Author: kannadanewsnow09

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದೇಶಿಸಿ ಮಾತನಾಡಿದ ಅವರು; ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಮೋದಿ‌ ಅವರ‌ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಅವರ ಮನಸ್ಸಿ‌ಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರಾ? ಇಲ್ಲವಾ? ಎಂದು ಕೇಳಲಾದ ಪ್ರಶ್ನೆಗೂ ಉತ್ತರಿಸಿದ ಅವರು; ನರೇಂದ್ರ ಮೋದಿ ಅವರು ಏನು ಹೇಳ್ತಾರೋ ನೊಡೋಣ. ಅವರ ಮನಸಿನಲ್ಲಿ ಇದೆಯೋ ಗೊತ್ತಿಲ್ಲ. ಮೋದಿ ಅವರು ಹೇಳಿದಂತೆ ಕುಮಾರಸ್ವಾಮಿ ಅವರು ಕೇಳುತ್ತಾರೆ. ಕುಮಾರಸ್ವಾಮಿ ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ ನಾವೆಲ್ಲ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ಯಾವುದೇ ಕಾರಣಕ್ಕೂ ನಾನು…

Read More

ಬೆಂಗಳೂರು: ಕರ್ನಾಟಕ ಎದುರಿಸುತ್ತಿರುವ ಕಾವೇರಿ ಜಲ ಸಂಕಷ್ಟವನ್ನು ಪರಿಹಾರ ಮಾಡುವ ಶಕ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ. ಈ ಚುನಾವಣೆ ಮುಗಿದ ನಂತರ ಮತ್ತೆ ಪ್ರಧಾನಿ ಆಗಲಿರುವ ಅವರು, ಈ ಜಲ ಸಂಕಷ್ಟಕ್ಕೆ ಪರಿಹಾರ ನೀಡಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ವರ್ಷ ತಮಿಳುನಾಡು ರಾಜ್ಯದವರು ಕಾವೇರಿ ಜಲ ನಿರ್ವಹಣಾ ಸಮಿತಿ ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಮುಂದೆ ಕರ್ನಾಟಕದಿಂದ ನೀರು ಕೊಡಿಸಿ ಎಂದು ಅರ್ಜಿ ಹಾಕುತ್ತಾರೆ. ನಮ್ಮ ಬಳಿ ನೀರು ಇಲ್ಲದೆ ಇದ್ದರೂ ನೀರು ಬಿಡಿ ಅಂತಾರೆ. ನಮ್ಮ ಅಧಿಕಾರಿಗಳು ಏನೇ ವಾದ ಮಾಡಿದರೂ ಪ್ರಯೋಜನ ಆಗಿಲ್ಲ. ಕಾವೇರಿ ಪ್ರಾಧಿಕಾರದವರು ಯಾವತ್ತು ಕೂಡ ನಮ್ಮ ರಾಜ್ಯಕ್ಕೆ ಬಂದು ನೀರು ಎಷ್ಟು ಇದೆ ಅಂತ ನೋಡಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.…

Read More

ಕೂಡಲ ಸಂಗಮ: ಇಂದು ಉತ್ತರ ಕನ್ನಡದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಏಕವಚನದಲ್ಲೇ ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ಧಾಳಿ ನಡೆಸಿದ್ದರು. ನೀನು ಬಂದ್ರೆ ಬಾ, ರಾಮಮಂದಿರ ಉದ್ಘಾಟನೆ ಏನೂ ನಿಲ್ಲೋದಿಲ್ಲ ಅಂತ ತಿಳಿಸಿದ್ದರು. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಕೂಡಲಸಂಗಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಅದು ಅವರ ಸಂಸ್ಕೃತಿ ಎಂಬುದಾಗಿ ತಿರುಗೇಟು ನೀಡಿದರು. ಮಂತ್ರಿಯಾಗಿ ಸಂವಿಧಾನ ಬದಲಿಸ್ತೀವಿ ಅಂದ್ರು. ಅವ್ರಿಂದ ನಾವು ಸಂಸ್ಕೃತಿ ಬಯಸೋಕೆ ಆಗುತ್ತಾ.? ಅವರ ಸುಸಂಸ್ಕೃತ್ವ ಅವರ ಹೇಳಿಕೆಯಲ್ಲೇ ತೋರಿಸುತ್ತದೆ ಎಂಬುದಾಗಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದರು. https://kannadanewsnow.com/kannada/mallikarjun-kharge-appointed-president-of-india-alliance-nitish-kumar-appointed-convener/ https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/

