Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಜಿಲ್ಲೆಯಲ್ಲಿ ಅಕ್ರಮವಾಗಿ ಕರುಗಳ ಮಾರಾಟಕ್ಕೆ ಗ್ಯಾಂಗ್ ಮುಂದಾಗಿತ್ತು. ವಿಷಯ ತಿಳಿದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹೋಗ್ತಿದ್ದಂತೆ ಕರುಗಳನ್ನ ಬಿಟ್ಟು ಎಸ್ಕೇಪ್ ಆಗಿರುವಂತ ಘಟನೆ ತೆಂಡೆಕೆರೆ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ತೆಂಡೆಕೆರೆ ಗ್ರಾಮದ ಸಂತೆಯಲ್ಲಿ 50 ಕ್ಕೂ ಹೆಚ್ಚು ಕರುಗಳನ್ನ ಖರೀದಿಸಿ ಕಟ್ಟಡವೊಂದರಲ್ಲಿ ಕೂಡಿಟ್ಟದದ್ದರು. ವಿಷಯ ತಿಳಿದ ಮೈಸೂರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಹೀಗೆ ದಾಳಿ ಮಾಡ್ತಿದ್ದಂತೆ ಅಕ್ರಮ ಗೋ ಸಾಗಾಣಿಕೆ ಗ್ಯಾಂಗ್ ಸ್ಥಳದಿಂದ ಕಾಲ್ಕಿತ್ತು ಪರಾರಿಯಾಗಿದೆ. 50ಕ್ಕೂ ಹೆಚ್ಚು ಕರುಗಳನ್ನು ಹಿಂದೂ ಕಾರ್ಯಕರ್ತರು ರಕ್ಷಿಸಿದ್ದಾರೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಇದಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/couple-of-elephants-die-in-khanapur-minister-khandre-orders-investigation/ https://kannadanewsnow.com/kannada/breaking-kannada-rajyotsava-award-winning-veena-maker-penna-obalaya-passes-away-cm-condoles/
ಬೆಂಗಳೂರು : ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ನಿನ್ನೆ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ. ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಲು ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರು: ರಾಜ್ಯದ ಪ್ರತಿಯೊಂದು ಗ್ರಾಮದ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರನ್ನು ಸರ್ಕಾರ ನೇಮಕ ಮಾಡಿದೆ. ಅವರಿಗೆ ಸರ್ಕಾರ ಹಾಗೂ ಗ್ರಾಮೀಣ ಜನತೆಯ ನಡುವೆ ಕೊಂಡಿಯಾಗಿ ಕೆಲ ಕರ್ತವ್ಯಗಳನ್ನು ನಿರ್ವಹಿಸುವಂತ ಹೊಣೆಗಾರಿಕೆಯನ್ನು ನೀಡಲಾಗಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ಗ್ರಾಮಲೆಕ್ಕಿಗರ ಕರ್ತವ್ಯಗಳೇನು ಎಂಬುದುನ್ನು ಈ ಕೆಳಗಿದೆ ಸಂಪೂರ್ಣವಾಗಿ ಓದಿ. ಗ್ರಾಮಲೆಕ್ಕಾಧಿಕಾರಿಗಳನ್ನು ಒಂದು ಹಳ್ಳಿಗೆ ಅಥವಾ ಹಳ್ಳಿಗಳ ಗುಂಪಿಗೆ ನೇಮಕ ಮಾಡಲಾಗುತ್ತದೆ ಮತ್ತು ಅವರು ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಅಡಿಯಲ್ಲಿ ಅಥವಾ ಯಾವುದೇ ಕಾನೂನಿನಡಿಯಲ್ಲಿ ನಿಗಧಿಪಡಿಸಿದ ಎಲ್ಲಾ ಕರ್ತವ್ಯಗಳನ್ನು ಜಾರಿಯಲ್ಲಿರುವ ಇತರೆ ಕಾನೂನುಗಳನ್ವಯ ಕಾರ್ಯನಿರ್ವಹಿಸುತ್ತಾರೆ, ಸರ್ಕಾರ ನಿಗಧಿಪಡಿಸಿರುವ ಎಲ್ಲಾ ವಹಿಗಳು, ಲೆಕ್ಕ ಪತ್ರಗಳು ಮತ್ತು ಇತರೆ ದಾಖಲೆಗಳನ್ನು