ಯವಿದ್ದರೆ ನ.25ರಂದು ಸೋಮವಾರ ನಡೆಸಲಾಗುವುದು. ನ.26ರಂದು ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ನ.26ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಹಾಗೂ ಸದಸ್ಯ ಸ್ಥಾನಗಳ ವಿವರ ಹೀಗಿದೆ ಮೊಳಕಾಲ್ಮುರು ತಾಲ್ಲೂಕು –  ಜಹಗೀರ್ ಬುಡ್ಡೇನಹಳ್ಳಿ…

Read More

ಚಿತ್ರದುರ್ಗ : ಕಳೆದ ಅಕ್ಟೋಬರ್ ಮಾಹೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಉಂಟಾದ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷಾ ತಂಡವು ಸ್ಥಳ ಪರಿಶೀಲನೆ ನಡೆಸಿ, ಬೆಳೆ ಹಾನಿ ಕ್ಷೇತ್ರಗಳ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಒಟ್ಟು 914.45 ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80 ತೋಟಗಾರಿಕೆ ಬೆಳೆ ಸೇರಿ ಒಟ್ಟು 1,156.25 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 172.77 ಹೆಕ್ಟೇರ್ ಕೃಷಿ, 94.50 ತೋಟಗಾರಿಕೆ ಸೇರಿ 267.27 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 478.47 ಹೆಕ್ಟೇರ್ ಕೃಷಿ ಬೆಳೆ, 89.40 ಹೆಕ್ಟೇರ್ ತೋಟಗಾರಿಕೆ ಸೇರಿ 567.87 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 162.50 ಹೆಕ್ಟೇರ್ ಕೃಷಿ,…

Read More

ಬೆಂಗಳೂರು: ಪಿಎಸ್ಐ ಪರೀಕ್ಷೆಯ ಪತ್ರಿಕೆ-1 ಮತ್ತು 2ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ವಿವರ ಇರುವ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ಪ್ರಕಟಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ದಿನಾಂಕ 03-10-2024ರಂದು ನಡೆದ ಪಿಎಸ್ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು https://cetonline.karnataka.gov.in/vaoresult/resultdescomr.aspx ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದಿದೆ. ಅಭ್ಯರ್ಥಿಗಳು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಿರುವ ಲಿಂಕ್ ಮೂಲಕ ದಿನಾಂಕ 09-11-2024ರ ಸಂಜೆ 5.30ರ ಒಳಗಾಗಿ ಸಲ್ಲಿಸಬಹುದು. ಬೇರೆ ಯಾವುದೇ ಇತರೆ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದಿದೆ. ಇನ್ನೂ ವಿಶೇಷ ಸೂಚನೆ ಎನ್ನುವಂತೆ ದಿನಾಂಕ 06-11-2024ರಂದು ಪ್ರಕಟಿಸಿರುವ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಮಾತ್ರ ಲಿಂಕ್ ಮೂಲಕ ಸಲ್ಲಿಸುವುದು. ಈಗಾಗಲೇ ಕೀ ಉತ್ತರಗಳನ್ನು ಅಂತಿಮಗೊಳಿಸಿದ್ದು, ಕೀ ಉತ್ತರಗಳಇಗೆ ಯಾವುದೇ ಆಕ್ಷೇಪಣೆಗಳ್ನು ಸಲ್ಲಿಸಿದರೂ ಪರಿಗಣಿಸುವುದಿಲ್ಲ ಎಂದಿದೆ. https://kannadanewsnow.com/kannada/tele-manas-helpline-launched-for-mental-health-in-the-state-who-can-call/ https://kannadanewsnow.com/kannada/bengaluru-contract-employee-suspended-for-keeping-mobile-phone-in-toilet-of-jayadeva-hospital/