Read More

ನವದೆಹಲಿ: ಇಂದು ನಡೆದಂತ ಇಂಡಿಯಾ ಮೈತ್ರಿಕೂಟದ ವರ್ಚುಯಲ್ ಸಭೆಯಲ್ಲಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಚಾಲಕರಾಗಿ ನಿತೀಶ್ ಕುಮಾರ್ ನೇಮಕಕ್ಕೆ ನಾಯಕರ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇಂದು ಇಂಡಿಯಾ ಮೈತ್ರಿಕೂಟದ ವರ್ಚುಯಲ್ ಸಭೆ ನಡೆಯಿತು. ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿರೋಧ ಪಕ್ಷದ ಬಣ ಐಎನ್ಡಿಐಎ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ. ಐ.ಎನ್.ಡಿ.ಐ.ಎ. ಬಣದ ಸಭೆ ಇಂದು ವರ್ಚುವಲ್ ಆಗಿ ನಡೆಯಿತು. ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ವಿರೋಧ ಬಣದ ಇತರ ಉನ್ನತ ನಾಯಕರು ಸೀಟು ಹಂಚಿಕೆ, ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸುವಿಕೆ ಮತ್ತು ಇತರ ವಿಷಯಗಳ ಬಗ್ಗೆ ಪರಿಶೀಲಿಸಲು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಕೆಲವು ದಿನಗಳ ಹಿಂದೆ ಮೊದಲ ಪ್ರಯತ್ನ ವಿಫಲವಾದ…

Read More

ಮುಂಬೈ: ಮುಂಬೈಗೆ ಹೊಂದಿಕೊಂಡಿರುವ ಡೊಂಬಿವ್ಲಿ ಬಳಿಯ ಖೋನಿ ಪಲಾವಾ ಡೌನ್ಟೌನ್ ಕಟ್ಟಡದಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ, ಏಳನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಮತ್ತು ಜನರು ಕಟ್ಟಡದ ಮೂರನೇ ಮಹಡಿಯವರೆಗೆ ವಾಸಿಸುತ್ತಿದ್ದಾರೆ. ಎಲ್ಲಾ ನಿವಾಸಿಗಳನ್ನು ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ನಂದಿಸೋ ಕಾರ್ಯ ಮುಂದುವರೆದಿದೆ. ಸದಸ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. https://twitter.com/ANI/status/1746109298302980114 https://kannadanewsnow.com/kannada/traffic-violations-in-bengaluru-to-be-monitored-through-ai-technology-deputy-cm-dk-shivakumar/ https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/