ನಿರ್ವಹಿಸಬೇಕು, ಕಂದಾಯ ಇಲಾಖೆಯ ತಾಲ್ಲೂಕಿನ ಉನ್ನತ ಅಧಿಕಾರಿಗಳು ಅಥವಾ ಜಿಲ್ಲೆಯ ಉನ್ನತ ಅಧಿಕಾರಿಗಳು ಕೇಳಿದ ಸಂಧರ್ಭದಲ್ಲಿ ಗ್ರಾಮದ ಅಭ್ಯುದಯಕ್ಕಾಗಿ ಸಂಭಂಧಿತ ದಾಖಲೆಗಳನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರದ ಉಪಯೋಗಕ್ಕೆ ನಿರ್ವಹಿಸಬೇಕಾಗುತ್ತದೆ. ಸರ್ಕಾರದ ನೋಟೀಸ್, ವರದಿಗಳು ಮತ್ತು ಇತ್ಯಾದಿಗಳನ್ನು ಸಾರ್ವಜನಿಕರಿಗೆ ಜಾರಿ ಮಾಡುವುದು ಇವರ…
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗಾದ್ರೇ ಅವರ ಕರ್ತವ್ಯಗಳು ಏನು ಎಂಬುದಾಗಿ ಮುಂದೆ ಓದಿ. 1) ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಕೆಲಸ ನಿರ್ವಹಿಸಲು ಹಾಗೂ ನೀರಿನ ಟ್ಯಾಂಕ್ ಭರ್ತಿಯಾದ ನಂತರ ನೀರು ಸರಬರಾಜನ್ನು ನಿಲ್ಲಿಸತಕ್ಕದ್ದು. 2) ನೀರಿನ ಮೇಲೆ ತೆರಿಗೆ ವಸೂಲಿ ಮಾಡತಕ್ಕದ್ದು ಹಾಗೂ ಬಿಲ್ ಕಲೆಕ್ಟಗೆ ತೆರಿಗೆ ವಸೂಲಾತಿ ವಿಷಯದಲ್ಲಿ ಸಹಕಾರ ನೀಡುವುದು. 3) ಕುಡಿಯುವ ನೀರು ಸರಬರಾಜು ಸ್ಥಾವರಗಳು ಮತ್ತು ಕೈಪಂಪು ಕೊಳವೆ ಬಾವಿಗಳ ಸಂರಕ್ಷಣೆ ಮತ್ತು ಕಾಲ ಕಾಲಕ್ಕೆ ಸ್ವಚ್ಛಗೊಳಿಸುವಿಕೆ. 4) ಪಂಪ್ ಹೌಸ್‌ನ ಮೀಟರ್ ರೀಡಿಂಗ್ ಪ್ರಗತಿ ನಿರ್ವಹಣೆಯನ್ನು ಪ್ರತಿ ಮಾಹೆ ರೀಡಿಂಗ್ ಲೆಡ್ಡಿರ್‌ನಲ್ಲಿ ನಮೂದಿಸತಕ್ಕದ್ದು ಹಾಗೂ ಸಣ್ಣಪುಟ್ಟ ದುರಸ್ತಿಗಳನ್ನು ಸ್ವತಃ ನಿರ್ವಹಿಸತಕ್ಕದ್ದು. 5) ಗ್ರಾಮಗಳ ಬೀದಿ ದೀಪಗಳ ದುರಸ್ತಿ ಸಮಯದಲ್ಲಿ ಸಹಕಾರ ನೀಡತಕ್ಕದ್ದು. 6) ಬೆಳಿಗ್ಗೆ ಮತ್ತು ಸಂಜೆ ಗ್ರಾಮಗಳ ಬೀದಿ ದೀಪಗಳನ್ನು ಸ್ವಿಚ್ ಆನ್ ಮತ್ತು ಸ್ವಿಚ್ ಆಫ್…
ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು. ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು. 2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು. ಶಾಸಕರೂ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಮತ್ತು ಸಚಿವರಾದ ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ ಸೇರಿ ಕೊಡವ ಸಮುದಾಯದ ಎಲ್ಲಾ…
ಬಳ್ಳಾರಿ: ರಾಜ್ಯಾಧ್ಯಂತ ನಿನ್ನೆ ಕೆ-ಸೆಟ್ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ಸಂದರ್ಭದಲ್ಲಿ ಕೆಇಎ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಗೆ ಹಾಜರಾದಂತ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿಯನ್ನೇ ಸಿಬ್ಬಂದಿಗಳು ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯದಂತ ಕೆ-ಸೆಟ್ ಪರೀಕ್ಷೆಗೆ 1.36 ಲಕ್ಷ ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರದ 316 ಕೇಂದ್ರಗಳಲ್ಲಿ ನಿನ್ನೆ ಕೆ-ಸೆಟ್ ಪರೀಕ್ಷೆ ನಡೆಯಿತು.