Author: kannadanewsnow09

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯ ಕುರಿತು ಕ್ವಾಂಟಿಟಿಗಿಂತ ಕ್ವಾಲಿಟಿ ಬಗ್ಗೆ ಚರ್ಚೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅತ್ಯಂತ ಸುದೀರ್ಘ ಅವಧಿಗೆ ಸಿಎಂ ಆಗಿ ಕೆಲಸ ಮಾಡಿದ್ದಾರೆ ಎಂದು ಕೆಲವರು ಮಾಡುತ್ತಿದ್ದಾರೆ. ಎಷ್ಟು ದಿನ ಮುಖ್ಯಮಂತ್ರಿ ಆಗಿದ್ದೀರಿ ಎನ್ನುವುದಕ್ಕಿಂತ ಅಷ್ಟು ದಿನಗಳಲ್ಲಿ ಏನು ಸಾಧನೆ ಮಾಡಿದ್ದೀರಿ, ರಾಜ್ಯವನ್ನು ಯಾವ ಪ್ರಗತಿಯಲ್ಲಿ ತೆಗೆದುಕೊಂಡು ಹೋಗಿದ್ದೀರಿ, ನಿಮ್ಮ ಆಡಳಿತ ಅವಧಿಯಲ್ಲಿ ಎಷ್ಟು ಜನ ಬಡವರು, ಹಿಂದುಳಿದವರಿಗೆ ಒಳ್ಳೆಯದಾಗಿದೆ. ಒಟ್ಟಾರೆ ರಾಜ್ಯದ ಆರ್ಥಿಕತೆ ಏನು ಸುಧಾರಣೆ ಆಗಿದೆ ಎನ್ನುವುದು ಬಹಳ ಮುಖ್ಯ ಅದು ಚರ್ಚೆ ಆಗಬೇಕಿದೆ. ಕ್ವಾಂಟಿಟಿಗಿಂತ ಕ್ವಾಲಿಟಿ ಬಗ್ಗೆ ಚರ್ಚೆಯಾಗಬೇಕು ಎಂದು ಹೇಳಿದರು. ಕಪ್ಪು ಚುಕ್ಕೆ ಬಳ್ಳಾರಿಯಲ್ಲಿನ ಗಲಾಟೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಬೀದರ್, ಬಳ್ಳಾರಿಯಲ್ಲಿ ಆಗುತ್ತಿರುವ ಬೆಳವಣಿಗೆ ಸರಿಯಾದ್ದಲ್ಲ, ಜನಪ್ರತಿನಿಧಿಗಳಿಗೆ ಶೋಭೆ ತರುವಂಥದ್ದಲ್ಲಾ, ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ಇರುವುದು ಸಾಮಾನ್ಯ ಅದನ್ನು ಗೌರವಯುತ…

Read More

ಚಿತ್ರದುರ್ಗ: ಜಿಲ್ಲೆಯ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯೊಂದಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿಯ ಉಪಾಧ್ಯಾ ಹೋಟೆಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರೊಂದು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಮುಂದೆ ಸಾಗುತ್ತಿದ್ದಂತ ಲಾರಿಯೊಂದಕ್ಕೆ ಹಿಂಬದಿಯಾಗಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ತಮಿಳುನಾಡು ನೋಂದಣಿ ಸಂಖ್ಯೆ ಹೊಂದಿರುವಂತ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರಿನಲ್ಲಿ ಇದ್ದಂತ ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಐಮಂಗಳ ಠಾಣೆಯ ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ದೀಪು, ಭೀಮನಗೌಡ ಪಾಟೀಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ನಜ್ಜು ಗುಜ್ಜಾಗಿದ್ದಂತ ಕಾರಿನಲ್ಲಿ ಸಿಲುಕಿದ್ದಂತ ಮಹಿಳೆಯ ಮೃತದೇಹವನ್ನು ಹೊರ…

Read More

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಮೂಲಕ ಸಚಿವ ಜಮೀರ್ ಅಹ್ಮದ್ ಗೆ ಶಾಕ್ ನೀಡಲಾಗಿದೆ. ಇಂದು ಆದಾಯ ತೆರಿಗೆ ಇಲಾಖೆಗೆ ತೆರಳಿದಂತ ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ಅವರು, ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾರತೀಯ ರಿಸರ್ವ್ ಬ್ಯಾಂಕ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬುದಾಗಿ ದೂರು ನೀಡಲಾಗಿದೆ. ಅಂದಹಾಗೇ ತೇಜಸ್ ಗೌಡ ಎಂಬುವರು ನೀಡಿರುವಂತ ದೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿಯಲ್ಲಿ ಮೃತಪಟ್ಟಂತ ರಾಜಶೇಖರ್ ಅವರ ಕುಟುಂಬಕ್ಕೆ ಪರಿಹಾರವಾಗಿ 25 ಲಕ್ಷ ಹಣವನ್ನು ನಗದು ರೂಪದಲ್ಲಿ ನೀಡಿದ್ದಾರೆ. ಇದು ಆರ್ ಬಿ ಐ ನಿಯಮವಾಳಿಗೆ ವಿರುದ್ಧವಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/nita-m-ambani-felicitates-men-women-and-blind-womens-cricket-world-cup-winners/ https://kannadanewsnow.com/kannada/do-you-know-what-a-woman-desires-from-her-husband/