Read More

ಬೆಂಗಳೂರು : “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಮೇಲೆ ನಿಗಾ ಇಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -24 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಳೆದ 3 ವರ್ಷಗಳಲ್ಲಿ 6 ಸಾವಿರಕ್ಕೂ ಹೆಚ್ಚು ಡ್ರೈವಿಂಗ್ ಲೈಸೆನ್ಸ್‌ಗಳನ್ನು ಅಮಾನತು ಮಾಡಲಾಗಿದೆ. ಎನ್‌ಸಿ‌ಆರ್‌ಬಿ ಅಂಕಿಅಂಶಗಳ ಪ್ರಕಾರ ಬೈಕ್ ಅಪಘಾತಗಳಿಂದ ಅತ್ಯಂತ ಹೆಚ್ಚು ಮರಣಗಳಾಗಿವೆ. ಆದ ಕಾರಣ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು ಎಂದರು. ಜೀವನದಲ್ಲಿ ಧೈರ್ಯ ಇರಬೇಕು ಆದರೆ ಭಂಡತನ ಇರಬಾರದು. ಜೀವ ಅಮೂಲ್ಯವಾದುದು, ಒಮ್ಮೆ ಹೋದ ಜೀವ ಮತ್ತೆ ಬರುವುದಿಲ್ಲ. ಸಂಚಾರಿ ನಿಯಮ ಪಾಲನೆಯ ಬಗ್ಗೆ ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕಾಗಿದೆ. ಕಾನೂನು ಪಾಲನೆ, ಶಿಸ್ತು, ಸಂಯಮ ಸೇರಿದಂತೆ ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಬಾರದು ಎಂದು ಮಕ್ಕಳಲ್ಲಿ ಅರಿವು ಮೂಡಿಸಲು ‘ಮೊಳಕೆಯಲ್ಲೇ ತಿದ್ದಿರಿ’ ಎನ್ನುವ ಕೈಪಿಡಿಯನ್ನು ಬಿಡುಗಡೆ ಮಾಡಿಲಾಗಿದೆ ಎಂದು ಹೇಳಿದರು. ಈ ಹಿಂದೆ ನಮ್ಮ ಕಾಂಗ್ರೆಸ್…

Read More

ರಾಯಚೂರು : ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ , ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ. ನಾವು ಎಲ್ಲಾ ಧರ್ಮ, ಎಲ್ಲಾ ಜಾತಿಯವರ ಪರವಾಗಿ ಇರುವವರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೇವದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಮಾಜ ವಿಭಜನಾ ಹೇಳಿಕೆಗೆ ಉತ್ತರಿಸಿ, ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದರು. ಮೈಸೂರು ಲೋಕಸಭಾ ಕ್ಷೇತ್ರ ದಿಂದ ಯತೀಂದ್ರ ಸ್ಪರ್ಧೆ: ಊಹಾಪೋಹ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ…

Read More

ಬೆಂಗಳೂರು: ನಗರದ ರೇಸ್ ಕೋರ್ಸ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಬರೋಬ್ಬರಿ 3.45 ಕೋಟಿ ಕಂತೆ ಕಂತೆ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ರೇಸ್ ಕೋರ್ಸ್ ನಲ್ಲಿ ಅನಧಿಕೃತ ಹಾಗೂ ಅಧಿಕೃತವಾಗಿ ಬೆಟ್ಟಿಂಗ್ ನಡೆಸಲಾಗುತ್ತಿರೋ ಬಗ್ಗೆ  ದೂರು ಬಂದಿತ್ತು. ಈ ದೂರು ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಯಾವುದೇ ದಾಖಲೆ ಇಲ್ಲದೇ ಹಣ ವ್ಯವಹಾರ ನಡೆಸುತ್ತಿದ್ದ ಬಗ್ಗೆ ದಾಳಿ ಮಾಡಲಾಗಿತ್ತು. ಈ ದಾಳಿ ವೇಳೆಯಲ್ಲಿ 3.45 ಕೋಟಿ ನಗದು ಜಪ್ತಿ ಮಾಡಲಾಗಿದೆ ಎಂದರು. ರೇಸ್ ಕೋರ್ಸ್ ದಾಳಿಯ ಸಂದರ್ಭದಲ್ಲಿನ ಹಣ ಜಪ್ತಿಯ ಬಳಿಕ 66 ಜನರಿಂದ ಮಾಹಿತಿ ಪಡೆದು ನೋಟಿಸ್ ನೀಡಿದ್ದೇವೆ. ಸಿಆರ್ ಪಿಸಿ ಸೆಕ್ಷನ್ 41ರಡಿ ನೋಟಿಸ್ ನೀಡಲಾಗಿದೆ. ಸದ್ಯ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದಂತ ಬಿ.ದಯಾನಂದ್ ತಿಳಿಸಿದ್ದಾರೆ. https://kannadanewsnow.com/kannada/ram-mandir-will-not-stop-son-anant-kumar-hegde/ https://kannadanewsnow.com/kannada/congress-leader-mallikarjun-kharge-appointed-india-bloc-chief/