ಬಳ್ಳಾರಿಯಲ್ಲಿ ಪರೀಕ್ಷಾ ಕೇಂದ್ರವೊಂದರಲ್ಲಿ ಕೆ-ಸೆಟ್ ಪರೀಕ್ಷೆಗೆ ಹಾಜರಾದಂತ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ, ಕೈಕಡಗ ಸೇರಿದಂತೆ ಮೈಮೇಲೆ ಹಾಕಿಕೊಂಡಿರೋ ದೇವರ ದಾರವನ್ನು ಬಿಡದೇ ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ. ಕೆ-ಸೆಟ್ ಪರೀಕ್ಷೆಯ ವೇಳೆಯಲ್ಲಿ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಹಾಗೂ ದೇವರ ದಾರ ಬಿಚ್ಚಿಸಿದ್ದರಿಂದ ಕೆಲ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಬಳಿಯಲ್ಲೇ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.…
ಬೆಂಗಳೂರು: “ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ತಿಳಿಸಿ. ನಿಮ್ಮ ರಾಜ್ಯದ ಅಭಿವೃದ್ಧಿಗಾಗಿ ಮತ ಚಲಾವಣೆ ಮಾಡಬೇಕು. ಮತವನ್ನು ವ್ಯರ್ಥ ಮಾಡಬಾರದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಉದ್ದೇಶಿಸಿ ಭಾನುವಾರ ಮಾತನಾಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನನಗೆ ದೊಡ್ಡ ಸ್ಥಾನ ಬೇಕು ಎಂದು ನೀವೆಲ್ಲರೂ ಹೇಳಿದ್ದೀರಿ. ನನಗೆ ಅದು ಮುಖ್ಯವಲ್ಲ. ಬಿಹಾರದಲ್ಲಿ ಮಹಾಘಟ ಬಂಧನ ಅಧಿಕಾರಕ್ಕೆ ತಂದರೆ ನನಗೆ ಎಲ್ಲಾ ಸ್ಥಾನವನ್ನು ನೀವು ಕೊಟ್ಟಂತೆ. ನಿಮ್ಮ ಒಂದೊಂದು ಮತವೂ ಮಹಾಘಟಬಂದನ್ ಅಧಿಕಾರಕ್ಕೆ ಬರಲು ಮುಖ್ಯವಾದುದು” ಎಂದರು. “ಈ ಮೊದಲಿನಂತೆ ನಿತೀಶ್ ಕುಮಾರ್ ಅವರ ಕೈಯಲ್ಲಿ ಬಿಹಾರವಿಲ್ಲ. ಅವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಬಿಹಾರದ ಅಭಿವೃದ್ಧಿಗೆ ಲಾಲುಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ರಾಹುಲ್ ಗಾಂಧಿಯವರು ಘೋಷಣೆ ಮಾಡಿದ್ದಾರೆ” ಎಂದರು.…
ಬೆಂಗಳೂರು: ಸೈಬರ್ ವಂಚನೆಗೆ ( Syber Crime ) ಒಳಗಾದವರ ನೆರವಿಗಾಗಿ ರಾಷ್ಟ್ರೀಯ ಸೈಬರ್ ಸಹಾಯವಾಣಿ ಆರಂಭಿಸಲಾಗಿದೆ. ನೀವು ಸೈಬರ್ ವಂಚನೆಗೆ ಒಳಗಾದ ಸಂದರ್ಭದಲ್ಲಿ ಗೋಲ್ಡನ್ ಅವರ್ ( Golden Hour ) ಎಂಬುದಾಗಿ ವಂಚನೆಗೆ ಒಳಗಾದ ಕೂಡಲೇ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ರೆ ನಿಮ್ಮ ಹಣ ಮರಳಿ ಬರಲಿದೆ. ಅದು ಹೇಗೆ ಅಂತ ಮುಂದೆ ಓದಿ. ದೇಶದಲ್ಲಿ ಸೈಬರ್ ವಂಚನೆಗೆ ಒಳಗಾದವರ ನೆರವಿಗೆಂದು ರಾಷ್ಟ್ರೀಯ ಸೈಬರ್ ಸಹಾಯವಾಣಿ ಸ್ಥಾಪಿಸಲಾಗಿದೆ. ಇದನ್ನು ಸ್ಥಾಪಿಸಿ ನಾಲ್ಕು ವರ್ಷ ಕಳೆದಿದ್ದರೂ ಗೋಲ್ಡನ್ ಅವರ್ ನಲ್ಲಿ ಅಂದರೆ ಕೃತ್ಯ ನಡೆದ ಒಂದು ತಾಸಿನ ಒಳಗಾಗಿ ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯಿಂದ ಕದ್ದ ಹಣವನ್ನು ಮರಳಿ ಪಡೆಯಬಹುದಾಗಿದೆ. ಇದು ತಿಳಿಯದಂತ ಅನೇಕರು ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವುದೇ ವಿರಳವಾಗಿದೆ. ಎನ್ ಸಿ ಆರ್ ಪಿ ಸಹಾಯವಾಣಿ ಸಂಖ್ಯೆಗೆ ಸೈಬರ್ ವಂಚನೆಗೆ ಒಳಗಾದವರು ಈವರೆಗೆ ನೆರವು ಕೋರಿರೋದು…