Read More

ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (ಎನ್.ಐ.ಎ.ಎಲ್) ಹಸ್ತಾಂತರಿಸಿದರು.. ಭಾರತದಲ್ಲಿ ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ. ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ ಲೆಂಡ್ ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ ಈ ಮಾದರಿಯ ಎರಡು ವಾಹನಗಳ ಕೀಲಿಕೈಗಳನ್ನು ನೋಯ್ಡಾ ವಿಮಾನ ನಿಲ್ದಾಣದ ಪ್ರತಿನಿಧಿ ಪ್ರದೀಪ್ ರಾಣಾ ಅವರಿಗೆ ನೀಡಿದರು. ವಿಮಾನದ ಟಯರ್ ಗಳಿಗೆ ಅಪಾಯಕಾರಿಯಾಗಬಹುದಾದ ಮೊಳೆಗಳು ಹಾಗೂ ಚೂಪಾದ ಲೋಹದ ತುಣುಕುಗಳನ್ನು ರನ್ ವೇ ಮೇಲಿಂದ ತೆರವುಗೊಳಿಸುವ ಕಾರ್ಯವನ್ನು ಈ…

Read More

ಮುಂಬೈ : ಪುರುಷರು, ಮಹಿಳೆಯರು ಮತ್ತು ಅಂಧ ಮಹಿಳೆಯರ ಸಹಿತ ಭಾರತದ ಮೂರೂ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡಗಳನ್ನು ಮುಂಬೈನಲ್ಲಿ ಸೋಮವಾರ ರಾತ್ರಿ ನಡೆದ ‘ಯುನೈಟೆಡ್ ಇನ್ ಟ್ರಯಂಫ್‌’ (ವಿಜಯೋತ್ಸವದಲ್ಲಿ ಒಗ್ಗೂಡು) ಎರಡನೇ ಆವೃತ್ತಿಯ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಪ್ರತಿಯೊಬ್ಬ ಭಾರತೀಯನ ಪರವಾಗಿ ನಾವು ಧನ್ಯವಾದಗಳನ್ನು ಅರ್ಪಿಸಿದೆವು ಎಂದು ನೀತಾ ಎಂ. ಅಂಬಾನಿ ಅವರು ಹೇಳಿದರು. “ನಾವು ಹೊಸ ವರ್ಷವನ್ನು ಬಹಳ ವಿಶೇಷ ಸಂದರ್ಭದೊಂದಿಗೆ ಪ್ರಾರಂಭಿಸಿದ್ದೇವೆ ಎಂದು ನಾನು ಭಾವಿಸುತ್ತೇನೆ. ಪುರುಷರ ಕ್ರಿಕೆಟ್ ತಂಡ, ಮಹಿಳಾ ಕ್ರಿಕೆಟ್ ತಂಡ ಮತ್ತು ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡ ಒಳಗೊಂಡಂತೆ ಮೂರು ಕ್ರಿಕೆಟ್ ತಂಡಗಳು ಒಂದೇ ಸೂರಿನಡಿ ಸೇರಿದವು. ನಮಗೆ ಅಪಾರ ಸಂತೋಷ ಮತ್ತು ಆನಂದವನ್ನು ನೀಡಿದ್ದಕ್ಕಾಗಿ ನಾವು ಅವರನ್ನು ಪ್ರತಿಯೊಬ್ಬ ಭಾರತೀಯನ ಪರವಾಗಿ ಸನ್ಮಾನಿಸಿದೆವು” ಎಂದು ನೀತಾ ಎಂ. ಅಂಬಾನಿ ಹೇಳಿದರು. ಕ್ರೀಡೆಯ ವಿಶಿಷ್ಟ ಶಕ್ತಿ ಮತ್ತು ಅದರ ಪರಿವರ್ತನೆಯ ಪ್ರಭಾವದ ಬಗ್ಗೆ ಮಾತನಾಡುತ್ತಾ ನೀತಾ ಎಂ. ಅಂಬಾನಿ ಅವರು, “ಕ್ರೀಡೆಯು ಹೃದಯಗಳನ್ನು…

