Author: kannadanewsnow09

ಬೆಳಗಾವಿ : ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಫ್ ಸೊತ್ತುಗಳನ್ನು ರಾಷ್ಟ್ರೀಕರಣ ಗೊಳಿಸಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಿಡಿಕಾರಿದರು. ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ – ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ . ಅದನ್ನು ಹೇಳಿಕೊಂಡೆ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ ಅಂಬೇಡ್ಕರ್ ಹೇಳಿ ಕೊಟ್ಟಂತೆ ಬದುಕುವವರು ನಾವು ಎಂದರು. ಎಚ್.ವಿಶ್ವನಾಥ್ ಹೇಳಿಕೆಗೆ ಗರಂ ಬಿಯರ್‌ ರೇಟ್ ಜಾಸ್ತಿ ಮಾಡಿ ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ ಎಂಬ ಮಾಜಿ ಸಚಿವ ಹಾಗೂ ವಿಧಾನ ಪರಿಷತ್…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ರೇ, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಓರ್ವರು ಮೃತ ಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಕಾರೆಹೊಂಡದ ಆಟೋ ಚಾಲಕ ರಾಘವೇಂದ್ರ ಎಂದು ತಿಳಿದು ಬಂದಿದೆ. ಕಾರೆಹೊಂಡದ ಒಂದೇ ಕುಟುಂಬದ ಮಾಲತಿ (35) ಕೃತಿಕಾ (12)ರಾಮಪ್ಪ (40) ಸಾನ್ವಿಕ ( 8) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಆಟೋ ಚಾಲಕ ರಾಘವೇಂದ್ರ ಎಂಬುವವರ ಮೃತದೇಹವನ್ನು ಸಾಗರದ ಸರ್ಕಾರಿ ಉಪವಿಭಾಗಿಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ವರದಿ: ಉಮೇಶ್ ಮೊಗವೀರ, ಸಾಗರ https://kannadanewsnow.com/kannada/how-to-track-a-lost-mobile-phone-just-do-this-detection-guarantee/ https://kannadanewsnow.com/kannada/everyone-should-unite-in-the-work-of-developing-kannada-language-minister-krishnabaire-gowda/ https://kannadanewsnow.com/kannada/important-information-for-ration-card-holders-those-who-do-not-do-e-kyc-will-not-get-ration-grains-card-cancelled/

Read More

ನಮ್ಮ ಸ್ಮಾರ್ಟ್ಫೋನ್ಗಳು ಬ್ಯಾಂಕಿಂಗ್ ಡೇಟಾ ಸೇರಿದಂತೆ ನಮ್ಮ ಎಲ್ಲಾ ಡೇಟಾವನ್ನು ಹಿಡಿದಿಟ್ಟುಕೊಳ್ಳುತ್ತವೆ. ಅದನ್ನು ಕಳೆದುಕೊಳ್ಳುವುದು ಅಥವಾ ನಮ್ಮ ಸ್ಮಾರ್ಟ್ಫೋನ್ಗಳನ್ನು ಕದ್ದಾಗ ನಿಜವಾಗಲೂ ತುಂಬಾ ನೋವು, ಲಾಸ್ ಆಗುತ್ತದೆ. ಆದರೆ ನಿಮ್ಮ ಸ್ಮಾರ್ಟ್ ಫೋನ್ ಅನ್ನು ಯಾರಾದರೂ ಕದ್ದರೆ ನೀವು ಏನು ಮಾಡಬೇಕು? ನೀವು ಅದನ್ನು ಹೇಗೆ ಟ್ರ್ಯಾಕ್ ಮಾಡಬಹುದು? ಯಾರೂ ಅದನ್ನು ಕಾನೂನುಬಾಹಿರವಾಗಿ ಪ್ರವೇಶಿಸದಂತೆ ನೀವು ಸಾಧನವನ್ನು ನಿರ್ಬಂಧಿಸಬಹುದೇ? ಚಿಂತಿಸಬೇಡಿ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಮುಂದಿದೆ ಓದಿ. ಕಳೆದುಹೋದ ಸ್ಮಾರ್ಟ್ ಫೋನ್ ಅನ್ನು ಟ್ರ್ಯಾಕ್ ಮಾಡುವುದು ಮತ್ತು ನಿರ್ಬಂಧಿಸುವುದು ಹೇಗೆ? ನಿಮ್ಮ ಸ್ಮಾರ್ಟ್ಫೋನ್ ಕಳೆದುಹೋದರೆ, ಮೊದಲನೆಯದಾಗಿ ಭಯಪಡಬೇಡಿ. ನಿಮ್ಮ ಸಹಾಯಕ್ಕಾಗಿ ಭಾರತ ಸರ್ಕಾರವು ಸಂಚಾರ್ ಸಾಥಿ ಪೋರ್ಟಲ್ ಅನ್ನು ಪರಿಚಯಿಸಿದೆ. ದೂರಸಂಪರ್ಕ ಇಲಾಖೆ ಈ ಪೋರ್ಟಲ್ ಅನ್ನು ಸ್ಥಾಪಿಸಿದೆ. ಇದು ನಿಮ್ಮ ಸಾಧನವನ್ನು ಪತ್ತೆಹಚ್ಚಲು ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (ಸಿಇಐಆರ್) ಅನ್ನು ಬಳಸುತ್ತದೆ. ಈ ಪೋರ್ಟಲ್ ಸಹಾಯದಿಂದ, ದುರುಪಯೋಗವನ್ನು ತಡೆಗಟ್ಟಲು ನಿಮ್ಮ ಸಾಧನವನ್ನು ನೀವು ಸುಲಭವಾಗಿ ಟ್ರ್ಯಾಕ್ ಮಾಡಬಹುದು…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಭೀಕರ ಅಪಘಾತವೊಂದು ಸಂಭವಿಸಿದೆ. ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದಂತ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬೊಮ್ಮತ್ತಿ ಸಮೀಪ ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಆಟೋ ಚಾಲಕ ರಾಘು ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇನ್ನೂ ಆಟೋದಲ್ಲಿ ತೆರಳುತ್ತಿದ್ದಂತ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/applying-for-a-new-ration-card-will-begin-soon-keep-these-documents-ready/ https://kannadanewsnow.com/kannada/big-news-isro-launched-indias-first-analog-space-mission/ https://kannadanewsnow.com/kannada/important-information-for-ration-card-holders-those-who-do-not-do-e-kyc-will-not-get-ration-grains-card-cancelled/