Read More

ಉತ್ತರ ಕನ್ನಡ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಯೋಧ್ಯೆ ರಾಮಮಂದಿರ ಓಪನ್ ಗೆ ಹೋಗೋದಿಲ್ಲ ಎಂಬುದಾಗಿ ಹೇಳಿದ್ದರು. ನೀನು ಬಾ ಇಲ್ಲ ಬಿಡು ರಾಮಮಂದಿರ ನಿಲ್ಲಲ್ಲ ಮಗನೇ ಅಂತ ನೇರ ನೇರವಾಗೇ ಸಂಸದ ಅನಂತ್ ಕುಮಾರ್ ಹೆಗ್ಡೆ ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದೀಗಾರರೊಂದಿಗೆ ಮಾತನಾಡಿದಂತ ಅವರು, ಮಂಗಳೂರಿನ ಭಟ್ಕಳದಲ್ಲಿ ಇರುವಂತ ಚಿನ್ನದಪಲ್ಲಿ ಮಸೀದಿ ಕೂಡ ಬಾಬ್ರಿ ಮಸೀದಿಯಂತೆ ನಿರ್ನಾಮವಾಗಲಿದೆ. ಅದರಲ್ಲಿ ಎರಡು ಮಾತಿಲ್ಲ. ಇದನ್ನ ಬೇಕಾದ್ರೆ ಬೆದರಿಕೆ ಅಂತ ಬೇಕಾದ್ರೂ ತಿಳಿಯಿರಿ ಎಂಬುದಾಗಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೊಸ ಬಾಂಬ್ ಸಿಡಿಸಿದ್ದಾರೆ. ಅಂದಹಾಗೇ ಭಟ್ಕಳದ ಚಿನ್ನಪಲ್ಲಿಯಲ್ಲಿರುವಂತ ಮಸೀದಿಯ ಗೋಪುರ ಚಿನ್ನದ ಲೇಪಿತದಂತೆ ಇದೆ. ಇದು ಹಿಂದೂ ದೇವಾಲಯದ ಮಾದರಿಯಲ್ಲಿ ಇದೆ ಎನ್ನಲಾಗುತ್ತಿದೆ. ಇಂತಹ ಮಸೀದಿ ಕೂಡ ಬಾಬ್ರಿ ಮಸೀದಿ ಥರ ನಿರ್ನಾಮ ಆಗಲಿದೆ ಅಂತ ಈಗ ಸಂಸದ ಅನಂತ್ ಕುಮಾರ್ ಹೆಗ್ಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇದಲ್ಲದೇ ಸಿಎಂ ಸಿದ್ಧರಾಮಯ್ಯ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗಲ್ಲ ಎಂಬುದಾಗಿ ಹೇಳಿದಂತ ಮಾತಿಗೆ…

Read More

ಅಡಿಗೆ ಮನೆಯಲ್ಲಿರುವ ಲವಂಗಕ್ಕೆ ಮನೆಯಲ್ಲಿರುವ ಸಮಸ್ಯೆಯನ್ನು ಸರಿ ಮಾಡುವ ಶಕ್ತಿಯಿದೆ, ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಕಾರ ಲವಂಗದಿಂದ ಉಪಾಯವನ್ನು ಮಾಡಿದರೆ ಕೆಲವೇ ದಿನಗಳಲ್ಲಿ ನಿಮ್ಮನ್ನು ಶ್ರೀಮಂತರನ್ನಾಗಿ ಮಾಡುತ್ತದೆ. ಹಾಗಾದರೆ ಲವಂಗದಿಂದ ಏನು ಮಾಡಬೇಕು ಹಾಗೂ ಏನನ್ನು ಮಾಡುವುದರಿಂದ ಸಿರಿ ಸಂಪತ್ತು ಲಭಿಸುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. …

Read More