Subscribe to Updates
Get the latest creative news from FooBar about art, design and business.
Author: kannadanewsnow09
ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಿಮ್ಮನ್ನು ಕಾಡುತ್ತಿದೇಯೆ..!! ಸಾಲ ಲಕ್ಷ ಇರಲಿ ಕೋಟಿ ಇರಲಿ ಎಲೆ ಲವಂಗ ಏಲಕ್ಕಿ ಪ್ರಯೋಗ ಮಾಡಿ । ಸಾಲ ತೀರೋದು ಗ್ಯಾರಂಟಿ 1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ…
ಇಂತಹ ಕೃತ್ಯಗಳು ಭಾರತವನ್ನು ದುರ್ಬಲಗೊಳಿಸುವುದಿಲ್ಲ: ಕೆನಡಾದಲ್ಲಿನ ಹಿಂದೂ ದೇವಾಲಯದ ಮೇಲಿನ ದಾಳಿಗೆ ಮೋದಿ ಪ್ರತಿಕ್ರಿಯೆ
ನವದೆಹಲಿ: ಕೆನಡಾದ ಹಿಂದೂ ದೇವಾಲಯದ ಮೇಲೆ ನಡೆದ ಉದ್ದೇಶಪೂರ್ವಕ ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕೆನಡಾ ಸರ್ಕಾರವು ನ್ಯಾಯವನ್ನು ಖಚಿತಪಡಿಸುತ್ತದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಎಂದು ನಿರೀಕ್ಷಿಸುತ್ತೇನೆ ಎಂದು ಸೋಮವಾರ ಹೇಳಿದ್ದಾರೆ. ಉಭಯ ದೇಶಗಳ ನಡುವೆ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದಲ್ಲಿ ಅಪರೂಪದ ಹೇಳಿಕೆಯಲ್ಲಿ, ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಪ್ರಯತ್ನಗಳು “ಅಷ್ಟೇ ಭಯಾನಕ” ಎಂದು ಮೋದಿ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಹೇಳಿದ್ದಾರೆ. https://twitter.com/narendramodi/status/1853442198575952031 ಒಂಟಾರಿಯೊದ ಬ್ರಾಂಪ್ಟನ್ನಲ್ಲಿರುವ ದೇವಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರವನ್ನು ಉಗ್ರಗಾಮಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ. ಅಲ್ಲದೇ ಇಂತಹ ಕೃತ್ಯಗಳು ಭಾರತದ ಸಂಕಲ್ಪವನ್ನು ದುರ್ಬಲಗೊಳಿಸುವುದಿಲ್ಲ ಎಂಬುದಾಗಿ ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ದಾಳಿಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. https://kannadanewsnow.com/kannada/notification-for-by-elections-to-urban-local-body-vacant-seats-in-the-state-released/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/
ಚಿತ್ರದುರ್ಗ: ಚಿತ್ರದುರ್ಗ ಹಾಗೂ ಚಳ್ಳಕೆರೆ ನಗರಸಭೆ ಮತ್ತು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಚಿತ್ರದುರ್ಗ ನಗರಸಭೆಯ 15ನೇ ವಾರ್ಡ್-ಹಿಂದುಳಿದ ವರ್ಗ-(ಎ), ಚಳ್ಳಕೆರೆ ನಗರಸಭೆಯ 4ನೇ ವಾರ್ಡ್-ಸಾಮಾನ್ಯ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯ ಜಾಗನೂರುಹಟ್ಟಿಯ 1ನೇ ವಾರ್ಡ್-ಪರಿಶಿಷ್ಟ ಜಾತಿಗೆ ಮೀಸಲಾತಿ ನಿಗಧಿಯಾಗಿದೆ. 2024ರ ನ.4 ಸೋಮವಾರದಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ನ.11 ಸೋಮವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ನ.12 ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.14 ಗುರುವಾರ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ನ.23 ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಒಂದು ವೇಳೆ ಮರು ಮತದಾನದ ಅವಶ್ಯಕತೆ ಬಿದ್ದಲ್ಲಿ ನ.25 ಸೋಮವಾರ ಮರು ಮತದಾನ ನಡೆಸಲಾಗುವುದು. ನ.26 ಮಂಗಳವಾರ ಸಂಬಂಧಪಟ್ಟ ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಸಲಾಗುವುದು. ವಿಜೇತ ಅಭ್ಯರ್ಥಿಯ ಘೋಷಣೆ ತರುವಾಯ ಚುನಾವಣೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲಾಗುವುದು.…
ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 5, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 16,382.52 ಗೌರವ ಸಂಭಾವನೆ ನೀಡಲಾಗುತ್ತದೆ. ಗ್ರಾಮ ಪಂಚಾಯತವಾರು ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಮೀಸಲಾತಿ ವಿವರ ಹಾಗೂ ನಿಬಂಧನೆಗಳನ್ನು ತಿಳಿದುಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ ಫೋರ್ಟಲ್ https://zpdharwad.karnataka.gov.in ಗೆ ಅಥವಾ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/to-the-attention-of-farmers-in-the-state-registration-for-crop-insurance-begins-register-without-fail/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/
ಬಳ್ಳಾರಿ : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ನೆಲಗಡಲೆ (ಶೇಂಗಾ), ಭತ್ತ ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ನೀರಾವರಿ ಬೆಳೆ ಮುಸುಕಿನ ಜೋಳ, ನೀರಾವರಿ/ಮಳೆಯಾಶ್ರಿತ ಬೆಳೆ ಸೂರ್ಯಕಾಂತಿ, ಕುಸುಮೆ, ಈರುಳ್ಳಿ ಮತ್ತು ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಸೂರ್ಯಕಾಂತಿ, ಈರುಳ್ಳಿ ಜಿಲ್ಲೆಯ ಬೆಳೆಗಳಾಗಿವೆ. ಬೆಳೆ ವಿಮೆಗೆ ಕೊನೆಯ ದಿನ: ಹಿಂಗಾರು ಹಂಗಾಮಿನ ಬೆಳೆಗಳಾದ ಜೋಳ, ಮುಸುಕಿನ ಜೋಳ, ಸೂರ್ಯಕಾಂತಿ, ಕುಸುಮೆ ಬೆಳೆಗಳಿಗೆ ಡಿ.16 ಆಗಿದೆ. ಅದರಂತೆ ಮಳೆಯಾಶ್ರಿತ…
ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ವ್ಯಾಪ್ತಿಯ ಡಿ.ಬಸಾಪುರ ಗ್ರಾಮದ ಚೆಕ್‌ಪೋಸ್ಟ್ನಲ್ಲಿ ಭಾನುವಾರ ಸೂಕ್ತ ದಾಖಲೆ ಇಲ್ಲದ 27,50,000 ರೂ. ನಗದು ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ಎಸ್‌ಎಸ್‌ಟಿ ತಂಡದ ಮುಖ್ಯಸ್ಥ ಅಲಗೇರಿ ಲಿಂಗಪ್ಪ ಅವರ ತಂಡವು ಜಪ್ತಿ ಮಾಡಿದ್ದು, 10 ಲಕ್ಷಕ್ಕಿಂತ ಹೆಚ್ಚು ಹಣ ಕಂಡುಬAದಿದ್ದರಿAದ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-groundnut-growers-in-the-state-procurement-begins-under-support-scheme/ https://kannadanewsnow.com/kannada/breaking-deeply-concerned-india-condemns-violence-against-hindus-in-canada/
ಬಳ್ಳಾರಿ: ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ಏಜೆನ್ಸಿ ವತಿಯಿಂದ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲಾಗುತ್ತಿದೆ ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ನಿಗಧಿಪಡಿಸಿದ ಬೆಂಬಲ ಬೆಲೆಯಂತೆ ಪ್ರತಿ ಕ್ವಿಂಟಾಲ್‌ಗೆ ರೂ.6789 ರಂತೆ ರೈತರಿಂದ ಖರೀದಿಸಲಾಗುತ್ತದೆ. ಜಿಲ್ಲೆಯ ವಿವಿಧೆಡೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಖರೀದಿ ಕೇಂದ್ರಗಳ ವಿಳಾಸ: ಬಳ್ಳಾರಿ ಎಪಿಎಂಸಿ ಆಡಳಿತ ಕಚೇರಿ- ಈರೇಶ (ಮೊ.7353155205), ಬಳ್ಳಾರಿ ತಾಲ್ಲೂಕಿನ ಕಪ್ಪಗಲ್ಲು