Read More

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವಂತ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬೆಳಗುಂದಿಯ ಬಸವಂತ ಕಡೋಲ್ಕರ್ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಸಚಿವೆ ಹಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕ ಬಸವಂತ ಆಗಿದ್ದಾರೆ. ಬೈಕ್ ಮೇಲೆ ಬಂದಂತ ಇಬ್ಬರು ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಚಾಲಕ ಬಸವಂತನ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಎದೆ, ಭುಜ ಸೇರಿದಂತೆ ನಾಲ್ಕು ಕಡೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

Read More

ಬೆಂಗಳೂರು: ಬಳ್ಳಾರಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರುವ ಬಗ್ಗೆ ಅಲ್ಲಿನ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಬಳ್ಳಾರಿಯಲ್ಲಿ ಗನ್ ಮ್ಯಾನ್ ಹಾರಿಸಿದ ಗುಂಡಿಗೆ ಬಲಿಯಾದ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಲಾಗಿದೆ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ. ತಮ್ಮ ಹೇಳಿಕೆಯ ಬಗ್ಗೆ ಗೃಹ ಸಚಿವ ಪರಮೇಶ್ವರ ಅವರು ನೀಡಿದ್ದ ಪ್ರತಿಕ್ರಿಯೆ ಬಗ್ಗೆ ಖಾರವಾಗಿ ತಿರುಗೇಟು ನೀಡಿರುವ ಕೇಂದ್ರ ಸಚಿವರು; ಗೃಹ ಸಚಿವ ಪರಮೇಶ್ವರ ಅವರೇ, ಬಳ್ಳಾರಿಯಲ್ಲಿ ಕಗ್ಗೊಲೆಯಾದ ನಿಮ್ಮದೇ ಪಕ್ಷದ ನತದೃಷ್ಟ ಕಾರ್ಯಕರ್ತನ ಡಬಲ್ ಪೋಸ್ಟ್ ಮಾರ್ಟಂ ಕಥಾನಕದ ಬಗ್ಗೆ ನಾನು ಹೇಳಿದ್ದು ಸತ್ಯ. ಸತ್ತ ಶರೀರವನ್ನೂ ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುವ ನಿಮ್ಮ ಕೀಳು ನಡವಳಿಕೆ ಕುರಿತು ನಾನು ಹೇಳಿದ್ದು ಅಕ್ಷರಶಃ ನಿಜ ಎಂದಿದ್ದಾರೆ. ಡಬಲ್ ಪೋಸ್ಟ್ ಮಾರ್ಟಂ…

Read More

ಬೆಂಗಳೂರು : ಮಾಜಿ‌ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜು ಅರಸು ಅವರ 2792 ದಿನಗಳನ್ನು ಸರಿಗಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಅಭಿನಂದನೆ ಸಲ್ಲಿಸಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದಾಖಲೆ ಮುರಿಯಲು ಸಿದ್ದರಾಮಯ್ಯನವರಿಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲಾ ಅವರಿಗೂ ಅಭಿನಂದನೆ ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಇಂತಹ ಅವಕಾಶಗಳು ಸಾಧ್ಯ. ದೇವರಾಜ ಅರಸು ಅವರಿಗೂ ಅವಕಾಶ ನೀಡಲಾಗಿತ್ತು. ಈಗ ಸಿದ್ದರಾಮಯ್ಯ ಅವರಿಗೂ ಅವಕಾಶ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಇಂತಹ ಬೆಳವಣಿಗೆಗಳನ್ನು ನೋಡಬಹುದು. ಬಡವರು ಮತ್ತು ಅಭಿವೃದ್ಧಿಯ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಇರುವ ದೂರದೃಷ್ಟಿಯ ಬದ್ಧತೆ ಮತ್ತು ಸಿದ್ಧಾಂತದಿಂದ ಇದೆಲ್ಲ ಸಾಧ್ಯವಾಗಿದೆ ಎಂದು ಹೇಳಿದರು. ಬಳ್ಳಾರಿ ಘಟನೆಯ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ವಿಚಾರವಾಗಲಿ ತಿಳಿದುಕೊಂಡು ಮಾತನಾಡಬೇಕು. ಇಲ್ಲವಾದರೆ ಬೇರೆ ರೀತಿಯ ಪರಿಣಾಮ ಆಗುತ್ತದೆ. ನನ್ನನ್ನು ಸೇರಿದಂತೆ ರಾಜಕೀಯ…