Read More

ಬೆಂಗಳೂರು: ನಗರದ ಜಯದೇವ ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಮಹಿಳೆಯರ ಅರೆನಗ್ನ ವೀಡಿಯೋಗಳನ್ನು ಚಿತ್ರಿಸಿಕೊಳ್ಳುತ್ತಿದ್ದಂತ ಗುತ್ತಿಗೆ ನೌಕರನನ್ನು ಅಮಾನತುಗೊಳಿಸಿ, ಜಯದೇವ ಹೃದ್ರೋಗ ಸಂಸ್ಥೆ ಆದೇಶಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್‌ ಫೋನ್‌ ಇಟ್ಟು ಮಹಿಳೆಯರ ಖಾಸಗಿ ವಿಡಿಯೋವನ್ನು ಸೆರೆ ಹಿಡಿಯುತ್ತಿದ್ದ ಆರೋಪಿಯನ್ನು ಮಹಿಳಾ ಸಿಬ್ಬಂದಿಗಳೇ ರೆಡ್‌ ಹ್ಯಾಂಡ್‌ ಹಿಡಿದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಘಟನೆಗೆ ಸಂಬಂಧಿಸಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಆಸ್ಪತ್ರೆಯ ನಿರ್ದೇಶಕರಿಗೆ ಸೂಚಿಸಿದ್ದರು. ಆರೋಪಿ ಯಲ್ಲಾಲಿಂಗ ಅವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ದೂರು ದಾಖಲಾದ ಬಳಿಕ ಸಂಸ್ಥೆಯ ಪೋಷ್ ಸಮಿತಿ ಎದುರು ಅವರನ್ನು ವಿಚಾರಣೆಗೆ ಒಳಪಡಿಸಿ, ಅಮಾನತು ಮಾಡಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. ಆರೋಪಿಯನ್ನು ತಿಲಕ್‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/good-news-for-workers-in-the-state-e-shram-priority-ration-card-distribution-begins-across-the-state/ https://kannadanewsnow.com/kannada/tele-manas-helpline-launched-for-mental-health-in-the-state-who-can-call/

Read More

ಬೆಂಗಳೂರು: ಕರ್ನಾಟಕದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ನಿವಾರಣೆಗೆ ಟೆಲಿ ಮನಸ್ ಆರಂಭಿಸಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಟೆಲಿ ಮನಸ್ ಪರಿಹಾರ ನೀಡಲಿದೆ. ಹಾಗಾದ್ರೇ ಯಾರು ಕರೆ ಮಾಡಬಹುದು ಎನ್ನುವ ಬಗ್ಗೆ ಮುಂದೆ ಓದಿ. ಜೀವನದಲ್ಲಿ ಒತ್ತಡ ಸಾಮಾನ್ಯ. ಕೆಲಸದ ಒತ್ತಡ, ಸಂಸಾರದ ಒತ್ತಡ ಹೀಗೆ ನೆಮ್ಮದಿ ಕೆಡೆಸಿಕೊಳ್ಳಲು ಸಾಕಷ್ಟು ವಿಚಾರಗಳು ಇವೆ. ಆದ್ರೆ, ಹೆಚ್ಚಿನ ಒತ್ತಡವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಇಂತಹ ಸಮಸ್ಯೆಗಳಿಗೆ ಸಾವು ಕೂಡ ಪರಿಹಾರವಲ್ಲ. https://twitter.com/KarnatakaVarthe/status/1854101772383772706 ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ. 14416ಕ್ಕೆ ಕರೆ ಮಾಡಿ ಮಾತನಾಡಿ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ಒತ್ತಡದಿಂದ ವಿಮುಕ್ತರಾಗಿ. https://twitter.com/KarnatakaVarthe/status/1854119788995662209 ಯಾರು ಕರೆ ಮಾಡಬಹುದು? ಕೌಟುಂಬಿಕ ಸಮಸ್ಯೆಗೆ ಒಳಗಾದವರು, ಪರೀಕ್ಷೆ ಒತ್ತಡಕ್ಕೆ ಒಳಗಾದವರು, ಆತ್ಮಹತ್ಯೆ ಆಲೋಚನೆಗಳಿಗೆ ಒಳಗಾದವರು, ಆರ್ಥಿಕ ಒತ್ತಡದಲ್ಲಿರುವವರು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿದವರು, ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಸಮಸ್ಯೆ ಪರಿಹಾರಕ್ಕಾಗಿ ಸಹಾಯವಾಣಿ ಸಂಖ್ಯೆ 14416ಗೆ ಕರೆ ಮಾಡಿ, ಸಹಾಯ…

Read More

ಬಳ್ಳಾರಿ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ನ.13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ತಿಳಿಸಿದ್ದಾರೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪವ ಹಾಗೂ ಇತ್ಯಾದಿಗಳನ್ನು ನ.11 ರೊಳಗಾಗಿ ತಿಳಿಸಬಹುದು. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-workers-in-the-state-e-shram-priority-ration-card-distribution-begins-across-the-state/ https://kannadanewsnow.com/kannada/metro-services-on-this-route-in-bengaluru-to-resume-from-tomorrow-heres-the-schedule-ticket-prices/

Read More