Read More

ಶಿಗ್ಗಾವ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್ ಗೆಲ್ಲಿಸಿ ಎಂದು ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹುಲಗೂರು ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಟಾಣ್ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಬಿಜೆಪಿ ಯವರು ಪಿತೂರಿ ಮಾಡಿ ಸಿದ್ದರಾಮಯ್ಯ ಅವರನ್ನು ಇಳಿಸಲು ಸಂಚು ರೂಪಿಸಿದ್ದಾರೆ. ಉಪ ಚುನಾವಣೆ ಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು. ಬಿಜೆಪಿ ಯವರು ಚುನಾವಣೆ ಇದೆ ಎಂದು ಜನರನ್ನು ದಿಕ್ಕು ತಪ್ಪಿಸಿ ಅನಗತ್ಯ ವಿವಾದ ಸೃಷ್ಠಿ ಮಾಡುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಬೇಕಿಲ್ಲ. ಹಿಂದೂ ಮುಸ್ಲಿಂ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದು ಅವರಿಗೆ ಸೂಕ್ತ ಪಾಠ ಕಲಿಸಿ ಎಂದು ಹೇಳಿದರು. ಅಜ್ಜಂ ಪೀರ್ ಖಾದ್ರಿ ಅವರಿಗೆ ಟಿಕೆಟ್ ತಪ್ಪಿರಬಹುದು. ಆದರೆ ದೊಡ್ಡ ಅವಕಾಶ ಅವರಿಗೆ ಸಿಗಲಿದೆ. ಯಾಸೀರ್ ಪಟಾಣ್ ಅವರ ಶಿಷ್ಯ ರಾಗಿದ್ದು ಎಲ್ಲರೂ ಜತೆಗೂಡಿ ಕೆಲಸ ಮಾಡಿ ಗೆಲ್ಲಿಸಿ…