ಗ್ರಾಮದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ನಿಯಮಿತ- ಈರೇಶ (ಮೊ.7353155205), ಸಿರುಗುಪ್ಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಬಸವರಾಜ (ಮೊ.9845166601. ಸಂಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಶಿವಲಿAಗಪ್ಪ (ಮೊ.9980676497), ಚೋರನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಮಲಿಯಪ್ಪ (ಮೊ.9945352466), ಕುರುಗೋಡಿನ ಪ್ರಾಥಮಿಕ ಕೃಷಿ ಪತ್ತಿನ…
ಬಳ್ಳಾರಿ : ಸಂಡೂರು ವಿಧಾನಸಭಾ ಉಪ ಚುನಾವಣೆಗೆ ನವೆಂಬರ್.13ರಂದು ಮತದಾನ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ನವೆಂಬರ್.11ರ ಸಂಜೆ 6ರಿಂದ ನವೆಂಬರ್.14ರ ಬೆಳಿಗ್ಗೆ 6 ಗಂಟೆಯವರೆಗೆ ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.13 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ರ‍್ತುಗಳು) ನಿಯಮಗಳು, 1967ರ ನಿಯಮ 10-ಬಿ ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಂಡೂರು ಕ್ಷೇತ್ರದಲ್ಲಿ ಹಾಗೂ ಈ ಕ್ಷೇತ್ರಕ್ಕೆ ಹೊಂದಿಕೊಂಡ ಕಂಪ್ಲಿ, ಕುರುಗೋಡು ಮತ್ತು ಬಳ್ಳಾರಿ ತಾಲ್ಲೂಕಗಳ 05 ಕಿ.ಮೀ ವ್ಯಾಪ್ತಿಯಲ್ಲಿ ನ.11 ರ ಸಂಜೆ 06 ಗಂಟೆಯಿಂದ ನ.14 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು…
ದಾವಣಗೆರೆ ; ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್‍ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆÉಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸತ್ಕದ್ದು. ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂ. ಸಂ.: 08182-220925 ನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ. https://kannadanewsnow.com/kannada/davanagere-by-election-slated-to-be-held-on-november-23-for-jagalur-town-panchayat-member-post/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/
ದಾವಣಗೆರೆ : ಜಗಳೂರು ಪಟ್ಟಣ ಪಂಚಾಯಿತಿಯ 9 ನೇ ವಾರ್ಡ್‍ಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಅಧಿಸೂಚನೆ ಹೊರಡಿಸಿದ್ದಾರೆ. ಹಿಂದುಳಿದ ವರ್ಗ `ಬ` ಗೆ ಮೀಸಲಿರುತ್ತದೆ. ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 11 ಕೊನೆಯ ದಿನ. ನ.12 ರಂದು ನಾಮಪತ್ರಗಳನು ಪರಿಶೀಲನೆ, ನ.14 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ನ.23 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನ ನಡೆಯಲಿದ್ದು ನ.26 ರಂದು ಚುನಾವಣಾ ಪ್ರಕ್ರಿಯೆಗಳು ಮುಕ್ತಾಯವಾಗಲಿವೆ. ಸದಸ್ಯರಾದ ಬಿ.ಟಿ.ರವಿಕುಮಾರ್ ಬಿನ್ ತಿಮ್ಮಾರೆಡ್ಡಿ ಇವರ ಸದಸ್ಯತ್ವವು ಹೈಕೋರ್ಟ್ ಆದೇಶದಂತೆ ರದ್ದಾಗಿದ್ದು ತೆರವಾದ ಈ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ. https://kannadanewsnow.com/kannada/for-farmers-attention-applications-invited-for-training-in-animal-husbandry-activities/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/