Read More

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಆಧಾರ್ ಪಿವಿಸಿ ಕಾರ್ಡ್ ಪಡೆಯಲು ಸೇವಾ ಶುಲ್ಕವನ್ನು ಜನವರಿ 1, 2026 ರಿಂದ ಜಾರಿಗೆ ಬರುವಂತೆ ಅಧಿಕೃತವಾಗಿ ಹೆಚ್ಚಿಸಿದೆ. ತಮ್ಮ ಗುರುತಿನ ಚೀಟಿಯ ಬಾಳಿಕೆ ಬರುವ, ಪಾಕೆಟ್ ಗಾತ್ರದ ಆವೃತ್ತಿಯನ್ನು ಆರ್ಡರ್ ಮಾಡುವ ನಿವಾಸಿಗಳು ಈಗ ರೂ. 75 ಪಾವತಿಸಬೇಕಾಗುತ್ತದೆ, ಇದು ಹಿಂದಿನ ದೀರ್ಘಕಾಲದ ಶುಲ್ಕ ರೂ. 50 ರಿಂದ ಹೆಚ್ಚಾಗಿದೆ. ಈ ಪರಿಷ್ಕರಣೆಯು ಪಿವಿಸಿ ಕಾರ್ಡ್ ಸೇವೆಗೆ 2020 ರಲ್ಲಿ ರಾಷ್ಟ್ರವ್ಯಾಪಿ ಬಿಡುಗಡೆಯಾದ ನಂತರ ಮೊದಲ ಬೆಲೆ ಏರಿಕೆಯಾಗಿದೆ. ಪರಿಷ್ಕೃತ ಶುಲ್ಕಗಳು myAadhaar ವೆಬ್‌ಸೈಟ್ ಅಥವಾ mAadhaar ಮೊಬೈಲ್ ಅಪ್ಲಿಕೇಶನ್ ಮೂಲಕ ಸಲ್ಲಿಸಲಾದ ವಿನಂತಿಗಳಿಗೆ ಮತ್ತು ಆ ದಿನಾಂಕದಿಂದ ಹೊಸ ಆರ್ಡರ್‌ಗಳನ್ನು ಮಾಡುವ ಎಲ್ಲಾ ಬಳಕೆದಾರರಿಗೆ ಅನ್ವಯಿಸುತ್ತದೆ. ಆಧಾರ್ ಪಿವಿಸಿ ಕಾರ್ಡ್ ಬೆಲೆ ಪರಿಷ್ಕರಣೆ 75 ರೂ.ಗಳ ಪರಿಷ್ಕೃತ ಶುಲ್ಕವು ತೆರಿಗೆಗಳು ಮತ್ತು ವಿತರಣಾ ಶುಲ್ಕಗಳನ್ನು ಒಳಗೊಂಡಿದೆ. ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ದ ಇತ್ತೀಚಿನ ಜ್ಞಾಪಕ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೀದರ್ ಜಿಲ್ಲೆಯಲ್ಲಿ ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಶ್ರೀ ಪ್ರಭುರಾವ ಕಂಬಳಿವಾಲೆ ಟ್ರಸ್ಟ್‌ಗಳನ್ನು ರಚಿಸಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಜಿಲ್ಲಾಧಿಕಾರಿ, ಬೀದರ್‌ ಇವರ ದಿನಾಂಕ:05.12.2023ರ ಪತ್ರದಲ್ಲಿ, ದಿನಾಂಕ:07.11.2023ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ ಕರ್ನಾಟಕ ಏಕೀಕರಣ ಚಳುವಳಿ ಮತ್ತು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಬೀದರ್ ಜಿಲ್ಲೆಯ ಮಹಾನ್ ಸಾಧಕರಾದ ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಇವರ ಹೆಸರಿನಲ್ಲಿ ಟ್ರಸ್ಟ್ ರಚನೆಗಾಗಿ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಿದ್ದರು ಎಂದಿದ್ದಾರೆ. ಅದರನ್ವಯ, 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಹೊಸದಾಗಿ ರಚನೆಯಾಗುವ ಟ್ರಸ್ಟ್‌ಗಳಿಗೆ ರೂ.35.00 ಲಕ್ಷಗಳನ್ನು ಅವಕಾಶ ಮಾಡಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿ, ಬೀದರ್ ಜಿಲ್ಲೆ ಇವರ ಪುಸ್ತಾವನೆಯಂತೆ ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಇವರ ಹೆಸರಿನಲ್ಲಿ ಟ್ರಸ್ಟ್‌ಗಳನ್ನು ರಚಿಸುವ ಕುರಿತು ಸರ್ಕಾರದ ಹಂತದಲ್ಲಿ ತೀರ್ಮಾನಿಸುವಂತೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು…

Read More