Read More

ನವದೆಹಲಿ: ಪಡಿತರ ತೆಗೆದುಕೊಳ್ಳುವವರಿಗೆ ಒಂದು ಪ್ರಮುಖ ಸುದ್ದಿ ಇದೆ. ಪಡಿತರ ಚೀಟಿ ಮೂಲಕ ಪಡಿತರ ಪಡೆಯುವವರಿಗೆ ನವೆಂಬರ್ 1ರ ಇಂದಿನಿಂದ ನಿಯಮಗಳು ಬದಲಾಗಲಿವೆ. ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ನವೆಂಬರ್ 1ರ ಇಂದಿನಿಂದ ಪಡಿತರ ಪಡೆಯುವ ಪ್ರಕ್ರಿಯೆಯಲ್ಲಿ ಬದಲಾವಣೆಗಳಾಗಲಿವೆ. ಇದು ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರುತ್ತದೆ. ಪಡಿತರ ಚೀಟಿಯ ಸಹಾಯದಿಂದ, ಭಾರತದ ಬಡ ಮತ್ತು ನಿರ್ಗತಿಕ ಜನರಿಗೆ ಪಡಿತರ ಅಂಗಡಿಯಿಂದ ಅಗ್ಗದ ದರದಲ್ಲಿ ಆಹಾರ ಧಾನ್ಯಗಳನ್ನು ಪೂರೈಸಲಾಗುತ್ತದೆ. ಈಗ, ಈ ಧಾನ್ಯವು ಉಚಿತವಾಗಿ ಲಭ್ಯವಿದೆ. ನೀವು ಇ ಕೆವೈಸಿ ಹೊಂದಿಲ್ಲದಿದ್ದರೆ, ನೀವು ಪಡಿತರದಲ್ಲಿ ಧಾನ್ಯವನ್ನು ಪಡೆಯುವುದಿಲ್ಲ. ನೀವು ಇಕೆವೈಸಿ ಮಾಡಲು ಬದ್ಧರಾಗಿದ್ದೀರಿ. ಅನೇಕರು ಇನ್ನೂ ಈ ಕೆವೈಸಿ ಮಾಡಿಲ್ಲ. ಅವರಿಗೆ ಅಕ್ಟೋಬರ್ 31 ಕೊನೆಯ ದಿನಾಂಕವಾಗಲಿದೆ. ಅದರ ನಂತರ ಇ-ಕೆವೈಸಿ ಮಾಡಲಾಗುವುದಿಲ್ಲ. ಅಕ್ಟೋಬರ್ 31 ರೊಳಗೆ ಇ-ಕೆವೈಸಿ ಮಾಡದಿದ್ದರೆ, ನಿಮ್ಮ ಹೆಸರನ್ನು ಪಡಿತರ ಚೀಟಿಯಿಂದ ಹೊರಗಿಡಲಾಗುತ್ತದೆ. ಅಂತಹ ವ್ಯಕ್ತಿಗಳಿಗೆ ನವೆಂಬರ್ 1ರ ಇಂದಿನಿಂದ ಪಡಿತರ ಧಾನ್ಯಗಳು ಸಿಗುವುದಿಲ್ಲ. ಅವರ ಹೆಸರುಗಳನ್ನು…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದಂತ ನಟ ದರ್ಶನ್ ಗೆ ವೈದ್ಯಕೀಯ ಚಿಕಿತ್ಸೆಗಾಗಿ ಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ದಾಖಲಾಗಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ, ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ನಟ ದರ್ಶನ್ ಅವರು ತೆರಳಿದರು. ಬಿಜಿಎಸ್ ಆಸ್ಪತ್ರೆಗೆ ಬೆನ್ನುನೋವಿನ ಚಿಕಿತ್ಸೆಗಾಗಿ ದಾಖಲಾಗಿರುವಂತ ಅವರನ್ನು ವಿವಿಧ ಪರೀಕ್ಷೆಗೆ ಒಳಪಡಿಸಲಿರುವಂತ ವೈದ್ಯರು, ಆ ಬಳಿಕ ಬೆನ್ನು ನೋವಿಗೆ ಶಸ್ತ್ರ ಚಿಕಿತ್ಸೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/dr-cn-ashwathnarayan-demands-dismissal-of-zameer-ahmed-as-minister/ https://kannadanewsnow.com/kannada/big-news-isro-launched-indias-first-analog-space-mission/

Read More

ಬೆಂಗಳೂರು: ರೈತರ ಜಮೀನು, ನಾಗರಿಕರ ಜಮೀನನ್ನು ವಕ್ಫ್‍ಗೆ ಹಸ್ತಾಂತರ ಮಾಡಲಾಗುತ್ತಿದೆ. ನೋಟಿಸ್ ಕೊಡುವ ಮೂಲಕ, ಪಹಣಿ ಮಾಡುವ ಮೂಲಕ ಜನರ, ರೈತರ ಹಕ್ಕು ಮೊಟಕುಗೊಳಿಸುವ ಹುನ್ನಾರ ಮತ್ತು ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರಕಾರದ ಪ್ರಯತ್ನ ಖಂಡನೀಯ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಕ್ಫ್ ಆಸ್ತಿ ಎಂಬ ಗಜೆಟ್ ಪ್ರಕಟಣೆಯನ್ನೂ ರದ್ದು ಪಡಿಸಬೇಕು; ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು. ಜಮೀರ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ಇದರ ವಿರುದ್ಧ ರಾಜ್ಯದ ಉದ್ದಗಲದಲ್ಲಿ ನವೆಂಬರ್ 4ರಂದು ಹೋರಾಟ ನಡೆಯಲಿದೆ. ಸರಕಾರವು ಈ ತಕ್ಷಣ ಎಲ್ಲೆಲ್ಲಿ ಪಹಣಿಯಲ್ಲಿ ವಕ್ಫ್ ಎಂದು ಘೋಷಿಸಿದ್ದಾರೋ ಅದನ್ನೆಲ್ಲ ಸಂಪೂರ್ಣ ಹಿಂದಕ್ಕೆ ಪಡೆಯಬೇಕು. ಕೇವಲ ನೋಟಿಸ್ ಹಿಂಪಡೆದರೆ ಸಾಲದು ಎಂದು ಎಚ್ಚರಿಸಿದರು. ವಿಜಯಪುರ ಜಿಲ್ಲೆಯಲ್ಲಿ ರೈತರ ಹೆಸರಿನಲ್ಲಿದ್ದ ಪಹಣಿಗಳನ್ನು ವಕ್ಫ್ ಹೆಸರಿಗೆ…