ಚಿಕ್ಕಮಗಳೂರು: ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಬೀರೂರು ರೈಲು ನಿಲ್ದಾಣವನ್ನು ಪರಿಶೀಲಿಸಿ, ಶಿವನಿ ನಿಲ್ದಾಣದಲ್ಲಿ ಯಶವಂತಪುರ–ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್ ರೈಲು ಹೆಚ್ಚುವರಿ ನಿಲುಗಡೆಗಾಗಿ ಹಸಿರು ನಿಶಾನೆ ತೋರಿಸಿದರು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಇಂದು ರೈಲು ಸಂಖ್ಯೆ 17309 ಯಶವಂತಪುರ–ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್ ರೈಲು ಶಿವನಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗಾಗಿ ಹಸಿರು ನಿಶಾನೆ ತೋರಿಸಿದರು. ಇದೇ ಸಂದರ್ಭದಲ್ಲಿ ಅವರು ಬೀರೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ 61ಕ್ಕೂ ಹೆಚ್ಚು ಅಮೃತ ಭಾರತ ಸ್ಟೇಷನ್ ಯೋಜನೆ ಕಾಮಗಾರಿಗಳು ನಡೆಯುತ್ತಿವೆ ಎಂದು ತಿಳಿಸಿದರು. ಇವು ಪ್ರಯಾಣಿಕರ ಸೌಲಭ್ಯಗಳನ್ನು ಹಾಗೂ ಮೂಲಸೌಕರ್ಯವನ್ನು ಪರಿವರ್ತಿಸುವ ಉದ್ದೇಶ ಹೊಂದಿವೆ ಎಂದು ಹೇಳಿದರು. ಅವರು ಚಿಕ್ಕಜಜೂರು–ಬಳ್ಳಾರಿ ದ್ವಿಪಥ (185 ಕಿ.ಮೀ.) ಕಾಮಗಾರಿ ₹3340 ಕೋಟಿಗಳ ವೆಚ್ಚದಲ್ಲಿ ಕಾರ್ಯಗತಗೊಳ್ಳುತ್ತಿದೆ ಎಂದು…
ಶಿವಮೊಗ್ಗ: ನಾಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪತ್ರೆಸಾಲು, ಕಾನಹಳ್ಳಿ ಅಂದರೆ ಗಡೇಗದ್ದೆ ಗ್ರಾಮದಲ್ಲಿ ಮಂಡ್ಲಿಮನೆ ಶ್ರೀ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯ ಲೋಕಾರ್ಪಣೆಯಾಗಲಿದೆ. ಇದಕ್ಕಾಗಿ ಈಗಾಗಲೇ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಬಗ್ಗೆ ಮಂಡ್ಲಿಮನೆ ಶ್ರೀ ಬಸವಣ್ಣ ಸೇವಾ ಸಮಿತಿ ಮತ್ತು ಕರ್ಜಿಕೊಪ್ಪ ಗ್ರಾಮಸ್ಥರು ಕನ್ನಡ ನ್ಯೂಸ್ ನೌಗೆ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 7 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳು, ಹೋಮ-ಹವನಗಳು ನೆರವೇರಿಸಲಾಯಿತು. ಸಂಜೆ 4 ಗಂಟೆಗೆ ಮಂಗಳ ವಾದ್ಯ ಮತ್ತು ಪೂರ್ಣಕುಂಭ ಸಮೇತ ನೂತನ ಬಸವಣ್ಣ ದೇವರ ವಿಗ್ರಹದ ಮೆರವಣಿಗೆ ನಡೆಯಿತು. ಸಂಜೆ 6.30ಕ್ಕೆ ಏಕಾದಶ ರುದ್ರದ ಮೂಲಕ ಪೂಜೆ ಆರಂಭಗೊಂಡು, ಕಂಕಣ ಧಾರಣೆ ನೆರವೇರಿತು ಎಂದು ತಿಳಿಸಿದ್ದಾರೆ. ನಾಳೆ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ನೂತನ ವಿಗ್ರಹಕ್ಕೆ ಅಷ್ಟಬಂಧ ಕ್ರಿಯೆ ನೆರವೇರಲಿದೆ. ಆಶೀರ್ವಾದ ಪೂರ್ವಕ ನಾಮಕರಣ ಬಲಿಪೂಜೆ, ಅಷ್ಟೋತ್ತರ, ಮಹಾಮಂಗಳಾರತಿ, ಪ್ರಸಾದ ವಿನಿಯೋದ ಬಳಿಕ ಮಧ್ಯಾಹ್ನ 1 ಗಂಟೆಗೆ…