Read More

ಬೆಂಗಳೂರು: ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರಿಂದ ಮಾಡಲು ಆಗಲಿಲ್ಲ.ಅಕ್ಕ-ತಂಗಿ, ತಂದೆ-ಮಗ, ಅಪ್ಪ-ಮಕ್ಕಳ ನಡುವೆ ಜಗಳ ತಂದಿಟ್ಟು, ಭಾವನೆಗಳ ಮೇಲೆ ಆಟವಾಡುವುದೇ ಅವುಗಳ ಕೆಲಸ. ಹೀಗೆ ಮಾಡಿ ಎಷ್ಟೋ ಮನೆಗಳನ್ನು ಒಡೆದು ಹಾಕಿವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕಂಠೀರವ ಸ್ಟೇಡಿಯಂ ಬಳಿ ಮಾಧ್ಯಮಗಳಿಗೆ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರಂಟಿ ವಿಚಾರವಾಗಿ ಗುರವಾರ ಪ್ರಸ್ತಾಪಿಸಿದ ಮಾತುಗಳ ಬಗ್ಗೆ ಕೇಳಿದಾಗ, “ವಿರೋಧ ಪಕ್ಷದವರಿಗೆ ರಾಜಕೀಯ ಹೊರತಾಗಿ ಯಾವ ವಿಚಾರಗಳೂ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಸಂಸಾರಗಳನ್ನು ಹಾಳು ಮಾಡುತ್ತವೇ ಎಂದು ಹೇಳಿದ್ದರು. ಆದರೆ ಅವರು ಹೇಳಿದಂತೆ ಆಗಲಿಲ್ಲ. ನಮ್ಮ ಕೆಲಸಗಳನ್ನು ನೋಡಿ, ಹೊಟ್ಟೆಕಿಚ್ಚು ಪಡುತ್ತಿದ್ದಾರೆ” ಎಂದರು. ಹಿರಿಯರ ಬುದ್ಧಿ ಮಾತು ಕೇಳಬೇಕು “ಮಲ್ಲಿಕಾರ್ಜುನ ಖರ್ಗೆಯವರು ಹಿರಿಯರು. ಅವರು ಬುದ್ಧಿಮಾತು ಹೇಳಿದರೆ ನಾವು ಕೇಳಬೇಕು. ನಾನು ಶಕ್ತಿ ಯೋಜನೆ ವಿಚಾರವಾಗಿ ಹೇಳಿರುವ ಮಾತುಗಳನ್ನು ಮತ್ತೊಮ್ಮೆ ಎಲ್ಲರು ಕೇಳಿಸಿಕೊಂಡು…

Read More

ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಐವತ್ತು ಸಾವಿರದಿಂದ ಒಂದು ಲಕ್ಷಕ್ಕೆ ಏರಿಕೆ ಮಾಡುವುದಾಗಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಸಂಭ್ರಮ 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಐವತ್ತು ಮಹಿಳಾ ಸಾಧಕಿಯರು ಹಾಗೂ 50ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದ್ದು ಪ್ರಶಸ್ತಿ ಮೊತ್ತವನ್ನು 50,000 ಎಂದು ತಿಳಿಸಲಾಗಿತ್ತು ಎಂದಿದ್ದಾರೆ. ಇದೊಂದು ಐತಿಹಾಸಿಕ ಸಂದರ್ಭ ವಾಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ ರೂ.1ಲಕ್ಷಗಳಿಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು ಒಂದು ಲಕ್ಷ ರೂಪಾಯಿ ಎಂದು ಘೋಷಿಸಲು ಹರ್ಷಿಸುತ್ತೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ. ಇದಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಹ ಅವರು ತಿಳಿಸಿದ್ದಾರೆ.

Read More